ಬೆಂಗಳೂರು: ವಿರಾಟ್ ಕೊಹ್ಲಿಗೆ(Virat-Anushka) ಸ್ಫೂರ್ತಿ ತುಂಬಲು ಸದ್ಯದಲ್ಲಿಯೇ ಅವರ ಪತ್ನಿ ಅನುಷ್ಕಾ ಶರ್ಮಾ(Anushka Sharma) ಐಪಿಎಲ್(IPL 2024) ವೀಕ್ಷಣೆಗೆ ಬರಲಿದ್ದಾರೆ ಎಂದು ವರದಿಯಾಗಿದೆ. ಅಕಾಯ್ ಹೆಸರಿನ ಗಂಡು ಮಗುವಿಗೆ ಜನ್ಮ ನೀಡಿರುವ ಅನುಷ್ಕಾ ಸದ್ಯ ಲಂಡನ್ನಲ್ಲಿಯೇ ವಾಸವಾಗಿದ್ದಾರೆ. ಕೊಹ್ಲಿ ಮಾತ್ರ ಐಪಿಎಲ್ ಆಡುವ ಸಲುವಾಗಿ ಭಾರತಕ್ಕೆ ಬಂದಿದ್ದಾರೆ. ಕೆಲವೇ ದಿನಗಳಲ್ಲಿ ಅನುಷ್ಕಾ ಕೂಡ ಭಾರತಕ್ಕೆ ಬರಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಅನುಷ್ಕಾ ಅವರು ವಿರಾಟ್ ಕೊಹ್ಲಿಗೆ(Virat Kohli) ಸ್ಫೂರ್ತಿ ನೀಡಲೆಂದೇ ಐಪಿಎಲ್ನ ದ್ವಿತಿಯಾರ್ಧದ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಎರಡನೇ ಮಗುವಾದ ಬಳಿಕ ಅನುಷ್ಕಾ ಇದುವರೆಗೂ ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಎರಡನೇ ಹಂತದ ಐಪಿಎಲ್ ಪಂದ್ಯದ ವೇಳೆಗೆ ತಮ್ಮ ಪತಿ ವಿರಾಟ್ ಪ್ರತಿನಿಧಿಸುವ ಆರ್ಸಿಬಿ ಪಂದ್ಯ ವೀಕ್ಷಣೆಗೆ ಮೈದಾನಕ್ಕೆ ಬರಲಿದ್ದಾರೆ ಎನ್ನಲಾಗಿದೆ. ಹಿಂದೆ ಅನೇಕ ಬಾರಿ ಅನುಷ್ಕಾ ಮೈದಾನದಲ್ಲಿದ್ದು, ಪತಿ ಕೊಹ್ಲಿಗೆ ಚಿಯರ್ ಅಪ್ ಮಾಡಿದ್ದರು. ಕಳೆದ ಬಾರಿ ಏಕದಿನ ವಿಶ್ವಕಪ್ ಟೂರ್ನಿಯ ವೇಳೆಯೂ ಬಹುತೇಖ ಪಂದ್ಯಗಳಲ್ಲಿ ಅನುಷ್ಕಾ ಅವರು ಕೊಹ್ಲಿಗೆ ಹುರಿದುಂಬಿಸಿದ ಫೋಟೊ ಮತ್ತು ವಿಡಿಯೊಗಳು ವೈರಲ್ ಆಗಿತ್ತು.
ಕಳೆದ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾದ (Australia) ವಿರುದ್ಧ ಸೋತ ಬೇಸರದಲ್ಲಿ ವಿರಾಟ್ ಕೊಹ್ಲಿ ತಮ್ಮ ಹೆಂಡತಿ ಇರುವ ಸ್ಟ್ಯಾಂಡ್‌ನತ್ತ ಹೋದಾಗ ಅನುಷ್ಕಾ ಶರ್ಮಾ ವಿರಾಟ್ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡಿದ್ದರು. ಈ ಫೋಟೊ ವೈರಲ್ ಆಗಿತ್ತು.
Anushka Sharma hugging Virat Kohli after the loss in the final. [Sportstar]
— Johns. (@CricCrazyJohns) November 19, 2023
– This is painful. pic.twitter.com/dUYo7oAZAF
ವಿರಾಟ್ ಕೊಹ್ಲಿ (Virat Kohli) ತಮ್ಮ 50 ನೇ ಏಕದಿನ ಶತಕವನ್ನು ಗಳಿಸುತ್ತಿದ್ದಂತೆ ಇಡೀ ದೇಶವು ಶಹಬ್ಬಾಸ್ಗಿರಿ ನೀಡಿತ್ತು. ಈ ವೇಳೆ ಸ್ಟೇಡಿಯಮ್ನ ಗ್ಯಾಲರಿಯಲ್ಲಿದ್ದ ಅವರ ಪತ್ನಿ ಮತ್ತು ಅವರ ಪಾಲಿನ ಅತಿದೊಡ್ಡ ಚಿಯರ್ ಲೀಡರ್ ಅನುಷ್ಕಾ ಶರ್ಮಾ ಆನಂದಭಾಷ್ಪ ಸುರಿಸಿದ್ದರು. ಜತೆಗೆ ನೂರಾರು ಫ್ಲೈಯಿಂಗ್ ಕಿಸ್ ಕೊಟ್ಟು ಖುಷಿ ಪಟ್ಟಿದ್ದರು.
ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್ಜಿವೊ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸಾದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.
ಇದನ್ನೂ ಓದಿ Virat Kohli: ಅವಾಚ್ಯ ಪದ ಬಳಕೆ, ದುರ್ವರ್ತನೆ ತೋರಿದ ವಿರಾಟ್ ಕೊಹ್ಲಿ; ವಿಡಿಯೊ ವೈರಲ್
“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು. ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ” ಎಂದು ಕೊಹ್ಲಿ ಪತ್ನಿ ಅನುಷ್ಕಾ ಬಗ್ಗೆ ಮೆಚ್ಚುಗೆಯ ಮಾತುಗಳನಾಡಿದ್ದರು.