ಅಹಮದಾಬಾದ್: ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೆ (ICC World Cup 2023) ವೇದಿಕೆ ಸಜ್ಜಾಗಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನವೆಂಬರ್ 19ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಆಟ ಸಮೀಪಿಸುತ್ತಿದ್ದಂತೆ ಏಕದಿನ ವಿಶ್ವಕಪ್ನ ಕೆಲವು ಅಂಕಿ ಅಂಶಗಳನ್ನು ಇಲ್ಲಿ ಸ್ಮರಿಸಿಕೊಳ್ಳಲಾಗಿದೆ.
2003ರಲ್ಲಿ ಭಾರತ ವಿರುದ್ಧ ಆಸ್ಟ್ರೇಲಿಯಾ 359 ರನ್ ಗಳಿಸಿದ್ದು, ವಿಶ್ವಕಪ್ ಫೈನಲ್ನಲ್ಲಿ ತಂಡವೊಂದು ಗಳಿಸಿದ ಗರಿಷ್ಠ ರನ್ ದಾಖಲೆಯಾಗಿದೆ. 1999ರ ವಿಶ್ವಕಪ್ ಫೈನಲ್ನಲ್ಲಿ ಪಾಕಿಸ್ತಾನ 132 ರನ್ ಬಾರಿಸಿದ್ದು ಫೈನಲ್ನಲ್ಲಿ ದಾಖಲಾದ ಕನಿಷ್ಠ ಮೊತ್ತವಾಗಿದೆ. 2003 ರಲ್ಲಿ ಭಾರತವನ್ನು 125 ರನ್ಗಳಿಂದ ಸೋಲಿಸಿರುವುದು ಫೈನಲ್ನಲ್ಲಿ ತಂಡವೊಂದಕ್ಕೆ ಲಭಿಸಿದ ಅತ್ಯಂತ ದೊಡ್ಡ ಗೆಲುವಾಗಿದೆ. 1999ರಲ್ಲಿ ಪಾಕಿಸ್ತಾನವನ್ನು 8 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ ತಂಡ ಅತಿ ಹೆಚ್ಚು ವಿಕೆಟ್ ಗಳ ಜಯ ಗಳಿಸಿದ ದಾಖಲೆಯನ್ನು ಹೊಂದಿದೆ.
2007ರಲ್ಲಿ 149 ರನ್ ಬಾರಿಸಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟ್ಸ್ಮನ್ ಆಡಮ್ ಗಿಲ್ಕ್ರಿಸ್ಟ್ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಗರಿಷ್ಠ ವೈಯಕ್ತಿಕ ಸ್ಕೋರ್ ಹೊಂದಿದ್ದಾರೆ. 1979ರ ಫೈನಲ್ನಲ್ಇ ಜೋಯಲ್ ಗಾರ್ನರ್ 38 ರನ್ ನೀಡಿ 5 ವಿಕೆಟ್ ಉರುಳಿಸಿದ ಗರಿಷ್ಠ ವಿಕೆಟ್ಗಳ ದಾಖಲೆ ಬರೆದಿದ್ದರು.
ವರ್ಣ ರಂಜಿತ ಕಾರ್ಯಕ್ರಮಗಳು
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023(World Cup final) ಕೂಟದ ಉದ್ಘಾಟನ ಸಮಾರಂಭ ಮಾಡೆದೇ ಇದ್ದ ಬಿಸಿಸಿಐ(BCCI) ವಿರುದ್ಧ ಹಲವು ಟೀಕೆಗಳು ಕೇಳಿಬಂದಿತ್ತು. ಮೊದಲ ಬಾರಿಗೆ ಸಂಪೂರ್ಣವಾಗಿ ಕೂಟದ ಆತಿಥ್ಯ ಸಿಕ್ಕರೂ, ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿದ್ದರೂ ಬಿಸಿಸಿಐಗೆ ಉದ್ಘಾಟನ ಕಾರ್ಯಕ್ರಮ ನಡೆಸಲಾಗದಷ್ಟು ಕಷ್ಟ ಎದುರಾಯಿತೇ ಎಂಬ ಟಾಕ್ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದು ಮಾಡಿತ್ತು. ಇದೀಗ ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಸಿಸಿಐ ಸಕಲ ಸಿದ್ಧತೆ ಪೂರ್ಣಗೊಳಿಸಿದ್ದು ಸಮಾರೋಪ(World Cup 2023 closing ceremony) ಕಾರ್ಯಕ್ರಮದ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಭಾನುವಾರ ನಡೆಯುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಣ ಫೈನಲ್(India vs Australia Final) ಪಂದ್ಯದ ವೇಳೆ ಹಲವು ಮನರಂಜನಾ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಪ್ರಕಟಿಸಿದೆ. ಜತೆಗೆ ಈ ಕಾರ್ಯಕ್ರಮದ ಸಮಯವನ್ನೂ ನಿಗದಿಪಡಿಸಿದೆ.
ಟಾಸ್ ಬಳಿಕ ಏರ್ ಶೋ
ಪಂದ್ಯದ ಟಾಸ್ ಆದ 5 ನಿಮಿಷದಲ್ಲಿ ಅಂದರೆ 1.35ರಿಂದ 1.50ರವರೆಗೆ ಭಾರತೀಯ ವಾಯುಪಡೆಯ ಸೂರ್ಯಕಿರಣ್ ತಂಡದಿಂದ ಏರ್ ಶೋ ನಡೆಯಲಿದೆ. ನರೇಂದ್ರ ಮೋದಿ ಸ್ಟೇಡಿಯಂನ ಬಾನಂಗಳದಲ್ಲಿ ಲೋಹದ ಹಕ್ಕಿಗಳು ತಮ್ಮ ಚಕಮ್ ತೋರಲಿದೆ. ಈಗಾಗಲೇ ಇದ್ದಕ್ಕೆ ಬೇಕಾದ ಪೂರ್ವ ಸಿದ್ಧತಾ ತಯಾರಿಯನ್ನು ಸೂರ್ಯಕಿರಣ್ ತಂಡ ನಡೆಸಿದೆ. ಕಳೆದ 2 ದಿನಗಳಿಂದ ಇಲ್ಲಿ ಪ್ರಾಯೋಗಿಕ ಹಾರಾಟ ನಡೆಸಿ ಸರ್ವ ಸನ್ನದ್ಧವಾಗಿ ನಿಂತಿದೆ.
ಮೊದಲ ಡ್ರಿಂಕ್ಸ್ ಬ್ರೇಕ್ ವೇಳೆ ಸಂಗೀತ ರಸಮಂಜರಿ
ಪಂದ್ಯದ ಮೊದಲು ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಆದಿತ್ಯ ಗಧ್ವಿ ಅವರಿಂದ ಗಾಯನ ಪ್ರದರ್ಶನ ನಡೆಯಲಿದೆ. ಇದಾದ ಬಳಿಕ ಅಮದರೆ ಮೊದಲು ಇನ್ನಿಂಗ್ ಮುಗಿದ ಬಳಿಕ ಸಿಗುವ ಸಮಯದಲ್ಲಿ ಪ್ರೀತಮ್ ಚಕ್ರವರ್ತಿ, ಜೋನಿತಾ ಗಾಂಧಿ, ನಕಾಶ್ ಅಜೀಜ್, ಅಮಿತ್ ಮಿಶ್ರಾ, ಅಕಾಸ ಸಿಂಗ್ ಮತ್ತು ತುಷಾರ್ ಜೋಶಿ ಇವರಿಂದ ಸಂಗೀತ ರಸಮಂಜರಿ ಇರಲಿದೆ.
ಇದನ್ನೂ ಓದಿ IND vs AUS: ಗಂಗೂಲಿ ಮಾಡಿದ ಎಡವಟ್ಟನ್ನು ರೋಹಿತ್ ಶರ್ಮಾ ಮಾಡದಿರಲಿ…
2ನೇ ಡ್ರಿಂಕ್ಸ್ ಬ್ರೇಕ್ ವೇಳೆ ಲೇಸರ್ ಶೋ
ಈ ಬಾರಿಯ ಎಲ್ಲ ಲೀಗ್ ಪಂದ್ಯದ ವೇಳೆಯೂ ಬಿಸಿಸಿಐ ಸ್ಟೇಡಿಯಂಗಳಲ್ಲಿ ವಿನೂತನ ಶೈಲಿಯ ಲಸರ್ ಶೋಗಳ ಮೂಲಕ ನೆರದಿದ್ದ ಪ್ರೇಕ್ಷಕರನ್ನು ರಂಜಿಸಿತ್ತು. ಇದೀಗ ಫೈನಲ್ ಪಂದ್ಯದಲ್ಲೂ ವಿಶಿಷ್ಠ ಶೈಲಿಯ ಲೇಸರ್ ಮತ್ತು ಲೈಟ್ ಶೋ ನಡೆಯಲಿದೆ. ಇದು ಎರಡನೇ ಇನ್ನಿಂಗ್ಸ್ನ ಡ್ರಿಂಕ್ಸ್ ಬ್ರೇಕ್ ವೇಳೆ ಪ್ರದರ್ಶನಗೊಳ್ಳಲಿದೆ ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟನೆಯಲ್ಲಿ ತಿಳಿಸಿದೆ.