Site icon Vistara News

TPL | ಟೆಲಿವಿಷನ್ ಪ್ರೀಮಿಯರ್ ಲೀಗ್ : ನಡೆಯಲಿದೆ ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಕ್ರಿಕೆಟ್

TPL

ಬೆಂಗಳೂರು : ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್- ಟಿಪಿಎಲ್ (TPL) ಶುರುವಾಗುತ್ತಿದ್ದು, ಇದೇ ತಿಂಗಳ ಆಗಸ್ಟ್‌ 18, 19 ಹಾಗೂ 20 ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ (ಆ.16) ಖಾಸಗಿ ಹೋಟೆಲ್‌ವೊಂದರಲ್ಲಿ ಜರ್ಸಿ ಹಾಗೂ ಟ್ರೋಫಿ ಬಿಡುಗಡೆ ಮಾಡಲಾಗಿದೆ. ಕಿರುತೆರೆ ಕಲಾವಿದರು ಹಾಗೂ ತಂತ್ರಜ್ಞರು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗಿಯಾಗಲಿದ್ದಾರೆ.

ಆಯೋಜಕರಾದ ಬಿ.ಆರ್. ಸುನೀಲ್‌ ಕುಮಾರ್ ಮಾತನಾಡಿʻʻಮೊದಲ ಬಾರಿಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯುತ್ತಿದ್ದು, ಐಪಿಎಲ್ ರೀತಿಯಲ್ಲೇ ಮಾಡಬೇಕೆಂಬ ಕನಸು ಇದೆ. ಇದು ಮೊದಲ ಹೆಜ್ಜೆಯಷ್ಟೇ. ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡದಾಗಿ ಮಾಡುವ ಕನಸಿದೆʼʼ ಎಂದರು.

ಬೆಂಗಳೂರಿನ ಪೆಸೆಟ್ ಕಾಲೇಜು ಗ್ರೌಂಡ್‌ನಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ, ದಿ ಬುಲ್ ಸ್ಕ್ವಾಡ್, ಭಜರಂಗಿ ಲಯನ್ಸ್, ಏಂಜೆಲ್ XI, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್‌ವುಡ್‌ ಕಿಂಗ್ಸ್ ಎಂಬ ಆರು ಫ್ರಾಂಚೈಸಿಗಳು ಭಾಗಿಯಾಗಲಿವೆ ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಮಾಲೀಕರಿದ್ದಾರೆ.

ಇದನ್ನೂ ಓದಿ | Ismart Jodi | ಕಿರುತೆರೆಗೆ ಬರಲು ಸಜ್ಜಾಗಿದೆ ʻಇಸ್ಮಾರ್ಟ್‌ ಜೋಡಿʼ: ಸ್ಪರ್ಧಿಗಳು ಯಾರು?

ದಿ ಬುಲ್ ಸ್ಕ್ವಾಡ್ ಟೀಂಗೆ ಶರತ್ ಪದ್ಮನಾಭ್ ನಾಯಕನಾಗಿದ್ದು, ಮೋನಿಶ್ ತಂಡದ ಮಾಲೀಕರಾಗಿದ್ದಾರೆ. ಭಜರಂಗಿ ಲಯನ್ಸ್ ಗೆ ರಂಜಿತ್ ಕುಮಾರ್ ನಾಯಕ ಮತ್ತು ಮಹೇಶ್ ಗೌಡ ಮಾಲೀಕರು. ಏಜಲ್ XI ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ-ಜಗದೀಶ್ ಬಾಬು ಆರ್ ಮಾಲೀಕರು. ವಿನ್ ಟೈಮ್ ರಾಕರ್ಸ್ ತಂಡಕ್ಕೆ ಅರ್ಜುನ್ ಯೋಗಿ ನಾಯಕ-ಅನಿಲ್ ಬಿಆರ್ ಮತ್ತು ದೇವನಾಥ್ ಮಾಲೀಕರಾಗಿದ್ದಾರೆ. ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಮಂಜು ಪಾವಗಡ ನಾಯಕ- ರಂಜಿತ್ ಕುಮಾರ್ ಮಾಲೀಕರು. ಸ್ಯಾಂಡಲ್‌ವುಡ್‌ಕಿಂಗ್ಸ್ ತಂಡಕ್ಕೆ ವಿವಾನ್ ನಾಯಕ- ದೀಪಶ್ರೀ ಮಿಸ್ತ್ರಿ ಒಡೆತನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ | Udaya Tv Kannada | ಆಗಸ್ಟ್‌ 15ರಿಂದ ಬರುತ್ತಿದೆ ಹೊಚ್ಚ ಹೊಸ ಧಾರಾವಾಹಿ ಜನನಿ

Exit mobile version