Site icon Vistara News

Team India : ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ 3 ಮಾದರಿಯ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಮಾಡಿದ ಟೀಮ್ ಇಂಡಿಯಾ

Team india

ಮೊಹಾಲಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರೂ ಮಾದರಿಯ ಕ್ರಿಕೆಟ್​ನಲ್ಲಿ ನಂ.1 ಸ್ಥಾನಕ್ಕೇರಿದೆ. ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಪಾಕಿಸ್ತಾನವನ್ನು ಅಗ್ರಸ್ಥಾನದಿಂದ ಕೆಳಗಿಳಿಸಲು ಟೀಮ್ ಇಂಡಿಯಾಗೆ ಜಯದ ಅಗತ್ಯವಿತ್ತು. ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿದ ಬಳಿಕ ಅಪರೂಪದ ದಾಖಲೆ ಮಾಡಿದೆ.

ಟೆಸ್ಟ್ ಹಾಗೂ ಟಿ20 ರ್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾ ನಂ.1 ಸ್ಥಾನದಲ್ಲಿತ್ತು. ಈಗ ಅವರು ಏಕದಿನ ಪಂದ್ಯಗಳಲ್ಲಿಯೂ ನಂಬರ್ ಒನ್ ಆಗಿದ್ದಾರೆ. ವಿಶೇಷವೆಂದರೆ, ಮೆನ್ ಇನ್ ಬ್ಲೂ ಇತಿಹಾಸದಲ್ಲಿ ಎಲ್ಲಾ ಸ್ವರೂಪಗಳಲ್ಲಿ ನಂ.1 ಶ್ರೇಯಾಂಕವನ್ನು ಪಡೆದ ಎರಡನೇ ತಂಡವಾಗಿದೆ. ಇದಕ್ಕೂ ಮುನ್ನ 2012ರ ಆಗಸ್ಟ್​​ನಲ್ಲಿ ದಕ್ಷಿಣ ಆಫ್ರಿಕಾ ಮಾತ್ರ ಈ ಸಾಧನೆ ಮಾಡಿತ್ತು. ಅದೇ ರೀತಿ ಈ ಸಾಧನೆ ಮಾಡಿರುವ ಏಷ್ಯಾದ ಮೊದಲ ತಂಡ ಎನಿಸಿಕೊಂಡಿದೆ.

ಐಸಿಸಿ ರ್ಯಾಂಕಿಂಗ್​​ನಲ್ಲಿ ಟೀಂ ಇಂಡಿಯಾ ಅಂಕ

ಪಾಕಿಸ್ತಾನ ಇನ್ನೂ ಪೈಪೋಟಿಯಲ್ಲಿದೆ

ವಿಶ್ವಕಪ್ ಪ್ರಾರಂಭವಾಗುವ ಮೊದಲು ಪಾಕಿಸ್ತಾನವು ಅಗ್ರಸ್ಥಾನವನ್ನು ಮರಳಿ ಪಡೆಯಲು ಸಾಧ್ಯವಾಗಿರುವುದರಿಂದ ಎಲ್ಲಗೂ ಇಲ್ಲಿಗೆ ಮುಗಿದಿಲ್ಲ. . ಆಸ್ಟ್ರೇಲಿಯಾ ಇನ್ನು ಮುಂದೆ ವಿಶ್ವಕಪ್​​ಗೆ ಹೋಗುವ ನಂ.1 ತಂಡವಾಗಲು ರೇಸ್​ನಲ್ಲಿ ಇಲ್ಲವಾಧರೂ ಆಸ್ಟ್ರೇಲಿಯಾ ಭಾರತದ ವಿರುದ್ಧದ ಉಳಿದ ಎರಡು ಪಂದ್ಯಗಳನ್ನು ಗೆದ್ದರೆ ಪಾಕಿಸ್ತಾನ ಇನ್ನೂ ನಂ.1 ಆಗಬಹುದು.

ಇದನ್ನೂ ಓದಿ : ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

ಎಲ್ಲ ಮೂರು ಮಾದರಿಗಳಲ್ಲಿ ನಂಬರ್​ 1 ಸ್ಥಾನ ಪಡೆದ ಭಾರತ ತಂಡಕ್ಕೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಶುಭಾಶಯ ಸಲ್ಲಿಸಿದ್ದಾರೆ.

ಈ ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದ್ದಕ್ಕಾಗಿ ಟೀಮ್​ ಇಂಡಿಯಾಗೆ ಹೃತ್ಪೂರ್ವಕ ಅಭಿನಂದನೆಗಳು. ಮೈದಾನದಲ್ಲಿ ಶ್ರೇಷ್ಠತೆಯನ್ನು ಬೆನ್ನಟ್ಟುವಾಗ ಈ ತಂಡವು ಮಾಡಿದ ಕಠಿಣ ಪರಿಶ್ರಮವನ್ನು ರ್ಯಾಂಕ್​ಗಳನ್ನು ಪ್ರತಿಬಿಂಬಿಸುತ್ತವೆ. ವಿಶ್ವಕಪ್​ಗೆ ಸ್ವಲ್ಪ ಮುಂಚಿತವಾಗಿ ಇದು ಅದ್ಭುತ ಸಾಧನೆಯಾಗಿದೆ. ಮೊಹಾಲಿಯಲ್ಲಿ ನಡೆದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ವಿರುದ್ಧ 1-0 ಮುನ್ನಡೆ ಸಾಧಿಸಿದೆ. ಆವೇಗವನ್ನು ಮುಂದುವರಿಸೋಣ. ಎಂದು ಬರೆದಿದ್ದಾರೆ.

ಭಾರತ ತಂಡದ ಸಾಧನೆ ರೀ ರೀತಿ ಇದೆ

Exit mobile version