ವೆಲ್ಲಿಂಗ್ಟನ್: ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್(Kane Williamson) ಅವರು ತಮ್ಮ ಪುಟ್ಟ ಮಗಳೊಂದಿಗೆ ಕ್ರಿಕೆಟ್ ಆಡಿದ ವಿಡಿಯೊ ವೈರಲ್(Viral Video) ಆಗಿದೆ. 16ನೇ ಆವೃತ್ತಿಯ ಐಪಿಎಲ್ನ ಉದ್ಘಾಟನ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಮೊಣಕಾಲಿಗೆ ಗಂಭೀರ ಗಾಯಗೊಂಡ ಅವರು ಐಪಿಎಲ್ ಟೂರ್ನಿಯಿಂದ ಹೊರಬಿದ್ದಿದ್ದರು. ಜತೆಗೆ ಭಾರತದಲ್ಲಿ ನಡೆಯುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ಗೂ ಅನುಮಾನ ಎನ್ನಲಾಗಿದೆ. ಸದ್ಯ ಚೇತರಿಕೆಯ ಹಾದಿಯಲ್ಲಿರುವ ಅವರು ಮಗಳೊಂದಿಗೆ ಕ್ರಿಕೆಟ್ ಆಡುವ ಮೂಲಕ ಮನೆಯಲ್ಲೇ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ.
ಮಗಳಾದ ಗ್ರೇ ನಿಕೋಲ್ಸ್ ಜತೆ ಟೆನಿಸ್ ಬಾಲ್ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವ ವಿಡಿಯೊವನ್ನು ವಿಲಿಯಮ್ಸನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಮೊದಲ ಸ್ಪರ್ಧಾತ್ಮಕ ಆಟಕ್ಕೆ ಮರಳಿದ್ದೇನೆ. ಗ್ಯಾರಿ ನಿಕೋಲ್ಸ್ ಜತೆ ಆಡುತ್ತಿರುವುದಕ್ಕೆ ಖುಷಿಯಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ ICC World Cup 2023: ನ್ಯೂಜಿಲ್ಯಾಂಡ್ ತಂಡಕ್ಕೆ ಆಘಾತ; ಏಕದಿನ ವಿಶ್ವ ಕಪ್ಗೆ ನಾಯಕ ಕೇನ್ ವಿಲಿಯಮ್ಸನ್ ಅನುಮಾನ
Kane Williamson playing cricket with his daughter.
— Johns. (@CricCrazyJohns) July 4, 2023
Cutest video in the internet. pic.twitter.com/9Akevg9KzE
ಗಾಯದ ಬಗ್ಗೆ ಮಾಹಿತಿ ನೀಡಿದ ಕೇನ್ ವಿಲಿಯಮ್ಸನ್
ಕಳೆದ ವಾರವಷ್ಟೇ ಕೇನ್ ವಿಲಿಯಮ್ಸನ್ ಅವರು ತಮ್ಮ ಗಾಯದ ಬಗ್ಗೆ ಮಾಹಿತಿ ನೀಡಿದ್ದರು. “ನಾನು ಚೇತರಿಕೆಯ ಹಾದಿಯಲ್ಲಿ ಸಾಗುತ್ತಿದ್ದೇನೆ. ವಾರದಿಂದ ವಾರಕ್ಕೆ ಗುಣಮುಖರಾಗುವ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದೇನೆ. ಈ ಮೊದಲು ಇಷ್ಟು ದೊಡ್ಡ ಮಟ್ಟದ ಗಾಯಕ್ಕೆ ಒಳಗಾಗಿರಲಿಲ್ಲ. ಹಂತಹಂತವಾಗಿ ಚೇತರಿಸಿಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಿದ್ದೇನೆ. ವಿಶ್ವ ಕಪ್ ವೇಳೆ ಸುಧಾರಿಸಕೊಳ್ಳುವ ವಿಶ್ವಾಸವಿದೆ” ಎಂದು ಹೇಳಿದ್ದರು.
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ವಿರುದ್ಧದ ಉದ್ಘಾಟನ ಐಪಿಎಲ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೇನ್ ವಿಲಿಯಮ್ಸನ್ ಗಾಯಕ್ಕೆ ಒಳಗಾಗಿದ್ದರು. ಋತುರಾಜ್ ಗಾಯಕ್ವಾಡ್ ಬಾರಿಸಿದ ಚೆಂಡನನ್ನು ಬೌಂಡರಿ ಗೆರೆಯ ಬಳಿ ತಡೆಯಲು ವಿಲಿಯಮ್ಸನ್ ಮೇಲಕ್ಕೆ ಜಿಗಿದಿದ್ದರು. ಚೆಂಡನ್ನು ತಡೆದು ಎದುರಾಳಿ ತಂಡ ಆರು ರನ್ಗಳು ಸಂಗ್ರಹಿಸದಂತೆ ನೋಡಿಕೊಂಡ ಹೊರತಾಗಿಯೂ ಅವರು ಕಳಕ್ಕೆ ಬೀಳುವಾಗ ಮಂಡಿಯೂರಿದ್ದರು. ಮಂಡಿ ಜೋರಾಗಿ ನೆಲಕ್ಕೆ ಅಪ್ಪಳಿಸಿದ ಅವರು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರು ತವರಿಗೆ ತೆರಳಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.