ಮುಂಬಯಿ: ಇದೇ ವರ್ಷಾಂತ್ಯದಲ್ಲಿ ನಡೆಯುವ ಭಾರತ ಮತ್ತು ಆಸ್ಟ್ರೇಲಿಯಾ(IND vs AUS) ನಡುವಣ ಟೆಸ್ಟ್ ಸರಣಿಯಲ್ಲಿ ಭಾರತವು(Team India) ಎರಡು ದಿನಗಳ ಪಿಂಕ್ ಬಾಲ್ ಅಭ್ಯಾಸ ಪಂದ್ಯ ಆಡಲಿದೆ ಎಂದು ವರದಿಯಾಗಿದೆ. ನವೆಂಬರ್ 22ರಿಂದ ಆಸೀಸ್ ವಿರುದ್ದದ ಐದು ಟೆಸ್ಟ್(IND vs AUS Test series 2024-25) ಪಂದ್ಯಗಳ ಬಾರ್ಡರ್–ಗಾವಸ್ಕರ್(border gavaskar trophy) ಟ್ರೋಫಿ ಆರಂಭವಾಗಲಿದೆ. ಈ ಸರಣಿಯು ಜನವರಿ 7ರವರೆಗೆ ನಡೆಯಲಿದೆ.
ಭಾರತ 1991-92ರ ಬಳಿಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯದಲ್ಲಿ 5 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಭಾರತ ತಂಡವು ನವೆಂಬರ್ 30 ಮತ್ತು ಡಿಸೆಂಬರ್ 1 ರಂದು ಕ್ಯಾನ್‌ಬೆರಾದ ಮನುಕಾ ಓವಲ್ ನಲ್ಲಿ ಪ್ರಧಾನ ಮಂತ್ರಿ ಇಲೆವೆನ್ ವಿರುದ್ಧ ಹಗಲು-ರಾತ್ರಿ ಅಭ್ಯಾಸ ಪಂದ್ಯವನ್ನು ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಮ್ಮ ವೆಬ್‌ಸೈಟ್ ನಲ್ಲಿ ತಿಳಿಸಿದೆ. 1991-92ರಲ್ಲಿ ನಡೆದಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 4-0 ಅಂತರದ ಗೆಲುವು ಸಾಧಿಸಿತ್ತು.
5 ಪಂದ್ಯಗಳ ಈ ಟೆಸ್ಟ್ ಸರಣಿ ನವೆಂಬರ್ 22ರಿಂದ ಜನವರಿ(2025) 7ರವರೆಗೆ ನಡೆಯಲಿದೆ. ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಈ ಪಂದ್ಯಗಳು ನಡೆಯಲಿದೆ. ಅಡಿಲೇಡ್ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಆಗಿದೆ. ಪುರುಷರ ಕ್ರಿಕೆಟ್ ತಂಡದ ಜತೆಗೆ ಇದೇ ಸಮಯದಲ್ಲೇ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಏಕದಿನ ಸರಣಿ ಕೂಡ ನಡೆಯಲಿದೆ. ಡಿಸೆಂಬರ್ 6ರಿಂದ ಅಡಿಲೇಡ್ನಲ್ಲಿ ನಡೆಯಲಿರುವ ಎರಡನೇ ಪಂದ್ಯ ಪಿಂಕ್ ಬಾಲ್ ಟೆಸ್ಟ್ ಪಂದ್ಯವಾಗಿರಲಿದೆ. ಇದಕ್ಕೆ ಅಭ್ಯಾಸ ನಡೆಸುವ ನಿಟ್ಟಿನಲ್ಲಿ ಈ ಎರಡು ದಿನದ ಪಂದ್ಯ ಆಯೋಜನೆ ಮಾಡಲಾಗಿದೆ.
ಇದನ್ನೂ ಓದಿ Team India Coach : ಕೋಚ್ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ
ಭಾರತವು ಇತ್ತೀಚಿನ ಕೆಲ ವರ್ಷಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಲೇ ಬಂದಿದೆ. ಕಳೆದ 4 ಸರಣಿಗಳಲ್ಲಿ ಭಾರತವೇ ಗೆದ್ದು ಬಂದಿದೆ. 2016-17ರಲ್ಲಿ 2-1 (ತವರಿನ ಸರಣಿ), 2018-19ರಲ್ಲಿ 2-1 (ಆಸ್ಟ್ರೇಲಿಯದಲ್ಲಿ), 2020- 21ರಲ್ಲಿ 2-1 (ಆಸ್ಟ್ರೇಲಿಯದಲ್ಲಿ) ಹಾಗೂ 2022-23ರಲ್ಲಿ 2-1 (ತವರಿನ ಸರಣಿ) ಅಂತರದಿಂದ ಭಾರತ ಜಯ ಸಾಧಿಸಿತ್ತು. ಆದಾಗ್ಯೂ, 2023ರಲ್ಲಿ ಲಂಡನ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಪ್ಯಾಟ್ ಕಮಿನ್ಸ್ ತಂಡವು ಭಾರತವನ್ನು ಸೋಲಿಸಿತ್ತು.
5 ಟೆಸ್ಟ್ ಪಂದ್ಯ ವೇಳಾಪಟ್ಟಿ
ಮೊದಲ ಟೆಸ್ಟ್: ನವೆಂಬರ್ 22-26, ಪರ್ತ್
ಎರಡನೇ ಟೆಸ್ಟ್: ಡಿಸೆಂಬರ್ 6-10, ಅಡಿಲೇಡ್ (ಪಿಂಕ್ ಬಾಲ್ ಟೆಸ್ಟ್)
ಮೂರನೇ ಟೆಸ್ಟ್: ಡಿಸೆಂಬರ್ 14-18, ಬ್ರಿಸ್ಬೇನ್
ನಾಲ್ಕನೇ ಟೆಸ್ಟ್: ಡಿಸೆಂಬರ್ 26-30, ಮೆಲ್ಬೋರ್ನ್
ಐದನೇ ಟೆಸ್ಟ್: ಜನವರಿ 3-7, ಸಿಡ್ನಿ