Heart Attack: ಅಭ್ಯಾಸ ಮಾಡುವಾಗ ಕುಸಿದು ಬಿದ್ದು ಯುವ ಟೆನಿಸ್ ಆಟಗಾರ್ತಿ ಸಾವು - Vistara News

ಕ್ರೀಡೆ

Heart Attack: ಅಭ್ಯಾಸ ಮಾಡುವಾಗ ಕುಸಿದು ಬಿದ್ದು ಯುವ ಟೆನಿಸ್ ಆಟಗಾರ್ತಿ ಸಾವು

ಪಾಕಿಸ್ತಾನದ(Pakistani tennis player Zainab Ali Naqvi) ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ(Zainab Ali Naqvi) ಅಭ್ಯಾಸ ಮಾಡುವಾಗ ಕುಸಿದು ಸಾವನ್ನಪ್ಪಿದ್ದಾರೆ. 17 ವರ್ಷದ ಆಟಗಾರ್ತಿಗೆ ಹೃದಯಾಘಾತವಾಗಿರುವ(Heart Attack) ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ

VISTARANEWS.COM


on

Pakistani tennis player Zainab Ali Naqvi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಇಸ್ಲಾಮಾಬಾದ್: ಇತ್ತೀಚೆಗೆ ಸಣ್ಣ ಸಣ್ಣ ವಯಸ್ಸಿನ ಯುವಕರೇ ಹೃದಯಾಘಾತಕ್ಕೀಡಾಗಿ (Heart Attack) ಕ್ಷಣ ಮಾತ್ರದಲ್ಲಿ ಜೀವ ಕಳೆದುಕೊಳ್ಳುವ ವಿದ್ಯಮಾನಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲೂ ಜಿಮ್‌ ನಲ್ಲಿ ವರ್ಕೌಟ್‌ ಮಾಡುವಾಗ, ಆಟ ಆಡುವಾಗ ಒಮ್ಮೆಲೇ ಹೃದಯ ನಿಂತು ಬಿಡುವುದು ಹೆಚ್ಚಾಗುತ್ತಲೇ ಇದೆ.  ಪಾಕಿಸ್ತಾನದ(Pakistani tennis player Zainab Ali Naqvi) ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ(Zainab Ali Naqvi) ಅಭ್ಯಾಸ ಮಾಡುವಾಗ ಕುಸಿದು ಸಾವನ್ನಪ್ಪಿದ್ದಾರೆ. 17 ವರ್ಷದ ಆಟಗಾರ್ತಿಗೆ ಹೃದಯಾಘಾತವಾಗಿರುವ(Heart Attack) ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಮುಂಬರುವ ಐಟಿಎಫ್ ಜೂನಿಯರ್ ಟೂರ್ನಿಯಲ್ಲಿ(ITF junior tournament) ಆಡಲು ಅವರು ಸಿದ್ಧತೆ ನಡೆಸುತ್ತಿದ್ದರು.

‘ಝೈನಾಬ್ ಉದಯೋನ್ಮುಖ ಆಟಗಾರ್ತಿಯಾಗಿದ್ದರು. ವೈದ್ಯರು ಅವರಿಗೆ ಹೃದಯಾಘಾತ ಆಗಿದೆ ಎಂದು ಸಂದೇಹ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಸಹಜ ಸಾವು ಎಂದು ದಾಖಲಿಸಲಾಗಿದೆ. ಆಟಗಾರ್ತಿಯ ದೇಹದ ಮರಣೋತ್ತರ ಪರೀಕ್ಷೆ ಬೇಡವೆಂದು ಪಾಲಕರೂ ಮನವಿ ಮಾಡಿದ್ದರಿಂದ ಕುಟುಂಬದವರಿಗೆ ಆಟಗಾರ್ತಿಯ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಗಿದೆ ಎಂದು ಪಾಕಿಸ್ತಾನ ಟೆನಿಸ್ ಫೆಡರೇಷನ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

Heart Attack : ನಮಾಜ್‌ ಮಾಡುತ್ತಿದ್ದಾಗ ಕುಳಿತಲ್ಲೇ ಕುಸಿದು ಬಿದ್ದು ಮೃತ್ಯು; ವಿಡಿಯೊ ಇದೆ

ಅಭ್ಯಾಸ ನಡೆಸಿ ತಮ್ಮ ಕೋಣೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಅವರು ಸಾವಿಗೀಡಾದರು. ಪ್ರಜ್ಞಾಹೀನರಾದ ಝೈನಾಬ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಝೈನಾಬ್ ಜತೆಗೆ ಅವರ ಅಜ್ಜಿ ಕೂಡ ಈ ಕೋಣೆಯಲ್ಲಿದ್ದರು. ಇವರ ಸಾವಿಗೆ ಟೆನ್ನಿಸ್​ ಫೆಡರೇಶನ್​ ಸಂತಾಪ ಸೂಚಿಸಿದೆ.

ಕಳೆದ ವರ್ಷ ಪಾಕಿಸ್ತಾನದಲ್ಲಿ ಕ್ಲಬ್‌ ಕ್ರಿಕೆಟ್‌ ಆಡುವ ವೇಳೆ ಯುವ ಕ್ರಿಕೆಟಿಗರೊಬ್ಬರು ಹೃದಯಾಘಾತದಿಂದ ಕ್ರೀಡಾಂಗಣದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದರು. ಘಟನೆ ಬಗ್ಗೆ ಅಲ್ಲಿನ ಕ್ರಿಕೆಟರ್‌ಗಳು ದಿಗ್ರ್ಭಮೆ ವ್ಯಕ್ತಪಡಿಸಿದ್ದರು. ಅಲ್ಲಿನ ಕಾರ್ಪೊರೇಟ್‌ ಕ್ರಿಕೆಟ್‌ ಟೂರ್ನಮೆಂಟ್‌ ವೇಳೆ ಘಟನೆ ಸಂಭವಿಸಿತ್ತು

ಮೃತಪಟ್ಟ ಉಸ್ಮಾನ್‌ ಶಿನ್ವಾರಿ ಫೀಲ್ಡಿಂಗ್ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸಹ ಆಟಗಾರರು ನೆರವಿಗೆ ಹೋದರು ಪ್ರಯೋಜನಕ್ಕೆ ಬರಲಿಲ್ಲ. ಬಳಿಕ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಕ್ಕಿಂತ ಮೊದಲೇ ಅವರು ಮೃತಪಟ್ಟಿದ್ದರು.

ದಿಲ್ಲಿಯಲ್ಲಿ ಕ್ರಿಕೆಟ್‌ ಆಡುವ ವೇಳೆ ಸಾಫ್ಟ್‌ ವೇರ್‌ ಎಂಜಿನಿಯರ್‌ ಸಾವು


ಇತ್ತೀಚೆಗೆ ನೊಯ್ಡಾ ಮೂಲದ ಸಾಫ್ಟ್‌ವೇರ್‌ ಎಂಜಿನಿಯರ್‌ ವಿಕಾಸ್‌ ನೇಗಿ ಅವರು ಕ್ರಿಕೆಟ್‌ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದರು. ಕಾರ್ಪೊರೇಟ್‌ ಟೂರ್ನಮೆಂಟ್‌ ಒಂದರ ಪಂದ್ಯದಲ್ಲಿ ಪಾಲ್ಗೊಂಡಿದ್ದ ವಿಕಾಸ್ ನಾನ್‌ ಸ್ಟ್ರೈಕ್‌ನಿಂದ ಸ್ಟ್ರೈಕರ್‌ ಕಡೆಗೆ ಸಾಗಿ ನಂತರ ಎದೆ ಹಿಡಿದುಕೊಂಡು ಅಲ್ಲೇ ಕುಸಿದುಬಿದ್ದಿದ್ದಾರೆ. ಎದುರಾಳಿ ತಂಡದ ಆಟಗಾರರು ಮತ್ತು ಸಹ ಆಟಗಾರರು ಕೂಡಲೇ ಸಹಾಯಕ್ಕೆ ಮುಂದಾದರೂ ಯಾವುದೇ ಪ್ರಯೋಜನ ಆಗಿರಲಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

VISTARANEWS.COM


on

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

ಪಂಜಾಬ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ದೊಡ್ಡ ವಿವಾದಕ್ಕೆ ಸಿಲುಕಿದ್ದಾರೆ. ಪಂದ್ಯದ ನಡುವೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಕುಳಿತಿದ್ದ ಪರಾಗ್ ‘ವೇಪಿಂಗ್’ (ಇ-ಸಿಗರೇಟ್) ಬಳಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದಲ್ಲಿ 2019 ರಿಂದಲೇ ಇ-ಸಿಗರೇಟ್ ಬಳಕೆಯನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕವಾಗಿ ಮತ್ತು ಕ್ರೀಡಾಂಗಣದ ಶಿಸ್ತು ಉಲ್ಲಂಘಿಸಿ ಈ ರೀತಿ ನಡೆದುಕೊಂಡಿರುವುದು ಈಗ ಅವರಿಗೆ ಕಾನೂನು ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದ

ಈ ಜವಾಬ್ದಾರಿರಹಿತ ವರ್ತನೆಯಿಂದಾಗಿ ರಿಯಾನ್ ಪರಾಗ್ ಅವರಿಗೆ ಭಾರಿ ದಂಡ ಅಥವಾ ಪಂದ್ಯಗಳಿಂದ ನಿಷೇಧ ಹೇರುವ ಭೀತಿ ಎದುರಾಗಿದೆ. ಭಾರತೀಯ ಕಾನೂನಿನ ಪ್ರಕಾರ ಇ-ಸಿಗರೇಟ್ ಬಳಕೆಯ ಮೊದಲ ಅಪರಾಧಕ್ಕೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ₹1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಇದರ ಜೊತೆಗೆ ಬಿಸಿಸಿಐ (BCCI) ಕೂಡ ಕ್ರೀಡಾ ಶಿಸ್ತಿನ ಉಲ್ಲಂಘನೆಗಾಗಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ. ಯುವಕರಿಗೆ ಮಾದರಿಯಾಗಬೇಕಾದ ಆಟಗಾರನ ಈ ವರ್ತನೆಯು ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಹಾಗೂ ಐಪಿಎಲ್ ಆಡಳಿತ ಮಂಡಳಿಗೆ ಭಾರಿ ಮುಜುಗರ ತಂದಿದೆ.

Continue Reading

ಕ್ರೀಡೆ

ಕಿಂಗ್ ಕೊಹ್ಲಿಗೆ ಟಕ್ಕರ್ ಕೊಟ್ಟ ಯುವ ಕಿಡಿ: ಆರೆಂಜ್ ಕ್ಯಾಪ್ ರೇಸ್‌ನಲ್ಲಿ ವಿರಾಟ್ ಹಿಂದಿಕ್ಕಿದ ವೈಭವ್ ಸೂರ್ಯವಂಶಿ!

VISTARANEWS.COM


on

ಐಪಿಎಲ್ 2026ರ ಪ್ಲೇಆಫ್‌ ಹಂತ ಹತ್ತಿರವಾಗುತ್ತಿದ್ದಂತೆ ಆರೆಂಜ್ ಕ್ಯಾಪ್‌ಗಾಗಿ ದಿಗ್ಗಜ ಆಟಗಾರರ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಈ ರೇಸ್‌ನಲ್ಲಿ ರಾಜಸ್ತಾನ ರಾಯಲ್ಸ್‌ನ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಅವರನ್ನೇ ಹಿಂದಿಕ್ಕಿ ಸದ್ದು ಮಾಡುತ್ತಿದ್ದಾರೆ. ಹೈದ್ರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ 12 ಸಿಕ್ಸರ್‌ಗಳ ನೆರವಿನಿಂದ ಶತಕ ಸಿಡಿಸಿದ ಸೂರ್ಯವಂಶಿ, ಸದ್ಯ 357 ರನ್‌ಗಳೊಂದಿಗೆ ರೇಸ್‌ನಲ್ಲಿ ಮೂರನೇ ಸ್ಥಾನಕ್ಕೇರಿದ್ದಾರೆ. ಇತ್ತ ಎಂಟು ಪಂದ್ಯಗಳಿಂದ 351 ರನ್ ಗಳಿಸಿರುವ ಕಿಂಗ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಪ್ರಸ್ತುತ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್ ತಂಡದ ಅಭಿಷೇಕ್ ಶರ್ಮಾ 380 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಆರೆಂಜ್ ಕ್ಯಾಪ್ ಧರಿಸಿದ್ದಾರೆ. ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆ.ಎಲ್. ರಾಹುಲ್ 358 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದರೆ, ಅವರಿಗಿಂತ ಕೇವಲ ಒಂದು ರನ್ ಕಡಿಮೆ (357 ರನ್) ಹೊಂದಿರುವ ವೈಭವ್ ಸೂರ್ಯವಂಶಿ ಮೂರನೇ ಸ್ಥಾನದಲ್ಲಿದ್ದಾರೆ. 234.86ರ ಭೀಕರ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಸೂರ್ಯವಂಶಿ ಅವರ ಆಟ ನೋಡಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ಲಗ್ಗೆ ಇಡುತ್ತಿದ್ದಾರೆ. ಹೆನ್ರಿಚ್ ಕ್ಲಾಸೆನ್ 349 ರನ್‌ಗಳೊಂದಿಗೆ ಐದನೇ ಸ್ಥಾನ ಪಡೆದಿದ್ದು, ಪೈಪೋಟಿ ತೀವ್ರಗೊಂಡಿದೆ.

ವೈಭವ್ ಸೂರ್ಯವಂಶಿ ಅವರ ಈ ಸಾಧನೆಗೆ ಅವರ ಅದ್ಭುತ ಫಾರ್ಮ್ ಕಾರಣವಾಗಿದೆ. ಗುಜರಾತ್ ಟೈಟನ್ಸ್‌ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದ ಅವರು, ಈಗ ಹೈದ್ರಾಬಾದ್ ವಿರುದ್ಧವೂ ಅಬ್ಬರಿಸಿದ್ದಾರೆ. ಮಧ್ಯದಲ್ಲಿ ಮಂಡಿ ಗಾಯದಿಂದ ಕೊಂಚ ಹಿನ್ನಡೆ ಅನುಭವಿಸಿದ್ದರೂ, ಈಗ ಚೇತರಿಸಿಕೊಂಡು ಮತ್ತೆ ಮೈದಾನಕ್ಕೆ ಮರಳಲು ಸಿದ್ಧರಾಗಿದ್ದಾರೆ. ಐಪಿಎಲ್ ಇತಿಹಾಸದ ಸ್ಟಾರ್ ಬ್ಯಾಟರ್‌ಗಳನ್ನೇ ಮೀರಿಸಿರುವ ಈ 15ರ ಹರೆಯದ ಪೋರ, ಈ ಬಾರಿ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಳ್ಳುವ ಟಾರ್ಗೆಟ್ ಹೊಂದಿದ್ದಾರೆ. ಪ್ಲೇಆಫ್‌ ವೇಳೆಗೆ ಈ ರೇಸ್ ಇನ್ನು ಎಷ್ಟು ರೋಚಕವಾಗಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

Latest

ಕಿಂಗ್ ಕೊಹ್ಲಿಗಾಗಿ ಪುಟಾಣಿ ಫ್ಯಾನ್ ಹಠ: ಹೋಟೆಲ್ ಸಿಬ್ಬಂದಿ ತಡೆದಿದ್ದಕ್ಕೆ ಕಣ್ಣೀರು ಹಾಕಿದ ಬಾಲಕ

VISTARANEWS.COM


on

ಆರ್‌ಸಿಬಿ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್‌ಸಿಬಿ ಜಯಗಳಿಸಿದ ನಂತರ, ಹೋಟೆಲ್‌ನಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಪುಟಾಣಿ ಬಾಲಕನೊಬ್ಬ ಬ್ಯಾಟ್ ಹಿಡಿದು ಬಹಳ ಹೊತ್ತು ಕಾತರದಿಂದ ಕಾಯುತ್ತಿದ್ದ. ಆದರೆ ಕೊಹ್ಲಿ ಹೋಟೆಲ್‌ಗೆ ಆಗಮಿಸಿದಾಗ ಭದ್ರತಾ ಸಿಬ್ಬಂದಿ ಬಾಲಕನನ್ನು ಹತ್ತಿರ ಹೋಗಲು ಬಿಡದೆ ತಡೆದಿದ್ದಾರೆ. ಇದರಿಂದ ಮನನೊಂದ ಬಾಲಕ ತನ್ನ ಕೈಯಲ್ಲಿದ್ದ ಬ್ಯಾಟನ್ನು ನೆಲಕ್ಕೆ ಎಸೆದು ಗಳಗಳನೇ ಅತ್ತಿದ್ದಾನೆ.

ಹೋಟೆಲ್ ಪ್ರವೇಶಿಸಿದ ವಿರಾಟ್ ಕೊಹ್ಲಿ ಸುತ್ತಲೂ ಸಿಬ್ಬಂದಿಗಳು ಬೌನ್ಸರ್‌ಗಳಂತೆ ನಿಂತು ಯಾರೂ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತಿದ್ದರು. ಈ ವೇಳೆ ಓಡೋಡಿ ಬಂದ ಬಾಲಕನನ್ನು ಸಿಬ್ಬಂದಿ ಬಲವಂತವಾಗಿ ತಡೆದಿದ್ದಾರೆ. ಇತ್ತ ಕೊಹ್ಲಿ ಕೂಡ ಬಾಲಕನತ್ತ ಗಮನ ಹರಿಸದೆ ನೇರವಾಗಿ ಮುಂದೆ ಸಾಗಿದ್ದಾರೆ. ತನ್ನ ನೆಚ್ಚಿನ ಕ್ರಿಕೆಟಿಗನನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂಬ ನೋವಿನಿಂದ ಬಾಲಕ ಪೋಷಕರ ಬಳಿ ತೆರಳಿ ಜೋರಾಗಿ ಅಳಲಾರಂಭಿಸಿದನು. ಪೋಷಕರು ಎಷ್ಟೇ ಸಮಾಧಾನ ಪಡಿಸಿದರೂ ಆ ಪುಟ್ಟ ಅಭಿಮಾನಿಯ ಸಿಟ್ಟು ಮತ್ತು ಬೇಸರ ಮಾತ್ರ ಕಡಿಮೆಯಾಗಲಿಲ್ಲ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. “ಕೊಹ್ಲಿ ಕನಿಷ್ಠ ಪಕ್ಷ ಆ ಮಗುವಿಗೆ ಕೈಬೀಸಿ ವಿಶ್ ಮಾಡಬೇಕಿತ್ತು, ಆಗ ಆ ಮಗುವಿನ ಮುಖದಲ್ಲಿ ನಗು ಮೂಡುತ್ತಿತ್ತು” ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು, “ಕೊಹ್ಲಿಗೆ ಆ ಸಮಯದಲ್ಲಿ ಬಾಲಕ ಅವರ ಗಮನಕ್ಕೆ ಬಂದಿರಲಿಕ್ಕಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಏನೇ ಇರಲಿ, ಕ್ರಿಕೆಟ್ ತಾರೆಗಳ ಮೇಲಿರುವ ಅಭಿಮಾನವು ಕೆಲವೊಮ್ಮೆ ಇಂತಹ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಗುವುದು ಸಹಜ ಎಂಬ ಚರ್ಚೆಗಳು ನಡೆಯುತ್ತಿವೆ.

Continue Reading

Latest

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

VISTARANEWS.COM


on

ಐಪಿಎಲ್ 2026ರ ಸೋಮವಾರದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಣಕ್ಕಿಳಿಯಲಿರುವ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ಸಜ್ಜಾಗಿದ್ದಾರೆ. ಟೂರ್ನಿಯ ಇತಿಹಾಸದಲ್ಲಿ ಬರೋಬ್ಬರಿ 9,000 ರನ್ ಪೂರೈಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು ಕಿಂಗ್ ಕೊಹ್ಲಿಗೆ ಇನ್ನು ಕೇವಲ 11 ರನ್‌ಗಳ ಅಗತ್ಯವಿದೆ. 2008 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿರುವ ಕೊಹ್ಲಿ, ತಮ್ಮ ಅಮೋಘ ಸ್ಥಿರತೆಯ ಮೂಲಕ ಕ್ರಿಕೆಟ್ ಲೋಕದ ‘ರನ್ ಮಷೀನ್’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಲು ಹೊರಟಿದ್ದಾರೆ.

ಪ್ರಸಕ್ತ ಸೀಸನ್‌ನಲ್ಲಿ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದು, ಕೇವಲ ಏಳು ಇನ್ನಿಂಗ್ಸ್‌ಗಳಲ್ಲಿ 328 ರನ್‌ಗಳನ್ನು ಸಿಡಿಸಿ ಅಬ್ಬರಿಸುತ್ತಿದ್ದಾರೆ. ಇದುವರೆಗೆ ಒಟ್ಟು 274 ಐಪಿಎಲ್ ಪಂದ್ಯಗಳನ್ನು ಆಡಿರುವ ಕೊಹ್ಲಿ, 8,989 ರನ್‌ಗಳನ್ನು ಗಳಿಸಿ ಅಗ್ರಸ್ಥಾನದಲ್ಲಿದ್ದಾರೆ. ಇಂದು ಅವರು 11 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲಿ 9 ಸಾವಿರದ ಗಡಿ ದಾಟಿದ ವಿಶ್ವದ ಏಕೈಕ ಬ್ಯಾಟರ್ ಎಂಬ ವಿಶ್ವ ದಾಖಲೆ ಅವರ ಹೆಸರಿಗೆ ಸೇರಲಿದೆ. ಕೊಹ್ಲಿ ಅವರ ಈ ಸಾಧನೆಯನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯನ್ನು ಗಮನಿಸಿದರೆ ಕೊಹ್ಲಿ ಅವರ ಸಾಧನೆ ಎಷ್ಟು ದೊಡ್ಡದು ಎಂಬುದು ಅರ್ಥವಾಗುತ್ತದೆ. ಅವರ ನಂತರದ ಸ್ಥಾನದಲ್ಲಿರುವ ರೋಹಿತ್ ಶರ್ಮಾ (7,183 ರನ್) ಅವರಿಗಿಂತ ಕೊಹ್ಲಿ ಬಹಳ ಮುಂದಿದ್ದಾರೆ. ಶಿಖರ್ ಧವನ್, ಡೇವಿಡ್ ವಾರ್ನರ್ ಮತ್ತು ಕೆ.ಎಲ್. ರಾಹುಲ್ ಅವರಂತಹ ದಿಗ್ಗಜ ಆಟಗಾರರೂ ಸಹ ಕೊಹ್ಲಿಯ ರನ್ ವೇಗವನ್ನು ತಲುಪಲು ಹೋರಾಡುತ್ತಿದ್ದಾರೆ. ಕಿಂಗ್ ಕೊಹ್ಲಿಯ ಈ ಅಪ್ರತಿಮ ದಾಖಲೆಯು ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಲ್ಪಡುವ ಕ್ಷಣ ಹತ್ತಿರದಲ್ಲಿದೆ.

Continue Reading
Advertisement
Latest11 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest13 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌