Site icon Vistara News

Vinesh Phogat: ಕೆಲವೇ ಗಂಟೆಗಳಲ್ಲಿ ವಿನೇಶ್ ಫೋಗಟ್​ ಬೆಳ್ಳಿ ಪದಕದ ತೀರ್ಪು ಪ್ರಕಟ

Vinesh Phogat

Vinesh Phogat: Vinesh Phogat's plea against Olympic disqualification accepted, hearing today

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ ಫೈನಲ್​ ಅನರ್ಹತೆಯ ಬಳಿಕ ಜಂಟಿ ಬೆಳ್ಳಿ ಪದಕ ನೀಡಬೇಕೆಂದು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಕ್ಕೆ(ಸಿಎಎಸ್​) ವಿನೇಶ್ ಫೋಗಟ್(Vinesh Phogat) ಅವರು ಸಲ್ಲಿದ್ದ ಮನವಿಯನ್ನು ಗುರುವಾರ (ಆಗಸ್ಟ್ 8) ಆರ್ಬಿಟ್ರೇಷನ್ ನ್ಯಾಯಾಲಯವು (CAS) ಸ್ವೀಕರಿಸಿತ್ತು. ಇದೀಗ ಶುಕ್ರವಾರ ಮಧ್ಯಾಹ್ನ 1.30ರಿಂದ ವಿಚಾರಣೆ ನಡೆಯಲಿದೆ. ಗುರುವಾರವೇ ರಾತ್ರಿ 9.30ರ ವೇಳೆಗೆ ವಿಚಾರಣೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ವಿನೇಶ್​ಗೆ ಭಾರತೀಯ ವಕೀಲರನ್ನು ನೇಮಿಸಿಕೊಳ್ಳಲು ಹೆಚ್ಚಿನ ಸಮಯ ನೀಡುವ ಸಲುವಾಗಿ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿತ್ತು. ಇಂದು ನಡೆಯುವ ವಿಚಾರಣೆಯಲ್ಲಿ ವಿನೇಶ್​ಗೆ ಗೆಲುವು ಸಿಕ್ಕಿ ಅವರಿಗೆ ಪದಕ ಒಲಿಯಲಿ ಎಂದು ಇಡೀ ದೇಶವೇ ಪ್ರಾರ್ಥಿಸುತ್ತಿದೆ.

ಸಿಎಎಸ್ ಎನ್ನುವುದು 1984ರಲ್ಲಿ ಸ್ಥಾಪಿತವಾದ ಸ್ವತಂತ್ರ ಸಂಸ್ಥೆಯಾಗಿದ್ದು, ಕ್ರೀಡಾಸಂಬಂಧಿ ವ್ಯಾಜ್ಯಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸುತ್ತದೆ. ಸ್ವಿಡ್ಜರ್ಲೆಂಡ್ ನ ಲೌಸನ್ ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಿಎಎಸ್, ನ್ಯೂಯಾರ್ಕ್ ಹಾಗೂ ಸಿಡ್ನಿಯಲ್ಲಿ ಹೆಚ್ಚುವರಿ ನ್ಯಾಯಾಲಯಗಳನ್ನು ಹೊಂದಿದ್ದು, ಒಲಿಂಪಿಕ್ ಆತಿಥ್ಯ ವಹಿಸುವ ದೇಶಗಳಲ್ಲಿ ತಾತ್ಕಾಲಿಕ ಕೋರ್ಟ್ ಗಳನ್ನು ಹೊಂದಿರುತ್ತದೆ.

ಮಂಗಳವಾರ ನಡೆದ ಅರ್ಹತಾ ಸುತ್ತಿಗೂ ಮುನ್ನ ವಿನೇಶ್‌ ಅವರ ತೂಕವನ್ನು ಲೆಕ್ಕ ಮಾಡಲಾಗಿತ್ತು. ಈ ವೇಳೆ ಅವರು 49.9 ಕೆಜಿ ತೂಕವಿದ್ದರು. 3 ಬೌಟ್‌ಗಳು ಮುಗಿಯುವ ವೇಳೆಗೆ ಶಕ್ತಿ ಕಾಪಾಡಿಕೊಳ್ಳಲು ಹೈ ಎನರ್ಜಿ ಆಹಾರ ಸೇವಿಸಿದ ಕಾರಣ ಅವರ ತೂಕ 2.8 ಕೆಜಿ ಹೆಚ್ಚಳವಾಗಿತ್ತು. ಈ 2.8 ಕೆಜಿಯನ್ನು ಕಡಿಮೆ ಮಾಡಲು ವಿನೇಶ್‌ ರಾತ್ರಿಯಿಡೀ ಯಾವುದೇ ಆಹಾರ ಸೇವಿಸದೇ, ಸೈಕ್ಲಿಂಗ್‌ ನಡೆಸಿ, ಸ್ಕಿಪ್ಪಿಂಗ್‌ ಮಾಡಿದ್ದರು. ತೂಕ ಇಳಿಸಲು ಬೇಕಾಗುವ ಎಲ್ಲ ಕಸರತ್ತುಗಳನ್ನು ಕೈಗೊಂಡಿದ್ದರು. ಈ ಮೂಲಕ ಅವರು ಸಾಕಷ್ಟು ತೂಕ ಇಳಿಸಿದ್ದರು. ಕೊನೆ ಕ್ಷಣದಲ್ಲಿ ಅವರ ಕೂದಲು ಕತ್ತರಿಸಿ, ಬಟ್ಟೆಗಳ ಗಾತ್ರವನ್ನು ಕುಗ್ಗಿಸಿ ಪರೀಕ್ಷೆಗೆ ಕಳುಹಿಸಲಾಯಿತು. ಆದರೂ 100 ಗ್ರಾಂ ಹೆಚ್ಚಿದ್ದ ಕಾರಣ ಅನರ್ಹಗೊಂಡರು.

ಇದನ್ನೂ ಓದಿ Vinesh Phogat: ಒಲಿಂಪಿಕ್ಸ್​ ಆರಂಭಕ್ಕೂ ಮುನ್ನವೇ ಪಿತೂರಿಯ ಬಗ್ಗೆ ಗಂಭೀರ ಆರೋಪ ಮಾಡಿದ್ದ ವಿನೇಶ್​; ವೈರಲ್​ ಟ್ವೀಟ್​ ಇಲ್ಲಿದೆ

ವಿನೇಶ್‌ ಫೋಗಟ್‌ ಅವರ ಸಹಾಯಕ ಸಿಬ್ಬಂದಿ ವಿರುದ್ಧ ತನಿಖೆ ನಡೆಸಬೇಕು ಎಂದು ಭಾರತೀಯ ಕುಸ್ತಿ ಪ್ರಾಧಿಕಾರದ ಅಧ್ಯಕ್ಷ ಸಂಜಯ್‌ ಸಿಂಗ್‌ ಈಗಾಗಲೇ ಆಗ್ರಹಿಸಿದ್ದಾರೆ. ಇದು ವಿನೇಶ್‌ ಅವರ ತಪ್ಪಾಗಿರಲು ಸಾಧ್ಯವಿಲ್ಲ. ಅವರು ಉತ್ತಮವಾಗಿ ಭಾಗಿಯಾಗಿದ್ದರು. ಅವರ ಕೋಚ್‌, ನ್ಯೂಟ್ರಿಶಿಯನ್‌ ಮತ್ತು ಬೆಂಬಲ ಸಿಬ್ಬಂದಿ ಇದರ ಜವಾಬ್ದಾರಿ ಹೊರಬೇಕು ಎಂದು ಅವರು ಹೇಳಿದ್ದರು. ವಿನೇಶ್‌ ತೂಕ ಹೆಚ್ಚಳವಾಗದಂತೆ ಅವರು ನೋಡಿಕೊಳ್ಳಬೇಕಿತ್ತು. ಇದಕ್ಕೆ ಕಾರಣರಾದವರ ವಿರುದ್ಧ ಭಾರತ ಸರಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ, ಬ್ರಿಜ್​ ಭೂಷಣ್​ಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿ ದೇಶದ ಉನ್ನತ ಕುಸ್ತಿಪಟುಗಳ ಜತೆ ಸೇರಿಕೊಂಡು ಕಳೆದ ವರ್ಷ ಜನವರಿಯಲ್ಲಿ ವಿನೇಶ್ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಬಂಧನಕ್ಕೂ ಒಳಗಾಗಿದ್ದರು.

Exit mobile version