U19 World Cup Final: ಆಸೀಸ್​ ಸದೆಬಡಿದು 6ನೇ ವಿಶ್ವಕಪ್​ ಗೆಲ್ಲಲಿ ಭಾರತ; ನಾಳೆ ಫೈನಲ್​ - Vistara News

ಕ್ರೀಡೆ

U19 World Cup Final: ಆಸೀಸ್​ ಸದೆಬಡಿದು 6ನೇ ವಿಶ್ವಕಪ್​ ಗೆಲ್ಲಲಿ ಭಾರತ; ನಾಳೆ ಫೈನಲ್​

ಕಳೆದ ವರ್ಷ ನಡೆದಿದ್ದ ಹಿರಿಯರ ಏಕದಿನ ಕ್ರಿಕೆಟ್​ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಮಣಿಸಿ 6ನೇ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಕಿರಿಯರು ಆ ಸೋಲಿಗೆ ಸೇಡು ತೀರಿಸಿಕೊಳ್ಳಬೇಕಿದೆ(U19 World Cup 2024 final).

VISTARANEWS.COM


on

IND vs AUS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆನೋನಿ: ಭಾನುವಾರ ನಡೆಯುವ ಐಸಿಸಿ ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌(U19 World Cup 2024) ಪಂದ್ಯಾವಳಿಯ ಹೈವೋಲ್ಟೇಜ್​ ಫೈನಲ್(U19 World Cup Final)​ ಪಂದ್ಯದಲ್ಲಿ 5 ಬಾರಿಯ, ಹಾಲಿ ಚಾಂಪಿಯನ್​ ಭಾರತ ತಂಡ ಆಸ್ಟ್ರೇಲಿಯಾದ(IND vs AUS) ಸವಾಲು ಎದುರಿಸಲಿದೆ. 9ನೇ ಬಾರಿ ಫೈನಲ್​ಗೇರಿರುವ ಭಾರತ 6ನೇ ಪ್ರಶಸ್ತಿ ಮೇಲೆ, ಆಸ್ಟ್ರೇಲಿಯಾ 4ನೇ ಚಾಂಪಿಯನ್​ ಪಟ್ಟದ ಮೇಲೆ ಕಣ್ಣಿಟ್ಟಿದೆ.

ಭಾರತಕ್ಕೆ ಸೇಡಿನ ಪಂದ್ಯ


ಕಳೆದ ವರ್ಷ ನಡೆದಿದ್ದ ಹಿರಿಯರ ಏಕದಿನ ಕ್ರಿಕೆಟ್​ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಮಣಿಸಿ 6ನೇ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಕಿರಿಯರು ಆ ಸೋಲಿಗೆ ಸೇಡು ತೀರಿಸಿಕೊಳ್ಳಬೇಕಿದೆ(U19 World Cup 2024 final). ಸದ್ಯ ಭಾರತ ತಂಡದ ಪ್ರದರ್ಶನವನ್ನು ನೋಡುವಾಗ ಕಪ್​ ಗೆಲ್ಲುವ ವಿಶ್ವಾಸವಿದೆ. ಏಕೆಂದರೆ ಭಾರತದ ಪಾಳಯದಲ್ಲಿ ಸಮರ್ಥ ಆಟಗಾರರಿದ್ದಾರೆ. ಹೀಗಾಗಿ ನಿರೀಕ್ಷೆಯೊಂದನ್ನು ಮಾಡಬಹುದು.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಇದುವರೆಗೆ 5 ಬಾರಿ ಮುಖಾಮುಖಿಯಾಗಿದೆ. ಎಲ್ಲ 5 ಪಂದ್ಯಗಳನ್ನು ಭಾರತ ಗೆದ್ದು ಬೀಗಿದೆ. ಇದರಲ್ಲಿ ಒಂದು ಫೈನಲ್​ ಪಂದ್ಯವಾಗಿದೆ. 2018ರಲ್ಲಿ ಭಾರತ ಮತ್ತು ಆಸೀಸ್​ ಫೈನಲ್ ಪಂದ್ಯದಲ್ಲಿ​ ಮುಖಾಮುಖಿಯಾಗಿತ್ತು. ಪೃಥ್ವಿ ಶಾ ನೇತೃತ್ವದ ಭಾರತ ತಂಡ ಈ ಪಂದ್ಯವನ್ನು 8 ವಿಕೆಟ್​ಗಳಿಂದ ಗೆದ್ದು ಪ್ರಶಸ್ತಿ ಎತ್ತಿ ಹಿಡಿದಿತ್ತು. ಭಾರತ ಪರ ಮಂಜೋತ್ ಕಾಲ್ರಾ ಫೈನಲ್​ ಪಂದ್ಯದಲ್ಲಿ ಅಜೇಯ 101 ರನ್​ ಬಾರಿಸಿ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.

ಭಾರತ ಕಿರಿಯರ ತಂಡ ಮೊದಲ ಸಲ ಅಂಡರ್‌-19 ವಿಶ್ವಕಪ್​ನಲ್ಲಿ ಚಾಂಪಿಯನ್‌ ಪಟ್ಟ ಅಲಂಕರಿಸಿದ್ದು 2002 ರಲ್ಲಿ. ಮೊಹ್ಮಮದ್‌ ಕೈಫ್ ನಾಯಕತ್ವದಲ್ಲಿ ಭಾರತಕ್ಕೆ ಚೊಚ್ಚಲ ಅಂಡರ್‌-19 ವಿಶ್ವಕಪ್​ ಕಪ್ ದೊರಕಿತ್ತು. ಆ ಬಳಿಕ 2008, 2012, 2018 ಮತ್ತು 2022ರಲ್ಲಿ ಪ್ರಶಸ್ತಿ ಎತ್ತಿತ್ತು. ಈ ಬಾರಿಯೂ ಭಾರತವೇ ಪ್ರಶಸ್ತಿ ಗೆಲ್ಲುವ ಫೇವರಿಟ್​ ತಂಡವಾಗಿ ಕಾಣಿಸಿಕೊಂಡಿದೆ.

ಭಾರತ ಉತ್ತಮ ಆಲ್‌ರೌಂಡರ್‌ಗಳನ್ನೊಳಗೊಂಡ ಸಶಕ್ತ ಪಡೆಯನ್ನು ಹೊಂದಿದೆ. ಮಹಾರಾಷ್ಟ್ರದ ಸವ್ಯ ಸಾಚಿ ಅರ್ಶಿನ್‌ ಕುಲಕರ್ಣಿ, ವಿಕೆಟ್‌ ಕೀಪರ್‌-ಬ್ಯಾಟರ್‌ ಎ. ಅವನೀಶ್‌ ರಾವ್‌, ಎಡಗೈ ಸ್ಪಿನ್ನರ್‌-ಉಪನಾಯಕ ಸೌಮಿ ಕುಮಾರ್‌ ಪಾಂಡೆ, ನಾಯಕ ಉದಯ್‌ ಸಹಾರಣ್‌, ಮುಂಬಯಿಯ ಮುಶೀರ್‌ ಖಾನ್‌, ಸಚಿನ್​ ದಾಸ್​ ಅವರೆಲ್ಲ ತಂಡದ ಸ್ಟಾರ್‌ ಬ್ಯಾಟರ್​ ಹಾಗೂ ಆಲ್‌ರೌಂಡರ್​ಗಳು. ಇವರಲ್ಲಿ ಅರ್ಶಿನ್‌ ಕುಲಕರ್ಣಿ ಮತ್ತು ಅವನೀಶ್‌ ರಾವ್‌ ಈಗಾಗಲೇ ಐಪಿಎಲ್‌ ತಂಡ ಗಳಿಂದಲೂ ಕರೆ ಪಡೆದಿದ್ದಾರೆ.

ಟೂರ್ನಿಯಲ್ಲಿ ಅತ್ಯಧಿಕ ರನ್​ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಮೂರು ಸ್ಥಾನವನ್ನು ಭಾರತ ತಂಡದ ಆಟಗಾರರೆ ಪಡೆದಿದ್ದಾರೆ. ಉದಯ್‌ ಸಹಾರಣ್‌(389) ಮೊದಲ ಸ್ಥಾನದಲ್ಲಿದ್ದರೆ,ಮುಶೀರ್‌ ಖಾನ್‌ (338) ಮತ್ತು ಸಚಿನ್​ ದಾಸ್​(294) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ವಿಕೆಟ್​ ಟೇಕಿಂಗ್​ನಲ್ಲಿ ಸೌಮಿ ಕುಮಾರ್‌ ಪಾಂಡೆ 17 ವಿಕೆಟ್​ ಕಿತ್ತು ಮೂರನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಈ ಬಾರಿಯ ಭಾರತ ಅಂಡರ್​ 19 ತಂಡ ಈ ಹಿಂದಿನ ತಂಡಗಳಿಗಿಂತಲೂ ಹೆಚ್ಚು ಬಲಿಷ್ಠ ಮತ್ತು ವೈವಿಧ್ಯಮಯವಾಗಿದೆ. ಫೈನಲ್​ ಪಂದ್ಯದಲ್ಲಿಯೂ ಭಾರತ ಉತ್ತಮ ಪ್ರದರ್ಶನ ತೋರುವ ಮೂಲಕ 6ನೇ ಬಾಎರಿ ಪ್ರಶಸ್ತಿ ತನ್ನದಾಗಿಸಿಕೊಳ್ಳಲಿ ಎನ್ನುವುದು ಭಾರತೀಯರ ಆಶಯ.

ಭಾರತ ತಂಡ


ಉದಯ್‌ ಸಹಾರಣ್‌ (ನಾಯಕ), ಅರ್ಶಿನ್‌ ಕುಲಕರ್ಣಿ, ಆದರ್ಶ್‌ ಸಿಂಗ್‌, ರುದ್ರ ಮಯೂರ್‌ ಪಟೇಲ್‌, ಸಚಿನ್‌ ದಾಸ್‌, ಪ್ರಿಯಾಂಶು ಮೋಲಿಯಾ, ಮುಶೀರ್‌ ಖಾನ್‌, ಎ. ಅವನೀಶ್‌ ರಾವ್‌, ಸೌಮ್ಯ ಕುಮಾರ್‌ ಪಾಂಡೆ, ಮುರುಗನ್‌ ಅಭಿಷೇಕ್‌, ಇನ್ನೇಶ್‌ ಮಹಾಜನ್‌, ಧನುಷ್‌ ಗೌಡ, ಆರಾಧ್ಯ ಶುಕ್ಲಾ, ರಾಜ್‌ ಲಿಂಬಾನಿ, ನಮನ್‌ ತಿವಾರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Team India: ನೂತನ ಕೋಚ್​ ಗಂಭೀರ್​ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

Team India: 2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ.

VISTARANEWS.COM


on

Team India
Koo

ಕೊಲಂಬೊ: ನೂತನ ಕೋಚ್​ ಗೌತಮ್ ಗಂಭೀರ್(Gautam Gambhir) ಅವರ ಉಸ್ತುವಾರಿಯಲ್ಲಿ ಭಾರತ ತಂಡ(Team India) ಇಂದು(ಮಂಗಳವಾರ) ಅಭ್ಯಾಸ ನಡೆಸಿತು. ​ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದೆ. ಗಂಭೀರ್ ಅವರ ಕೋಚಿಂಗ್​ನಲ್ಲಿ ಭಾರತ ತಂಡ​ ಆಡುವ ಮೊದಲ ಸರಣಿ ಇದಾಗಲಿದೆ. ಹೀಗಾಗಿ ನಿರೀಕ್ಷೆ ಹೆಚ್ಚಾಗಿಯೇ ಇದೆ.

2021ರ ಬಳಿಕ ಭಾರತ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ದ್ವಿಪಕ್ಷೀಯ ಸರಣಿ ಆಡಲಿದೆ. ಉಭಯ ತಂಡಗಳು ಹೊಸ ಕೋಚ್​ ಮಾರ್ಗದರ್ಶನದಲ್ಲಿ ಕಣಕ್ಕಿಳಿಯುತ್ತಿರುವುದು ವಿಶೇಷ. ಲಂಕಾ ತಂಡಕ್ಕೆ ಮಾಜಿ ಆಟಗಾರ ಸನತ್​ ಜಯಸೂರ್ಯ ಮಾರ್ಗದರ್ಶನ ನೀಡಲಿದ್ದಾರೆ.

ಮಂಗಳವಾರ ಭಾರತ ಟಿ20 ತಂಡದ ನೂತನ ನಾಯಕ ಸೂರ್ಯಕುಮಾರ್​ ಯಾದವ್​, ಮೊಹಮ್ಮದ್​ ಸಿರಾಜ್​, ರಿಷಭ್​ ಪಂತ್​, ರಿಂಕು ಸಿಂಗ್​, ಶುಭಮನ್​ ಗಿಲ್​, ರವಿ ಬಿಷ್ಟೋಯಿ ಸೇರಿದಂತೆ ಎಲ್ಲ ಆಟಗಾರರು ಗಂಭೀರ್​ ಮಾರ್ಗದರ್ಶನದಲ್ಲಿ ಮೊದಲು ಬ್ಯಾಟಿಂಗ್​ ಅಭ್ಯಾಸ ನಡೆಸಿ ಬಳಿಕ ಫೀಲ್ಡಿಂಗ್​, ಬೌಲಿಂಗ್​ ಅಭ್ಯಾಸ ನಡೆಸಿದರು. ಭಾರತೀಯ ಆಟಗಾರರ ಅಭ್ಯಾಸ ನಡೆಸುತ್ತಿರುವ ವಿಡಿಯೊಗಳನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

ಲಂಕಾಗೆ ತೆರಳುವ ಮುನ್ನ ಗಂಭೀರ್​ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದರು. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ರಾಷ್ಟ್ರೀಯ ತಂಡಕ್ಕಾಗಿ ಉತ್ತಮ ಕೆಲಸಗಳನ್ನು ಮಾಡುವುದನ್ನು ಮುಂದುವರಿಸಲು ಬೆಂಬಲಿಸಿದರು, ಇಬ್ಬರೂ ಮುಂದೆ ಏಕದಿನ ಮತ್ತು ಟೆಸ್ಟ್‌ಗಳಲ್ಲಿ ಪ್ರಮುಖ ಭಾಗವಾಗಲಿದ್ದಾರೆ ಎಂದು ಹೇಳಿದ್ದರು. ಇದೇ ವೇಳೆ ರೋಹಿತ್ ಮತ್ತು ಕೊಹ್ಲಿ ಚಾಂಪಿಯನ್ಸ್ ಟ್ರೋಫಿ ಮತ್ತು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಗಾಗಿ ಆಡಲಿದ್ದು, 2025 ರ ಋತುವಿನ ನಂತರವೂ ಅವರು ಮುಂದುವರಿಯಲು ಬಾಗಿಲು ತೆರೆದೇ ಇದೆ ಎಂದು ಗಂಭೀರ್ ಹೇಳಿದ್ದರು.

ಇದನ್ನೂ ಓದಿ IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading

ಕ್ರೀಡೆ

Rahul Dravid: ಆರ್​ಸಿಬಿ ಅಲ್ಲ ಈ ತಂಡದ ಕೋಚ್​ ಆಗಲಿದ್ದಾರೆ ರಾಹುಲ್​ ದ್ರಾವಿಡ್

Rahul Dravid: ದ್ರಾವಿಡ್​ ಆರ್​ಸಿಬಿ ಬದಲಾಗಿ ರಾಜಸ್ಥಾನ್​ ಪರ ಕೋಚಿಂಗ್​ ನಡೆಸುವುದು ಖಚಿತವಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಮಾಹಿತಿ ಇದುವರೆಗೂ ಪ್ರಕಟಗೊಂಡಿಲ್ಲ.

VISTARANEWS.COM


on

Rahul Dravid
Koo

ಬೆಂಗಳೂರು: ಟೀಮ್​ ಇಂಡಿಯಾದ ಮಾಜಿ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಐಪಿಎಲ್(IPL 2025)​ ಕೋಚಿಂಗ್​ ನಡೆಸುವುದು ಬಹುತೇಕ ಖಚಿತ ಎಂದು ತಿಳಿದುಬಂದಿದೆ. ಈ ಹಿಂದೆ ಕೋಚಿಂಗ್​ ನಡೆಸಿದ್ದ ರಾಜಸ್ಥಾನ್ ರಾಯಲ್ಸ್​(Rajasthan Royals) ತಂಡದ ಪರವೇ ಮತ್ತೆ ಕೋಚಿಂಗ್​ ನಡೆಸಲಿದ್ದಾರೆ ಎಂದು ಫ್ರಾಂಚೈಸಿಯ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಟಿ20 ವಿಶ್ವಕಪ್​ ಬಳಿಕ ದ್ರಾವಿಡ್​ ಭಾರತ ತಂಡದ ಕೋಚಿಂಗ್​ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು. ಅದಾಗಲೇ ದ್ರಾವಿಡ್​ ಐಪಿಎಲ್​ ಕೋಚಿಂಗ್​ ನಡೆಸುತ್ತಾರೆ ಎನ್ನಲಾಗಿತ್ತು. ಜತೆಗೆ ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ ಪರ ಕೋಚಿಂಗ್​ ಮಾಡಲಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗಿತ್ತು. ಇದೀಗ ದ್ರಾವಿಡ್​ ಆರ್​ಸಿಬಿ ಬದಲಾಗಿ ರಾಜಸ್ಥಾನ್​ ಪರ ಕೋಚಿಂಗ್​ ನಡೆಸುವುದು ಖಚಿತವಾಗಿದೆ ಎಂದು ತಿಳಿದುಬಂದಿದೆ. ಆದರೆ ಅಧಿಕೃತ ಮಾಹಿತಿ ಇದುವರೆಗೂ ಪ್ರಕಟಗೊಂಡಿಲ್ಲ.

ರಾಜಸ್ಥಾನ್ ರಾಯಲ್ಸ್ ಪರ ನಾಯಕರಾಗಿ ದ್ರಾವಿಡ್ ಒಮ್ಮೆ ತಂಡವನ್ನು ಪ್ಲೇ ಆಪ್​ಗೆ ಕೊಂಡೊಯ್ದಿದ್ದರು. ಚಾಂಪಿಯನ್ಸ್ ಲೀಗ್​ನಲ್ಲಿ ತಂಡ ಫೈನಲ್​ಗೇರಿತ್ತು. ರಾಜಸ್ಥಾನ್ ತಂಡದ ಪರ 40 ಪಂದ್ಯಗಳಲ್ಲಿ ನಾಯಕರಾಗಿದ್ದ ದ್ರಾವಿಡ್ 23 ಗೆಲುವು ಕಂಡಿದ್ದಾರೆ. ಎರಡು ಸೀಸನ್​ಗಳಲ್ಲಿ ರಾಜಸ್ಥಾನ್ ತಂಡದ ಕೋಚ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಂಡರ್ 19 ತಂಡದ ಕೋಚ್ ಆದ ಕಾರಣ ಐಪಿಎಲ್​ ಕೋಚಿಂಗ್​ನಿಂದ ದೂರ ಉಳಿದಿದ್ದರು. ಇದಾದ ಬಳಿಕ ಟೀಮ್​ ಇಂಡಿಯಾ ಕೋಚ್​ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ಎಲ್ಲ ಹುದ್ದೆಗಳಿಂದ ನಿವೃತ್ತಿ ಹೊಂದಿರುವ ಅವರು ಐಪಿಎಲ್​ ಕೋಚಿಂಗ್​ ಕಡೆ ಗಮನಹರಿಸಿದ್ದಾರೆ.

ಇದನ್ನೂ ಓದಿ Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

ಆರ್​ಸಿಬಿ ಸೇರಲಿದ್ದಾರಾ ರಾಹುಲ್​?

ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರು ರಾಹುಲ್ ಈ ಬಾರಿ ಲಕ್ನೋ ತೊರೆಯುವುದು ಖಚಿತವಾಗಿದೆ. ಮೂಲ್ಳ ಪ್ರಕಾರ ಅವರು ಆರ್​ಸಿಬಿ ತಂಡ ಸೇರಲಿದ್ದಾರೆ ಎನ್ನಲಾಗಿದೆ. ಆರ್​ಸಿಬಿ ಪರ ಆಡುವುದು ಕೂಡ ಅವರ ಬಯಕೆಯಾಗಿದೆ. ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. 

ರಾಹುಲ್​ ಆರ್​ಸಿಬಿ ಸೇರಲಿದ್ದಾರೆ ಎಂಬ ಸುದ್ದಿ ಕೇಳಿದ್ದೇ ತಡ ಕನ್ನಡಿಗರು ಮತ್ತು ಆರ್​ಸಿಬಿ ಅಭಿಮಾನಿಗಳು ಆರ್​ಸಿಬಿ ಜೆರ್ಸಿಯಲ್ಲಿ ರಾಹುಲ್​ ಅವರ ಫೋಟೊ ಎಡಿಟ್​ ಮಾಡಿ ತವರಿಗೆ ಸ್ವಾಗತ ಎನ್ನುವ ಪೋಸ್ಟರ್​ ಶೇರ್​ ಮಾಡಲಾರಂಭಿಸಿದ್ದಾರೆ. ಈ ಪೋಸ್ಟರ್​ಗಳು ವೈರಲ್​ ಆಗುತ್ತಿವೆ.

Continue Reading

ಕ್ರೀಡೆ

Paris Olympic 2024:’ಆ್ಯಂಟಿ-ಸೆಕ್ಸ್ ಬೆಡ್’ನ ಸಾಮರ್ಥ್ಯ ಪರೀಕ್ಷೆ ನಡೆಸಿದ ಆಸ್ಟ್ರೇಲಿಯಾದ ಟೆನಿಸ್​ ಆಟಗಾರ್ತಿಯರು; ವಿಡಿಯೊ ವೈರಲ್​

Paris Olympic 2024: ಒಬ್ಬ ವ್ಯಕ್ತಿ ಮಾತ್ರ ಮಲಗಬಹುದಾದ ಹಾಸಿಗೆ ಇದಾಗಿದೆ. ಮರುಬಳಕೆ ಮಾಡಬಹುದಾದಂಥ ವಸ್ತುಗಳಿಂದ ಇದನ್ನು ಸಿದ್ಧಪಡಿಸಲಾಗಿದೆ.

VISTARANEWS.COM


on

Paris Olympic 2024
Koo

ಪ್ಯಾರಿಸ್​: ಕ್ರೀಡಾಪಟುಗಳು ಲೈಂಗಿಕಾಸಕ್ತಿ ತೋರದು ಕೇವಲ ಕ್ರೀಡಾಸ್ಪರ್ಧೆಗಳತ್ತ ಗಮನ ಹರಿಸಲಿ ಎಂಬ ಧ್ಯೇಯದೊಂದಿಗೆ ಟೋಕಿಯೊ ಒಲಿಂಪಿಕ್ ಕ್ರೀಡಾ ಗ್ರಾಮದಲ್ಲಿ ಜಾರಿಗೆ ತಂದಿದ್ದ ‘ಆ್ಯಂಟಿ-ಸೆಕ್ಸ್ ಬೆಡ್’ಗಳ(‘Anti-Sex Beds’) ಅಳವಡಿಕೆಯನ್ನು ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿಯೂ(Paris Olympic 2024) ಮುಂದುವರಿಸಲಾಗಿದೆ. ಆಸ್ಟ್ರೇಲಿಯಾದ ಟೆನಿಸ್ ಆಟಗಾರ್ತಿಯರು ಈ ಬೆಡ್​ನ ಸಾಮರ್ಥ್ಯ ಪರೀಕ್ಷೆ ನಡೆಸಿದ ವಿಡಿಯೊವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಪ್ಯಾರಿಸ್​ ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಕೆಲವು ಅಥ್ಲೀಟ್​ಗಳು ಈ ಬಾರಿ ‘ಆ್ಯಂಟಿ ಸೆಕ್ಸ್‌ ಬೆಡ್‌’ಗಳು ಅಳವಡಿಸ ಬಾರದೆಂದು ಆಗ್ರಹಿಸಿದ್ದರು. ಆದರೆ, ಸಂಘಟಕರು ಕ್ರೀಡಾಗ್ರಾಮದಲ್ಲಿ ಆ್ಯಂಟಿ ಸೆಕ್ಸ್‌ ಬೆಡ್​ಗಳು ಅಳವಡಿಸಿದ್ದಾರೆ. ಒಬ್ಬ ವ್ಯಕ್ತಿ ಮಾತ್ರ ಮಲಗಬಹುದಾದ ಹಾಸಿಗೆ ಇದಾಗಿದೆ. ಮರುಬಳಕೆ ಮಾಡಬಹುದಾದಂಥ ವಸ್ತುಗಳಿಂದ ಇದನ್ನು ಸಿದ್ಧಪಡಿಸಲಾಗಿದೆ.

ಪ್ರತಿ ಬೆಡ್ ಸುಮಾರು 200 ಕೆಜಿ ಭಾರವನ್ನಷ್ಟೇ ಹೊರಬಲ್ಲಷ್ಟು ಸಾಮರ್ಥ್ಯ ಹೊಂದಿದೆ ಎನ್ನಲಾಗುತ್ತಿದೆ. ಕಾರ್ಡ್‌ಬೋರ್ಡ್‌ನಿಂದ ತಯಾರಿಸಲಾಗಿರುವ ಬೆಡ್‌ಗಳ ಬಗ್ಗೆ ಕ್ರೀಡಾಪಟುಗಳು, ಕ್ರೀಡಾಪ್ರೇಮಿಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹಲವು ತಮಾಷೆಯ ಕಾಮೆಂಟ್‌ಗಳೂ ಹರಿದುಬರುತ್ತಿವೆ. ಈ ಮಧ್ಯೆ ಆಸ್ಟ್ರೇಲಿಯಾದ ಟೆನಿಸ್ ತಾರೆಯರಾದ ಡೇರಿಯ ಸಾವಿಲ್ಲೆ ಮತ್ತು ಎಲೆನ್ ಪೆರೆಜ್‌ ಜತೆಯಾಗಿ ‘ಆ್ಯಂಟಿ ಸೆಕ್ಸ್‌ ಬೆಡ್‌’ಗಳ ಕ್ವಾಲಿಟಿ ಟೆಸ್ಟ್ ಮಾಡಿದ್ದಾರೆ. ಈ ಬೆಡ್‌ನ ಮೇಲೆ ಈ ಜೋಡಿ ವಾಲಿ ಪ್ರಾಕ್ಟೀಸ್, ಸ್ಕ್ವಾಟ್‌ ಜಂಪ್ಸ್‌, ಸ್ಟೆಪ್‌-ಅಪ್ಸ್ ಸೇರಿದಂತೆ ಹಲವು ಅಭ್ಯಾಸಗಳನ್ನು ನಡೆಸಿ ತಮ್ಮ ತಮಾಷೆಯಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ‘ಒಲಿಂಪಿಕ್ಸ್‌ ಗ್ರಾಮದಲ್ಲಿರುವ ಕಾರ್ಡ್‌ಬೋರ್ಡ್‌ಗಳನ್ನು ಟೆಸ್ಟ್‌ ಮಾಡಿದ್ದೇವೆ” ಎನ್ನುವ ಕ್ಯಾಪ್ಶನ್ ನೀಡಿ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೊ ಎಲ್ಲಡೆ ವೈರಲ್​ ಆಗುತ್ತಿದೆ.


ಕ್ರೀಡಾ ಗ್ರಾಮಕ್ಕೆ​ ದಾಖಲೆಯ 3 ಲಕ್ಷ ಕಾಂಡೋಮ್ ಪೂರೈಕೆ!


ಈ ಕ್ರೀಡಾಕೂಡದ ಯಶಸ್ಸಿಗಾಗಿ ಪ್ಯಾರಿಸ್(Paris Olympic 2024)​ ಸರ್ವ ಸನ್ನದ್ಧವಾಗಿದೆ. ಜುಲೈ 26ರಿಂದ ಟೂರ್ನಿ ಆರಂಭವಾಗಲಿದೆ. ಇದೀಗ ಒಲಿಂಪಿಕ್ಸ್​ ಕ್ರೀಡಾ ಗ್ರಾಮದಲ್ಲಿ(Olympic Game Village) ಕ್ರೀಡಾಪಟುಗಳಿಗೆ ಸಂಘಟಕರು 3 ಲಕ್ಷ ಕಾಂಡೋಮ್​ಗಳನ್ನು ಪೂರೈಕೆ ಮಾಡಿದ್ದಾರೆ. ಇದು ಒಲಿಂಪಿಕ್ಸ್​ ಇತಿಹಾಸದಲ್ಲೇ ಗರಿಷ್ಠ ಸಂಖ್ಯೆಯ ಕಾಂಡೋಮ್​ ಪೂರೈಕೆಯಾಗಿರಲಿದೆ.

2021ರ ಟೋಕಿಯೊ ಒಲಿಂಪಿಕ್ಸ್​ ವೇಳೆ ಕರೊನಾ ಹಾವಳಿ ಇದ್ದ ಕಾರಣದಿಂದಾಗಿ ​ಸಂಟಕರು 1.5 ಲಕ್ಷ ಕಾಂಡೋಮ್​ಗಳನ್ನು ಕ್ರೀಡಾಪಟುಗಳಿಗೆ ಪೂರೈಕೆ ಮಾಡಿದ್ದರು. ಈ ಆದರೆ ಬಾರಿ ದಾಖಲೆಯ ಸಂಖ್ಯೆಯಲ್ಲಿ ಕಾಂಡೋಮ್​ಗಳನ್ನು ಪೂರೈಕೆ ಮಾಡಲಾಗಿದೆ. ಇದಕ್ಕೂ ಒಂದು ಕಾರಣವಿದೆ. ಪ್ಯಾರಿಸ್ ಎಂದರೆ ಪ್ರಣಯ ನಗರ ಎಂದೇ ಪ್ರಸಿದ್ಧಿ ಹೀಗಾಗಿ ಇಷ್ಟು ದೊಡ್ಡ ಸಂಖ್ಯೆಯ ಕಾಂಡೋಮ್​ಗಳನ್ನು ಸಂಘಟಕರು ಪೂರೈಕೆ ಮಾಡಿದ್ದಾರೆ. ಜತೆಗೆ ನಿಮ್ಮ ದೇಶದಲ್ಲಿ ಎಚ್​ಐವಿ ಜಾಗೃತಿ ಮೂಡಿಸಲು ಇದನ್ನು ಬಳಸಿ ಎಂಬ ಕಿವಿಮಾತು ಹೇಳಿದ್ದಾರೆ. ಈ ಕಾಂಡೋಮ್ ಕವರ್​ನಲ್ಲಿ ಪ್ಯಾರಿಸ್​ ಒಲಿಂಪಿಕ್ಸ್​ 2024 ಎಂದು ಬರೆದಿದೆ.

‘ಕ್ರೀಡಾಪಟುಗಳು ಕಾಂಡೋಮ್ ಅನ್ನು ಒಲಿಂಪಿಕ್ಸ್ ಗ್ರಾಮದಲ್ಲಿ ಬಳಸಬಾರದು. ಸ್ಮರಣಿಕೆಗಳ ರೀತಿಯಲ್ಲಿ ತವರಿಗೆ ಕೊಂಡೊಯ್ಯಿರಿ ಎಂದು ಐಒಸಿ ಸೂಚಿಸಿದೆ’. 1988ರ ಸಿಯೋಲ್ ಒಲಿಂಪಿಕ್ಸ್‌ನಿಂದ ಏಡ್ಸ್ ರೋಗದ ಜಾಗೃತಿಗಾಗಿ ಪ್ರತಿ ಗೇಮ್ಸ್‌ನಲ್ಲಿ ಕಾಂಡೋಮ್‌ಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ.

Continue Reading

ಕ್ರೀಡೆ

IND vs SL: ಭಾರತ ವಿರುದ್ಧದ ಟಿ20 ಸರಣಿಗೆ ತಂಡ ಪ್ರಕಟಿಸಿದ ಶ್ರೀಲಂಕಾ

IND vs SL: ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಚರಿತ್ ಅಸಲಂಕಾ ನಾಯಕತ್ವದಲ್ಲಿ ಜಾಫ್ನಾ ಕಿಂಗ್ಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಹೀಗಾಗಿ ಲಂಕಾ ಕ್ರಿಕೆಟ್​ ಮಂಡಳಿ ಇವರಿಗೆ ನಾಯಕತ್ವ ಪಟ್ಟ ಕಟ್ಟಿದೆ.

VISTARANEWS.COM


on

IND vs SL
Koo

ಕೊಲಂಬೊ: ಭಾರತ(IND vs SL) ವಿರುದ್ಧದ ತವರಿನ ಟಿ20 ಸರಣಿಗಾಗಿ ಆತಿಥೇಯ ಶ್ರೀಲಂಕಾ(Sri Lanka) 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಚರಿತ್ ಅಸಲಂಕಾ ತಂಡವನ್ನು ಮುನ್ನಡೆಸಲಿದ್ದಾರೆ. ಸರಣಿ ಆರಂಭಕ್ಕೂ ಮುನ್ನ ವನಿಂದು ಹಸರಂಗ ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದೀಗ ನೂತನ ನಾಯಕನಾಗಿ ಚರಿತ್ ಅಸಲಂಕಾ(Charith Asalanka) ನೇಮಕಗೊಂಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಚರಿತ್ ಅಸಲಂಕಾ ನಾಯಕತ್ವದಲ್ಲಿ ಜಾಫ್ನಾ ಕಿಂಗ್ಸ್ ತಂಡ ಚಾಂಪಿಯನ್​ ಪಟ್ಟ ಅಲಂಕರಿಸಿತ್ತು. ಹೀಗಾಗಿ ಲಂಕಾ ಕ್ರಿಕೆಟ್​ ಮಂಡಳಿ ಇವರಿಗೆ ನಾಯಕತ್ವ ಪಟ್ಟ ಕಟ್ಟಿದೆ. ಭಾರತ ಕೂಡ ನೂತನ ನಾಯಕ ಸೂರ್ಯಕುಮಾರ್​ ಯಾದವ್ ಸಾರಥ್ಯದಲ್ಲಿ ಆಡಲಿದೆ. ​ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದೆ.

34 ವರ್ಷದ ಅನುಭವಿ ಆಟಗಾರ ದಿನೇಶ್ ಚಂಡಿಮಲ್​ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಆದರೆ ಕಳೆದ ಟಿ20 ವಿಶ್ವಕಪ್​ ಆಡಿದ್ದ ಹಿರಿಯ ಆಲ್​ರೌಂಡರ್​ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಕೈಬಿಡಲಾಗಿದೆ. ಏಕದಿನ ಸರಣಿಗೆ ಇನಷ್ಟೇ ತಂಡ ಪ್ರಕಟಗೊಳ್ಳಬೇಕಿದೆ.

ಶ್ರೀಲಂಕಾ ಟಿ20 ತಂಡ


ಚರಿತ್ ಅಸಲಂಕ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಜನಿತ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್, ದಿನೇಶ್ ಚಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶಾನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೀಶ್ ತೀಕ್ಷಣ, ಚಮಿಂದು ವಿಕ್ರಮಸಿಂಗ್, ಮಥೀಶ ಪತಿರಾಣ, ನುವಾನ್ ತುಷಾರ, ದುಷ್ಮಂತ ಚಮೀರ, ಬಿನೂರ ಫೆರ್ನಾಂಡೋ.

ಲಂಕಾ ಸರಣಿಗೆ ಭಾರತ ಈಗಾಗಲೇ ಏಕದಿನ ಮತ್ತು ಟಿ20 ತಂಡಗಳನ್ನು ಪ್ರಕಟಿಸಿದೆ. ವಿಶ್ರಾಂತಿ ಬಯಸಿದ್ದ ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಮತ್ತು ಜಸ್​ಪ್ರೀತ್​ ಬುಮ್ರಾ ತಮ್ಮ ವಿಶ್ರಾಂತಿ ಮೊಟಕುಗೊಳಿಸಿ ಈ ಸರಣಿಗೆ ಮರಳಿದ್ದಾರೆ.

ಇದನ್ನೂ ಓದಿ Sri Lanka Tour: ಸಂಜು, ಅಭಿಷೇಕ್​ಗೆ ಅವಕಾಶ ನೀಡದಕ್ಕೆ ಬಿಸಿಸಿಐ ವಿರುದ್ಧ ಕಿಡಿಕಾರಿದ ಸಂಸದ ​ತರೂರ್

ಪ್ರವಾಸದ ಮೊದಲ 3 ಟಿ20 ಪಂದ್ಯಗಳು ಜುಲೈ 27, 28 ಮತ್ತು 30ರಂದು ಪಲ್ಲೆಕಿಲೆಯಲ್ಲಿ ನಡೆಯಲಿವೆ. ಮೊದಲು ಪ್ರಕಟಗೊಂಡಿದ್ದ ವೇಳಾಪಟ್ಟಿಯಲ್ಲಿ 26ರಿಂದ ಟಿ20 ಪಂದ್ಯ ಆರಂಭವಾಗಬೇಕಿತ್ತು. ಏಕದಿನ ಸರಣಿ ಕೂಡ ಒಂದು ದಿನ ತಡವಾಗಿ ಶುರುವಾಗಬೇಕಿತ್ತು. ಏಕದಿನ ಆಗಸ್ಟ್​ 1ರದ ಬದಲಾಗಿ ಆಗಸ್ಟ್​ 2ರಿಂದ ಆರಂಭಗೊಳ್ಳಲಿದೆ. ಉಳಿದ ಪಂದ್ಯಗಳ ದಿನಾಂಕ ಬದಲಾಗಲಿಲ್ಲ. ಈ ಹಿಂದಿನಂತೆ ಆಗಸ್ಟ್​ 4 ಮತ್ತು 7ರಂದೇ ನಡೆಯಲಿದೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

ಏಕದಿನ ತಂಡ


ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Continue Reading
Advertisement
Parashuram D
ಪ್ರಮುಖ ಸುದ್ದಿ8 mins ago

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Train Tragedy
Latest13 mins ago

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Union Budget 2024
ದೇಶ13 mins ago

Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್‌ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್‌

Protest by Congress alleged that MLA Sunil Kumar has built a fake Parashurama statue
ಉಡುಪಿ15 mins ago

Lakshmi Hebbalkar: ನಕಲಿ ಪರಶುರಾಮ ಪ್ರತಿಮೆ ಸ್ಥಾಪನೆ; ಎಸ್ಐಟಿ ತನಿಖೆಗೆ ಹೆಬ್ಬಾಳಕರ್ ಒತ್ತಾಯ

Harshika Poonacha Bhuvann Ponnannaa shares opinion about marriage
ಸ್ಯಾಂಡಲ್ ವುಡ್22 mins ago

Harshika Poonacha: ಮದುವೆ ಆದ್ರೂ ಮಕ್ಕಳು ಬೇಡ ಅನ್ನೋರಿಗೆ ಮುಟ್ಟಿ ನೋಡ್ಕೊಳ್ಳೋ ಹಾಗೆ ಉತ್ತರ ಕೊಟ್ಟ ಹರ್ಷಿಕಾ ಪೂಣಚ್ಚ ದಂಪತಿ!

Team India
ಕ್ರೀಡೆ25 mins ago

Team India: ನೂತನ ಕೋಚ್​ ಗಂಭೀರ್​ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

Viral Video
Latest31 mins ago

Viral Video: ಮೃಗಾಲಯದ ಸಿಬ್ಬಂದಿ ಮೇಲೆ ಸಿಂಹದ ದಾಳಿ; ತಡೆದು ನಿಲ್ಲಿಸಿದ ಸಿಂಹಿಣಿ!

CM Siddaramaiah
ಕರ್ನಾಟಕ32 mins ago

CM Siddaramaiah: ರೈತರು, ರಾಜ್ಯಕ್ಕೆ ಕೇಂದ್ರ ಪಂಗನಾಮ; ತಿಂಡಿ ತಿನ್ನುತ್ತಲೇ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

assault case
ವಿಜಯನಗರ48 mins ago

Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

Kannada New Movie Simha Roopini Character Introduction Teaser
ಸಿನಿಮಾ50 mins ago

Kannada New Movie: ಮಾರಮ್ಮ ದೇವಿ ಸಮ್ಮುಖದಲ್ಲಿ ʻಸಿಂಹರೂಪಿಣಿʼ ಟೀಸರ್ ಬಿಡುಗಡೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ5 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌