ನ್ಯೂಯಾರ್ಕ್: ಟಿ20 ವಿಶ್ವಕಪ್(T20 World Cup 2024) ಆಡುವ ಸಲುವಾಗಿ ನ್ಯೂಯಾರ್ಕ್ನಲ್ಲಿರುವ(New York) ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ(Rohit Sharma) ಮತ್ತು ಕೋಚ್ ರಾಹುಲ್ ದ್ರಾವಿಡ್(Rahul Dravid) ಅವರು ಜಡಿ ಮಳೆಯಲ್ಲಿಯೇ ಒದ್ದೆಯಾಗುತ್ತಾ ಓಡಿ ಹೋಗಿ ಕಾರು ಹತ್ತಿದ ವಿಡಿಯೊ ವೈರಲ್(Viral Video) ಆಗಿದೆ. ರೆಸ್ಟೋರೆಂಟ್ನಲ್ಲಿ ಡಿನ್ನರ್ ಮುಗಿಸಿ ಹೊರ ಬರುವ ವೇಳೆ ಭಾರೀ ಮಳೆ ಸುರಿದಿದೆ. ಮಳೆಯನ್ನು ಕೂಡ ಲೆಕ್ಕಿಸದೆ ರೋಹಿತ್ ಓಡಿ ಹೋಗಿ ಕಾರು ಹತ್ತಿದ್ದಾರೆ. ಇದರ ಹಿಂದೆಯೇ ದ್ರಾವಿಡ್ ಕೂಡ ಓಡೋಡಿ ಬಂದು ಕಾರು ಹತ್ತಿದರು.
ಬುಧವಾರ ಟೀಮ್ ಇಂಡಿಯಾದ ಆಟಗಾರರೆಲ್ಲ ರನ್ನಿಂಗ್ ಮತ್ತು ಫುಟ್ಬಾಲ್ ಆಡುವ ಮೂಲಕ ಫಿಟ್ನೆಸ್ ತರಬೇತಿ ಪಡೆದಿದ್ದರು. ಇಂದಿನಿಂದ(ಗುರುವಾರ) ಬ್ಯಾಟಿಂಗ್ ಮತ್ತು ಬೌಲಿಂಗ್ ಅಭ್ಯಾಸ ನಡೆಸಲಿದ್ದಾರೆ. ಬಿಡುವಿನ ವೇಳೆ ಆಟಗಾರರು ನ್ಯೂಯಾರ್ಕ್ ಸಿಟಿಗೆ ಒಂದು ರೌಂಡ್ ಹಾಕಿದ್ದಾರೆ. ಇಲ್ಲಿನ ಕೆಲ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ ಫೋಟೊಗಳನ್ನು ಆಟಗಾರರು ತಮ್ಮ ಸಾಮಾಜಿಕ ಜಾಲತಾಣ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.
ಭಾರತ ತನ್ನ ಮೊದಲ ಲೀಗ್ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ. ಭಾರತೀಯ ಕ್ರಿಕೆಟ್ ಅಭಿಮಾನಿಗಳು ನೂತನ ಜೆರ್ಸಿ ತೊಟ್ಟು ತಂಡ ಕಪ್ ಗೆಲ್ಲಲಿ ಎಂದು ಹಾರೈಸಿದ್ದಾರೆ.
ವಿರಾಟ್ ಕೊಹ್ಲಿ ಮತ್ತು ಸಂಜು ಸ್ಯಾಮ್ಸನ್ ತಮ್ಮ ವೈಯಕ್ತಿಕ ಕಾರಣಗಳಿಂದ ತಂಡ ಸೇರುವುದು ಕೊಂಚ ತಡವಾಗಲಿದೆ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ. ಕೊಹ್ಲಿ ಬಾಂಗ್ಲಾದೇಶ ವಿರುದ್ಧದ ಏಕೈಕ ಅಭ್ಯಾಸ ಪಂದ್ಯಕ್ಕೂ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕೊಹ್ಲಿ ಮೇ 30ಕ್ಕೆ ಚಾರ್ಟರ್ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್ನಲ್ಲಿ ಎಷ್ಟು ಬೌಲರ್ಗಳು ಹ್ಯಾಟ್ರಿಕ್ ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ?
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.
ಭಾರತದ ಪಂದ್ಯಗಳು
ದಿನಾಂಕ | ಎದುರಾಳಿ | ಸ್ಥಳ |
ಜೂನ್ 5 | ಐರ್ಲೆಂಡ್ | ನ್ಯೂಯಾರ್ಕ್ |
ಜೂನ್ 9 | ಪಾಕಿಸ್ತಾನ | ನ್ಯೂಯಾರ್ಕ್ |
ಜೂನ್ 12 | ಅಮೆರಿಕ | ನ್ಯೂಯಾರ್ಕ್ |
ಜೂನ್ 15 | ಕೆನಡಾ | ಫ್ಲೋರಿಡಾ |