ನವದೆಹಲಿ: ಆಸ್ಟ್ರೇಲಿಯಾ(IND VS AUS) ವಿರುದ್ಧದ ಏಕದಿನ ಸರಣಿಗಾಗಿ ಟೀಮ್ ಇಂಡಿಯಾದ ಯುವ ವೇಗಿ ಉಮ್ರಾನ್ ಮಲಿಕ್(Umran Malik) ಭರ್ಜರಿ ತಾಲೀಮು ಆರಂಭಿಸಿದ್ದಾರೆ. ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.
ವೇಗದ ಬೌಲಿಂಗ್ ಮೂಲಕ ಹೆಸರು ವಾಸಿಯಾಗಿರುವ ಉಮ್ರಾನ್ ಮಲಿಕ್, ಐಪಿಎಲ್ ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿಯೂ ವಿಶೇಷ ದಾಖಲೆ ಹೊಂದಿದ್ದಾರೆ. ಗಂಟೆಗೆ 156 ಕೀ.ವೀ. ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಭಾರತದ ತಂಡದ ಪರ ಅತೀ ಹೆಚ್ಚು ವೇಗದಲ್ಲಿ ಬೌಲಿಂಗ್ ಮಾಡಿದ ಬೌಲರ್ ಎಂಬ ಇತಿಹಾಸ ನಿರ್ಮಿಸಿದ್ದಾರೆ.
ಇದನ್ನು ಓದಿ Umran Malik | ಅಖ್ತರ್ ವೇಗದ ಬೌಲಿಂಗ್ ದಾಖಲೆ ಮುರಿಯಲು ಉಮ್ರಾನ್ ಮಲಿಕ್ಗೆ ಸಾಧ್ಯ ಎಂದ ಮಾಜಿ ಬೌಲಿಂಗ್ ಕೋಚ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕ ದಿನ ಸರಣಿ ಮಾರ್ಚ್ 17ಕ್ಕೆ ಆರಂಭವಾಗಲಿದೆ. ಈ ಟೂರ್ನಿಗೆ ಉಮ್ರಾನ್ ಮಲಿಕ್ ಅವರು ಜಿಮ್, ಮೈದಾನದಲ್ಲಿ ಕಸರತ್ತು ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.