Site icon Vistara News

World Test Championship | ಓವಲ್‌, ಲಾರ್ಡ್ಸ್‌ನಲ್ಲಿ ನಡೆಯಲಿವೆ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ಯಗಳು

World Test Championship

ದುಬೈ : ಟೆಸ್ಟ್‌ ಕ್ರಿಕೆಟ್‌ಗೆ ಉತ್ತೇಜನ ನೀಡುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ (World Test Championship)ನ ೨೦೨೩ರ ಫೈನಲ್‌ ಪಂದ್ಯ ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ ಎಂದು ಐಸಿಸಿ ಬುಧವಾರ ಪ್ರಕಟಿಸಿದೆ. ಇದು ಎರಡನೇ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯವಾಗಿದ್ದು,ಪ್ರಸ್ತುತ ಅದರ ಸರಣಿಗಳು ಚಾಲ್ತಿಯಲ್ಲಿವೆ. ಅಂತೆಯೇ ಮೂರನೇ ಆವೃತ್ತಿಯ ಚಾಂಪಿಯನ್‌ಷಿಪ್‌ನ ಫೈನಲ್‌ ಪಂದ್ಯ ಲರ್ಡ್ಸ್‌ ಮೈದಾನದಲ್ಲಿ ನಡೆಯಲಿದೆ ಎಂಬುದಾಗಿ ಐಸಿಸಿ ಇದೇ ವೇಳೆ ಪ್ರಕಟಿಸಿದೆ.

ಮುಂದಿನ ವರ್ಷ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯವು ದಿ ಓವಲ್‌ ಮೈದಾನದಲ್ಲಿ ನಡೆಯಲಿದೆ. ಈ ಸ್ಟೇಡಿಯಮ್‌ ಕ್ರಿಕೆಟ್‌ನಲ್ಲಿ ಭವ್ಯ ಇತಿಹಾಸ ಹೊಂದಿದೆ. ಹೀಗಾಗಿ ಅಂತಿಮ ಹಣಾಹಣಿಯೂ ಅದ್ಧೂರಿಯಾಗಿ ನಡೆಯಲಿದೆ ಎಂದು ಅಂತಾರಾಷ್ಟ್ರಿಯ ಕ್ರಿಕೆಟ್ ಕೌನ್ಸಿಲ್‌ನ ಮುಖ್ಯ ಕಾರ್ಯನಿರ್ವಾಹಕ ಜೆಫ್‌ ಅಲಾರ್ಡೈಸ್‌ ಪ್ರಕಟಣೆ ಹೊರಡಿಸಿದ್ದಾರೆ.

ಉದ್ಘಾಟನಾ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯವು ಸೌತಾಂಪ್ಟನ್‌ನಲ್ಲಿ ನಡೆದಿತ್ತು. ಭಾರತ ಹಾಗೂ ನ್ಯೂಜಿಲೆಂಡ್ ತಂಡ ಪ್ರಶಸ್ತಿಗಾಗಿ ಹೋರಾಡಿತ್ತು. ಕಿವೀಸ್‌ ಬಳಗ ಟ್ರೋಫಿ ತನ್ನದಾಗಿಸಿಕೊಂಡಿದೆ.

ಕಳೆದ ಆಗಸ್ಟ್‌ನಲ್ಲಿ ೪ರಿಂದ ಹಾಲಿ ಆವೃತ್ತಿಯ ಟೆಸ್ಟ್‌ ಚಾಂಪಿಯನ್‌ಷಿಪ್‌ ಆರಂಭಗೊಂಡಿದೆ. ೨೦೨೩ರ ಮಾರ್ಚ್‌ ೩೧ರಂದು ಫೈನಲ್‌ ಪಂದ್ಯ ನಡೆಯಲಿದೆ.

ಇದನ್ನೂ ಓದಿ | Team India | ಭಾರತ ಕ್ರಿಕೆಟ್‌ ತಂಡದ ಹೊಸ ಜರ್ಸಿ ಅನಾವರಣ ಮಾಡಿದ ಬಿಸಿಸಿಐ, ಹೇಗಿದೆ ಹೊಸ ಟಿಶರ್ಟ್‌?

Exit mobile version