Site icon Vistara News

Tom Curran: ಮೊಣಕಾಲು ಗಾಯಕ್ಕೆ ತುತ್ತಾದ ಟಾಮ್​ ಕರನ್; ಆರ್‌ಸಿಬಿ ತಂಡಕ್ಕೆ ಸಂಕಷ್ಟ

Tom Curran

ಲಂಡನ್​: 17ನೇ ಆವೃತ್ತಿಯ ಐಪಿಎಲ್​ ಟೂರ್ನಿ ಮಾರ್ಚ್​ 22ರಿಂದ ಆರಂಭಗೊಳ್ಳುವ ಸಾಧ್ಯತೆ ಇದೆ. ಆದರೆ, ಆರ್​ಸಿಬಿ ತಂಡ ಆತಂಕಕ್ಕೆ ಸಿಲುಕಿದೆ. ಇದಕ್ಕೆ ಕಾರಣ ಇಂಗ್ಲೆಂಡ್​ನ ಆಲ್​ರೌಂಡರ್​ ಟಾಮ್​ ಕರನ್​(Tom Curran) ಗಾಯಗೊಂಡಿರುವುದು. ಕಳೆದ ವರ್ಷ ನಡೆದ ಮಿನಿ ಹರಾಜಿನಲ್ಲಿ ಆರ್​ಸಿಬಿ ಫ್ರಾಂಚೈಸಿ ಕರನ್ ಅವರನ್ನು 1.5 ಕೋಟಿ ರೂ. ನೀಡಿ ಖರೀದಿ ಮಾಡಿತ್ತು.

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಕರನ್​ ಮೊಣಕಾಲಿನ( Knee Injury) ಗಾಯಕ್ಕೆ ತುತ್ತಾಗಿದ್ದಾರೆ. ಶನಿವಾರ ನಡೆದ ಸಿಡ್ನಿ ಸಿಕ್ಸರ್ಸ್ ವಿರುದ್ಧ ಪಂದ್ಯದ ವೇಳೆ ಕರನ್​ ಗಾಯಗೊಂಡಿದ್ದರು. ಗಾಯದ ಸ್ವರೂಪಗ ಗಂಭೀರವಾದ ಕಾರಣ ಅವರು ಟೂರ್ನಿಯಿಂದಲೇ ಹೊರಬಿದ್ದಿದ್ದು ತವರಿಗೆ ಮರಳಿದ್ದಾರೆ.

ಮೂಲಗಳ ಪ್ರಕಾರ ಕರನ್​ ಲಂಡನ್​ ತಲುಪಿದ್ದು ಮುಂದಿನ ವಾರ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನಲಾಗಿದೆ. ಅಲ್ಲದೆ ಕನಿಷ್ಠ ಮೂರು ತಿಂಗಳ ವಿಶ್ರಾಂತಿ ಬೇಕಾಗಬಹುದು ಎಂದು ಹೇಳಲಾಗುತ್ತಿದೆ. ಹೀಗಾಗಿ ಆರ್​ಸಿಬಿಗೆ ದೊಡ್ಡ ಚಿಂತೆಯೊಂದು ಕಾಡಲಾರಂಭಿಸಿದೆ. ಒಂದೊಮ್ಮೆ ಅವರು ಐಪಿಎಲ್​ ಆಡಲು ಸಾಧ್ಯವಾಗದಿದ್ದರೆ. ಅನ್​ ಸೋಲ್ಡ್​ ಆದ ಆಟಗಾರರ ಪೈಕಿ ಯಾರನ್ನಾದರೂ ಆರ್​ಸಿಬಿ ಬದಲಿ ಆಟಗಾರನಾಗಿ ತಂಡ ಸೇರಿಸಿಕೊಳ್ಳವ ಆಯ್ಕೆ ಇದೆ.

ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು

ಅಲ್ಜಾರಿ ಜೋಸೆಫ್ (11.5 ಕೋಟಿ), ಯಶ್ ದಯಾಳ್ (5 ಕೋಟಿ), ಟಾಮ್ ಕರ್ರನ್ (1.5 ಕೋಟಿ), ಲಾಕಿ ಫರ್ಗುಸನ್ (2 ಕೋಟಿ), ಸ್ವಪ್ನಿಲ್ ಸಿಂಗ್ (0.2 ಕೋಟಿ), ಸೌರವ್ ಚೌಹಾಣ್ (0.2 ಕೋಟಿ).

ಇದನ್ನೂ ಓದಿ IPL 2024: ಭಾರತದಲ್ಲೇ ನಡೆಯಲಿದೆ ಐಪಿಎಲ್​; ಇದೇ ದಿನಾಂಕ ಫೈನಲ್​!

ಆರ್​ಸಿಬಿ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ, ಕ್ಯಾಮೆರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

ಮತ್ತೆ ನಾಯಕನಾಗಲಿದ್ದಾರಾ ಕೊಹ್ಲಿ?


ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bangalore) ತಂಡದಲ್ಲಿ ದೊಡ್ಡ ಬದಲಾವಣೆಯೊಂದು ಸಂಭವಿಸಲಿದೆ, ಈ ಹಿಂದೆ ತಂಡದ ನಾಯಕನಾಗಿದ್ದ ವಿರಾಟ್​ ಕೊಹ್ಲಿ(Virat Kohli) ಮತ್ತೆ ನಾಯಕತ್ವ ವಹಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಎರಡು ಸೀಸನ್​ನಲ್ಲಿ ಡುಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಕಳೆದ ಬಾರಿಯಂತೂ ಲೀಗ್​ನಿಂದಲೇ ಹೊರಬಿದ್ದಿತ್ತು. ಇದೀಗ ಯಾವುದೇ ನಾಯಕತ್ವದ ಹೊರೆ ಇಲ್ಲದ ಕೊಹ್ಲಿಯನ್ನು ತಂಡದ ನಾಯಕನಾಗಿ ಮಾಡಲು ಫ್ರಾಂಚೈಸಿ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ಸೂಕ್ತ ನಾಯಕನ ಸ್ಥಾನಕ್ಕೆ ಚೆನ್ನೈ ತಂಡದಲ್ಲಿದ್ದ ಫಾಫ್​ ಡುಪ್ಲೆಸಿಸ್​ ಅವರನ್ನು ಖರೀದಿ ಮಾಡಿ ಅವರಿಗೆ ನಾಯಕತ್ವ ನೀಡಲಾಗಿತ್ತು. ಆದರೆ ತಂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿತ್ತು. ಹೀಗಾಗಿ ನಾಯಕತ್ವ ಮತ್ತೆ ಕೊಹ್ಲಿಯ ಹೆಗಲೇರುವ ಸಾಧ್ಯತೆ ಇದೆ.

Exit mobile version