ನ್ಯೂಯಾರ್ಕ್: ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ 3 ದಿನ ಮಾತ್ರ ಬಾಕಿ ಉಳಿದಿವೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 20 ತಂಡಗಳ ಆಟಗಾರರು ಕಪ್ ಗೆಲ್ಲಲು ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಟೀಮ್ ಇಂಡಿಯಾದ ಆಟಗಾರರು ನೂತನ ಜೆರ್ಸಿಯಲ್ಲಿ(Team India’s T20 WC Jersey) ಫೋಟೊ ಶೂಟ್ ಮಾಡಿಸಿದ್ದಾರೆ. ಇದಕ್ಕೂ ಮುನ್ನ ಬಿಸಿಸಿಐ(BCCI) ಬಿಡುಗಡೆಗೊಳಿಸಿದ ವಿಶೇಷ ಪ್ರೋಮೋದಲ್ಲಿ ರಿಷಭ್ ಪಂತ್(rishabh pant) ಕಣ್ಮನ ಸೆಳೆದಿದ್ದಾರೆ. ಈ ವಿಡಿಯೊಗೆ ಬಿಸಿಸಿಐ ‘ಸಿದ್ಧವಾಗಿದೆ. ಸಮರ್ಥ. ನಿರ್ಧರಿಸಲಾಗುತ್ತದೆ’ ಎಂದು ಬರೆದುಕೊಂಡಿದೆ.
‘ಪ್ರತಿಕೂಲತೆಯಿಂದ ವಿಜಯದವರೆಗೆ, ಐಸಿಸಿ ಪುರುಷರ ಟಿ20 ವಿಶ್ವಕಪ್‌ಗೆ ರಿಷಭ್ ಪಂತ್ ಅವರ ಪ್ರಯಾಣವು ಸ್ಥಿತಿಸ್ಥಾಪಕತ್ವ ಮತ್ತು ದೃಢತೆಗೆ ಸಾಕ್ಷಿಯಾಗಿದೆ. ಪಂದ್ಯದ ದಿನಗಳಲ್ಲಿ ರಾತ್ರಿ 7.52 ಕ್ಕೆ ರಾಷ್ಟ್ರದ ಚೈತನ್ಯವನ್ನು ಬೆಳಗಿಸುವಾಗ ಅವರೊಂದಿಗೆ ನಾವೆಲ್ಲರೂ ಕೈ ಜೋಡಿಸೋಣ” ಎಂದು ಬಿಸಿಸಿಐ ಬರೆದುಕೊಂಡಿದೆ.
ರಿಷಭ್ ಪಂತ್ ಅವರು ವಿಶೇಷ ಪ್ರೋಮೋದಲ್ಲಿ ಕಾಣಿಸಲು ಕೂಡ ಒಂದು ಕಾರಣವಿದೆ. 2022ರ ಡಿಸೆಂಬರ್ 30ರಂದು(rishabh pant accident date) ರಿಷಭ್ ಪಂತ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ(rishabh pant accident) ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಅವರ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿತ್ತು. ಆದರೆ, ಪಂತ್ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದರು.
ರಿಷಭ್ ಪಂತ್ ಅವರ ಗಂಭೀರ ಗಾಯವನ್ನು ಕಂಡ ಅನೇಕರು ಪಂತ್ ಕ್ರಿಕೆಟ್ ಬಾಳ್ವೆ ಇನ್ನು ಮಂದೆ ಕಷ್ಟ, ಒಂದೊಮ್ಮೆ ಅವರು ಕ್ರಿಕೆಟ್ಗೆ ಮರಳಬೇಕಾದರೂ ಹಲವು ವರ್ಷ ಬೇಕಾದಿತು ಹೀಗೆ ಹಲವು ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ ಪಂತ್ ತಮ್ಮ ನಂಬಿಕೆ ಮತ್ತು ಕ್ರಿಕೆಟ್ಗೆ ಮರಳುವ ದೃಢ ಸಂಕಲ್ಪದಿಂದ ಕಠಿಣ ವ್ಯಾಯಾಮ ನಡೆಸಿ ಕೇವಲ 14 ತಿಂಗಳಲ್ಲಿ ಸಂಪೂರ್ಣ ಫಿಟ್ ಆಗಿ ಕ್ರಿಕೆಟ್ಗೆ ಮರಳಿದ್ದರು. ಇದೇ ಛಲ ವಿಶ್ವಕಪ್ ಗೆಲ್ಲುವಲ್ಲಿಯೂ ತಂಡಕ್ಕೆ ಇರಬೇಕು ಎನ್ನುವ ಅರ್ಥದಲ್ಲಿ ಪಂತ್ ಅವರನ್ನು ಬಿಸಿಸಿಐ ಈ ವಿಡೊಯೊದಲ್ಲಿ ತೋರಿಸಿದೆ.
ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್ ಕಿತ್ತ ಟಾಪ್ 5 ಬೌಲರ್ಗಳು ಯಾರು?
ಭಾರತ ತನ್ನ ಮೊದಲ ಲೀಗ್ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್ ಗೆಲ್ಲಲಿ ಎಂದು ಹಾರೈಸಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.