ಹೈದರಾಬಾದ್ : ಟಿ೨೦ ಸರಣಿಯ ಮೂರನೇ ಹಾಗೂ ಕೊನೇ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್ ಮಾಡಿದ ಪ್ರವಾಸಿ ಆಸ್ಟ್ರೇಲಿಯಾ ತಂಡ ಭಾರತಕ್ಕೆ.187 ರನ್‌ಗಳ ಗೆಲುವಿನ ಗುರಿಯನ್ನೊಡ್ಡಿದೆ. ಕ್ಯಾಮೆರಾನ್ ಗ್ರೀನ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಹೊರತಾಗಿಯೂ ಭಾರತೀಯ ಬೌಲರ್‌ಗಳು ಸಂಘಟಿತ ದಾಳಿ ನಡೆಸುವ ಮೂಲಕ ರನ್ ವೇಗಕ್ಕೆ ಕಡಿವಾಣ ಹಾಕಿದ್ದಾರೆ.
ಹೈದರಾಬಾದ್‌ನ ರಾಜೀವ್‌ಗಾಂಧಿ ಕ್ರಿಕೆಟ್ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ಹಣಾಹಣಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ ನಿಗದಿತ ೨೦ ಓವರ್‌ಗಳಲ್ಲಿ ೭ ವಿಕೆಟ್‌ಗೆ ೧೮೬ ರನ್ ಬಾರಿಸಿತು. ಕ್ಯಾಮೆರಾನ್ ಕೇವಲ ೨೧ ಎಸೆತಗಳಲ್ಲಿ ೫೧ ರನ್ ಬಾರಿಸುವ ಮೂಲಕ ಬೃಹತ್ ಮೊತ್ತ ಪೇರಿಸುವ ಸೂಚನೆ ನೀಡಿದರು. ಅದರೆ, ಭುವನೇಶ್ವರ್ ಕುಮಾರ್ ಅವರನ್ನು ಔಟ್ ಮಾಡಿದರು. ಬಳಿಕ ಆರೋನ್ ಫಿಂಚ್ (೭), ಸ್ಟೀವ್ ಸ್ಮಿತ್ (೯), ಗ್ಲೆನ್ ಮ್ಯಾಕ್‌ವೆಲ್ (೬) ಬೇಗ ವಿಕೆಟ್ ಒಪ್ಪಿಸಿದರು. ಸ್ಪಿನ್ನರ್‌ಗಳಾದ ಅಕ್ಷರ್ ಪಟೇಲ್ (೩೩ ರನ್‌ಗಳಿಗೆ ೩ ವಿಕೆಟ್ ) ಹಾಗೂ ಯಜ್ವೇಂದ್ರ ಚಹಲ್ (೨೨ ರನ್‌ಗಳಿಗೆ ೧ ವಿಕೆಟ್) ಅವರಿಗೆ ಕಡಿವಾಣ ಹಾಕಿದರು. ಕಳೆದೆರಡು ಪಂದ್ಯಗಳಲ್ಲಿ ಮಿಂಚಿದ್ದ ಮ್ಯಾಥ್ಯೂ ವೇಡ್ ೧ ರನ್‌ಗೆ ಔಟಾಗಿ ನಿರಾಸೆ ಎದುರಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಟಿಮ್ ಡೇವಿಡ್ (೫೪) ಅರ್ಧ ಶತಕ ಬಾರಿಸಿ ಮಿಂಚಿದರು. ಡ್ಯಾನಿಯಲ್ ಸ್ಯಾಮ್ಸ್ () ಅವರಿಗೆ ಉತ್ತಮ ಸಾಥ್ ಕೊಟ್ಟರು. ಭಾರತ ಪರ ಮತ್ತೆ ಬೌಲಿಂಗ್‌ನಲ್ಲಿ ಮಿಂಚಿದ ಅಕ್ಷರ್ ಪಟೇಲ್ ೩೩ ರನ್‌ಗಳಿಗೆ ೩ ವಿಕೆಟ್ ಕಬಳಿಸಿದರು.
ಇದನ್ನೂ ಓದಿ | Rohit Sharma | ಟಿ20 ಸಿಕ್ಸರ್‌ಗಳ ವಿಶ್ವ ದಾಖಲೆ ಸೃಷ್ಟಿಸಿದ ರೋಹಿತ್ ಶರ್ಮ