ಬೆಂಗಳೂರು: ಭಾರತ(Team India) ತಂಡ ಇಂದು ಅಫಘಾನಿಸ್ತಾನ(India vs Afghanistan, 3rd T20I) ವಿರುದ್ಧ ಮೂರನೇ ಹಾಗೂ ಅಂತಿಮ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮ ಪಡೆ ಗೆದ್ದರೆ ಪಾಕಿಸ್ತಾನದ ದಾಖಲೆಯೊಂದು ಪತನಗೊಳ್ಳಲಿದೆ.
ಇಲ್ಲಿಯವರೆಗೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳೆರಡೂ ಜಂಟಿಯಾಗಿ 8 ಬಾರಿ ದ್ವಿಪಕ್ಷೀಯ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದ ದಾಖಲೆ ಹೊಂದಿವೆ. ಇಂದು ನಡೆಯಲಿರುವ ಆಫ್ಘನ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿಯನ್ನು ಕ್ಲೀನ್ಸ್ವೀಪ್ಗೈದ ಸಾಧನೆ ಮಾಡುವ ಮೂಲಕ 9 ಬಾರಿ ಈ ಸಾಧನೆ ಮಾಡಿದ ದಾಖಲೆ ಬರೆಯಲಿದೆ. ಈ ಮೂಲಕ ಪಾಕಿಸ್ತಾನದ ದಾಖಲೆಯನ್ನು ಮುರಿಯಲಿದೆ.
Preps in full swing for the 3rd & Final #INDvAFG T20I 🙌
— BCCI (@BCCI) January 16, 2024
P.S. – #TeamIndia had a special visitor in the nets today ☺️@IDFCFIRSTBank pic.twitter.com/FLSKRSP4Cy
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ಒಂಬತ್ತು ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ. ಚೇಸಿಂಗ್ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. 5 ಬಾರಿ ಚೇಸಿಂಗ್ ನಡೆಸಿದ ತಂಡ ಗೆದ್ದರೆ, 3 ಬಾರಿ ಮಾತ್ರ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಜಯಶಾಲಿಯಾಗಿದೆ. ರಾತ್ರಿಯ ವೇಳೆ ಇಬ್ಬನಿಯ ಕಾಟ ಇರುವ ಕಾರಣ ಟಾಸ್ ಗೆದ್ದ ನಾಯಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಬಹುದು.
ಮೂರು ಬದಲಾವಣೆ ಸಾಧ್ಯತೆ
ಮೊದಲ ಎರಡು ಪಂದ್ಯಗಳಲ್ಲಿ ಅವಕಾಶ ಸಿಗದ ಸಂಜು ಸ್ಯಾಮ್ಸನ್, ಅವೇಶ್ ಖಾನ್ ಮತ್ತು ಕುಲ್ದೀಪ್ ಅವರಿಗೆ ಮೂರನೇ ಪಂದ್ಯದಲ್ಲಿ ಅವಕಾಶ ಸಿಗುವ ನಿರೀಕ್ಷೆ ಇದೆ. ಇವರಿಗಾಗಿ ಜಿತೇಶ್ ಶರ್ಮ, ಮುಕೇಶ್ ಕುಮಾರ್ ಮತ್ತು ರವಿ ಬಿಷ್ಣೋಯ್ ಜಾಗ ಬಿಡಬೇಕಾಗಿದೆ.
ಇದನ್ನೂ ಓದಿ IND vs AFG 3rd T20: ಮೂರನೇ ಟಿ20ಗೆ ಟೀಮ್ ಇಂಡಿಯಾದಲ್ಲಿ ಮೂರು ಬದಲಾವಣೆ
ಅನುಭವಿ ಕೀಪರ್ ಮತ್ತು ಟಿ20ಯಲ್ಲಿ ಹಾರ್ಡ್ ಹಿಟ್ಟರ್ ಆಗಿರುವ ಕೇರಳದ ಸಂಜು ಸ್ಯಾಮ್ಸನ್ ತಂಡದಲ್ಲಿದ್ದರೂ ಅವರಿಗೆ ಆಡುವ ಅವಕಾಶ ನೀಡದ ಬಗ್ಗೆ ಹಲವರು ಬಿಸಿಸಿಐ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಸಂಜು ದಕ್ಷಿಣ ಆಫ್ರಿಕಾ ಪ್ರವಾಸದ ಏಕದಿನ ಪಂದ್ಯದಲ್ಲಿ ಶತಕ ಕೂಡ ಬಾರಿಸಿದ್ದರು. ಆದರೂ ಕೂಡ ಅವರಿಗೆ ಆಫ್ಘನ್ ಟಿ20 ಸರಣಿಯಲ್ಲಿ ಆಡುವ ಅವಕಾಶ ಸಿಗಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಅವರಿಗೆ ಅವಕಾಶ ನೀಡುವ ಸಾಧ್ಯತೆ ಅಧಿಕವಾಗಿದೆ.
ಸಂಭಾವ್ಯ ತಂಡಗಳು
ಭಾರತ: ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಶಿವಂ ದುಬೆ, ಅಕ್ಷರ್ ಪಟೇಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ವಾಷಿಂಗ್ಟನ್ ಸುಂದರ್.
ಅಫಘಾನಿಸ್ತಾನ: ಇಬ್ರಾಹಿಂ ಜದ್ರಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ರಹಮತ್ ಶಾ, ನಜೀಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಕರೀಮ್ ಜನತ್, ಅಜ್ಮತುಲ್ಲಾ ಒಮರ್ಜಾಯ್, ಮುಜೀಬ್ ಉರ್ ರೆಹಮಾನ್, ಫಜಲ್ ಹಕ್ ಫಾರೂಕಿ, ನವೀನ್ ಉಲ್ ಹಕ್, ಕೈಸ್ ಅಹ್ಮದ್.