ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಮತ್ತು ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಸೇರಿದಂತೆ ಇತರ ಪಾಕಿಸ್ತಾನದ ಕ್ರಿಕೆಟಿಗರು ಆಡುತ್ತಿದ್ದ ಸ್ಟೇಡಿಯಂ ಸಮೀಪದಲ್ಲೇ ಭಯೋತ್ಪಾದಕ ದಾಳಿ ನಡೆದಿದೆ. ದಾಳಿಯ ಬಳಿಕ ಎಲ್ಲರನ್ನೂ ಡ್ರೆಸ್ಸಿಂಗ್ ರೂಮ್‌ನ ಸುರಕ್ಷತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ವರಿಯಾಗಿದೆ.
ಭಾನುವಾರ ನವಾಬ್ ಅಕ್ಬರ್ ಬುಗ್ತಿ ಸ್ಟೇಡಿಯಂನಲ್ಲಿ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) ನ ಪ್ರದರ್ಶನ ಪಂದ್ಯ ನಡೆಯುತ್ತಿತ್ತು. ಇದೇ ವೇಳೆ ಪೊಲೀಸ್ ಲೈನ್ಸ್ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ದಾಳಿಯಿಂದ ಪಾಕ್ ಕ್ರಿಕೆಟಿಗರು ಬೆಚ್ಚಿ ಬಿದ್ದಿದ್ದು ಪ್ರದರ್ಶನ ಪಂದ್ಯವನ್ನು ಸ್ಥಗಿತಗೊಳಿಸಲಾಗಿದೆ.
ಸ್ಪೋಟದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಆದರೆ ಐದು ಜನರಿಗೆ ಗಾಯಗೊಂಡಿದೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯ ಪೂರ್ಣಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ Pakistan Girl: ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕ್ ಯುವತಿ ಬಂಧನ
ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿರುವುದಾಗಿ ತಿಳಿಸಿದೆ. ಜತೆಗೆ ಈ ಸ್ಫೋಟದಲ್ಲಿ ಕ್ರಿಟಿಗರು ನಮ್ಮ ಗುರಿಯಾಗಿರಲಿಲ್ಲ ಭದ್ರತಾ ಅಧಿಕಾರಿಗಳನ್ನು ಗುರಿಯಾಗಿರಿಸಿ ಈ ದಾಳಿ ಮಾಡಲಾಗಿದೆ ಎಂದು ಅದು ಹೇಳಿದೆ.