Vinesh Phogat: ಪ್ಯಾರಿಸ್​ನಲ್ಲಿ ಮೊದಲ ಚಿನ್ನ ಗೆಲ್ಲಲಿ ವಿನೇಶ್​ ಫೋಗಟ್; ಇಂದು ಫೈನಲ್​ - Vistara News

ಕ್ರೀಡೆ

Vinesh Phogat: ಪ್ಯಾರಿಸ್​ನಲ್ಲಿ ಮೊದಲ ಚಿನ್ನ ಗೆಲ್ಲಲಿ ವಿನೇಶ್​ ಫೋಗಟ್; ಇಂದು ಫೈನಲ್​

Vinesh Phogat: ಒಲಿಂಪಿಕ್ಸ್​ನಲ್ಲಿ ಫೈನಲ್​ಗೇರಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿನೇಶ್​, ಪ್ಯಾರಿಸ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಇರಾದೆಯೊಂದಿಗೆ ಇಂದು ಕಣಕ್ಕಿಳಿಯಲಿದ್ದಾರೆ

VISTARANEWS.COM


on

Vinesh Phogat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿರುವ ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರು ಇಂದು(ಬುಧವಾರ) ರಾತ್ರಿ ನಡೆಯುವ ಫೈನಲ್​ ಪಂದ್ಯದಲ್ಲಿ ಚಿನ್ನದ ಪದಕಕ್ಕಾಗಿ ಅಖಾಡಕ್ಕೆ ಇಳಿಯಲಿದ್ದಾರೆ. ಫೈನಲ್​ನಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ವಿಜೇತೆ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಸವಾಲು ಎದುರಿಸಲಿದ್ದಾರೆ. ಪಂದ್ಯ ರಾತ್ರಿ 11. 23ಕ್ಕೆ ನಡೆಯಲಿದೆ.

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​, ಕ್ವಾರ್ಟರ್​ ಫೈನಲ್​ ಮತ್ತು ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್ ಅವರು ತನಗಿಂತ ಮೇಲಿನ ಶ್ರೇಯಾಂಕದ, ಅದರಲ್ಲೂ ಪ್ರೀ ಕ್ವಾರ್ಟರ್​ನಲ್ಲಿ 4 ಬಾರಿಯ ವಿಶ್ವ ಚಾಂಪಿಯನ್​ ಹಾಗೂ ಸೋಲನ್ನೇ ಕಾಣದ ಕುಸ್ತಿಪಟುವಿಗೆ ಸೋಲುಣಿಸಿದ್ದು ನಿಜಕ್ಕೂ ಸಣ್ಣ ಸಾಧನೆಯಲ್ಲ. 8 ಗಂಟೆಯ ಅಂತರದಲ್ಲಿ ಮೂರು ಗೆಲುವು ಸಾಧಿಸಿ ಅವರು ಫೈನಲ್​ ಪ್ರವೇಶಿಸಿದ್ದರು. ಇಡೀ ದಿನದಲ್ಲಿ ಆಡಿದ ಮೂರು ಬೌಟ್‌ಗಳಲ್ಲಿಯೂ ವಿನೇಶ್​ ಪಾರಮ್ಯ ಮೆರೆದಿದ್ದು ವಿಶೇಷ.

ಒಲಿಂಪಿಕ್ಸ್​ನಲ್ಲಿ ಫೈನಲ್​ಗೇರಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿನೇಶ್​, ಪ್ಯಾರಿಸ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಇರಾದೆಯೊಂದಿಗೆ ಇಂದು ಕಣಕ್ಕಿಳಿಯಲಿದ್ದಾರೆ. ಸದ್ಯ ಮೂರು ಕಂಚಿನ ಪದಕ ಗೆದ್ದಿರುವ ಭಾರತ, ನಾಲ್ಕನೆ ಪದಕದ ಕಾತರದಲ್ಲಿದೆ. ಹರಿಯಾಣದ 29 ವರ್ಷದ ವಿನೇಶ್​ ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಕ್ಯೂಬಾದ ಯಸ್ನಿಲಿಸ್​ ಗುಜ್ಮನ್​ ಲೋಪೆಜ್​ ವಿರುದ್ಧ 5-0 ಅಂಕಗಳಿಂದ ಸುಲಭ ಗೆಲುವು ದಾಖಲಿಸಿ ಫೈನಲ್​ಗೆ ಮುನ್ನಡೆದಿದ್ದರು.

ಮಹಿಳಾ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಒಲಿಯುವ 2ನೇ ಪದಕ ಇದಾಗಿದೆ. ಇದಕ್ಕೂ ಮುನ್ನ ರಿಯೊ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್ ಅವರು ಕಂಚು ಗೆದ್ದಿದ್ದರು. ಇದೀಗ ವಿನೇಶ್​ ಐತಿಹಾಸಿಕ ಪದಕ ಗೆಲ್ಲಲು ಸಜ್ಜಾಗಿದ್ದಾರೆ. ವಿನೇಶ್​ಗೆ ಇದು ಮೂರನೇ ಒಲಿಂಪಿಕ್ಸ್​ ಕೂಟವಾಗಿದೆ. 2016ರ ರಿಯೊ ಒಲಿಂಪಿಕ್ಸ್​ನಲ್ಲಿ ಮಂಡಿನೋವಿನಿಂದ ಸಮಸ್ಯೆಯಾಗಿತ್ತು. 2021ರ ಟೋಕಿಯೊದಲ್ಲಿ ಅನಿರೀಕ್ಷಿತ ಸೋಲು ಕಂಡು ಹೊರಬಿದ್ದರು. ಇದೀಗ ಮೂರನೇ ಪ್ರಯತ್ನದಲ್ಲಿ ಚೊಚ್ಚಲ ಪದಕ ಗೆಲ್ಲುವ ತವಕದಲ್ಲಿದ್ದಾರೆ.

ಭಾರತದ ಕುಸ್ತಿ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು​ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ನಡೆಸಿ ನಡು ರಸ್ತೆಯಲ್ಲೇ ಪೊಲೀಸರಿಂದ ಲಾಠಿ ಏಟು ತಿಂದು ಬಂಧನಕ್ಕೆ ಒಳಗಾಗಿದ್ದ ವಿನೇಶ್​ಗೆ ಅಂದು ಯಾರು ಕೂಡ ಬೆಂಬಲ ಸೂಚಿಸಿರಲಿಲ್ಲ. ಇಂದು ಇದೇ ಹೆಣ್ಣು ಮಗಳು ದೇಶಕ್ಕಾಗಿ ಪದಕ ಗೆದ್ದು ಎಲ್ಲ ಆಡಳಿತ ವ್ಯವಸ್ಥೆಯನ್ನು ತನ್ನ ಸಾಧನೆ ಮುಂದೆ ತಲೆ ತಗ್ಗಿಸುವಂತೆ ಮಾಡಿದ್ದಾಳೆ.

ಇದನ್ನೂ ಓದಿ Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ

ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಅತ್ಯಂತ ರೋಚಕ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ನಾಲ್ಕು ಬಾರಿಯ ವಿಶ್ವ ಚಾಂಪಿಯನ್​, ಸೋಲನ್ನೇ ಕಾಣದ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಮೂಲಕ ಸುಸಾಕಿ ಅವರಿಗೆ ಮೊದಲ ಸೋಲಿನ ರುಚಿ ತೋರಿಸಿದರು.

ಸಸಾಕಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಆಘಾತಕಾರಿ ಸೋಲು ಇದಾಗಿದೆ. ಈ ಪಂದ್ಯಕ್ಕೂ ಮುನ್ನ 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸುಸಾಕಿ ಎಲ್ಲ ಪಂದ್ಯವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್​ ಹಾಕುವಲ್ಲಿ ಭಾರತೀಯ ಕುಸ್ತಿಪಟು ಯಶಸ್ಸು ಕಂಡಿದ್ದಾರೆ. ಈ ಗೆಲುವು ಸಾಧಿಸಿದಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಯಂತೆ ಅವರು ಫೈನಲ್​ ಪ್ರವೇಶಿಸಿ ಪದಕವೊಂದನ್ನು ಖಾತ್ರಿಪಡಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Vinesh Phogat: ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರಿಗೆ ಆಘಾತವೊಂದು ಎದುರಾಗಿದೆ. ಅವರ ತೂಕ ವಿಭಾಗದಲ್ಲಿ 50 ಕೆಜಿಗಿಂತ 100 ಗ್ರಾ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ ಎಂದು ವರದಿಯಾಗಿದೆ.

VISTARANEWS.COM


on

Vinesh Phogat
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(paris olympics) ಫೈನಲ್​ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿರುವ ತವಕದಲ್ಲಿದ್ದ ಭಾರತದ ತಾರಾ ಮಹಿಳಾ ಕುಸ್ತಿಪಟು ವಿನೇಶ್​ ಫೋಗಟ್(Vinesh Phogat)​ ಅವರಿಗೆ ಆಘಾತವೊಂದು ಎದುರಾಗಿದೆ. ಅವರ ತೂಕ ವಿಭಾಗದಲ್ಲಿ 50 ಕೆಜಿಗಿಂತ 100 ಗ್ರಾಂ ಹೆಚ್ಚು ಇದ್ದ ಕಾರಣಕ್ಕೆ ಅವರನ್ನು ಫೈನಲ್​ನಿಂದ ಅನರ್ಹ ಮಾಡಲಾಗಿದೆ ಎಂದು ವರದಿಯಾಗಿದೆ. ಅವರು ಇಂದು(ಬುಧವಾರ) ರಾತ್ರಿ ನಡೆಯುವ ಫೈನಲ್​ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಸವಾಲು ಎದುರಿಸಬೇಕಿತ್ತು. ವಿನೇಶ್​ ಫೋಗಟ್​ ಅವರನ್ನು ಅನರ್ಹ ಮಾಡಿದ ಕುರಿತು ಭಾರತದ ನಿಯೋಗದಿಂದ ದೂರ ದಾಖಲಿಸಲಾಗಿದೆ.

ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಕೂಡ ವಿನೇಶ್ ಫೋಗಟ್ ಅನರ್ಹತೆಯನ್ನು ಖಚಿತಪಡಿಸಿದೆ. ವಿನೇಶ್ ಅವರು 50 ಕೆಜಿ ತೂಕ ವಿಭಾಗದಲ್ಲಿ ಸ್ಪರ್ಧಿಸಿದ್ದರು, ಆದರೆ ಅವರ ತೂಕ ನಿಗದಿತ ಮಿತಿಗಿಂತ ಹೆಚ್ಚಿರುವುದರಿಂದ ಅವರನ್ನು ಕುಸ್ತಿ ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಿ ನಾವು ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಗೆ ದೂರು ದಾಖಲಿಸಿದ್ದೇವೆ ಎಂದು ಭಾರತೀಯ ಒಲಿಂಪಿಕ್​​ ಸಮಿತಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಮಂಗಳವಾರ ನಡೆದಿದ್ದ ಪ್ರೀ ಕ್ವಾರ್ಟರ್​, ಕ್ವಾರ್ಟರ್​ ಫೈನಲ್​ ಮತ್ತು ಸೆಮಿಫೈನಲ್​ ಪಂದ್ಯದಲ್ಲಿ ವಿನೇಶ್ ಅವರು ತನಗಿಂತ ಮೇಲಿನ ಶ್ರೇಯಾಂಕದ, ಅದರಲ್ಲೂ ಪ್ರೀ ಕ್ವಾರ್ಟರ್​ನಲ್ಲಿ 4 ಬಾರಿಯ ವಿಶ್ವ ಚಾಂಪಿಯನ್​ ಹಾಗೂ ಸೋಲನ್ನೇ ಕಾಣದ ಕುಸ್ತಿಪಟುವಿಗೆ ಸೋಲುಣಿಸಿದ್ದು ನಿಜಕ್ಕೂ ಸಣ್ಣ ಸಾಧನೆಯಲ್ಲ. 8 ಗಂಟೆಯ ಅಂತರದಲ್ಲಿ ಮೂರು ಗೆಲುವು ಸಾಧಿಸಿ ಅವರು ಫೈನಲ್​ ಪ್ರವೇಶಿಸಿದ್ದರು. ಇಡೀ ದಿನದಲ್ಲಿ ಆಡಿದ ಮೂರು ಬೌಟ್‌ಗಳಲ್ಲಿಯೂ ವಿನೇಶ್​ ಪಾರಮ್ಯ ಮೆರೆದಿದ್ದು ವಿಶೇಷ.

ಒಲಿಂಪಿಕ್ಸ್​ನಲ್ಲಿ ಫೈನಲ್​ಗೇರಿದ ಭಾರತದ ಮೊದಲ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಿನೇಶ್​, ಪ್ಯಾರಿಸ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆಲ್ಲುವ ಇರಾದೆಯೊಂದಿಗೆ ಇಂದು ಕಣಕ್ಕಿಳಿಯಬೇಕಿತ್ತು. ಹರಿಯಾಣದ 29 ವರ್ಷದ ವಿನೇಶ್​ ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್​ ಪಂದ್ಯದಲ್ಲಿ ಕ್ಯೂಬಾದ ಯಸ್ನಿಲಿಸ್​ ಗುಜ್ಮನ್​ ಲೋಪೆಜ್​ ವಿರುದ್ಧ 5-0 ಅಂಕಗಳಿಂದ ಸುಲಭ ಗೆಲುವು ದಾಖಲಿಸಿ ಫೈನಲ್​ಗೆ ಮುನ್ನಡೆದಿದ್ದರು.

ಇದನ್ನೂ ಓದಿ Paris Olympics 2024 : ಸೆಮಿಫೈನಲ್​​​​ನಲ್ಲಿ ಭಾರತ ಹಾಕಿ ತಂಡಕ್ಕೆ ಆಘಾತಕಾರಿ ಸೋಲು, ಇನ್ನೂ ಇದೆ ಪದಕ ಗೆಲ್ಲುವ ಅವಕಾಶ

ಮಹಿಳಾ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಒಲಿಯುವ 2ನೇ ಪದಕ ಇದಾಗಿತ್ತು. ಇದಕ್ಕೂ ಮುನ್ನ ರಿಯೊ ಒಲಿಂಪಿಕ್ಸ್‌ನಲ್ಲಿ ಸಾಕ್ಷಿ ಮಲಿಕ್ ಅವರು ಕಂಚು ಗೆದ್ದಿದ್ದರು. 2016ರ ರಿಯೊ ಒಲಿಂಪಿಕ್ಸ್​ನಲ್ಲಿ ಮಂಡಿನೋವಿನಿಂದ ಸಮಸ್ಯೆಯಾಗಿತ್ತು. 2021ರ ಟೋಕಿಯೊದಲ್ಲಿ ಅನಿರೀಕ್ಷಿತ ಸೋಲು ಕಂಡು ಹೊರಬಿದಿದ್ದರು.

ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್​ ಅವರು ಮೂರು ಬಾರಿಯ ಕಾಮನ್​ವೆಲ್ತ್​ ಚಿನ್ನದ ಪದಕ ವಿಜೇತೆ ಉಕ್ರೇನ್​ನ ಒಕ್ಸಾನಾ ಲಿವಾಚ್ ವಿರುದ್ಧ 7-5 ಅಂತರದ ರೋಚಕ ಗೆಲುವು ಸಾಧಿಸಿ ಸೆಮಿ ಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದಿದ್ದ ಅತ್ಯಂತ ರೋಚಕ ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ವಿನೇಶ್ ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ, ನಾಲ್ಕು ಬಾರಿಯ ವಿಶ್ವ ಚಾಂಪಿಯನ್​, ಸೋಲನ್ನೇ ಕಾಣದ ಜಪಾನ್‌ನ ಯುಯಿ ಸುಸಾಕಿ ಅವರನ್ನು 3-2 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದರು. ಈ ಮೂಲಕ ಸುಸಾಕಿ ಅವರಿಗೆ ಮೊದಲ ಸೋಲಿನ ರುಚಿ ತೋರಿಸಿದರು.

ಸಸಾಕಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಕಂಡ ಮೊದಲ ಆಘಾತಕಾರಿ ಸೋಲು ಇದಾಗಿದೆ. ಈ ಪಂದ್ಯಕ್ಕೂ ಮುನ್ನ 82 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದ ಸುಸಾಕಿ ಎಲ್ಲ ಪಂದ್ಯವನ್ನು ಗೆದ್ದು ಬೀಗಿದ್ದರು. ಇದೀಗ ಇವರ ಗೆಲುವಿನ ನಾಗಾಲೋಟಕ್ಕೆ ಬ್ರೇಕ್​ ಹಾಕುವಲ್ಲಿ ಭಾರತೀಯ ಕುಸ್ತಿಪಟು ಯಶಸ್ಸು ಕಂಡಿದ್ದಾರೆ. ಈ ಗೆಲುವು ಸಾಧಿಸಿದಾಗಲೇ ವಿನೇಶ್​ ಈ ಬಾರಿ ಪದಕ ಗೆಲ್ಲುವುದು ಖಚಿತ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಇದೀಗ ಅವರ ಪದಕದ ಪನಸು ನುಚ್ಚುನೂರಾಗಿದೆ. ಅವರನ್ನು ಅನರ್ಹಗೊಳಿಸಲಾಗಿದೆ.

Continue Reading

ಕ್ರೀಡೆ

Rishabh Pant: ನೀರಜ್​ ಬಂಗಾರ ಗೆದ್ದರೆ ಅದೃಷ್ಟಶಾಲಿಗೆ ಪಂತ್​ ಕಡೆಯಿಂದ ಸಿಗಲಿದೆ ನಗದು ಬಹುಮಾನ

Rishabh Pant: ತಮ್ಮ ಅಧಿಕೃತ ಟ್ವೀಟರ್ (ಎಕ್ಸ್)ನಲ್ಲಿ ಪೋಸ್ಟ್ ಮಾಡಿರುವ ಪಂತ್, ನೀರಜ್ ಚೋಪ್ರಾ ನಾಳೆ (ಆಗಸ್ಟ್ 8) ಚಿನ್ನದ ಪದಕ ಗೆದ್ದರೆ, ಟ್ವೀಟ್ ಅನ್ನು ಅತಿಹೆಚ್ಚು ಲೈಕ್ ಮತ್ತು ಕಾಮೆಂಟ್ ಮಾಡುವ ಅದೃಷ್ಟಶಾಲಿ ವಿಜೇತರಿಗೆ ನಾನು 1,00,089 ರೂಪಾಯಿಗಳನ್ನು ನೀಡುತ್ತೇನೆ ಎಂದು ಟ್ವಿಟ್​ ಮಾಡಿದ್ದಾರೆ.

VISTARANEWS.COM


on

Rishabh Pant
Koo

ನವದೆಹಲಿ: ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದ ಭಾರತ ಸ್ಟಾರ್​ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಈ ಬಾರಿಯ ಪ್ಯಾರಿಸ್​ ಒಲಿಂಪಿಕ್ಸ್​(Paris Olympics) ಟೂರ್ನಿಯಲ್ಲಿ ಚಿನ್ನದ ಪದಕ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಮಂಗಳವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀ. ದೂರ ಜಾವೆಲಿನ್​ ಎಸೆದು ಫೈನಲ್​ ಪ್ರವೇಶಿಸಿರುವ ನೀರಜ್,​ ನಾಳೆ(ಗುರುವಾರ) ನಡೆಯುವ ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಫೈನಲ್​ನಲ್ಲಿ ನೀರಜ್​ಗೆ ಬೆಂಬಲ ಸೂಚಿಸುವ ಅಭಿಮಾನಿಗಳಿಗೆ ಕ್ರಿಕೆಟಿಗ ರಿಷಭ್​ ಪಂತ್(Rishabh Pant)​ ಭಾರೀ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ತಮ್ಮ ಅಧಿಕೃತ ಟ್ವೀಟರ್ (ಎಕ್ಸ್)ನಲ್ಲಿ ಪೋಸ್ಟ್ ಮಾಡಿರುವ ಪಂತ್, ನೀರಜ್ ಚೋಪ್ರಾ ನಾಳೆ (ಆಗಸ್ಟ್ 8) ಚಿನ್ನದ ಪದಕ ಗೆದ್ದರೆ, ಟ್ವೀಟ್ ಅನ್ನು ಅತಿಹೆಚ್ಚು ಲೈಕ್ ಮತ್ತು ಕಾಮೆಂಟ್ ಮಾಡುವ ಅದೃಷ್ಟಶಾಲಿ ವಿಜೇತರಿಗೆ ನಾನು 1,00,089 ರೂಪಾಯಿಗಳನ್ನು ನೀಡುತ್ತೇನೆ ಎಂದು ಟ್ವಿಟ್​ ಮಾಡಿದ್ದಾರೆ.

ಇದು ಮಾತ್ರವಲ್ಲದೆ ಉಳಿದ ಟಾಪ್ 10 ಜನರಿಗೆ ವಿಮಾನ ಟಿಕೆಟ್‌ಗಳನ್ನು ನೀಡಲಾಗುವುದು. ನನ್ನ ಸಹೋದರನಿಗೆ ಭಾರತ ಮತ್ತು ಪ್ರಪಂಚದ ಹೊರಗಿನಿಂದ ಬೆಂಬಲಿಸೋಣ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ನೀರಜ್​ಗೆ ಬೆಂಬಲ ಸೂಚಿಸಲು ಕರೆ ಕೊಟ್ಟಿದ್ದಾರೆ.

ಇದನ್ನೂ ಓದಿ Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ

ಮತ್ತೊಂದೆಡೆ ರಿಷಭ್ ಪಂತ್ ಅವರ ‘ಎಕ್ಸ್’ ಖಾತೆ ಯಾರೋ ಹ್ಯಾಕ್​ ಮಾಡಿ ಈ ರೀತಿಯ ಟ್ವೀಟ್​ ಮಾಡಿದ್ದಾರೆ ಎನ್ನುವ ಸಂಶಯ ಕೂಡ ಹುಟ್ಟಿಕೊಂಡಿದೆ. ಏಕೆಂದರೆ ಒಂದೇ ಸಮಯಕ್ಕ ಇವರ ಟ್ವಿಟರ್​ ಎಕ್ಸ್​ ಖಾತೆಯಿಂದ ಪ್ಯಾರಿಸ್​ ಒಲಿಂಪಿಕ್ಸ್​ಗೆ ಸಂಬಂಧಿಸಿದಂತೆ 2 ಟ್ವೀಟ್​ಗಳನ್ನು ಮಾಡಲಾಗಿದೆ. ಹೀಗಾಗಿ ಅನುಮಾನಕ್ಕೆ ಕಾರಣವಾಗಿದೆ.

‘ಬಿ’ ವಿಭಾಗದ ಅರ್ಹತಾ ಸುತ್ತಿನಲ್ಲಿ ಕಣಕ್ಕಿಳಿದ ನೀರಜ್​ ತಮ್ಮ ಮೊದಲ ಎಸೆತವನ್ನೇ 89.34 ಮೀ. ದೂರ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದರು. ಇವರ ಜತೆ ಪಾಕಿಸ್ತಾನದ ಅರ್ಷದ್ ನದೀಮ್ 86.59 ಮೀ. ಸಾಧನೆಯೊಂದಿಗೆ ಫೈನಲ್​ ಟಿಕೆಟ್​ ಪಡೆದರು.

89.34 ಮೀ. ದೂರ ಜಾವೆಲಿನ್​ ಎಸೆದದ್ದು ನೀರಜ್​ ಅವರ 2ನೇ ಶ್ರೇಷ್ಠ ಸಾಧನೆಯಾಗಿದೆ. ಅವರ ಶ್ರೇಷ್ಠ ನಿರ್ವಹಣೆ 89.94 ಮೀ. ದೂರ ಎಸೆದಿರುವುದು. ಈ ಎಸೆತವನ್ನು 2022ರ ಸ್ಟಾಕ್​ಹೋಮ್​ ಡೈಮಂಡ್​ ಲೀಗ್​ನಲ್ಲಿ ಎಸೆದಿದ್ದರು. ಟೋಕಿಯೊದಲ್ಲಿ 87.58 ಮೀ. ಸಾಧನೆಯೊಂದಿಗೆ ಚಿನ್ನ ಗೆದ್ದಿದ್ದರು. ಆಗಸ್ಟ್​ 8ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ನೀರಜ್​ ಚೋಪ್ರಾ ಚಿನ್ನದ ಪದಕ ಇರಾದೆಯೊಂದಿಗೆ ಕಣಕ್ಕಿಳಿಯಲಿದ್ದಾರೆ. ‘ಎ’ ವಿಭಾಗದಲ್ಲಿ ಜರ್ಮನಿಯ ಜೂಲಿಯನ್ ವೆಬರ್ 87.76 ಮೀ. ದೂರ ಎಸೆದು ಮೊದಲ ಸ್ಥಾನದೊಂದಿಗೆ ಫೈನಲ್​ ಪ್ರವೇಶಿಸಿದ್ದರು.

Continue Reading

ಕ್ರೀಡೆ

Manu Bhaker: ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ ಮನು ಭಾಕರ್​ಗೆ ತವರಿನಲ್ಲಿ ಅದ್ಧೂರಿ ಸ್ವಾಗತ

Manu Bhaker: ಇಂದು(ಬುಧವಾರ) ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನು ಮತ್ತು ಅವರ ಕೋಚ್​ ಜಸ್ಪಾಲ್‌ ರಾಣಾ ಅವರನ್ನು ಅಭಿಮಾನಿಗಳು ತಮ್ಮ ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮಿಸಿದರು. ಈ ವಿಡಿಯೊವನ್ನು ಎಎನ್​ಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

VISTARANEWS.COM


on

Manu Bhaker
Koo

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್(paris olympics)​ ಶೂಟಿಂಗ್​ ವಿಭಾಗದಲ್ಲಿ 2 ಐತಿಹಾಸಿಕ ಕಂಚಿನ ಪದಕ ಗೆದ್ದ ಶೂಟರ್​ ಮನು ಭಾಕರ್(Manu Bhaker)​ ಇಂದು(ಬುಧವಾರ) ತವರಿಗೆ ಆಗಮಿಸಿದ್ದಾರೆ. ನವದೆಹಲಿಗೆ(New Delhi) ಬಂದಿಳಿದ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು. ಹೂವಿನ ಹಾರ ಮತ್ತು ಸಿಹಿ ತಿನ್ನಿಸುವ ಮೂಲಕ ಭರ್ಜರಿ ವೆಲ್​ಕಮ್​ ಮಾಡಲಾಯಿತು.

ಇಂದು(ಬುಧವಾರ) ಬೆಳಗ್ಗೆ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮನು ಮತ್ತು ಅವರ ಕೋಚ್​ ಜಸ್ಪಾಲ್‌ ರಾಣಾ ಅವರನ್ನು ಅಭಿಮಾನಿಗಳು ತಮ್ಮ ಹೆಗಲ ಮೇಲೆ ಎತ್ತಿಕೊಂಡು ಸಂಭ್ರಮಿಸಿದರು. ಈ ವಿಡಿಯೊವನ್ನು ಎಎನ್​ಐ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

22 ವರ್ಷದ ಮನು ಭಾಕರ್ ಇದಕ್ಕೂ ಮುನ್ನ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಮತ್ತು ಸರಬ್ಜೋತ್ ಸಿಂಗ್ ಜತೆಗೂಡಿ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲೂ ಕಂಚಿನ ಪದಕ ಜಯಿಸುವ ಮೂಲಕ ಸ್ವಾತಂತ್ರ್ಯ ಭಾರತದ ಇತಿಹಾಸದಲ್ಲೇ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಜಯಿಸಿದ ಭಾರತದ ಮೊದಲ ಕ್ರೀಡಾಪಟು ಎನ್ನುವ ಐತಿಹಾಸಿಕ ದಾಖಲೆ ನಿರ್ಮಿಸಿದ್ದರು. 25 ಮೀ. ಪಿಸ್ತೂಲ್​ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಹ್ಯಾಟ್ರಿಕ್​ ಪದಕ ಗೆಲ್ಲುವ ಅವಕಾಶದಿಂದ ವಂಚಿತರಾಗಿದ್ದರು.

ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಪದಕ ಗೆಲ್ಲುವ ಕನಸಿನೊಂದಿಗೆ ಟೋಕಿಯೋಗೆ ಆಗಮಿಸಿದ್ದ ಮನು ಭಾಕರ್​ಗೆ ಅದೃಷ್ಟ ಕೈಕೊಟ್ಟಿತ್ತು. ಕೂಟದ ಮೊದಲ ಸ್ಪರ್ಧೆಯಲ್ಲೇ ಅವರ ಪಿಸ್ತೂಲ್​ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಅವರಿಗೆ ಫೈನಲ್​ಗೇರುವ ಅವಕಾಶ ಕೈತಪ್ಪಿತ್ತು. ಮೊದಲ ಸುತ್ತಿನಲ್ಲಿ ಎದುರಾಗ ಈ ಆಘಾತದಿಂದ ಚೇತರಿಕೊಳ್ಳದ ಮನು ಆ ಬಳಿಕ ಆಡಿದ 2 ಸ್ಪರ್ಧೆಗಳಲ್ಲಿಯೂ ಏಕಾಗ್ರತೆ ಸಾಧಿಸಲು ವಿಫಲರಾಗಿ ಸೋಲು ಕಂಡಿದ್ದರು. ಅಂದಿನ ಸೋಲಿನಿಂದ ಮನನೊಂದು ಶೂಟಿಂಗ್​ಗೆ ವಿದಾಯ ಹೇಳಲು ಬಯಸಿದ್ದ ಮನು, ತಂದೆಯ ಆತ್ಮವಿಶ್ವಾಸದ ಮಾತಿನಂತೆ ಶೂಟಿಂಗ್​ನಲ್ಲಿ ಮುಂದುವರಿದಿದ್ದರು. ಈ ಬಾರಿ ಪ್ಯಾರಿಸ್​ನಲ್ಲಿ 2 ಪದಕ ಗೆದ್ದು ಭಾರತೀಯ ಒಲಿಂಪಿಕ್ಸ್​ ಕ್ರೀಡಾ ಇತಿಹಾಸದಲ್ಲಿ ತಮ್ಮ ಹೆಸರನ್ನು ದಾಖಲಿಸಿದ್ದಾರೆ.

ಇದನ್ನೂ ಓದಿ Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

ಒಲಿಂಪಿಕ್ಸ್‌ನಲ್ಲಿ ದೇಶದ ಗೌರವವನ್ನು ಎತ್ತಿಹಿಡಿದ ಶೂಟರ್‌ ಮನು ಭಾಕರ್‌ ಅವರಿಗೆ ಒಲಿಂಪಿಕ್ಸ್‌ ಸಮಾರೋಪ ಸಮಾರಂಭದಲ್ಲಿ ಭಾರತದ ಮಹಿಳಾ ಧ್ವಜಧಾರಿಯ ಗೌರವ ಲಭಿಸಿದೆ. ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದೆ. ತವರಿಗೆ ಮರಳಿರುವ ಭಾಕರ್​ ಮತ್ತೆ ಪ್ಯಾರಿಸ್​ಗೆ ತೆರಳಲಿದ್ದಾರೆ. ಆದರೆ ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಯಾರೆಂಬುದನ್ನು ಇನ್ನಷ್ಟೇ ಹೆಸರಿಸಬೇಕಿದೆ. ಇಲ್ಲಿ ಲಕ್ಷ್ಯ ಸೇನ್‌, ನೀರಜ್‌ ಚೋಪ್ರಾ, ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌, ಗೋಲ್‌ಕೀಪರ್‌ ಪಿ.ಆರ್‌. ಶ್ರೀಜೇಶ್‌ ಮೊದಲಾದವರ ಹೆಸರು ಕೇಳಿಬರುತ್ತಿದೆ.

Continue Reading

ಕ್ರೀಡೆ

Paris Olympics: ಐತಿಹಾಸಿಕ ಪದಕ ಗೆಲ್ಲಲಿ ಮೀರಾಬಾಯಿ; ಇಂದು ಬಲಾಢ್ಯರ ಜತೆ ಸ್ಪರ್ಧೆ

Paris Olympics: ಚಾನು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿರುವ ಭಾರತದ ಏಕೈಕ ವೇಟ್ಲಿಫ್ಟರ್ ಆಗಿದ್ದಾರೆ. ಒಟ್ಟಾರೆಯಾಗಿ ಇದು ಅವರಿಗೆ ಮೂರನೇ ಒಲಿಂಪಿಕ್ಸ್ ಟೂರ್ನಿಯಾಗಿದೆ. ಕಳೆದ ಬಾರಿ ಟೋಕಿಯೊದಲ್ಲಿ ಭಾರತದ ಪದಕ ಖಾತೆಯನ್ನು ತೆರೆದದ್ದು ಚಾನು. ಈ ಬಾರಿ ಚಿನ್ನದ ಪದಕದೊಂದಿಗೆ ಮಿನುಗಲಿ ಎನ್ನುವುದು ಎಲ್ಲ ಭಾರತೀಯರ ಹಾರೈಕೆಯಾಗಿದೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಕಳೆದ ಟೋಕಿಯೊ ಒಲಿಂಪಿಕ್ಸ್‌ ವೇಟ್‌ಲಿಫ್ಟಿಂಗ್​ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಪದಕದ ಖಾತೆಯನ್ನು ತೆರೆದಿದ್ದ ಮೀರಾಬಾಯಿ ಚಾನು(mirabai chanu) ಇಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ(Paris Olympics) ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಗಾಯದಿಂದಾಗಿ 6 ತಿಂಗಳ ಕಾಲ ಸ್ಪರ್ಧೆಯಿಂದ ದೂರ ಉಳಿದಿದ್ದ ಕಾರಣ ಅವರ ಫಿಟ್​ನೆಸ್​ ಹೇಗಿರಲಿದೆ ಎನ್ನುವ ಆತಂಕ ಕೂಡ ಉಂಟು ಮಾಡಿದೆ. ಹಾಲಿ ಒಲಿಂಪಿಕ್​ ಚಾಂಪಿಯನ್​ ಚೀನಾದ ಹೌ ಝಿಹುಯಿ ಅವರಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಪಂದ್ಯ ರಾತ್ರಿ 11 ಗಂಟೆಗೆ ನಡೆಯಲಿದೆ.

ಇಂದು ರಾತ್ರಿ ನಡೆಯುವ ಮಹಿಳಾ 49 ಕೆಜಿ ವಿಭಾಗದಲ್ಲಿ ಚಾನು ಸ್ಪರ್ಧೆ ಮಾಡಲಿದ್ದಾರೆ. ಪದಕ ಗೆದ್ದರೆ ಒಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಮೊದಲ ಭಾರತೀಯ ಕುಸ್ತಿಪಟು ಎಂಬ ದಾಖಲೆ ನಿರ್ಮಿಸಲಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಒಟ್ಟು 202 ಕೆಜಿ ಭಾರವನ್ನೆತ್ತಿ (87 ಕೆಜಿ, 115 ಕೆಜಿ) ಬೆಳ್ಳಿ ಪದಕ ಗೆದ್ದಿದ್ದರು. ಗಾಯದಿಂದಾಗಿ ಕಳೆದ ಏಷ್ಯಡ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಚಾನು ಸ್ನ್ಯಾಚ್‌ನಲ್ಲಿ 88 ಕೆಜಿ ದಾಖಲೆ ಹೊಂದಿದ್ದಾರೆ. ಹಾಗೆಯೇ ಜೆರ್ಕ್‌ನಲ್ಲಿ 119 ಕೆಜಿ ಎತ್ತಿರುವುದು ವೈಯಕ್ತಿಕ ದಾಖಲೆಯಾಗಿದೆ.

ಇದನ್ನೂ ಓದಿ Paris Olympics: ಇಂದು ಒಲಿಂಪಿಕ್ಸ್​ನಲ್ಲಿ ಭಾರತದ ಕ್ರೀಡಾ ಸ್ಪರ್ಧೆಗಳ ವೇಳಾಪಟ್ಟಿ ಹೀಗಿದೆ

ಗೆಲ್ಲುವ ವಿಶ್ವಾಸ ಇದೆ

ಮೀರಾಬಾಯಿ ಚಾನು ಕಳೆದ ಒಂದು ತಿಂಗಳಿಂದ ಪ್ಯಾರಿಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಅಭ್ಯಾಸದ ವೇಳೆ ಅವರು ಸಂಪೂರ್ಣ ಫಿಟ್​ ಆಗಿ ಕಂಡು ಬಂದಿದ್ದಾರೆ. ಅವರು ಈ ಬಾರಿಯೂ ಭಾರತಕ್ಕೆ ಪದಕ ಗೆಲ್ಲುವ ವಿಶ್ವಾಸ ನನಗಿದೆ ಎಂದು ಕೋಚ್‌ ವಿಜಯ್‌ ಶರ್ಮ ಆತ್ಮವಿಶ್ವಾಸದ ಮಾತುಗಳನ್ನಾಡಿದ್ದಾರೆ. ಫಿಸಿಕಲ್‌ ಥೆರಪಿಸ್ಟ್‌ ಹಾಗೂ ಕಂಡೀಶನಿಂಗ್‌ ಕೋಚ್‌ ಆಗಿರುವ ಅಮೆರಿಕದ ಡಾ| ಏರಾನ್‌ ಹಾರ್ಶಿಗ್‌ ಕೂಡ ಚಾನು ಉತ್ತಮ ಲಯದಲ್ಲಿದ್ದಾರೆ ಎಂದು ಹೇಳಿದ್ದಾರೆ.

ಚಾನು ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿರುವ ಭಾರತದ ಏಕೈಕ ವೇಟ್ಲಿಫ್ಟರ್ ಆಗಿದ್ದಾರೆ. ಒಟ್ಟಾರೆಯಾಗಿ ಇದು ಅವರಿಗೆ ಮೂರನೇ ಒಲಿಂಪಿಕ್ಸ್ ಟೂರ್ನಿಯಾಗಿದೆ. ಕಳೆದ ಬಾರಿ ಟೋಕಿಯೊದಲ್ಲಿ ಭಾರತದ ಪದಕ ಖಾತೆಯನ್ನು ತೆರೆದದ್ದು ಚಾನು. ಈ ಬಾರಿ ಚಿನ್ನದ ಪದಕದೊಂದಿಗೆ ಮಿನುಗಲಿ ಎನ್ನುವುದು ಎಲ್ಲ ಭಾರತೀಯರ ಹಾರೈಕೆಯಾಗಿದೆ.

ಮೀರಾಬಾಯಿಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌ ಧೃಡಪಡಿಸಿಕೊಳ್ಳಲು ಐಡಬ್ಲ್ಯುಎಫ್ ವಿಶ್ವಕಪ್‌ನಲ್ಲಿ ಕಡ್ಡಾಯವಾಗಿ ಸ್ಪರ್ಧಿಸಬೇಕಾಗಿತ್ತು. ಹೀಗಾಗಿ ಅವರು ಈ ಕೂಟದಲ್ಲಿ ಕಣಕ್ಕಿಳಿದರು. ಒಟ್ಟು 184 ಕೆಜಿ (81ಕೆಜಿ+103ಕೆಜಿ)ತೂಕ ಎತ್ತಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟರು. ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ನಡೆದಿದ್ದ ಏಷ್ಯನ್‌ ಗೇಮ್ಸ್‌ ವೇಳೆ ತೊಡೆಯ ಸ್ನಾಯುಬೇನೆಗೆ ತುತ್ತಾಗಿದ್ದ ಚಾನು ಆ ಬಳಿಕ ಯಾವುದೇ ಪ್ರಮುಖ ಕೂಟದಲ್ಲಿ ಪಾಲ್ಗೊಂಡಿರಲಿಲ್ಲ.

Continue Reading
Advertisement
Vinesh Phogat
ಪ್ರಮುಖ ಸುದ್ದಿ31 mins ago

Vinesh Phogat: ಒಲಿಂಪಿಕ್ಸ್​ ಫೈನಲ್​ನಿಂದ ವಿನೇಶ್​ ಫೋಗಟ್​ ಅನರ್ಹ; ಚಿನ್ನದ ಆಸೆ ನುಚ್ಚುನೂರು!

Niharika Konidela Nagendra Babu says Industry Is Not Our Father's Property
ಟಾಲಿವುಡ್41 mins ago

Niharika Konidela: ತೆಲುಗು ಚಿತ್ರರಂಗ ನನ್ನ ಅಪ್ಪನ ಆಸ್ತಿ ಅಲ್ಲ ಎಂದ ನಟ ಚಿರಂಜೀವಿ ಸಹೋದರ ನಾಗಬಾಬು!

Bangladesh Unrest
ದೇಶ56 mins ago

Bangladesh Unrest: ಬಾಂಗ್ಲಾದೇಶಕ್ಕೆ ಎಂದಿನಂತೆ ವಿಮಾನ ಹಾರಾಟ; ಢಾಕಾದಿಂದ ದಿಲ್ಲಿಗೆ ಬಂದಿಳಿದ 205 ಭಾರತೀಯರು

Israel Palestine war
ವಿದೇಶ60 mins ago

Israel Palestine War: ಜೈಲಿನೊಳಗೇ ಪ್ಯಾಲೆಸ್ತೀನ್‌ ಕೈದಿಗಳ ಮೇಲೆ ಇಸ್ರೇಲಿ ಯೋಧರಿಂದ ಅತ್ಯಾಚಾರ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

nelamangala road accident
ಬೆಂಗಳೂರು1 hour ago

Road Accident: ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

Rishabh Pant
ಕ್ರೀಡೆ1 hour ago

Rishabh Pant: ನೀರಜ್​ ಬಂಗಾರ ಗೆದ್ದರೆ ಅದೃಷ್ಟಶಾಲಿಗೆ ಪಂತ್​ ಕಡೆಯಿಂದ ಸಿಗಲಿದೆ ನಗದು ಬಹುಮಾನ

Akshay Kumar Riteish Fardeen recreate Heyy Babyy
ಬಾಲಿವುಡ್1 hour ago

Akshay Kumar: ಅಕ್ಷಯ್ ಕುಮಾರ್ ಸಿನಿಮಾ ಹಾಡಿಗೆ ಹೊಸ ಟಚ್‌ ಕೊಟ್ಟ ʻಹೇ ಬೇಬಿʼ ಖ್ಯಾತಿಯ ರಿತೇಶ್, ಫರ್ದೀನ್ ಖಾನ್; ವಿಡಿಯೊ ವೈರಲ್‌!

Viral Video
Latest2 hours ago

Viral Video: ಮೃಗಾಲಯದಲ್ಲಿ ಮಂಗನ ಎದುರು ಯುವತಿಯ ‘ಕಪಿ ಚೇಷ್ಟೆ’! ಪರಿಣಾಮ ಏನಾಯ್ತು ನೋಡಿ!

chemicals in food
ಬೆಂಗಳೂರು2 hours ago

Chemicals in Food: ಹೋಟೆಲ್‌, ಮಾಲ್‌ಗಳಲ್ಲಿ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ; ತರಕಾರಿ ಮಾರಾಟಗಾರರಿಗೂ ಲೈಸೆನ್ಸ್‌ ಕಡ್ಡಾಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಇಂದೂ ಇಳಿಕೆಯಾದ ಚಿನ್ನದ ಬೆಲೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Wild Animals Attack
ಚಿಕ್ಕಮಗಳೂರು19 hours ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ20 hours ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ6 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ6 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ6 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ1 week ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 week ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

ಟ್ರೆಂಡಿಂಗ್‌