ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (WFI) ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ಗಂಭೀರ ಆರೋಪ ಮಾಡಿದ್ದಾರೆ. ಆದರೆ ಫೆಡರೇಷನ್ ಈ ಆರೋಪವನ್ನು ತಳ್ಳಿಹಾಕಿದೆ.
“ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಲ್ಲಿ ನನ್ನ ಭಾಗವಹಿಸುವಿಕೆ ತಡೆಯಲು ಡಬ್ಲ್ಯುಎಫ್‌ಐ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಡೋಪಿಂಗ್ ಪ್ರಕರಣದಲ್ಲಿ ತನ್ನನ್ನು ಸಿಲುಕಿಸುವ ಭಯವಿದೆ. ನಾನು ಅಭ್ಯಾಸದ ವೇಳೆ ಸೇವಿಸುವ ನೀರಿನಲ್ಲಿ ಡೋಪಿಂಗ್ ಅಂಶವುಳ್ಳ ಕೆಲ ರಾಸಾಯನಿಕವನ್ನು ಬರೆಸಿರುವ ಅನುಮಾನವಿದೆ” ಎಂದು ವಿನೇಶ್ ಫೋಗಟ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಬ್ಲ್ಯುಎಫ್‌ಐ, ವಿನೇಶ್ ಅವರ ಕೋರಿಕೆಯ ಇ-ಮೇಲ್ ಮಾರ್ಚ್ 18 ರಂದು ಬಂದಿತ್ತು. ಆದರೆ ನೋಂದಣಿ ದಿನಾಂಕ ಮಾರ್ಚ್ 11 ಆಗಿದ್ದರಿಂದ ಅದಾಗಲೇ ಸ್ಪರ್ಧಿಗಳು, ತರಬೇತುದಾರರು ಮತ್ತು ವೈದ್ಯಕೀಯ ಸಿಬ್ಬಂದಿ ಪ್ರವೇಶಗಳನ್ನು ಯುಡಬ್ಲ್ಯುಡಬ್ಲ್ಯುಗೆ ಕಳುಹಿಸಲಾಗಿತ್ತು ಎಂದು ಸ್ಪಷ್ಟನೆ ನೀಡಿದೆ.
19th अप्रैल को एशियन ओलम्पिक क्वालीफाई टूर्नामेंट शुरू होने जा रहा है। मेरे द्वारा लगातार एक महीने से भारत सरकार (SAI,TOPS) सभी से मेरे कोच और फिजियो की ACCREDITATION (मान्यता) के लिए रिक्वेस्ट की जा रही है। ACCREDITATION के बिना मेरे कोच और फिजियो का मेरे साथ कम्पटीशन ARENA में…
— Vinesh Phogat (@Phogat_Vinesh) April 12, 2024
ಇತ್ತೀಚೆಗೆ ವಿನೇಶ್ ಫೋಗಟ್(Vinesh Phogat) ಸೀನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನ 55 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. 55 ಕೆಜಿ ವಿಭಾಗದಲ್ಲಿ ವಿನೇಶ್ ಅವರು ಮಧ್ಯಪ್ರದೇಶದ ಜ್ಯೋತಿ ಅವರನ್ನು 4-0 ಅಂತರದಿಂದ ಸೋಲಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ರೈಲ್ವೆ ಸ್ಪೋರ್ಟ್ಸ್ ಪ್ರಮೋಷನ್ ಬೋರ್ಡ್ (ಆರ್‌ಎಸ್‌ಪಿಬಿ) ತಂಡದ ಪರ 29 ವರ್ಷದ ವಿನೇಶ್ ಕಣಕ್ಕಿಳಿದಿದ್ದರು.
ಇದನ್ನೂ ಓದಿ Vinesh Phogat: ಯೋಗೇಶ್ವರ್ ದತ್ ಒಬ್ಬ ಗುಲಾಮ; ವಿನೇಶ್ ಫೋಗಟ್ ಟೀಕೆ
इस छोटी सी ख़ुशी में आप सभी के साथ के लिए शुक्रिया 🙏🙌 pic.twitter.com/P67tn1GOeJ
— Vinesh Phogat (@Phogat_Vinesh) February 5, 2024
ಭಾರತೀಯ ಕುಸ್ತಿ ಒಕ್ಕೂಟದ ವಿರುದ್ಧ ತೊಡೆತಟ್ಟಿದ್ದ ವಿನೇಶ್ ಅವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ನನ್ನನ್ನು ಈ ಪರಿಸ್ಥಿತಿಗೆ ತಂದ ಸರ್ವಶಕ್ತನಿಗೆ ತುಂಬಾ ಧನ್ಯವಾದಗಳು ಎಂದು ಅವರು ಟ್ವೀಟ್ ಮಾಡಿ ತಾವು ಪಡೆದ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ(Khel Ratna) ಮತ್ತು ಅರ್ಜುನ್(Arjuna ) ಪ್ರಶಸ್ತಿಯನ್ನು ಹಿಂದಿರುಗಿಸಲಿದ್ದೇನೆ ಎಂಬ ಘೋಷಣೆ ಮಾಡಿದ್ದರು. ಇದಾದ ಬಳಿಕ ಈ ಪ್ರಶಸ್ತಿಗಳನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ(Kartavya Path) ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು. ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಸಿಂಗ್ ಅವರು ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದುದನ್ನು ಖಂಡಿಸಿ ಅವರು ಈ ರೀತಿ ಮಾಡಿದ್ದರು.
ಆರು ಬಾರಿ ಬಿಜೆಪಿ ಸಂಸದರಾಗಿದ್ದ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಕ್ಷಿ ಮಲಿಕ್ ಸೇರಿದಂತೆ ದೇಶದ ಉನ್ನತ ಕುಸ್ತಿಪಟುಗಳು ಆರೋಪಿಸಿದ ನಂತರ ಅವರು ರಾಜೀನಾಮೆ ನೀಡಬೇಕಾಯಿತು. ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಸೇರಿದಂತೆ ಅಗ್ರ ಕುಸ್ತಿಪಟುಗಳು ಕಳೆದ ವರ್ಷ ಜನವರಿಯಲ್ಲಿ ಬಿಜೆಪಿ ಸಂಸದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೀದಿಗಿಳಿದಿದ್ದರು. ಈ ಪ್ರತಿಭಟನೆಯ ಪ್ರಮುಖ ರುವಾರಿ ಕೂಡ ವಿನೇಶ್ ಅವರೇ ಆಗಿದ್ದರು.