Site icon Vistara News

Virat-Anushka: ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿ ಕೊಹ್ಲಿ-ಅನುಷ್ಕಾ ಜೋಡಿ

virat anushka

ಮುಂಬಯಿ: ಭಾರತ ಕ್ರಿಕೆಟ್‌ ತಂಡದ ಆಟಗಾರ ವಿರಾಟ್‌ ಕೊಹ್ಲಿ(Virat-Anushka) ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮ(anushka sharma) ದಂಪತಿಗೆ ಇಂದು 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ. ಈ ಜೋಡಿಗೆ ಅವರ ಅಭಿಮಾನಿಗಳು ಮತ್ತು ಮಿತ್ರರು ಶುಭ ಕೋರಿ, ನೂರಾರು ಕಾಲ ಸುಖವಾಗಿ ಬಾಳಿ ಎಂದು ಹಾರೈಸಿದ್ದಾರೆ.

ಕೊಹ್ಲಿ ಮತ್ತು ಅನುಷ್ಕಾ 2017 ಡಿ.11 ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಈ ಜೋಡಿಯ ವಿವಾಹ ಇಟಲಿಯ ಐತಿಹಾಸಿಕ ರೋಮ್‌ ನಗರದ ಟಸ್ಕನಿ ಎಂಬ ಹಳ್ಳಿಯ ಬೋರ್ಗೋ ಫಿನೊಶಿಯೆಟೊ ಎಂಬ ರೆಸಾರ್ಟ್‌ನಲ್ಲಿ ಖಾಸಗಿಯಾಗಿ ನಡೆದಿತ್ತು. 6ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಈ ಜೋಡಿ ಲಂಡನ್​ನಲ್ಲಿ ಆಚರಿಸಿದ್ದಾರೆ.

ಈ ಜೋಡಿ ಅದೆಷ್ಟೋ ಜನರಿಗೆ ಸ್ಫೂರ್ತಿ

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.


“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.

ಇದನ್ನೂ ಓದಿ Vijay Hazare Trophy: ಸೆಮಿಫೈನಲ್​ ಪ್ರವೇಶಿಸಿದ ಕರ್ನಾಟಕ


ಎರಡನೇ ಮಗುವಿನ ನಿರೀಕ್ಷೆಯಲ್ಲಿ ಕೊಹ್ಲಿ-ಅನುಷ್ಕಾ

2021ರ ಜನವರಿಯಲ್ಲಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಇದೀಗ ಅನುಷ್ಕಾ ಗರ್ಭಿಣಿಯಾಗಿದ್ದು ದ್ವಿತೀಯ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ತಕ್ಷಣ ವಿರಾಟ್​ ಅವರ ಅಭಿಮಾನಿಗಳು ಪ್ರಿನ್ಸ್​ ಕಿಂಗ್​ ಕೊಹ್ಲಿ ನೋಡಲು ಕಾತರವಾಗಿದ್ದೇವೆ ಎಂದು ಕಮೆಂಟ್​ ಮಾಡಿದ್ದರು. ಸದ್ಯ ವಿರಾಟ್​ ಅವರು ವಿಶ್ವಕಪ್​ ಟೂರ್ನಿಯ ಬಳಿಕ ವಿಶ್ರಾಂತಿಯಲ್ಲಿದ್ದಾರೆ. ತಮ್ಮ ಕುಟುಂಬದ ಜತೆ ಲಂಡನ್​ನಲ್ಲಿದ್ದಾರೆ.

Exit mobile version