ಅಡಿಲೇಡ್ : ಟೀಮ್ ಇಂಡಿಯಾದ (Team India) ಆರಂಭಿಕ ಬ್ಯಾಟರ್ ಕೆ ಎಲ್ ರಾಹುಲ್ ಫಾರ್ಮ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅವರ ವಿರುದ್ಧ ಕ್ರಿಕೆಟ್ ಫ್ಯಾನ್‌ಗಳು ತಿರುಗಿ ಬಿದ್ದಿದ್ದಾರೆ. ಹಿರಿಯ ಹಾಗೂ ಮಾಜಿ ಕ್ರಿಕೆಟಿಗರು ಟೀಕೆಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಕನ್ನಡಿಗ ಕೆ. ಎಲ್ ರಾಹುಲ್ ಅವರು ಮುಂದಿನ ಪಂದ್ಯಗಳಲ್ಲಿ ಅಬ್ಬರದ ಬ್ಯಾಟಿಂಗ್ ಮಾಡುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಲೇಬೇಕು. ಅದಕ್ಕಾಗಿ ಅವರು ಸತತವಾಗಿ ಅಭ್ಯಾಸ ಮಾಡುತ್ತಿದ್ದಾರೆ. ಈ ರೀತಿಯಾಗಿ ಕಷ್ಟಕ್ಕೆ ಸಿಲುಕಿರುವ ಕೆ. ಎಲ್ ರಾಹುಲ್‌ಗೆ ಆತ್ಮೀಯ ಗೆಳೆಯ ವಿರಾಟ್ ಕೊಹ್ಲಿ ನೆರವು ಕೊಡುತ್ತಿದ್ದಾರೆ.
ಬಾಂಗ್ಲಾದೇಶ ವಿರುದ್ಧದ ಟಿ೨೦ ವಿಶ್ವ ಕಪ್‌ನ ಸೂಪರ್-೧೨ ಹಂತದ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಅಡಿಲೇಡ್‌ಗೆ ತಲುಪಿದೆ. ಸೋಮವಾರ ವಿಶ್ರಾಂತಿ ಪಡೆದ ಟೀಮ್ ಇಂಡಿಯಾ ಆಟಗಾರರು ಮಂಗಳವಾರ ನೆಟ್ ಪ್ರಾಕ್ಟೀಸ್ ಮಾಡಿದೆ. ಈ ವೇಳೆ ಕೆ ಎಲ್ ರಾಹುಲ್‌ಗೆ ಅವರಿಗೆ ವಿರಾಟ್ ಕೊಹ್ಲಿ ಕೆಲವೊಂದು ತಂತ್ರಗಳನ್ನು ಹೇಳಿಕೊಡುತ್ತಿದ್ದರು. ಈ ಮೂಲಕ ಕಷ್ಟಕಾಲದಲ್ಲಿರುವ ಗೆಳೆಯನಿಗೆ ಅವರು ನೆರವು ನೀಡಲು ಮುಂದಾಗಿದ್ದಾರೆ.
ಆಸ್ಟ್ರೇಲಿಯಾದ ಬೌನ್ಸಿ ಪಿಚ್‌ನಲ್ಲಿ ಆರಂಭಿಕ ಬ್ಯಾಟರ್‌ಗಳಿಗೆ ರನ್ ಗಳಿಸಲು ಸಾಧ್ಯವಾಗುತ್ತಿಲ್ಲ. ಎಲ್ಲ ತಂಡಗಳ ಆರಂಭಿಕ ಬ್ಯಾಟರ್‌ಗಳು ರನ್ ಬರ ಎದುರಿಸುತ್ತಿದ್ದಾರೆ. ಅಂತೆಯೇ ಕೆ. ಎಲ್ ರಾಹುಲ್ ಕೂಡ ಬೇಗನೆ ವಿಕೆಟ್ ಒಪ್ಪಿಸುತ್ತಿದ್ದಾರೆ. ಆದರೆ, ಟೀಕಾಕಾರರು ರಾಹುಲ್ ಅವರನ್ನು ಮಾತ್ರ ಗುರಿಯಾಗಿಸುತ್ತಿದ್ದಾರೆ. ಆದರೆ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆ. ಎಲ್ ರಾಹುಲ್ ಉತ್ತಮ ಆಟಗಾರ. ಅವರು ಉತ್ತಮ ಪ್ರದರ್ಶನ ಕೊಟ್ಟೇ ಕೊಡುತ್ತಾರೆ ಎಂಬುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | KL Rahul | ಕೆ.ಎಲ್. ರಾಹುಲ್ ಅದ್ಭುತ ಆಟಗಾರ; ಕೋಚ್ ರಾಹುಲ್ ದ್ರಾವಿಡ್ ವಿಶ್ವಾಸ