ಮುಂಬಯಿ: ವೆಸ್ಟ್ ಇಂಡೀಸ್(IND vs WI) ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿರುವ ವೇಗಿ ಉಮೇಶ್ ಯಾದವ್(Umesh Yadav) ಅವರು ಉಜ್ಜಯಿನಿಗೆ ತೆರಳಿ ಮಹಾಕಾಳೇಶ್ವರನ ದರ್ಶನ ಪಡೆದಿದ್ದಾರೆ. ಪತ್ನಿಯೊಂದಿಗೆ ಮಹಾಕಾಳೇಶ್ವರನ(mahakaleshwar temple) ಸನ್ನಿದಿಗೆ ತೆರಳಿದ್ದ ಉಮೇಶ್ ಯಾದವ್, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಫೋಟೊವನ್ನು ಉಮೇಶ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕೇವಲ ಟೆಸ್ಟ್ ಪಂದ್ಯಗಳಿಗೆ ಮಾತ್ರ ಸೀಮಿತವಾಗಿರುವ ಉಮೇಶ್ ಯಾದವ್ ಇತ್ತೀಚೆಗೆ ಲಂಡನ್ನಲ್ಲಿ ನಡೆದಿದ್ದ ಆಸೀಸ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ತೋರುವಲ್ಲಿ ವಿಫಲರಾಗಿದ್ದರು. ಇದೇ ಕಾರಣಕ್ಕೆ ಅವರನ್ನು ಮತ್ತು ಚೇತೇಶ್ವರ್ ಪೂಜಾರ ಅವರನ್ನೂ ವಿಂಡೀಸ್ ಪ್ರವಾಸದಿಂದ ಕೈಬಿಡಲಾಗಿತ್ತು. ಸದ್ಯ ಅವರು ಮುಂದಿನ ಸರಣಿಗೂ ಆಯ್ಕೆಯಾಗುವುದು ಅನುಮಾನ ಎನ್ನಲಾಗಿದೆ. ಇದೇ ಕಾರಣಕ್ಕೆ ಅವರು ದೇವರ ಮೊರೆ ಹೋದಂತಿದೆ.
ಈ ಹಿಂದೆ ವಿರಾಟ್ ಕೊಹ್ಲಿ ಅವರು ಸತತ ಎರಡು ವರ್ಷಗಳ ಕಾಲ ಬ್ಯಾಟಿಂಗ್ ಫಾರ್ಮ್ ಕಳೆದುಕೊಂಡು ಇನ್ನೇನು ಅವರ ಕ್ರಿಕೆಟ್ ಭವಿಷ್ಯ ಅಂತ್ಯ ಕಂಡಿತು ಎನ್ನುವಷ್ಟರಲ್ಲಿ ಕೊಹ್ಲಿ ಮಹಾಕಾಳೇಶ್ವರನ ಸನ್ನಿದಿಗೆ ತರೆಳಿ ವಿಶೇಷ ಪೂಜೆ ಸಲ್ಲಿದ್ದರು. ಇದಾದ ಮುಂದಿನ ಸರಣಿಯಲ್ಲಿಯೇ ಅವರು ಶತಕ ಬಾರಿಸಿ ಮಿಂಚಿದ್ದರು. ಹಾಗೆಯೇ ಮತ್ತೆ ತಮ್ಮ ಬ್ಯಾಟಿಂಗ್ ಲಯವನ್ನು ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಉಮೇಶ್ ಯಾದವ್ ಕೂಡ ಇದೇ ಹಾದಿ ಹಿಡಿದಂತಿದೆ.
ಇದನ್ನೂ ಓದಿ Umesh Yadav: ಅಪ್ಪನಾದ ಉಮೇಶ್ ಯಾದವ್; ಹೆಣ್ಣು ಮಗುವಿನೆ ಜನ್ಮ ನೀಡಿದ ಪತ್ನಿ ತಾನ್ಯಾ
ಉಮೇಶ್ ಯಾದವ್ ಅವರ ಅನುಪಸ್ಥಿತಿಯಲ್ಲಿ ವೇಗದ ಬೌಲರ್ ಆಗಿ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಮತ್ತು ಜಯದೇವ್ ಉನಾದ್ಕತ್ ಜತೆ ನವದೀಪ್ ಸೈನಿ ಅವಕಾಶ ಪಡೆಯಬಹುದು.
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ 2 ಟೆಸ್ಟ್, 3 ಏಕದಿನ ಹಾಗೂ 3 ಟಿ20 ಪಂದ್ಯಗಳ ಸರಣಿ ಏರ್ಪಡಲಿದೆ. ಹೆಚ್ಚುವರಿಯಾಗಿ 2 ಟಿ20 ಪಂದ್ಯಗಳನ್ನು ಅಮೆರಿಕದಲ್ಲಿ ಆಡಲಾಗುವುದು. ವಿಂಡೀಸ್ಗೆ ಪ್ರವಾಸಗೈಯಲಿರುವ ಭಾರತ ತಂಡ ಮೊದಲು 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಈ ಪಂದ್ಯಗಳ ತಾಣ ರೊಸೇಯು (ಜು. 12-16) ಮತ್ತು ಪೋರ್ಟ್ ಆಫ್ ಸ್ಪೇನ್ (ಜು. 20-24). ಪೋರ್ಟ್ ಆಫ್ ಸ್ಪೇನ್‌ನ “ಕ್ವೀನ್ಸ್‌ಪಾರ್ಕ್ ಓವಲ್’ನಲ್ಲಿ ನಡೆಯುವ 100ನೇ ಟೆಸ್ಟ್ ಪಂದ್ಯ ಇದಾಗಿದೆ.
ಟೆಸ್ಟ್ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ನವದೀಪ್ ಸೈನಿ.
ಏಕ ದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕತ್, ಮೊಹಮ್ಮದ್ ಶಮಿ. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.