ತಿರುವನಂತಪುರ : ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಪಂದ್ಯ ನಡೆಯಲಿರುವ ಕೇರಳದ ತಿರುವನಂತಪುರದ ಹವಾಮಾನದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾಗಿದ್ದು ಮಳೆಯ ನಿರೀಕ್ಷೆಯಿದೆ. ಹೀಗಾಗಿ ಪಂದ್ಯಕ್ಕೆ ಅಡಚಣೆಯಾಗಬಹುದು ಎಂದು ಹೇಳಲಾಗುತ್ತಿದೆ. ಆದರೆ, ಸ್ವಲ್ಪವೇ ಮಳೆ ಬಂದು ನಿಲ್ಲಬಹುದು ಎಂದು ಹೇಳಲಾಗುತ್ತಿದ್ದು, ಚುಟುಕು ಕ್ರಿಕೆಟ್ ಆಗಿರುವ ಕಾರಣ ಅಭಿಮಾನಿಗಳಿಗೆ ನಿರಾಸೆ ಉಂಟಾಗದು ಎನ್ನಲಾಗಿದೆ.
ಗ್ರೀನ್‌ಫೀಲ್ಡ್ ಸ್ಟೇಡಿಯಮ್ ಸುತ್ತಲೂ ೩೦ ಡಿಗ್ರಿ ಸೆಲ್ಸಿಯಸ್ ಡಿಗ್ರಿ ಸೆಲ್ಸಿಯಸ್ ವಾತಾವರಣವಿದ್ದು, ಸಣ್ಣ ಪ್ರಮಾಣದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಹಗಲಿನಲ್ಲಿ ಶೇಕಡಾ ೧೭ರಷ್ಟು ಮಳೆಯ ಸಾಧ್ಯತೆ ಇದೆ ಹಾಗೂ ರಾತ್ರಿ ಶೇಕಡಾ ೨೫ರಷ್ಟು ಮಳೆಯನ್ನು ನಿರೀಕ್ಷೆ ಮಾಡಲಾಗಿದೆ. ಆದರೆ, ಮಳೆ ನಿರಂತರವಾಗಿ ಬರದು. ಕೆಲವೇ ಹೊತ್ತು ಬಂದು ನಿಲ್ಲಬಹುದು. ಪಂದ್ಯ ಪೂರ್ಣಗೊಳಿಸಲು ಅವಕಾಶ ಸಿಗಬಹುದು ಎಂದು ತಜ್ಞರು ಅಂದಾಜಿಸಿದ್ದಾರೆ.
ಹೇಗಿದೆ ಪಿಚ್
ಈ ಪಿಚ್ ಬ್ಯಾಟಿಂಗ್‌ಗೆ ಪೂರಕ. ಆದರೆ, ಆರಂಭದಲ್ಲಿ ಬೌಲರ್‌ಗಳಿಗೆ ನೆರವಾಗುತ್ತದೆ. ನಂತರದಲ್ಲಿ ನಿಧಾನಗೊಂಡು ಬ್ಯಾಟರ್‌ಗಳಿಗೆ ಅನುಕೂಲ ಕಲ್ಪಿಸುತ್ತದೆ. ದೊಡ್ಡ ಮೊತ್ತದ ಸ್ಕೋರ್ ಇಲ್ಲಿ ದಾಖಲಾಗುತ್ತದೆ.
ನೇರ ಪ್ರಸಾರ ಎಲ್ಲಿ?
ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಸರಣಿಯ ಪಂದ್ಯಗಳು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಟಿವಿಗಳಲ್ಲಿ ನೇರ ಪ್ರದರ್ಶನಗೊಳ್ಳುತ್ತದೆ. ಅದೇ ರೀತಿ ಡಿಸ್ನಿ ಹಾಟ್ ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಕೂಡ ಇರುತ್ತದೆ
ತಂಡಗಳು
ಭಾರತ ಟಿ20 ತಂಡ:
ರೋಹಿತ್ ಶರ್ಮ (ನಾಯಕ), ಕೆ.ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ದಿನೇಶ್ ಕಾರ್ತಿಕ್ , ರವಿಚಂದ್ರನ್ ಅಶ್ವಿನ್, ಯಜ್ವೇಂದ್ರ ಚಹಲ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಶಹಬಾಜ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.
ದಕ್ಷಿಣ ಆಫ್ರಿಕಾ:
ತೆಂಬಾ ಬವುಮಾ, ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಏಡೆನ್ ಮಾರ್ಕ್ರಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಚ್ ನೋರ್ಜೆ, ವೇಯ್ನ್ ಪರ್ನೆಲ್,ಡ್ವೇನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಜ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.