ಬಾರ್ಬಡೋಸ್: ದ್ವೀಪ ರಾಷ್ಟ್ರ ಬಾರ್ಬಡೋಸ್‌ನಲ್ಲಿ ಅಬ್ಬರಿಸುತ್ತಿರುವ ಅಪಾಯಕಾರಿ ಬೆರಿಲ್ ಚಂಡಮಾರುತದ(Hurricane Beryl) ಪ್ರಭಾವದಿಂದ ಬಾರ್ಬಡೋಸ್ನಲ್ಲಿಯೇ ತಂಗಿರುವ ಟಿ20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾ ಆಟಗಾರರು ಗುರುವಾರ ಭಾರತಕ್ಕೆ ವಿಮಾನ ಏರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್ ಆಗಿದೆ.
ಸದ್ಯ ಟೀಮ್ ಇಂಡಿಯಾದ ಆಟಗಾರರು ಮತ್ತವರ ಕುಟುಂಬಸ್ಥರು, ಬಿಸಿಸಿಐ ಅಧಿಕಾರಿಗಳು ಸೇರಿ ಇಡೀ ತಂಡ ಬಾರ್ಬಡೋಸ್ನ ಹೊಟೇಲ್‌ನಲ್ಲಿ ತಂಗಿದೆ. ಚಂಡಮಾರುತದ ಕಾರಣ, ಭಾರತೀಯ ಆಟಗಾರರಿರುವ ಹೊಟೇಲ್ ಸೇವೆಯಲ್ಲೂ ವ್ಯತ್ಯಯವಾಗಿದೆ ಎಂದು ವರದಿಯಾಗಿದೆ. ಟಿ 20 ವಿಶ್ವಕಪ್ ಫೈನಲ್ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಬೆರಿಲ್ ಚಂಡಮಾರುತವು ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿತ್ತು.
ಇದನ್ನೂ ಓದಿ Virat Kohli: ಬುರ್ಜ್ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್ ಕೊಹ್ಲಿಯ ಫೋಟೊ; ವಿಡಿಯೊ ವೈರಲ್
ವಿರಾಟ್ ಕೊಹ್ಲಿ ತಾವು ತಂಗಿರುವ ಹೊಟೇಲ್ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್ ಮೂಲಕ ತೋರಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.
ಟಿ20 ವಿಶ್ವಕಪ್ ಗೆದ್ದ ಬಳಿಕವೂ ಕೂಡ ಕೊಹ್ಲಿ ಪತ್ನಿಗೆ ಕರೆ ಮಾಡಿ ಮಕ್ಕಳ ಬಗ್ಗೆ ವಿಚಾರಿಸಿದ್ದಾರೆ. ಜತೆಗೆ ಪುಟ್ಟ ಮಗುವಿಗೆ ಫ್ಲೈಯಿಂಗ್ ಕಿಸ್ ನೀಡಿದ ವಿಡಿಯೊ ಕೂಡ ವೈರಲ್ ಆಗಿತ್ತು.
ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.
“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.