ಮುಂಬಯಿ : ಗಾಯದ ಸಮಸ್ಯೆಯಿಂದ ಬಾಂಗ್ಲಾದೇಶ ಪ್ರವಾಸಕ್ಕೆ ರವೀಂದ್ರ ಜಡೇಜಾ ಅಲಭ್ಯರಾಗಿದ್ದು, ಟೆಸ್ಟ್ ಸರಣಿಗೆ ಉತ್ತರ ಪ್ರದೇಶದ ಆಲ್‌ರೌಂಡರ್ ಸೌರಭ್ ಕುಮಾರ್ ಆಯ್ಕೆಯಾಗಲಿದ್ದಾರೆ. ಕಳೆದ ಏಷ್ಯಾ ಕಪ್‌ಗಾಗಿ ಯುಎಇಗೆ ತೆರಳಿದ್ದ ರವೀಂದ್ರ ಜಡೇಜಾ ಅಲ್ಲಿ ಮೊಣಕಾಲಿನ ಗಾಯದ ಸಮಸ್ಯೆಗೆ ಒಳಗಾಗಿದ್ದರು. ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿರುವ ಅವರು ಕೆಲವು ದಿನಗಳ ಹಿಂದೆ ಮುಕ್ತಾಯಕಂಡ ಟಿ೨೦ ವಿಶ್ವ ಕಪ್‌ನಲ್ಲಿ ಅವಕಾಶ ಪಡೆದುಕೊಂಡಿರಲಿಲ್ಲ. ಅಂತೆಯೇ ಅವರು ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಆಡುವ ಅವಕಾಶವನ್ನೂ ಕಳೆದುಕೊಂಡಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಮೊದಲು ಏಕ ದಿನ ಪಂದ್ಯಗಳ ಸರಣಿಯೂ ನಡೆಯಲಿದೆ. ಆ ಸರಣಿಗೆ ಜಡೇಜಾ ಬದಲಿಗೆ ಆರ್‌ಸಿಬಿಯ ಆಲ್‌ರೌಂಡರ್ ಶಹಬಾಜ್ ಅಹಮದ್ ಅವರು ಆಯ್ಕೆಯಾಗಿದ್ದರು. ಆದರೆ ಟೆಸ್ಟ್ ಸರಣಿಗೆ ಬಿಸಿಸಿಐ ಬೇರೆ ಅಟಗಾರರನ್ನು ಆಯ್ಕೆ ಮಾಡಲಿದ್ದು, ಸೌರಭ್ ಕುಮಾರ್ ಅವರಿಗೆ ಅವಕಾಶ ಸಿಗಲಿದೆ ಎನ್ನಲಾಗಿದೆ.
ಉತ್ತರ ಪ್ರದೇಶದ ಎಡಗೈ ಸ್ಪಿನ್ನರ್ ಸೌರಭ್ ಕುಮಾರ್ ಅವರು ಭಾರತ ಎ ತಂಡದ ಭಾಗವಾಗಿದ್ದಾರೆ. ಅವರು ಗಾಯದ ಸಮಸ್ಯೆಯಿಂದ ಮುಕ್ತಿ ಪಡೆಯದ ರವೀಂದ್ರ ಜಡೇಜಾ ಅವರ ಬದಲಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ. ಇನ್ನೆರಡು ದಿನಗಳಲ್ಲಿ ಇದರ ಪ್ರಕಟಣೆ ಹೊರಡಲಿದೆ,” ಎಂಬುದಾಗಿ ಕ್ರಿಕ್‌ಬಜ್ ವರದಿ ಮಾಡಿದೆ.
ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಅವರು ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಅವರ ಪರವಾಗಿ ಜಡೇಜಾ ಪ್ರಚಾರ ನಡೆಸುತ್ತಿದ್ದಾರೆ. ಇದೇ ವಿಚಾರದಲ್ಲಿ ಅವರು ನೆಟ್ಟಿಗರ ಕೆಂಗಣ್ಣಿಗೂ ಗುರಿಯಾಗಿದ್ದರು. ಟೀಮ್ ಇಂಡಿಯಾ ಜರ್ಸಿಯಲ್ಲಿ ಅವರು ಪತ್ನಿಯ ಪರ ಪ್ರಚಾರ ಮಾಡಿದ್ದರು. ಇದಕ್ಕೆ ಆಕ್ಷೇಪಗಳು ವ್ಯಕ್ತಗೊಂಡಿದ್ದವು
ಬಾಂಗ್ಲಾದೇಶ ಸರಣಿಗೆ ಟೆಸ್ಟ್ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್‌ಕೀಪರ್), ಕೆಎಸ್ ಭರತ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೌರಭ್ ಮಾರ್.