Site icon Vistara News

Vinesh Phogat: ಬ್ರಿಜ್‌ಭೂಷಣ್ ವಿರುದ್ಧ ಮತ್ತೆ ಸಮರಕ್ಕಿಳಿದ ವಿನೇಶ್​ ಫೋಗಟ್; ದೆಹಲಿ ಪೊಲೀಸರ ವಿರುದ್ಧ ಗಂಭೀರ ಆರೋಪ

Vinesh Phogat

Vinesh Phogat: Court steps in after security of wrestlers testifying against Brij Bhushan removed

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ ಫೈನಲ್​ನಲ್ಲಿ 100 ಗ್ರಾಂ ಹೆಚ್ಚುವರಿ ತೂಕದಿಂದಾಗಿ ಅನರ್ಹಗೊಂಡು ಕುಸ್ತಿ ಪದಕವೊಂದನ್ನು ತಪ್ಪಿಸಿಕೊಂಡಿದ್ದ ವಿನೇಶ್​ ಫೋಗಟ್(Vinesh Phogat), ಕಳೆದ ವಾರ ತವರಿಗೆ ಮರಳಿದ್ದರು. ಇದೀಗ ದೆಹಲಿ ಪೊಲೀಸರ(Delhi Police) ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan) ವಿರುದ್ಧ ಸಾಕ್ಷಿ ಹೇಳಲಿರುವ ಮಹಿಳಾ ಕುಸ್ತಿಪಟುಗಳ(Women wrestlers) ಭದ್ರತೆಯನ್ನು ಹಿಂಪಡೆದಿರುವು ನಿಜಕ್ಕೂ ಖಂಡನೀಯ ಎಂದು ಆರೋಪ ಮಾಡಿದ್ದಾರೆ.

ಸಾಕ್ಷಿ ಹೇಳಲು ಹೊರಟಿರುವ ಕುಸ್ತಿಪಟುಗಳ ಭದ್ರತೆಯನ್ನು ಹಿಂತೆಗೆದುಕೊಂಡಿರುವುದು ಕುಸ್ತಿಪಟುಗಳು ಸುರಕ್ಷಿತವಾಗಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಸಾಕ್ಷ್ಯಗಳನ್ನು ನೀಡುವ ಅವರ ಸಾಮರ್ಥ್ಯದ ಮೇಲೆ ಪ್ರಭಾವ ಬೀರಬಹುದು ಎಂದು ವಿನೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಟ್ವಿಟರ್​ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ವಿನೇಶ್​, ಭಾರತದ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ)ವಿರುದ್ಧದ ತನ್ನ ಹೋರಾಟ ಮುಂದುವರಿಯಲಿದೆ. ಸತ್ಯವೇ ಮೇಲುಗೈ ಸಾಧಿಸುತ್ತದೆ ಬರೆದುಕೊಂಡಿದ್ದಾರೆ. ಜತೆಗೆ ಮಹಿಳಾ ಕುಸ್ತಿಪಟುಗಳಿಗೆ ಭದ್ರತೆಯನ್ನು ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರಾ ವಿನೇಶ್​?

ವಿನೇಶ್​ ರಾಜಕೀಯಕ್ಕೆ ಎಂಟ್ರಿ(Vinesh Phogat Join Politics) ಕೊಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ವಿನೇಶ್ ಫೋಗಟ್ ಮುಂಬರುವ ಹರಿಯಾಣ(Haryana Polls) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು ಮಂಗಳವಾರ ಐಎಎನ್‌ಎಸ್‌ಗೆ ತಿಳಿಸಿವೆ. ಆದರೆ, ಸಕ್ರಿಯ ರಾಜಕಾರಣಕ್ಕೆ ಬರುವುದಿಲ್ಲ ಎಂದು ವಿನೇಶ್ ಈ ಹಿಂದೆಯೇ ಹೇಳಿದ್ದರು. ಆದರೆ, ಇತ್ತೀಚಿನ ವರದಿಯ ಪ್ರಕಾರ, ಕೆಲವು ರಾಜಕೀಯ ಪಕ್ಷಗಳು ವಿನೇಶ್​ ಅವರನ್ನು ರಾಜಕೀಯಕ್ಕೆ ಬರುವಂತೆ ಮನವೊಲಿಸಲು ಪ್ರಯತ್ನಿಸುತ್ತಿವೆ ಎನ್ನಲಾಗಿದೆ.

ಇದನ್ನೂ ಓದಿ Vinesh Phogat: ಸಹೋದರಿಯ ವಿರುದ್ಧವೇ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ವಿನೇಶ್​ ಫೋಗಟ್​?

ವಿನೇಶ್ ಯಾವ ಪಕ್ಷ ಸೇರಲಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲವಾದರೂ, ಮೂಲಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ. ವಿನೇಶ್​ ಪ್ಯಾರಿಸ್​ನಿಂದ ಭಾರತಕ್ಕೆ ಬಂದ ವೇಳೆ ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಸಂಸದ ದೀಪೇಂದರ್ ಹೂಡಾ ಅವರು ಭರ್ಜರಿ ಸ್ವಾಗತ ಕೋರಿದ್ದರು. ಬಳಿಕ ತವರಿನಲ್ಲಿಯೂ ವಿನೇಶ್​ಗೆ ಹಲವು ಕಾಂಗ್ರೆಸ್​ ನಾಯಕರು ಮತ್ತು ರೈತ ನಾಯಕರು ಸನ್ಮಾನ ಮಾಡಿದ್ದರು.

ಮೂಲಗಳ ಪ್ರಕಾರ ಮಾಜಿ ಕಾಮನ್​ವೆಲ್ತ್​ ಗೇಮ್​ ಚಿನ್ನದ ಪದಕ ವಿಜೇತೆ, ಬಿಜೆಪಿ ಪಕ್ಷದ ಕಾರ್ಯಕರ್ತೆ ಬಬಿತಾ ಫೋಗಟ್(Babita Phogat) ವಿರುದ್ಧ ವಿನೇಶ್​ ಅವರು ಈ ಬಾರಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ವಿನೇಶ್​ ಮತ್ತು ಬಬಿತಾ ಸಹೋದರಿಗಳಾಗಿದ್ದಾರೆ. ವಿನೇಶ್​ ಮಾತ್ರವಲ್ಲದೆ ಬಜರಂಗ್​ ಪೂನಿಯಾ ಕೂಡ ಕಾಂಗ್ರೆಸ್​ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಾರೆ ಎನ್ನಲಾಗಿದೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಚುನಾವಣಾ ಆಯೋಗವು ಕಳೆದ ಶುಕ್ರವಾರ ಚುನಾವಣೆ ದಿನಾಂಕ ಘೋಷಣೆ ಮಾಡಿತ್ತು. ಅಕ್ಟೋಬರ್ 1ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಬ್ರಿಜ್​ ಭೂಷಣ್​ ವಿರುದ್ಧದ ಪ್ರತಿಭಟನೆ ವೇಳೆ ವಿನೇಶ್​ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಅಲ್ಲದೆ ತಮಗೆ ನೀಡಿದ್ದ ಖೇಲ್​ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ದೆಹಲಿಯ ಕರ್ತವ್ಯ ಪಥದಲ್ಲಿ ತ್ಯಜಿಸುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಬಳಿಕ ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಜತೆ ಕಾಣಿಸಿಕೊಂಡಿದ್ದರು. ಇದನೆಲ್ಲ ನೋಡುವಾಗ ಅವರು ಈ ಬಾರಿ ಕಾಂಗ್ರೆಸ್​ ಪಕ್ಷದಿಂದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

Exit mobile version