Veda Krishnamurthy: ಕರ್ನಾಟಕ ತಂಡಕ್ಕೆ ವೇದಾ ಕೃಷ್ಣಮೂರ್ತಿ ನಾಯಕಿ - Vistara News

ಕ್ರಿಕೆಟ್

Veda Krishnamurthy: ಕರ್ನಾಟಕ ತಂಡಕ್ಕೆ ವೇದಾ ಕೃಷ್ಣಮೂರ್ತಿ ನಾಯಕಿ

ಜನವರಿ 4ರಿಂದ 16ರವರೆಗೆ ನಡೆಯಲಿರುವ ಬಿಸಿಸಿಐ ಸೀನಿಯರ್‌ ಮಹಿಳೆಯರ ಏಕದಿನ ಕ್ರಿಕೆಟ್‌ ಟ್ರೋಫಿ(2023-24) ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ವೇದಾ ಕೃಷ್ಣಮೂರ್ತಿ ಮುನ್ನಡೆಸಲಿದ್ದಾರೆ.

VISTARANEWS.COM


on

Veda Krishnamurthy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತ ಮಹಿಳಾ ತಂಡದ ಹಿರಿಯ ಆಟಗಾರ್ತಿ ವೇದಾ ಕೃಷ್ಣಮೂರ್ತಿ(Veda Krishnamurthy) ಅವರು ಜನವರಿ 4ರಿಂದ 16ರವರೆಗೆ ನಡೆಯಲಿರುವ ಬಿಸಿಸಿಐ ಸೀನಿಯರ್‌ ಮಹಿಳೆಯರ ಏಕದಿನ ಕ್ರಿಕೆಟ್‌ ಟ್ರೋಫಿ(2023-24) ಟೂರ್ನಿಯಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸಲಿದ್ದಾರೆ. ಟೂರ್ನಿ ಭುವನೇಶ್ವರ ಮತ್ತು ಕಟಕ್‌ನಲ್ಲಿ ನಡೆಯಲಿದೆ.

15 ಆಟಗಾರ್ತಿಯರ ತಂಡವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಬುಧವಾರ ಪ್ರಕಟಿಸಿದೆ. ಅನುಭವಿ ಸ್ಪಿನ್ನರ್​ ರಾಜೇಶ್ವರಿ ಗಾಯಕ್ವಾಡ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ರಾಜೇಶ್ವರಿ ಇತ್ತೀಚೆಗೆ ಮುಕ್ತಾಯಕ ಕಂಡ ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾ ನಡುವಣ ಏಕೈಕ ಪಂದ್ಯಸ ಟೆಸ್ಟ್​ ಸರಣಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದ್ದರು.

ನಾಯಕಿಯಾಗಿರುವ ವೇದಾ ಕೃಷ್ಣಮೂರ್ತಿ ಅವರು ಭಾರತ ತಂಡದ ಪರ ಆಡದೆ 2020ರ ಬಳಿಕ ತಂಡದಲ್ಲಿ ಆಡಿಲ್ಲ. ಆದರೂ ಕೂಡ ಅವರ ಅನುಭವವನ್ನು ಪರಿಗಣಿಸಿ ಅವರಿಗೆ ತಂಡದ ಸಾರಥ್ಯ ನೀಡಲಾಗಿದೆ. ಡಬ್ಲ್ಯುಪಿಎಲ್​ನಲ್ಲಿ ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಇದು ವೇದಾ ಕೃಷ್ಣಮೂರ್ತಿ ಅವರಿಗೆ ಲಭಿಸಿದ ಉತ್ತಮ ವೇದಿಕೆಯಾಗಿದೆ. ಇಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದರೆ ಮತ್ತೆ ಭಾರತ ತಂಡದ ಬಾಗಿಲು ತೆರೆಯಬಹುದು. 31 ವರ್ಷದ ವೇದಾ ಚಿಕ್ಕಮಗಳೂರಿನವರಾಗಿದ್ದು, 18ರ ಹರೆಯದಲ್ಲೇ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ವೇದಾ ಮಧ್ಯಮ ಕ್ರಮಾಂಕದ ಬ್ಯಾಟರ್‌ ಹಾಗೂ ಅತ್ಯುತ್ತಮ ಫೀಲ್ಡರ್‌ ಆಗಿದ್ದಾರೆ.

ಇದನ್ನೂ ಓದಿ ಕೊನೆಗೂ ಸೋಲ್ಡ್​ ಆದ ಕನ್ನಡತಿ ವೇದಾ ಕೃಷ್ಣಮೂರ್ತಿ; ಯಾವ ತಂಡಕ್ಕೆ?

ಕರ್ನಾಟಕ ತಂಡ

ವೇದಾ ಕೃಷ್ಣಮೂರ್ತಿ (ನಾಯಕಿ), ದಿವ್ಯಾ ಜ್ಞಾನಾನಂದ, ಸಿ. ಪ್ರತ್ಯೂಷಾ, ವೃಂದಾ ದಿನೇಶ್‌, ಸಹನಾ ಎಸ್‌. ಪವಾರ್‌, ವಿ. ಚಂದು, ನಿಕಿ ಪ್ರಸಾದ್‌, ಪುಷ್ಪಾ ಕಿರೇಸೂರು, ಶಿಶಿರಾ ಎ. ಗೌಡ, ಜಿ.ಆರ್. ಪ್ರೇರಣಾ, ಸಂಜನಾ ಎಚ್. ಬಟ್ನಿ (ವಿಕೆಟ್‌ ಕೀಪರ್‌), ರೋಶಿನಿ ಕಿರಣ್, ರಾಜೇಶ್ವರಿ ಗಾಯಕ್ವಾಡ್​, ಪಿ. ರೋಹಿತಾ ಚೌಧರಿ, ಮಿಥಿಲಾ ವಿನೋದ್. ವಿ.ಆರ್‌. ವನಿತಾ (ಕೋಚ್‌), ಸುನೀತಾ ಅನಂತಕೃಷ್ಣನ್‌ (ಮ್ಯಾನೇಜರ್‌).

ಡಬ್ಲ್ಯುಪಿಎಲ್​ನಲ್ಲಿ ಆಡಲು ಕಾತರ

ಡಿಸೆಂಬರ್​ 9ರಂದು ನಡೆದಿದ್ದ ಮಹಿಳಾ ಪ್ರೀಮಿಯರ್ ಲೀಗ್(Women’s Premier League) 2024ರ ಹರಾಜಿನಲ್ಲಿ(WPL Auction 2024) ವೇದಾ ಕೃಷ್ಣಮೂರ್ತಿ ಅವರನ್ನು ಗುಜರಾತ್ ಜೈಂಟ್ಸ್ ತಂಡ ಮೂಲ ಬೆಲೆ 30 ಲಕ್ಷ ರೂ. ನೀಡಿ ಖರೀದಿ ಮಾಡಿದೆ. ಆರಂಭಿಕ ಹಂತದ ಬಿಡ್ಡಿಂಗ್​ನಲ್ಲಿ ಅವರು ಅನ್​ಸೋಲ್ಡ್​​ ಆಗಿದ್ದ ಅವರನ್ನು ಬಳಿಕ ದ್ವಿತೀಯ ಸುತ್ತಿನ ಬಿಡ್ಡಿಂಗ್​ನಲ್ಲಿ ಗುಜರಾತ್ ಜೈಂಟ್ಸ್ ತನ್ನ ಪಾಳಯಕ್ಕೆ ಸೇರಿಸಿಕೊಂಡಿತು. ಮೊದಲ ಹಂತದಲ್ಲಿ ಖರೀದಿ ಮಾಡದಿದ್ದಾಗ ನಿರಾಸೆಗೊಂಡಿದ್ದ ಅವರು ಬಳಿಕದ ಸುತ್ತಿನಲ್ಲಿ ಖರೀದಿಯಾದ ಕಾರಣ ಸಂತಸಗೊಂಡಿದ್ದರು.

2011 ರಲ್ಲಿ ಭಾರತ ವನಿತಾ ಕ್ರಿಕೆಟ್​ ತಂಡಕ್ಕೆ ಪದಾರ್ಪಣೆ ಮಾಡಿದ್ದ ವೇದಾ ಕೃಷ್ಣಮೂರ್ತಿ ಅವರು ಟೀಮ್ ಇಂಡಿಯಾ ಪರ 48 ಏಕ ದಿನ ಮತ್ತು 76 ಟಿ20 ಪಂದ್ಯಗಳನ್ನು ಆಡಿದ್ದಾರೆ. ಇದೇ ವರ್ಷ ಅವರು ಕರ್ನಾಟಕದ ಮಾಜಿ ಕ್ರಿಕೆಟಿಗ ಅರ್ಜುನ್ ಹೊಯ್ಸಳ ಅವರೊಂದಿಗೆ ಸಪ್ತಪದಿ ತುಳಿದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

IPL 2024: ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದ ಪಂದ್ಯಗಳು ಮುಕ್ತಾಯಕಂಡಿದ್ದು ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಮೊದಲ ಕ್ವಾಲಿಫೈಯರ್​ ಪಂದ್ಯ ನಾಳೆ(ಮಂಗಳವಾರ) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಆದರೆ, ಪ್ಲೇ ಆಫ್​ ಪಂದ್ಯಗಳಿಗೂ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈಗಾಗಲೇ ಲೀಗ್​ ಅಹಮದಾಬಾದ್​ ಸೇರಿ ಕೆಲವು ಕಡೆ ನಿಗದಿಯಾಗಿದ್ದ ಲೀಗ್​ ಪಂದ್ಯಗಳು ಮಳೆಯಿಂದ ರದ್ದಾದ ನಿದರ್ಶನವೂ ನಮ್ಮ ಕಣ್ಣ ಮುಂದಿದೆ. ಇದೀಗ ಪ್ಲೇ ಆಫ್​ ಪಂದ್ಯಗಳಿಗೆ(ipl playoffs rain rules) ಮಳೆ ನಿಯಮ ಹೇಗಿದೆ ಎಂಬ ಮಾಹಿತಿ ಇಂತಿದೆ.

ಮಳೆ ಬಂದರೆ?


ಐಪಿಎಲ್​ ಆಡಳಿತ ಮಂಡಳಿ ಮತ್ತು ಬಿಸಿಸಿಐ ಟೂರ್ನಿ ಆರಂಭಕ್ಕೂ ಮುನ್ನವೇ ಲೀಗ್​ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ಅದರಂತೆ ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನಿಗದಿಪಡಿಸಿತ್ತು. ಆದರೆ, ನಾಕೌಟ್ ಹಂತಕ್ಕೆ ಮೀಸಲು ದಿನವನ್ನು (Reserve day) ಇರಿಸಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಇದನ್ನೂ ಓದಿ IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಈ ನಿಯಮ ಫೈನಲ್​ ಪಂದ್ಯಕ್ಕೂ ಅನ್ವಯವಾಗುತ್ತದೆ. ಒಂದೊಮ್ಮೆ ಮಳೆಯಿಂದ ಎಲ್ಲ ಪಂದ್ಯಗಳು ರದ್ದಾದದರೆ ಆಗ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​

Continue Reading

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
IPL 2024
ಕ್ರೀಡೆ33 mins ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 202452 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್58 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ1 hour ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ1 hour ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ1 hour ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ1 hour ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ1 hour ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ1 hour ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ2 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌