Viral Video: ರೋಹಿತ್​ ಶರ್ಮ ಕಾಲಿಗೆ ಬಿದ್ದು ಆಟೋಗ್ರಾಫ್ ಪಡೆದ ಮಹಿಳಾ ಅಭಿಮಾನಿ - Vistara News

ಕ್ರೀಡೆ

Viral Video: ರೋಹಿತ್​ ಶರ್ಮ ಕಾಲಿಗೆ ಬಿದ್ದು ಆಟೋಗ್ರಾಫ್ ಪಡೆದ ಮಹಿಳಾ ಅಭಿಮಾನಿ

Viral Video: ಇಂಡಿಯನ್ಸ್​ ಎಕ್ಸ್​ಪ್ರೆಸ್​ ವರದಿಯ ಪ್ರಕಾರ ರೋಹಿತ್​ ಶರ್ಮ ಅವರನ್ನು ಡೆಲ್ಲಿ ಫ್ರಾಂಚೈಸಿ ಮುಂದಿನ ಮೆಗಾ ಹರಾಜಿನಲ್ಲಿ ಖರೀದಿಸಲಿದೆ ಎಂದು ತಿಳಿಸಿದೆ. ಅಲ್ಲದೆ ಫ್ರಾಂಚೈಸಿ ಸಹ-ಮಾಲೀಕ ಪಾರ್ಥ್ ಜಿಂದಾಲ್ ಅವರು ರೋಹಿತ್​ ಅವರನ್ನು ಮುಂದಿನ ಬಾರಿ ಡೆಲ್ಲಿ ತಂಡದ ನಾಯಕನಾಗಿ ಕಣಕ್ಕಿಳಿಸಲು ಎಲ್ಲ ಸಿದ್ಧತೆಯೂ ಮಾಡಲಾಗಿದೆ ಎಂದು ಹೇಳಿರುವುದಾಗಿ ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಟೀಮ್​ ಇಂಡಿಯಾದ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರ ಅಭಿಮಾನಿಯೊಬ್ಬಳು ಅವರ ಚಿತ್ರಬಿಡಿಸಿ ಆಟೋಗ್ರಾಫ್ ಪಡೆದಿದ್ದಾಳೆ. ಇದೇ ವೇಳೆ ರೋಹಿತ್​ ಅವರ ಕಾಲಿಗೆ ಬಿದ್ದು ಆಶೀರ್ವಾದ ಕೂಡ ಪಡೆದಿದ್ದಾಳೆ ಈ ವಿಡಿಯೊ ವೈರಲ್(Viral Video)​ ಆಗಿದೆ.

​ಈ ಅಭಿಮಾನಿ ಈಗಾಗಲೇ ಮುಂಬೈ ಇಂಡಿಯನ್ಸ್​(mumbai indians) ತಂಡದ ಜಸ್​ಪ್ರೀತ್​ ಬುಮ್ರಾ, ಇಶಾನ್​ ಕಿಶನ್​, ತಿಲಕ್​ ವರ್ಮಾ, ಸೂರ್ಯಕುಮಾರ್​ ಯಾದವ್​ ಸೇರಿ ಹಲವರು ವ್ಯಕ್ತಿಗಳ ಭಾವಚಿತ್ರವನ್ನು ಪೆನ್ಸಿಲ್‌ ನಿಂದ ರಚಿಸಿ ತನ್ನ ಚಿತ್ರಕಲಾ ಪ್ರೌಢಿಮೆ ಮೆರೆದಿದ್ದಾಳೆ. ಮುಂಬೈ ತಂಡದ ಅಪಟ್ಟ ಅಭಿಮಾನಿಯೂ ಆಗಿದ್ದಾಳೆ. ಈಕೆಯ ಹೆಸರು ಮೋನಿಕಾ. ಮುಂಬೈ ಮೂಲದವಳಾಗಿದ್ದಾಳೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾನುವಾರ (ಏಪ್ರಿಲ್ 14) ನಡೆಯಲಿರುವ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ರೋಹಿತ್ ಶರ್ಮಾ (Rohit Sharma) ಮುಂಬೈ ಇಂಡಿಯನ್ಸ್ ತಂಡದ ಬಸ್ ಡ್ರೈವರ್ ಆಗಿ ಮಾರ್ಪಟ್ಟರು. ಐಪಿಎಲ್​​ನಲ್ಲಿ ಅತ್ಯಂತ ಜಿದ್ದಾಜಿದ್ದಿನ ಸ್ಪರ್ಧೆ ಎಂದೂ ಕರೆಯಲ್ಪಡುವ ಋತುವಿನ ಅತಿದೊಡ್ಡ ಮುಖಾಮುಖಿಗೆ ಸಜ್ಜಾಗುತ್ತಿರುವ ನಡುವೆಯೂ ಮುಂಬಯಿ ಆಟಗಾರರು ಹೆಚ್ಚು ತಮಾಷೆಯಲ್ಲಿದ್ದಂತೆ ಕಂಡು ಬಂತು. ಅಂತೆಯೇ ಮಾಜಿ ನಾಯಕ ರೋಹಿತ್ ಶರ್ಮಾ ಟೀಮ್​ ಬಸ್​ ಅನ್ನೇ ಚಲಾಯಿಸಿದ ಪ್ರಸಂಗ ನಡೆಯಿತು. ಈ ಮೂಲಕ ಅವರು, ನಾ ಡ್ರೈವರ ಎಂಬ ಹಾಡನ್ನು ನೆನಪಿಸಿಕೊಟ್ಟರು.

ಇದನ್ನೂ ಓದಿ IPL 2024: ನೆಚ್ಚಿನ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯವನ್ನಾಡಲು ಸಜ್ಜಾದ ಧೋನಿ

ಡೆಲ್ಲಿ ಪರ ಆಡಲಿದ್ದಾರಾ ರೋಹಿತ್​?


ಇಂಡಿಯನ್ಸ್​ ಎಕ್ಸ್​ಪ್ರೆಸ್​ ವರದಿಯ ಪ್ರಕಾರ ರೋಹಿತ್​ ಶರ್ಮ ಅವರನ್ನು ಡೆಲ್ಲಿ ಫ್ರಾಂಚೈಸಿ ಮುಂದಿನ ಮೆಗಾ ಹರಾಜಿನಲ್ಲಿ ಖರೀದಿಸಲಿದೆ ಎಂದು ತಿಳಿಸಿದೆ. ಅಲ್ಲದೆ ಫ್ರಾಂಚೈಸಿ ಸಹ-ಮಾಲೀಕ ಪಾರ್ಥ್ ಜಿಂದಾಲ್ ಅವರು ರೋಹಿತ್​ ಅವರನ್ನು ಮುಂದಿನ ಬಾರಿ ಡೆಲ್ಲಿ ತಂಡದ ನಾಯಕನಾಗಿ ಕಣಕ್ಕಿಳಿಸಲು ಎಲ್ಲ ಸಿದ್ಧತೆಯೂ ಮಾಡಲಾಗಿದೆ ಎಂದು ಹೇಳಿರುವುದಾಗಿ ತನ್ನ ವರದಿಯಲ್ಲಿ ತಿಳಿಸಿದೆ.

ರೋಹಿತ್​ ಅಭಿಮಾನಿಗಳು ಕೂಡ ಮುಂಬೈ ತೊರೆದು ಬೇರೆ ತಂಡದ ಪರ ಆಡುವಂತೆ ಒತ್ತಾಯಿಸುತ್ತಿದ್ದಾರೆ. ಜಸ್​ಪ್ರೀತ್​ ಬುಮ್ರಾ ಕೂಡ ಪಾಂಡ್ಯ ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ  ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮಾಜಿ ಆಟಗಾರ, ಮುಂಬೈ ಇಂಡಿಯನ್ಸ್​ ಪರವೂ ಆಡಿರುವ ಅಂಬಾಟಿ ರಾಯುಡು(Ambati Rayudu) ಅವರು ರೋಹಿತ್​ ಶರ್ಮ ಮುಂದಿನ ಆವೃತ್ತಿಯಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಮುನ್ನಡೆಸಬೇಕು ಎಂದು ಹೇಳಿದ್ದರು. ಒಟ್ಟಾರೆಯಾಗಿ ಮುಂದಿನ ವರ್ಷದ ಮೆಗಾ ಹರಾಜಿನ ಪ್ರಮುಖ ಆಕರ್ಷಣೆಯೇ ರೋಹಿತ್​ ಶರ್ಮ ಆಗಿರಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

PBKS vs CSK: ಕೆಕೆಆರ್​ ದಾಖಲೆ ಹಿಂದಿಕ್ಕಿದ ಪಂಜಾಬ್​ ಕಿಂಗ್ಸ್

PBKS vs CSK: ಚೆನ್ನೈಗೆ ತವರಿನಲ್ಲೇ ಅತ್ಯಧಿಕ ಸೋಲುಣಿಸಿದ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರವಾಗಿದೆ. ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ವಿರುದ್ಧ ಮುಂಬೈ ಇದುವರೆಗೆ 5 ಪಂದ್ಯಗಳನ್ನು ಜಯಿಸಿದೆ. ಪಂಜಾಬ್​ 4 ಬಾರಿ ಸೋಲುಣಿಸಿ ಕೆಕೆಆರ್​(3 ಬಾರಿ) ತಂಡದ ದಾಖಲೆಯನ್ನು ಹಿಂದಿಕ್ಕಿದೆ.

VISTARANEWS.COM


on

PBKS vs CSK
Koo

ಚೆನ್ನೈ: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(PBKS vs CSK) ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಪಂಜಾಬ್​ ಕಿಂಗ್ಸ್​ ದಾಖಲೆಯೊಂದನ್ನು ನಿರ್ಮಿಸಿದೆ. ಚೆನ್ನೈಗೆ ತವರಿನಲ್ಲಿಯೇ ಅತ್ಯಧಿಕ ಸೋಲುಣಿಸಿದ 2ನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೇ ವೇಳೆ ಕೆಕೆಆರ್​(3 ಬಾರಿ) ತಂಡದ ದಾಖಲೆಯನ್ನು ಹಿಂದಿಕ್ಕಿದೆ.

ಚೆನ್ನೈಗೆ ತವರಿನಲ್ಲೇ ಅತ್ಯಧಿಕ ಸೋಲುಣಿಸಿದ ದಾಖಲೆ ಮುಂಬೈ ಇಂಡಿಯನ್ಸ್​ ತಂಡದ ಪರವಾಗಿದೆ. ಚಿದಂಬರಂ ಸ್ಟೇಡಿಯಂನಲ್ಲಿ ಚೆನ್ನೈ ವಿರುದ್ಧ ಮುಂಬೈ ಇದುವರೆಗೆ 5 ಪಂದ್ಯಗಳನ್ನು ಜಯಿಸಿದೆ. ಪಂಜಾಬ್​ 4 ಬಾರಿ ಸೋಲುಣಿಸಿದೆ. ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು.

ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

Continue Reading

ಬ್ಯಾಡ್ಮಿಂಟನ್

Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

Thomas Cup 2024: ಥಾಮಸ್‌ ಕಪ್‌(Thomas Cup 2024) ಟೂರ್ನಿಯ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಚೀನಾದ ಸವಾಲು ಎದುರಿಸಲಿದೆ.

VISTARANEWS.COM


on

Thomas Cup 2024
Koo

ಚೆಂಗ್ಡು (ಚೀನಾ): ಥಾಮಸ್‌ ಕಪ್‌(Thomas Cup 2024) ಟೂರ್ನಿಯಲ್ಲಿ ಈಗಾಗಗಲೇ ಕ್ವಾರ್ಟರ್​ ಫೈನಲ್​ ಪ್ರವೇಶಿಸಿರುವ ಹಾಲಿ ಚಾಂಪಿಯನ್ ಭಾರತ(Indian men’s Badminton team) ತಂಡ ತನ್ನ ಅಂತಿಮ ಲೀಗ್​ ಪಂದ್ಯದಲ್ಲಿ 14 ಬಾರಿಯ ಚಾಂಪಿಯನ್ ಇಂಡೊನೇಷ್ಯಾ ವಿರುದ್ಧ 1-4 ಅಂತರದಿಂದ ಸೋಲನುಭವಿಸಿದೆ. ಭಾರತ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಚೀನಾದ ಸವಾಲು ಎದುರಿಸಲಿದೆ. ಇಂಡೊನೇಷ್ಯಾ ತಂಡ ಕೊರಿಯಾ ವಿರುದ್ಧ ಆಡಲಿದೆ.

ಬುಧವಾರ ನಡೆದ ‘ಸಿ’ ಗುಂಪಿನ ಪಂದ್ಯದಲ್ಲಿ ಭಾರತ ಮೊದಲು ಗೆಲುವಿನಿ ಖಾತೆ ತೆರೆದರೂ ಕೂಡ ಆ ಬಳಿಕದ ಪಂದ್ಯಗಳಲ್ಲಿ ಇದೇ ಲಯವನ್ನು ಮುಂದುವರಿಸುವಲ್ಲಿ ವಿಫವಾಗಿ ಸೋಲನುಭವಿಸಿತು. ಇಂಡೊನೇಷ್ಯಾ ಲೀಗ್​ನಲ್ಲಿ ಆಡಿದ ಎಲ್ಲ ಮೂರೂ ಪಂದ್ಯ ಗೆದ್ದು ಅಗ್ರಸ್ಥಾನ ಪಡೆಯಿತು. ಭಾರತ ಎರಡು ಗೆಲುವಿನೊಂದಿಗೆ ಎರಡನೇ ಸ್ಥಾನ ಪಡೆಯಿತು.

ಸೇಡು ತೀರಿಸಿಕೊಂಡ ಇಂಡೊನೇಷ್ಯಾ


ಈ ಹಿಂದಿನ ಆವೃತ್ತಿಯ ಫೈನಲ್‌ನಲ್ಲಿ ಭಾರತ 3-0 ಅಂತರದಿಂದ ಇಂಡೊನೇಷ್ಯಾಗೆ ಹೀನಾಯವಾಗಿ ಸೋಲುಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದಿತ್ತು. ಆ ಸೋಲಿಗೆ ಈ ಬಾರಿಯ ಟೂರ್ನಿಯಲ್ಲಿ ಇಂಡೊನೇಷ್ಯಾ ಸೇಡು ತೀರಿಸಿಕೊಂಡಿತು. ಸಿಂಗಲ್ಸ್​ನಲ್ಲಿ ಕಣಕ್ಕಿಳಿದ ಅನುಭವಿ ಎಚ್‌.ಎಸ್‌.ಪ್ರಣಯ್ 13-21, 21-12, 21-12 ಮೂರು ಗೇಮ್​ಗಳ ತೀವ್ರ ಹೋರಾಟದಿಂದ ಅಂಥೋನಿ ಜಿಂಟಿಂಗ್ ಅವರನ್ನು ಸೋಲಿಸಿ ಭಾರತಕ್ಕೆ ಆರಂಭಿಕ ಮುನ್ನಡೆ ಒದಗಿಸಿದ್ದರು. ಆದರೆ ಡಬಲ್ಸ್‌ನಲ್ಲಿ ಬರವಸೆಯ ಜೋಡಿ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ 24-22, 22-24, 19-21 ಗೇಮ್​ಗಳ ಅಂತರದಲ್ಲಿ ಮುಹಮ್ಮದ್ ಶೊಹಿನುಲ್ ಫಿಕ್ರಿ- ಬಗಾಸ್ ಮೌಲಾನಾ ಎದುರು ಶರಣಾದರು.

1-1 ಸಮಬಲಗೊಂಡ ವೇಳೆ ಮೂರನೇ ಪಂದ್ಯದಲ್ಲಿ ಆಡಲಿಳಿದ 22 ವರ್ಷದ ಲಕ್ಷ್ಯ ಸೇನ್ 18-21, 21-16, 17-21ರಲ್ಲಿ ಆಲ್‌ ಇಂಗ್ಲೆಂಡ್ ಸಿಂಗಲ್ಸ್ ಚಾಂಪಿಯನ್ ಜೊನಾಥನ್ ಕ್ರಿಸ್ಟಿ ವಿರುದ್ಧ ಸೋಲು ಕಂಡರು. ಎದುರಾಳಿ ಇಂಡೊನೇಷ್ಯಾ 2-1 ಅಂತರದ ಮುನ್ನಡೆ ಸಾಧಿಸಿತು. ನಾಲ್ಕನೇ ಪಂದ್ಯದಲ್ಲಿ ಧ್ರುವ್ ಕಪಿಲ- ಸಾಯಿ ಪ್ರತೀಕ್ ಜೋಡಿ 20-22, 11-21ರಲ್ಲಿ ಲಿಯೊ ರೋಲಿ ಕರ್ನಾಲ್ಡೊ – ಡೇನಿಯಲ್ ಮಾರ್ಟಿನ್ ಅವರಿಗೆ ನೇರ ಗೇಮ್‌ಗಳಲ್ಲಿ ಮಣಿದರು. ಅಂತಿಮ ಸಿಂಗಲ್ಸ್‌ ಪಂದ್ಯದಲ್ಲಿ ಕಿದಂಬಿ ಶ್ರೀಕಾಂತ್ 21-19, 22-24, 14-21ರಲ್ಲಿ ಚಿಕೊ ಆರೊ ದ್ವಿ ವಾರ್ಡೊಯೊ ಎದುರು ಸೋಲು ಕಾಣುವ ಮೂಲಕ ಭಾರತದ ಸವಾಲು ಅಂತ್ಯಗೊಂಡಿತು.

ಇದನ್ನೂ ಓದಿ Thomas Cup 2024: ಕ್ವಾರ್ಟರ್‌ ಫೈನಲ್​ಗೆ ಲಗ್ಗೆಯಿಟ್ಟ ಹಾಲಿ ಚಾಂಪಿಯನ್​ ಭಾರತ

ಸೋಮವಾರ ನಡೆದಿದ್ದ ‘ಸಿ’ ಗುಂಪಿನ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್‌ ವಿರುದ್ಧ 5-0 ಅಂತರದಿಂದ ಭರ್ಜರಿ ಗೆಲುವು ಸಾಧಿಸಿತ್ತು. ಮೊದಲ ಪಂದ್ಯದಲ್ಲಿ ಭಾರತ 4-1 ಅಂತರದಿಂದ ಥಾಯ್ಲೆಂಡ್ ತಂಡವನ್ನು ಸೋಲಿಸಿತ್ತು.

ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ “ಎ’ ವಿಭಾಗದ ಕೊನೆಯ ಸುತ್ತಿನ ಪಂದ್ಯದಲ್ಲಿ ಭಾರತದ ಮಹಿಳೆಯರು ಆತಿಥೇಯ ಚೀನಕ್ಕೆ 5-0 ಅಂತರದಿಂದ ಸೋಲು ಕಂಡಿದ್ದರು.

Continue Reading

ಕ್ರೀಡೆ

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

IPL 2024 Points Table: ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶಿಸಲಿದೆ. ಸನ್​ರೈಸರ್ಸ್​ ಗೆದ್ದರೆ ಚೆನ್ನೈ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ.

VISTARANEWS.COM


on

IPL 2024 Points Table
Koo

ಚೆನ್ನೈ: ಬುಧವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 7 ವಿಕೆಟ್​ ಅಂತರದ ಹೀನಾಯ ಸೋಲು ಕಂಡಿತು. ಗೆಲುವು ಸಾಧಿಸಿದ ಪಂಜಾಬ್​ ಅಂಕಪಟ್ಟಿಯಲ್ಲಿ(IPL 2024 Points Table) ಗುಜರಾತ್​ ಟೈಟಾನ್ಸ್​ ತಂಡವನ್ನು ಹಿಂದಿಕ್ಕಿ 7ನೇ ಸ್ಥಾನಕ್ಕೇರಿತು. ಜತೆಗೆ ಪ್ಲೇ ಆಫ್​ ಆಸೆಯನ್ನು ಇನ್ನೂ ಜೀವಂತವಿರಿಸಿತು. ಚೆನ್ನೈ ಸೋಲು ಕಂಡರೂ ಕೂಡ ಈ ಹಿಂದಿನಂತೆ 4ನೇ ಸ್ಥಾನದಲ್ಲೇ ಮುಂದುವರಿಯಿತು.

ಇಂದು ನಡೆಯುವ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ಮುಖಾಮುಖಿಯಾಗಲಿವೆ. ರಾಜಸ್ಥಾನ್ ಗೆದ್ದರೆ ಮೊದಲ ತಂಡವಾಗಿ ಪ್ಲೇ ಆಫ್​ಗೆ ಪ್ರವೇಶಿಸಲಿದೆ. ಸನ್​ರೈಸರ್ಸ್​ ಗೆದ್ದರೆ ಚೆನ್ನೈ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಚೆನ್ನೈ​105510 (+0.627)
ಹೈದರಾಬಾದ್​95410 (+0.075)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

Continue Reading

ಕ್ರೀಡೆ

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

CSK vs PBKS: ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು

VISTARANEWS.COM


on

CSK vs PBKS
Koo

ಚೆನ್ನೈ: ಪ್ಲೇ ಆಫ್​ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(CSK vs PBKS)​ ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರದ್ದೇ ನೆಲದಲ್ಲಿ 7 ವಿಕೆಟ್​ಗಳಿಂದ ಮಗುಚಿ ಹಾಕಿದೆ. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು. ಜಾನಿ ಬೇರ್​ಸ್ಟೋ(46 ರನ್​) ಮತ್ತು ರಾಹುಲ್​ ಚಹರ್​ (16ಕ್ಕೆ 2 ವಿಕೆಟ್​) ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈಗೆ ಗಾಯಕ್ವಾಡ್​ ಆಸರೆ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ದುಬೆ ಬ್ಯಾಟಿಂಗ್​ ವಿಫಲ


ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಹರ್​ಪ್ರೀತ್​ ಬ್ರಾರ್​ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. ಮೊಯಿನ್​ ಅಲಿ ಕ್ಯಾಚ್​ನಿಂದ ಒಂದು ಜೀವದಾನ ಪಡೆದರೂ ಕೂಡ ಇದರ ಲಾಭವೆತ್ತಲು ವಿಫಲರಾದರು. 15 ರನ್​ ಗಳಿಸಿ ರಾಹುಲ್​ ಚಹರ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಮಹೇಂದ್ರ ಸಿಂಗ್​ ಧೋನಿ 11 ಎಸೆತಗಳಿಂದ 14 ರನ್​ ಗಳಿಸಿ ರನೌಟ್​ ಆದರು.

ಇದುವರೆಗೆ ದ್ವಿತೀಯ ಕ್ರಮಾಂಕದಲ್ಲಿ ಆಡುತ್ತಿದ್ದ ಡೇರಿಯಲ್​ ಮಿಚೆಲ್​ ಅವರನ್ನು ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಆಡಿಸಲಾಯಿತು. ಈ ಪ್ರಯೋಗ ಚೆನ್ನೈಗೆ ಭಾರೀ ಹಿನ್ನಡೆ ಉಂಟುಮಾಡಿತು. ಅವರನ್ನು ಎಂದಿನಂತೆ 2ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದರೆ ದೊಡ್ಡ ಮೊತ್ತವನ್ನು ಕಲೆಹಾಕಬಹುದಾಗಿತ್ತು. ಪಂಜಾಬ್​ ಪರ ರಾಹುಲ್​ ಚಹರ್​ ಮತ್ತು ಹರ್​ಪ್ರೀತ್​ ಬ್ರಾರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading
Advertisement
CoWin Certificates
ದೇಶ10 mins ago

CoWIN Certificates: ಕೋವಿಡ್‌ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಔಟ್‌; ಕೇಂದ್ರ ಹೇಳೋದೇನು?

PBKS vs CSK
ಕ್ರೀಡೆ13 mins ago

PBKS vs CSK: ಕೆಕೆಆರ್​ ದಾಖಲೆ ಹಿಂದಿಕ್ಕಿದ ಪಂಜಾಬ್​ ಕಿಂಗ್ಸ್

Parineeti Chopra husband Raghav Chadha doing well after eye surgery
ಬಾಲಿವುಡ್22 mins ago

Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

Rahul Gandhi
ಪ್ರಮುಖ ಸುದ್ದಿ29 mins ago

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Job Alert
ಉದ್ಯೋಗ33 mins ago

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

After SSLC career options
ಶಿಕ್ಷಣ37 mins ago

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಯಾವುದು ಉತ್ತಮ ಆಯ್ಕೆ?

Thomas Cup 2024
ಬ್ಯಾಡ್ಮಿಂಟನ್38 mins ago

Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

Aadhaar Crads For Dog
ಪ್ರಮುಖ ಸುದ್ದಿ42 mins ago

Aadhaar Crads For Dog: ದೆಹಲಿಯಲ್ಲಿ ನಾಯಿಗಳಿಗೂ ಬಂತು ಆಧಾರ್ ಕಾರ್ಡ್!

Pushpa 2 The Rule Title track out
ಟಾಲಿವುಡ್54 mins ago

Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

Congress Candidate List
Lok Sabha Election 202457 mins ago

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌