Site icon Vistara News

Vinesh Phogat: ಫೈನಲ್​ಗೆ ಅನರ್ಹ; ವಿನೇಶ್ ಫೋಗಟ್​ ಕಡು ವೈರಿ ಬ್ರಿಜ್ ಭೂಷಣ್ ಮಗನ ಪ್ರತಿಕ್ರಿಯೆ ಏನು?

Vinesh Phogat

Vinesh Phogat: Brij Bhushan's son Karan reacts to Vinesh Phogat's disqualification from Paris Olympics

ನವದೆಹಲಿ: ಅಪ್ಪನ(ಬ್ರಿಜ್​ ಭೂಷಣ್ ಶರಣ್​ ಸಿಂಗ್​) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುಂತೆ ಮಾಡಿದ್ದ ವಿನೇಶ್ ಫೋಗಟ್(Vinesh Phogat)​ ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಅನರ್ಹಗೊಂಡ ಬಗ್ಗೆ ಬ್ರಿಜ್​ ಭೂಷಣ್ ಪುತ್ರ(Brij Bhushan’s son Karan), ಬಿಜೆಪಿ ಸಂಸದ ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಪ್ರತಿಕ್ರಿಯೆ ನೀಡಿದ್ದಾರೆ.

​ಸಂಸತ್​ ಅಧಿವೇಶನಕ್ಕೆ ತೆರಳುತ್ತಿದ್ದ ಕರಣ್‌ ಭೂಷಣ್‌ ಸಿಂಗ್‌ ಮಾಧ್ಯಮದ ಜತೆ ಮಾತನಾಡುವ ವೇಳೆ, “ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಿದ್ದು ದೇಶಕ್ಕೆ ಉಂಟಾದ ನಷ್ಟ. ಫೆಡರೇಶನ್ ಇದನ್ನು ಪರಿಗಣನೆಗೆ ತೆಗೆದುಕೊಂಡು ಮುಂದೆ ಏನು ಮಾಡಬಹುದು ಎಂಬುದನ್ನು ಪರಿಶೀಲನೆ ನಡೆಸುತ್ತದೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಕರಣ್‌ ಭೂಷಣ್‌ ಸಿಂಗ್‌ (Karan Bhushan Singh) ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ ಕೈಸರ್‌ಗಂಜ್(Kaiserganj) ಲೋಕಸಭಾ ಕ್ಷೇತ್ರದಿಂದ 1.4 ಲಕ್ಷ ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದರು. ತಂದೆ ಬ್ರಿಜ್​ ಭೂಷಣ್(Brij Bhushan)​ 2019ರ ಲೋಕಸಭಾ ಚುನಾವಣೆಯಲ್ಲಿ, ಕೈಸರ್‌ಗಂಜ್‌ನಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. 

ಕೈಸರ್‌ಗಂಜ್‌ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಕಳೆದ ಮೂರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಕಾರಣದಿಂದ ನಾಲ್ಕನೇ ಬಾರಿ ಟಿಕೆಟ್‌ ಕೈತಪ್ಪಿತ್ತು. ಹೀಗಾಗಿ ಅವರ ಪುತ್ರನಿಗೆ ಬಿಜೆಪಿ ಮಣೆ ಹಾಕಲಾಗಿತ್ತು.

ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಪೋಗಟ್ ಅವರು ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡುತ್ತಿದ್ದಾರೆ ಹಾಗೂ ಭಾರತೀಯ ಕುಸ್ತಿ ಫೆಡರೇಶನ್ ಅಧಿಕಾರಿಗಳು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅಧ್ಯಕ್ಷರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದರು. ಇದೇ ವಿಚಾರವಾಗಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಒಲಿಂಪಿಕ್ ಪದಕ ವಿಜೇತರಾದ ಭಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ರವಿ ದಹಿಯಾ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್​ ಅವರೇ ಆಗಿದ್ದರು.

ಇದನ್ನೂ ಓದಿ Vinesh Phogat: ವಿನೇಶ್ ಪದಕಗಳನ್ನು ಮೀರಿದ ವಿಜೇತೆ: ಆಲಿಯಾ, ವಿಕ್ಕಿ ಸೇರಿದಂತೆ ಬಾಲಿವುಡ್‌ ಸೆಲೆಬ್ರಿಟಿಗಳ ಬೆಂಬಲ!

50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶ್​ ಫೈನಲ್​ ಪಂದ್ಯಕ್ಕೂ ಮುನ್ನ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Exit mobile version