Site icon Vistara News

Paris Olympics 2024: ಒಲಿಂಪಿಕ್ಸ್​ ಸಿದ್ಧತೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ ನೀರಜ್‌ ಚೋಪ್ರಾ

Neeraj Chopra

ನವದೆಹಲಿ: ಭಾರತದ ಸ್ಟಾರ್​ ಜಾವೆಲಿನ್‌ ಎಸೆತಗಾರ, ಒಲಿಂಪಿಕ್‌ ಮತ್ತು ವಿಶ್ವ ಚಾಂಪಿಯನ್‌ ನೀರಜ್‌ ಚೋಪ್ರಾ(Neeraj Chopra) ಅವರು ಪ್ಯಾರಿಸ್​ ಒಲಿಂಪಿಕ್ಸ್(Paris Olympics 2024) ಸಿದ್ಧತೆಯ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಹಿಂದೆಂದೂ ತಯಾರಿಸಿದ ಅತ್ಯುತ್ತಮ ತಯಾರಿಯನ್ನು ನಡೆಸುತ್ತಿರುವೆ ಎಂದು ಹೇಳಿದ್ದಾರೆ.

“ನಾನು ಕಠಿಣ ತರಬೇತಿ ಪಡೆಯುತ್ತಿದ್ದೇನೆ ಮತ್ತು ಉತ್ತಮ ಭಾವನೆ ಹೊಂದಿದ್ದೇನೆ. ನನ್ನ ಸಾಮರ್ಥ್ಯದ ಅತ್ಯುತ್ತಮ ಪ್ರದರ್ಶನವನ್ನು ನಾನು ಇನ್ನೂ ಮಾಡಿಲ್ಲ ಎಂದು ನಾನು ಭಾವಿಸುತ್ತೇನೆ. ಇದಕ್ಕಾಗಿ ನಾನು ಹಿಂದೆಂದೂ ತಯಾರಿಸಿದ ಅತ್ಯುತ್ತಮ ತಯಾರಿಯಾನ್ನು ನಡೆಸುತ್ತಿದ್ದೇನೆ. ಇದು ಮುಂದಿನ ದಿನಗಳಲ್ಲಿ ಉತ್ತಮಗೊಳ್ಳುತ್ತದೆ ಎಂಬ ವಿಶ್ವಾಸವಿದೆ. ನಾನು ನನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುತ್ತೇನೆ. ಈ ಸ್ಪರ್ಧೆಯನ್ನು ಆನಂದಿಸುತ್ತೇನೆ” ಎಂದು ನೀರಜ್ ಹೇಳಿದರು.

ಟೋಕಿಯೊದಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ನೀರಜ್‌ ಈ ಬಾರಿಯೂ ಚಿನ್ನ ಗೆಲ್ಲಲಿ ಎನ್ನುವುದು ಶತ ಕೋಟಿ ಭಾರತೀಯರ ಆಶಯ ಮತ್ತು ಹಾರೈಕೆಯಾಗಿದೆ. 2024ರಲ್ಲಿ ನಡೆಯುವ ಪ್ಯಾರಿಸ್ ಒಲಿಂಪಿಕ್ಸ್ ಅತಿ ದೊಡ್ಡ ಮತ್ತು ಮಹತ್ವದ ಕ್ರೀಡಾಕೂಟವಾಗಿದೆ. ಸುಮಾರು 200 ದೇಶಗಳ 10,000 ಕ್ರೀಡಾಪಟುಗಳು ಒಲಿಂಪಿಕ್ ವೈಭವಕ್ಕಾಗಿ ಸ್ಪರ್ಧಿಸಲಿದ್ದಾರೆ. ಪ್ಯಾರಿಸ್ ತನ್ನ ಮೂರನೇ ಬಾರಿಗೆ ಆತಿಥೇಯ ನಗರವಾಗಿ (1900 ಮತ್ತು 1924 ರ ನಂತರ) ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲಿದೆ. ಜುಲೈ 26 ರಿಂದ ಆಗಸ್ಟ್ 11ರ ತನಕ ಟೂರ್ನಿ ನಡೆಯಲಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ನೀರಜ್​ ಚೋಪ್ರಾ ಕಳೆದ ವರ್ಷ ನಡೆದಿದ್ದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದರು. ಅಲ್ಲದೆ ಡೈಮಂಡ್ ಲೀಗ್​ನಲ್ಲಿ ಬೆಳ್ಳಿ ಗೆದ್ದಿದ್ದರು. 26 ವರ್ಷದ ನೀರಜ್ ಒಲಿಂಪಿಕ್ಸ್‌ನ ಟ್ರ್ಯಾಕ್‌ ಇವೆಂಟ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ Neeraj Chopra: ಚಿನ್ನದ ಹುಡುಗ ನೀರಜ್‌ ಚೋಪ್ರಾಗೆ ಸ್ವಿಸ್‌ ಪ್ರವಾಸೋದ್ಯಮ ಗೌರವ

ಚಿನ್ನದ ವಿಶ್ವಾಸದಲ್ಲಿ ಕೋಚ್​


ನೀರಜ್ ಅವರ ಮೊದಲ ಕೋಚ್​ ಕಾಶಿನಾಥ್ ನಾಯ್ಕ್ ಅವರು ಪ್ಯಾರಿಸ್​ನಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿಯೂ(neeraj chopra paris olympics) ನೀರಜ್​ ಚಿನ್ನದ ಪದಕ ಗೆಲ್ಲಲಿದ್ದಾರೆ ಎಂದು ಇತ್ತೀಚೆಗೆ ಸಂದರ್ಶನವೊಂದಲ್ಲಿ ಭವಿಷ್ಯ ನುಡಿದಿದ್ದರು.

“ನಾನು 2015 ರಿಂದ ನೀರಜ್​ ಜತೆ ಕೆಲಸ ಮಾಡುತ್ತಿದ್ದೇನೆ. ಅವರ ಛಲವನ್ನು ಮೆಚ್ಚಲೇ ಬೇಕು.​ ಸಾಧಿಸುವ ಛಲವೇ ಅವರನ್ನು ಈ ಮಟ್ಟಕ್ಕೆ ತಂದು ನಿಲ್ಲಿಸಿದೆ. ಅತ್ಯಂತ ಶಿಸ್ತಿನ ಕ್ರೀಡಾಪಟು ಕೂಡ ಆಗಿದ್ದಾರೆ. 90 ಮೀ. ದೂರ ಜಾವೆಲಿನ್​ ಎಸೆಯುವದು ಪ್ರಮುಖ ಗುರಿ ಎಂದು ನೀರಜ್​ ಈಗಾಗಲೇ ಹೇಳಿದ್ದಾರೆ. ಹೇಳಿದಂತೆ ಅವರು ಈ ದೂರವನ್ನು ಕ್ರಮಿಸುವ ವಿಶ್ವಾಸ ನನ್ನಲ್ಲಿದೆ” ಎಂದು ಹೇಳಿದ್ದರು.

Exit mobile version