ನ್ಯೂಯಾರ್ಕ್: ಇಂದು ನಡೆಯುವ ಟಿ20 ವಿಶ್ವಕಪ್ ಟೂರ್ನಿಯ(T20 World Cup 2024) ಪಂದ್ಯದಲ್ಲಿ ಭಾರತ ತಂಡ ತನ್ನ ಬದ್ಧ ಎದುರಾಳಿ ಪಾಕಿಸ್ತಾನ(India vs Pakistan) ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ(team India) ಸ್ಟಾರ್ ವಿಕೆಟ್ ಕೀಪರ್ ಕಮ್ ಬ್ಯಾಟರ್ ರಿಷಭ್ ಪಂತ್(Rishabh Pant) ಮತ್ತು ಹಾರ್ಡ್ ಹಿಟ್ಟರ್ ಸೂರ್ಯಕುಮಾರ್ ಯಾದವ್(Suryakumar Yadav) ಅವರು ಹೋಟೆಲ್ ಕಾರಿಡಾರ್ನಲ್ಲಿ ಗಾಲ್ಫ್ ಆಡಿದ್ದಾರೆ. ಈ ವಿಡಿಯೊ ವೈರಲ್(Viral Video) ಆಗಿದೆ.
ರಿಷಭ್ ಪಂತ್ ಮತ್ತು ಸೂರ್ಯಕುಮಾರ್ ಅವರು ಹೋಟೆಲ್ ಕಾರಿಡಾರ್ನಲ್ಲಿ ಪೇಪರ್ ಬ್ಯಾಗ್ ಒಂದನ್ನು ಇರಿಸಿ ಬ್ಯಾಟ್ ಮೂಲಕ ಗಾಲ್ಫ್ ಆಡಿದ್ದಾರೆ. ಪಂತ್ ಅವರು ಗಾಲ್ಫ್ ಚೆಂಡನ್ನು ತಮ್ಮ ಬ್ಯಾಟ್ ಮೂಲಕ ಬಾರಿಸಿ ಚೆಂಡನ್ನು ನೇರವಾಗಿ ಪೇಪರ್ ಬ್ಯಾಗ್ ಒಳಗಡೆಗೆ ಬಾರಿಸುವಲ್ಲಿ ಯಶಸ್ಸು ಕೂಡ ಕಂಡಿದ್ದಾರೆ. ಚೆಂಡು ಗುರಿ ತಲುಪಿದ ಸಂತಸದಲ್ಲಿ ಪಂತ್ ಮತ್ತು ಸೂರ್ಯಕುಮಾರ್ ಜೋರಾಗಿ ಕಿರುಚುತ್ತಾ ಕುಣಿದು ಕುಪ್ಪಳಿಸಿದ್ದಾರೆ. ಇದರ ವಿಡಿಯೊವನ್ನು ಪಂತ್ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪಂತ್ ಅವರು ಕಳೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅಜೇಯ 36 ರನ್ ಬಾರಿಸಿ ಮಿಂಚಿದ್ದರು. ಇದೀಗ ಇಂದು ನಡೆಯುವ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿಯೂ ಉತ್ತಮ ಬ್ಯಾಟಿಂಗ್ ನಡೆಸುವ ವಿಶ್ವಾಸದಲ್ಲಿದ್ದಾರೆ. 2022ರಲ್ಲಿ ಪಂತ್ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಸುಮಾರು 14 ತಿಂಗಳ ಕಾಲ ಕ್ರಿಕೆಟ್ನಿಂದ ದೂರ ಉಳಿದಿದ್ದರು. ಹೀಗಾಗಿ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿ ಅವರಿಗೆ ಮಿಸ್ ಆಗಿತ್ತು. ಇದೀಗ ಟಿ20 ವಿಶ್ವಕಪ್ನಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಯೋಜನೆಯಲ್ಲಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿಯೂ ಪಂತ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.
ಭಾರತ ಈ ಇಂದಿನ ಪಂದ್ಯದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಚೈನಾಮನ್ ಖ್ಯಾತಿಯ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಆಡುವ ಬಳಗಕ್ಕೆ ಸೇರಿಸಿಕೊಳ್ಳುವ ಯೋಜನೆಯಲ್ಲಿದೆ. ಅಕ್ಷರ್ ಪಟೇಲ್ ಅವರನ್ನು ಈ ಪಂದ್ಯದಿಂದ ಕೈಬಿಡುವ ಸಾಧ್ಯತೆ ಅಧಿಕವಾಗಿದೆ. ಉಳಿದಂತೆ ಯಾವುದೇ ಬದಲಾವಣೆ ಕಂಡು ಬಾರದು. ಕೊಹ್ಲಿ ಮತ್ತು ರೋಹಿತ್ ಅವರೇ ಭಾರತದ ಇನಿಂಗ್ಸ್ ಆರಂಭಿಸಲಿದ್ದಾರೆ.
ಇದನ್ನೂ ಓದಿ IND vs PAK: ಇಂದು ಪಾಕ್ ವಿರುದ್ಧ ಆಡಲಿದ್ದಾರಾ ಟೀಮ್ ಇಂಡಿಯಾ ನಾಯಕ ರೋಹಿತ್?
ಸಂಭ್ಯಾವ್ಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್/ ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಉಸ್ಮಾನ್ ಖಾನ್, ಫಖರ್ ಜಮಾನ್, ಅಜಮ್ ಖಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಮೊಹಮ್ಮದ್ ಅಮೀರ್, ಹಾರಿಸ್ ರೌಫ್.