1. ದೇವಸ್ಥಾನದ ಹಣಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಡಿ: ಸರ್ಕಾರಕ್ಕೆ ವಿಜಯೇಂದ್ರ ಸಲಹೆ
ಬೆಂಗಳೂರು: ಈ ರಾಜ್ಯ ಸರ್ಕಾರವು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಶ್ರೀಮಂತ ದೇವಾಲಯಕ್ಕೂ (Hindu Temple) ಕನ್ನ ಹಾಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಕಾರಿದರು. ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ವಿಧೇಯಕಕ್ಕೆ (Hindu Religious Institutions and Charitable Endowments Bill) ವಿಧಾನಸಭಾ ಕಲಾಪದಲ್ಲಿ ಒಪ್ಪಿಗೆ ಪಡೆದುಕೊಂಡ ರಾಜ್ಯ ಸರ್ಕಾರದ ಕ್ರಮವನ್ನು ಕಟುವಾಗಿ ಖಂಡಿಸಿದರು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ದೇಗುಲಗಳಿಗೆ ತೆರಿಗೆ, ಅನ್ಯಧರ್ಮೀಯರಿಗೆ ಹಣ ಬಳಕೆ ಕಪೋಲಕಲ್ಪಿತ ಆರೋಪ; ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು!
2. ಕನ್ನಡ ನಾಮಫಲಕ ನಿಯಮ ಜಾರಿ ಆಗ್ಲೇಬೇಕು; ಸಚಿವ ತಂಗಡಗಿ ಆದೇಶ
ಬೆಂಗಳೂರು: ಬೆಂಗಳೂರಿನ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ (Kannada Name board) ಶೇ.60ರಷ್ಟು ಕನ್ನಡ ಕಡ್ಡಾಯವಾಗಿ ಬಳಸುವ ಸಂಬಂದ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ (BBMP Commissioner) ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾ ಣ ಇಲಾಖೆ ಸಚಿವ ಶಿವರಾಜ್ ತಂಗಡಗಿ (Minister Shivaraja Tangadagi) ಅವರು ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾಧಿಕಾರಿಗಳ ಸಭೆ ನಡೆಸಿ ಅವರು ಈ ಸೂಚನೆ ನೀಡಿದರು.ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಕನ್ನಡ ನಾಮಫಲಕ ಕಡ್ಡಾಯಕ್ಕೆ ತಗಾದೆ ತೆಗೆದ ಮಹಾರಾಷ್ಟ್ರ, ಕೇಸ್ ಹಾಕಲು ಚಿಂತನೆ
ಈ ಸುದ್ದಿಯನ್ನೂ ಓದಿ : ನಾಮಫಲಕ ವಿಚಾರದಲ್ಲಿ ಕರ್ನಾಟಕಕ್ಕೆ ಬುದ್ಧಿ ಹೇಳುವ ಮಹಾರಾಷ್ಟ್ರದಲ್ಲಿ ಯಾವ ನಿಯಮ ಇದೆ ನೋಡಿ!
3. ಕರ್ನಾಟಕದಲ್ಲಿ ಬ್ಯಾನ್ ಆಗುತ್ತಾ ಬಾಂಬೆ ಮಿಠಾಯಿ; ಕ್ಯಾನ್ಸರ್ ಕಾರಕ ವಿಷ ಪತ್ತೆ!
ಬೆಂಗಳೂರು: ಜಾತ್ರೆ ಸಮಾರಂಭಗಳಲ್ಲಿ ಮಕ್ಕಳ ಅಚ್ಚುಮೆಚ್ಚಿನ ತಿನಿಸು ಎಂದರೆ ಅದು ಬಾಂಬೆ ಮಿಠಾಯಿ. ಬೆಂಗಳೂರು ಸೇರಿದಂತೆ ಹಲವೆಡೆ ಬಸ್ ಸ್ಟ್ಯಾಂಡ್‌ನಲ್ಲೂ ಕಾಟನ್ ಕ್ಯಾಂಡಿಯನ್ನು (cotton candy) ಮಾರಾಟ ಮಾಡಲಾಗುತ್ತದೆ. ನೀವೆನಾದರೂ ಬಾಯಿ ಚಪ್ಪರಿಸಿಕೊಂಡು ಬಾಂಬೆ ಮಿಠಾಯಿ ತಿನ್ನುತ್ತೀರಾ? ಹಾಗಾದರೆ ಹುಷಾರು, ನಿಮ್ಮ ದೇಹವನ್ನು ಸಿಹಿಯಾದ ಮಾರಕ ವಿಷವು ಸೇರುತ್ತಿರಬಹುದು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
4. 3 ವರ್ಷದಲ್ಲಿ ಭಾರತ ಜಗತ್ತಲ್ಲೇ 3ನೇ ಬೃಹತ್ ಆರ್ಥಿಕ ರಾಷ್ಟ್ರ; ಜಾಗತಿಕ ಸಂಸ್ಥೆ ವರದಿ
ನವದೆಹಲಿ: “ಭಾರತವು ಶೀಘ್ರದಲ್ಲಿಯೇ ಜಗತ್ತಿನಲ್ಲಿ ಮೂರನೇ ಬೃಹತ್ ಆರ್ಥಿಕ ರಾಷ್ಟ್ರವಾಗಿ (Largest Economy) ಹೊರಹೊಮ್ಮಲಿದೆ” ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೇಶ-ವಿದೇಶಗಳ ಕಾರ್ಯಕ್ರಮಗಳಲ್ಲಿ ಪ್ರಸ್ತಾಪಿಸುತ್ತಿರುತ್ತಾರೆ. ಹತ್ತಾರು ವೇದಿಕೆಗಳಲ್ಲಿ ಪ್ರಸ್ತಾಪಿಸುತ್ತಿರುತ್ತಾರೆ. ಈ ಮಾತಿಗೆ ಪುಷ್ಟಿ ನೀಡುವಂತೆ, “ಭಾರತವು 2027ರ ವೇಳೆಗೆ ಜಗತ್ತಿನಲ್ಲೇ ಮೂರನೇ ಬೃಹತ್ ಆರ್ಥಿಕ ರಾಷ್ಟ್ರವಾಗಲಿದೆ” ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರೀಸ್ (Jefferies) ತಿಳಿಸಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
5. ಮಂಡ್ಯ ಗೆದ್ದ ಕುಮಾರಸ್ವಾಮಿ; ಹಾಸನ, ಕೋಲಾರವೂ ಜೆಡಿಎಸ್‌ಗೆ ಫಿಕ್ಸ್
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ (Parliament Election 2024) ರಾಜ್ಯದಲ್ಲಿ ಮಿತ್ರ ಪಕ್ಷವಾಗಿರುವ ಜೆಡಿಎಸ್‌ಗೆ (BJP-JDS Coalition) ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡಲು ಬಿಜೆಪಿ ಸಮ್ಮತಿಸಿದೆ ಎಂದು ತಿಳಿದುಬಂದಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ (HD Kumaraswamy) ಮತ್ತು ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ನಡುವೆ ಗುರುವಾರ ನಡೆದ ಮಹತ್ವದ ಮಾತುಕತೆಯಲ್ಲಿ ಈ ಸೀಟು ಹಂಚಿಕೆ ಫೈನಲ್ (Seat Sharing final) ಆಗಿದೆ ಎಂದು ತಿಳಿದುಬಂದಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
6. ಪೆಟ್ರೋಲ್ ಬೆಲೆ ಶೀಘ್ರವೇ 50 ರೂ.ಗೆ ಇಳಿಯಲಿದೆ ಎಂದ ನಿತಿನ್ ಗಡ್ಕರಿ
ಬೆಳಗಾವಿ/ಶಿವಮೊಗ್ಗ: ಲೋಕಸಭಾ ಚುನಾವಣೆ (Parliament Election) ಸಮೀಪಿಸುತ್ತಿರುವ ಹೊತ್ತಿನಲ್ಲೇ ರಾಜ್ಯದಲ್ಲಿ 13,458 ಕೋಟಿ ರೂ. ವೆಚ್ಚದ 18 ಹೆದ್ದಾರಿ ಯೋಜನೆಗಳಿಗೆ (18 National high way scheme) ಚಾಲನೆ ದೊರೆತಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ನಡೆದ ಎರಡು ಕಾರ್ಯಕ್ರಮಗಳ ಮೂಲಕ ಹೆದ್ದಾರಿ ಕ್ರಾಂತಿಗೆ ಅಡಿಗಲ್ಲಿಟ್ಟರು. ಇದೇ ವೇಳೆ ಎಲೆಕ್ಟ್ರಾನಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದಂತೆಯೇ ಮುಂದಿನ ದಿನಗಳಲ್ಲಿ ಪೆಟ್ರೋಲ್ ಬೆಲೆ 50 ರೂ.ಗಳಿಗೆ ಇಳಿಯಲಿದೆ ಎಂದರು. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
7. ಸ್ವರ್ಣವಲ್ಲೀ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ; ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಎಂದು ನಾಮಕರಣ
ಶಿರಸಿ: ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನಕ್ಕೆ (Swarnavalli Mutt) ಉತ್ತರಾಧಿಕಾರಿಗಳ (Swarnavalli Mutt appoints successor) ಪಟ್ಟಾಧಿಕಾರ ನೆರವೇರಿತು. ಶ್ರೀಮಠಕ್ಕೆ 55ನೇ ನೂತನ ಯತಿಗಳಾಗಿ ಬ್ರಹ್ಮಚಾರಿ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ ಮಾಡಿದರು. ಈ ಮೂಲಕ ಸ್ವರ್ಣವಲ್ಲೀ ನೂತನ ಯತಿಗಳಿಗೆ ಸನ್ಯಾಸ ದೀಕ್ಷೆ ಪ್ರಾಪ್ತಿಯಾಗಿದ್ದ, ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಎಂದು ನಾಮಕರಣ ಮಾಡಲಾಗಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
8. ಇನ್ಮುಂದೆ ನಗರಗಳ ಆಸ್ತಿ ನೋಂದಣಿಗೆ ಇ-ಖಾತೆ ಕಡ್ಡಾಯ
ಬೆಂಗಳೂರು: ಇನ್ನು ಮುಂದೆ ನಗರ ಪ್ರದೇಶಗಳ ಆಸ್ತಿ ನೋಂದಣಿಗೆ (Property Registration) ಡಿಜಿಟಲ್ ಸ್ವರೂಪದ ಇ-ಖಾತಾ (E khata mandatory) ಹಾಜರುಪಡಿಸುವುದನ್ನು ಕಡ್ಡಾಯಗೊಳಿಸುವ ‘ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ-2024’ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಗ್ರಾಮೀಣ ಪ್ರದೇಶಗಳ ಆಸ್ತಿ ನೋಂದಣಿಗೆ ಇ-ಸ್ವತ್ತು ಕಡ್ಡಾಯಗೊಳಿಸಿದ ಮಾದರಿಯಲ್ಲೇ ಇದನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಬಿಬಿಎಂಪಿ ಆಸ್ತಿ ತೆರಿಗೆ ತಿದ್ದುಪಡಿ ವಿಧೇಯಕ ಅಂಗೀಕಾರ; ದಂಡದ ಪ್ರಮಾಣ ಶೇ.50 ಕಡಿತ
9. ರಾಮ ನಾಮ ಜಪ ಜೋರು; ತಿಂಗಳಲ್ಲಿ ರಾಮಮಂದಿರಕ್ಕೆ 50 ಲಕ್ಷ ಜನ ಭೇಟಿ!
ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದ (Ram Mandir) ಉದ್ಘಾಟನೆಯಾಗಿ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜನವರಿ 22ರಂದು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ (Pran Pratishtha) ನೆರವೇರಿಸಿದ್ದು, ಉದ್ಘಾಟನೆಯಾಗಿ ಒಂದು ತಿಂಗಳಾದರೂ ನಿತ್ಯ ಭೇಟಿ ನೀಡುವವರ ಸಂಖ್ಯೆ ಕಡಿಮೆಯಾಗಿಲ್ಲ. ರಾಮಮಂದಿರ ಉದ್ಘಾಟನೆಯಾದ 30 ದಿನಗಳಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ರಾಮನ ದರ್ಶನ ಪಡೆದಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
10. ಚುನಾವಣೆ ಪ್ರಚಾರಕ್ಕೂ ಪಕ್ಷಗಳಿಂದ ‘ಕಾಂಡೋಮ್’ ಬಳಕೆ; ಹೇಗೆ ಅಂತೀರಾ? Video ನೋಡಿ
ಹೈದರಾಬಾದ್: ದೇಶದ ಯಾವುದೇ ರಾಜಕೀಯ ಪಕ್ಷಗಳ ಚುನಾವಣೆ ಪ್ರಚಾರ ಹೇಗಿರುತ್ತದೆ? ಆಯಾ ಪಕ್ಷಗಳ ನಾಯಕರು ಬೃಹತ್ ರ‍್ಯಾಲಿ, ರೋಡ್ ಶೋ, ಸಮಾವೇಶಗಳನ್ನು ನಡೆಸಿ ಅಬ್ಬರದ ಭಾಷಣ ಮಾಡುತ್ತಾರೆ. ಮನೆ ಮನೆಗೆ ತೆರಳಿ ಭರಪೂರ ಭರವಸೆ ನೀಡಲಾಗುತ್ತದೆ. ಹಣ-ಹೆಂಡ ಹಂಚುವವರೂ ಇದ್ದಾರೆ. ಉಚಿತ ಗ್ಯಾರಂಟಿಗಳ ಮೂಲಕ ಮತದಾರರ ಮನವೊಲಿಸಲು ಯತ್ನಿಸಲಾಗುತ್ತದೆ. ಸಾಮಾಜಿಕ ಜಾಲತಾಣಗಳ ಮೂಲಕವೂ ಪ್ರಚಾರ ಕೈಗೊಳ್ಳಲಾಗುತ್ತದೆ. ಆದರೆ, ಆಂಧ್ರಪ್ರದೇಶದಲ್ಲಿ (Andhra Pradesh) ಚುನಾವಣೆ ಪ್ರಚಾರಕ್ಕಾಗಿ (Election Campaign) ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳನ್ನು (Condom Packets) ಬಳಸುತ್ತಿವೆ. ಇದರ ವಿಡಿಯೊ ಈಗ ವೈರಲ್ (Viral Video) ಆಗಿದೆ ಪೂರ್ಣ ಸುದ್ದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ಸುದ್ದಿಗಳಿಗಾಗಿ ಕ್ಲಿಕ್ ಮಾಡಿ