Site icon Vistara News

IND vs AUS T20: ಆಸೀಸ್​ ಟಿ20 ಸರಣಿಗೆ ಸೂರ್ಯಕುಮಾರ್​ ಯಾದವ್​ ನಾಯಕ!

surya kumar yadav

ಬೆಂಗಳೂರು: ಏಕದಿನ ವಿಶ್ವಕಪ್​ ಟೂರ್ನಿ ಮುಕ್ತಾಯಗೊಂಡ ಬೆನ್ನಲ್ಲೇ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ಈ ಸರಣಿಗೆ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​ ಅವರು ನಾಯಕನಾಗಿ ಆಯ್ಕೆ ಆಗಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ವಿಶ್ವಕಪ್ ವೇಳೆ ಗಾಯಗೊಂಡ ಆಲ್​ರೌಂಡರ್​ ಅವರು ಈ ಸರಣಿ ಸೇರಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ನವೆಂಬರ್​ 22 ರಿಂದ ಡಿಸೆಂಬರ್​ 3 ತನನ ನಡೆಯಲಿದೆ. ಮೊದಲ ಪಂದ್ಯ ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಿಶ್ವಕಪ್​ ಆಡಿದ ಹಲವು ಆಟಗಾರರಿಗೆ ಈ ಸರಣಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ರೋಹಿತ್​, ಕೊಹ್ಲಿ, ಬುಮ್ರಾ, ಶಮಿ, ಜಡೇಜಾ, ರಾಹುಲ್​ ಅವರು ಈ ಸರಣಿಯಿಂದ ಹೊರಗುಳಿಯಬಹುದು. ಹೀಗಾಗಿ ಸೂರ್ಯಕುಮಾರ್​ ಅವರು ನಾಯಕತ್ವ ವಹಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಸಂಜು ಸ್ಯಾಮ್ಸನ್​, ರಿಂಕು ಸಿಂಗ್​, ತಿಲಕ್​ ವರ್ಮ ಅವರು ಮತ್ತೆ ತಂಡ ಸೇರಬಹುದು.

ಬಾಂಗ್ಲಾದೇಶ ವಿರುದ್ಧ ಅಕ್ಟೋಬರ್​ 19ರಂದು ಪುಣೆಯಲ್ಲಿ ನಡೆದಿದ್ದ ಪಂದ್ಯದ 9ನೇ ಓವರ್ ಎಸೆಯಲು ಬಂದ ಹಾರ್ದಿಕ್ ಪಾಂಡ್ಯ ಅವರು ಲಿಟನ್ ದಾಸ್ ಬಾರಿಸಿದ ಬೌಂಡರಿ ತಡೆಯುವ ಯತ್ನದಲ್ಲಿ ಸ್ಲಿಪ್ ಆಗಿ ಕೆಳಗೆ ಬಿದ್ದು ಪಾದದ ಗಾಯಕ್ಕೆ ತುತ್ತಾಗಿದ್ದರು. ಬಳಿಕ ನೋವಿನಿಂದಾಗಿ ಮೈದಾನ ತೊರೆದಿದ್ದರು. ಪಾಂಡ್ಯ ಅವರ ಉಳಿದ ಮೂರು ಎಸೆತಗಳನ್ನು ವಿರಾಟ್ ಕೊಹ್ಲಿ ಅವರು ಪೂರ್ಣಗೊಳಿಸಿದ್ದರು. ಗಾಯಗೊಂಡು ಮೈದಾನದಿಂದ ಹೊರ ನಡೆದ ಪಾಂಡ್ಯ ಸಂಪೂರ್ಣವಾಗಿ ಪಂದ್ಯದಿಂದ ಹೊರಗುಳಿದಿದ್ದರು. ಅವರ ಸ್ಥಾನದಲ್ಲಿ ಸೂರ್ಯಕುಮಾರ್​ ಅವರು ಬದಲಿ ಆಟಗಾರನಾಗಿ ಫೀಲ್ಡಿಂಗ್​ ನಡೆಸಿದ್ದರು. ಬಳಿಕ ಮೂರು ಪಂದ್ಯಗಳಿಂದ ಹೊರಗುಳಿದು ಚಿಕಿತ್ಸೆ ಪಡೆದರೂ ಗಾಯದಿಂದ ಚೇತರಿಕೆ ಕಾಣದ ಕಾರಣ ಅಂತಿಮವಾಗಿ ವಿಶ್ವಕಪ್‌ನಿಂದಲೇ ಹೊರಬಿದ್ದರು. ಅವರ ಸ್ಥಾನಕ್ಕೆ ಬದಲಿ ಆಟಗಾರನಾಗಿ ಕನ್ನಡಿಗ ಪ್ರಸಿದ್ಧ್​ ಕೃಷ್ಣ(prasidh krishna) ತಂಡ ಸೇರಿದ್ದರು.

ಇದನ್ನೂ ಓದಿ India vs Australia Final: ಫೈನಲ್​ ಪಂದ್ಯಕ್ಕೆ ಭಾರತೀಯ ರೈಲ್ವೆಯಿಂದ ವಿಶೇಷ ರೈಲು ಸೇವೆ

ಎರಡು ತಿಂಗಳ ವಿಶ್ರಾಂತಿ ಅಗತ್ಯ

ಪಾಂಡ್ಯ ಅವರು ಪಾದದ ನೋವಿನಿಂದ ಸಂಪೂರ್ಣ ಚೇತರಿಸಿಕೊಳ್ಳಲು ಕನಿಷ್ಠ ಎರಡು ತಿಂಗಳ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಸೂರ್ಯಕುಮಾರ್ ಅವರನ್ನು​ ನಾಯಕನ ಸ್ಥಾನಕ್ಕೆ ನೇಮಿಸುವ ಸಾಧ್ಯತೆಯಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದೆ. ಆದರ ಬಿಸಿಸಿಐ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ವಿಶ್ವಕಪ್​ ಟೂರ್ನಿಯಲ್ಲಿ ಸೂರ್ಯಕುಮಾರ್​ ಇದುವರೆಗೂ ನಿರೀಕ್ಷಿತ ಮಟ್ಟದ ಬ್ಯಾಟಿಂಗ್​ ನಡೆಸಿಲ್ಲ. ಅವರಿಗೆ ಕೆಲವೇ ಪಂದ್ಯದಲ್ಲಿ ಬ್ಯಾಟಿಂಗ್​ ಅವಕಾಶ ಸಿಕ್ಕರೂ ಇಲ್ಲಿ ವಿಫಲಗೊಂಡಿದ್ದರು. ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 47 ರನ್​ ಗಳಿಸಿದ್ದೇ ಇದುವರೆಗಿನ ಉತ್ತಮ ಗಳಿಕೆಯಾಗಿದೆ.

ಇದನ್ನೂ ಓದಿ IND vs AUS: ಗಂಗೂಲಿ ಮಾಡಿದ ಎಡವಟ್ಟನ್ನು ರೋಹಿತ್​ ಶರ್ಮಾ ಮಾಡದಿರಲಿ…

ಆಸ್ಟ್ರೇಲಿಯಾ ಟಿ20 ಸರಣಿಯ ವೇಳಾಪಟ್ಟಿ

ಮೊದಲ ಟಿ20 ಪಂದ್ಯ. ನ.22, ವಿಶಾಖಪಟ್ಟಣ. ಆರಂಭ, ಸಂಜೆ 7 ಗಂಟೆ.

ದ್ವಿತೀಯ ಟಿ20 ಪಂದ್ಯ. ನ.26, ತಿರುವನಂತಪುರಂ. ಆರಂಭ, ಸಂಜೆ 7 ಗಂಟೆ.

ಮೂರನೇ ಟಿ20, ನ.28,ಗುವಾಹಟಿ. ಆರಂಭ, ಸಂಜೆ 7 ಗಂಟೆ.

ನಾಲ್ಕನೇ ಟಿ20, ಡಿ.1, ನಾಗ್ಪರ. ಆರಂಭ, ಸಂಜೆ 7 ಗಂಟೆ.

ಐದನೇ ಟಿ20, ಡಿ.3, ಹೈದರಾಬಾದ್​. ಆರಂಭ, ಸಂಜೆ 7 ಗಂಟೆ.

ದಕ್ಷಿಣ ಆಫ್ರಿಕಾ ವಿರುದ್ಧ ಡಿ.10ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ. ಇದಾದ ಬಳಿಕ ಡಿ.17ರಿಂದ ಏಕದಿನ, ಡಿ.26ರಿಂದ ಟೆಸ್ಟ್​ ಸರಣಿ ನಡೆಯಲಿದೆ. ಜನವರಿ 3 ತನಕ ಈ ಸರಣಿ ಸಾಗಲಿದೆ.

Exit mobile version