ಹೈದರಾಬಾದ್ : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟಿ೨೦ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ಟಾಸ್ ಗೆದ್ದಿದ್ದು, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸರಣಿಯ ಈ ಹಿಂದಿನ ಎರಡೂ ಪಂದ್ಯಗಳಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡ ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿದೆ. ಹೀಗಾಗಿ ಈ ಹಣಾಹಣಿ ಸರಣಿ ವಿಜೇತರ ನಿರ್ಣಾಯಕ ಪಂದ್ಯ ಎನಿಸಿಕೊಳ್ಳಲಿದೆ.
ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡ ನಾಲ್ಕು ವಿಕೆಟ್‌ಗಳ ಸೋಲಿಗೆ ಒಳಗಾಗಿದ್ದರೆ, ಮಳೆಯಿಂದ ಬಾಧಿತವಾಗಿದ್ದ ನಾಗ್ಪುರ ಪಂದ್ಯದಲ್ಲಿ ಭಾರತ ತಂಡ ಆರು ವಿಕೆಟ್‌ಗಳಿಂದ ಜಯ ಸಾಧಿಸಿತ್ತು.
ಭಾರತ ತಂಡದಲ್ಲಿ ರಿಷಭ್ ಪಂತ್ ಅವರನ್ನು ಹೊರಕ್ಕಿಡಲಾಗಿದ್ದು, ಭುವನೇಶ್ವರ್ ಕುಮಾರ್ ತಂಡಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯಾ ತಂಡದ ಪರ ಸೀನ್ ಅಬಾಟ್ ಹೊರಕ್ಕೆ ನಡೆದಿದ್ದು, ಜೋಶ್ ಇಂಗ್ಲಿಸ್ ೧೧ರ ಬಳಗ ಪ್ರವೇಶಿಸಿದ್ದಾರೆ.
ತಂಡಗಳು
ಭಾರತ: ರೋಹಿತ್ ಶರ್ಮ, ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಯಜ್ವೇಂದ್ರ ಚಹಲ್, ಜಸ್‌ಪ್ರಿತ್ ಬುಮ್ರಾ.
ಆಸ್ಟ್ರೇಲಿಯಾ : ಆರೋನ್ ಫಿಂಚ್, ಕೆಮೆರಾನ್ ಗ್ರೀನ್, ಸ್ಟ್ರೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್, ಪ್ಯಾಟ್ ಕಮಿನ್ಸ್, ನಥಾನ್ ಎಲ್ಲಿಸ್, ಆಡಂ ಜಂಪಾ, ಜೋಶ್ ಹೇಜಲ್‌ವುಡ್.
ಇದನ್ನೂ ಓದಿ | IND vs AUS | ರೋಹಿತ್ ಶರ್ಮ ಅಬ್ಬರ; ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡಕ್ಕೆ 6 ವಿಕೆಟ್ ಜಯ