Site icon Vistara News

Vinesh Phogat: ತೀವ್ರ ಅಸ್ವಸ್ಥಗೊಂಡ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

Vinesh Phogat

ಪ್ಯಾರಿಸ್‌: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಫೈನಲ್​ ಪಂದ್ಯಾಟಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಅನರ್ಹಗೊಂಡಿರುವ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್(Vinesh Phogat) ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ(Dehydration)ನಿಂದಾಗಿ ತಲೆಸುತ್ತಿ ಬಿದ್ದ ವಿನೇಶ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಫೈನಲ್‌ಗೆ ಪ್ರವೇಶಿಸಿದ ಬಳಿಕ ತಮ್ಮ ತೂಕ ಇಳಿಸಿಕೊಳ್ಳಲು ರಾತ್ರಿಪೂರ್ತಿ ವರ್ಕ್‌ಔಟ್‌ ಮಾಡಿದ್ದ ವಿನೇಶ್‌, ಇಂದು ನಿರ್ಜಲೀಕರಣದಿಂದಾಗಿ ಅಸ್ವಸ್ತಗೊಂಡಿದ್ದಾರೆ ಎನ್ನಲಾಗಿದೆ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ. 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಇದೀಗ ನಿಗದಿತ ತೂಕಕ್ಕಿಂತ 100 ಗ್ರಾಂ ಹೆಚ್ಚು ಇರುವ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ.

ಇನ್ನು ಈ ಬಗ್ಗೆ ಈ ಆಘಾತದಲ್ಲಿರುವ ವಿನೇಶ್​ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಾಂತ್ವನ ಹೇಳಿದ್ದಾರೆ. “ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನಿಮಗೆ ಮಾತ್ರವಲ್ಲದೆ ಇಡೀ ದೇಶವಾಸಿಗಳಿಗೆ ನೋವು ತಂದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಬಲವಾಗಿ ಹಿಂತಿರುಗಿ! ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ” ಎಂದು ಮೋದಿ ಟ್ವೀಟ್​ ಮಾಡಿದ್ದಾರೆ.

ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ. ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​, ಕ್ವಾರ್ಟರ್​ ಫೈನಲ್​ ಮತ್ತು ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್ ಅವರು ತನಗಿಂತ ಮೇಲಿನ ಶ್ರೇಯಾಂಕದ, ಅದರಲ್ಲೂ ಪ್ರೀ ಕ್ವಾರ್ಟರ್​ನಲ್ಲಿ 4 ಬಾರಿಯ ವಿಶ್ವ ಚಾಂಪಿಯನ್​ ಹಾಗೂ ಸೋಲನ್ನೇ ಕಾಣದ ಕುಸ್ತಿಪಟುವಿಗೆ ಸೋಲುಣಿಸಿದ್ದು ನಿಜಕ್ಕೂ ಸಣ್ಣ ಸಾಧನೆಯಲ್ಲ. 8 ಗಂಟೆಯ ಅಂತರದಲ್ಲಿ ಮೂರು ಗೆಲುವು ಸಾಧಿಸಿ ಅವರು ಫೈನಲ್​ ಪ್ರವೇಶಿಸಿದ್ದರು. ಇಡೀ ದಿನದಲ್ಲಿ ಆಡಿದ ಮೂರು ಬೌಟ್‌ಗಳಲ್ಲಿಯೂ ವಿನೇಶ್​ ಪಾರಮ್ಯ ಮೆರೆದಿದ್ದರು.

ಇದನ್ನೂ ಓದಿ:Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Exit mobile version