Site icon Vistara News

Dutee Chand | ನಿಷೇಧಿತ ಉದ್ದೀಪನ ಮದ್ದು ಸೇವನೆ ಆರೋಪ; ದ್ಯುತಿ ಚಂದ್ ಅಮಾನತು

Dutee Chand

ನವದೆಹಲಿ: ಭಾರತದ ಸ್ಟಾರ್ ಓಟಗಾರ್ತಿ ದ್ಯುತಿ ಚಂದ್(Dutee Chand) ಉದ್ದೀಪನ ಮದ್ದು ಸೇವನೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣದಿಂದ ಅವರನ್ನು ವಿಶ್ವ ಉದ್ದೀಪನ ಮದ್ದು ತಡೆ ಸಂಸ್ಥೆ ಅಮಾನತುಗೊಳಿಸಿದೆ.

ಸ್ನಾಯು ಮತ್ತು ಮೂಳೆಗಳ ಬೆಳವಣಿಗೆಗೆ ನಿಷೇಧಿತ ಪದಾರ್ಥಗಳನ್ನು ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಅವರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡಿರುವ ಕಾರಣದಿಂದ ದ್ಯುತಿ ಚಂದ್‌ ಏಷ್ಯನ್ ಗೇಮ್ಸ್‌ನಲ್ಲಿ ಪಾಲ್ಗೊಳ್ಳುವುದು ಅನುಮಾನ ಎನ್ನಲಾಗಿದೆ.

ದುತಿ ಚಂದ್​ ಅವರನ್ನು ವಿಶ್ವ ಉದ್ದೀಪನ ಮದ್ದು ತಡೆ ಸಂಸ್ಥೆ ಅಮಾನತು ಮಾಡಿದ ವಿಚಾರವನ್ನು ದೂರದರ್ಶನ್​ ಸ್ಪೋರ್ಟ್ಸ್ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಪ್ರಕಟಿಸಿದೆ.

ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದ್ಯುತಿ ಚಂದ್ ಅವರು 200 ಮೀ ಓಟದಲ್ಲಿ ಪಾಲ್ಗೊಂಡಿದ್ದರು. ಆದರೆ ಫೈನಲ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದರು. ಬಳಿಕ 100 ಮೀ. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ದ್ಯುತಿ ಚಂದ್ ಫೈನಲ್‌ನಲ್ಲಿ ಆರನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ | INDvsSL ODI | ಭಾರತ- ಶ್ರೀಲಂಕಾ ಒಡಿಐ ಪಂದ್ಯ ವೀಕ್ಷಿಸಲು ಬರದ ಪ್ರೇಕ್ಷಕರು ; ಕೇರಳದ ಕ್ರೀಡಾ ಸಚಿವರು ಇದಕ್ಕೆ ಕಾರಣವೇ?

Exit mobile version