Site icon Vistara News

Virat kohli : ವಿರಾಟ್ ಸಾಧನೆಗಳ ಕಿರೀಟಕ್ಕೊಂದು ಗರಿ; 7500 ರನ್​ ಗಡಿ ದಾಟಿದ ಕಿಂಗ್ ಕೊಹ್ಲಿ

Virat kohli

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ 7500 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಜೈಪುರದಲ್ಲಿ ಶನಿವಾರ ನಡೆದ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಮಾಜಿ ಆರ್​ಸಿಬಿ ನಾಯಕ ಈ ಮೈಲಿಗಲ್ಲನ್ನು ಸಾಧಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಐಪಿಎಲ್​ನ ಇನಿಂಗ್ಸ್​ವೊಂದರಲ್ಲಿ ಗರಿಷ್ಠ 113 ಗರಿಷ್ಠ ಸ್ಕೋರ್ ಗಳಿಸಿರುವ ಭಾರತೀಯ ಬ್ಯಾಟಿಂಗ್ ಮಾಂತ್ರಿಕ ಪಂದ್ಯಾವಳಿಯಲ್ಲಿ 37 ಸರಾಸರಿ ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಐಪಿಎಲ್​ನಲ್ಲಿ ಹಲವಾರು ದಾಖಲೆಗಳನ್ನು ಹೊಂದಿದ್ದಾರೆ. ಅಂತೆಯೇ ಇದೀಗ ಅವರು ಹೊಸ ದಾಖಲೆಯನ್ನು ಮಾಡಿದ್ದಾರೆ. ಪಂಜಾಬ್ ತಂಡದ ನಾಯಕ ಶಿಖರ್ ಧವನ್​ 6755 ರನ್ ಬಾರಿಸಿ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್​ 6545 ರನ್ ಬಾರಿಸಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. 6280 ರೋಹಿತ್ ಶರ್ಮಾ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಮಾಜಿ ಆಟಗಾರ ಸುರೇಶ್ ರೈನಾ 5528 ರನ್ ಬಾರಿಸಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಮುಂದಿನ ವರ್ಷದ ಐಪಿಎಲ್​ನಲ್ಲಿ ಈ ತಂಡಗಳ ನಾಯಕರು ಸ್ಥಾನ ಕಳೆದುಕೊಳ್ಳಬಹುದು

2008 ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಆಡಿದ್ದಾರೆ. ಅವರು ಚಾಂಪಿಯನ್​ಪಟ್ಟ ಗಳಿಸದೇ ಹೋದರೂ ಅವರು ನಿಷ್ಠಾವಂತ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ವಿಶೇಷ ದಾಖಲೆ ಬರೆದ​ ಕೊಹ್ಲಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಐಪಿಎಲ್ 2024 ರ (IPL 2024) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ವಿರಾಟ್ ಕೊಹ್ಲಿ (Virat kohli) ತಮ್ಮ 100 ನೇ ಟಿ 20 ಪಂದ್ಯವನ್ನು ಆಡಿದ್ದಾರೆ. ಒಂದೇ ಸ್ಥಳದಲ್ಲಿ 100 ಟಿ 20 ಪಂದ್ಯಗಳನ್ನು ಆಡಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ 69 ಪಂದ್ಯಗಳನ್ನು ಆಡಿರುವ ಎಂಎಸ್ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.

ಈ ಅಪ್ರತಿಮ ಕ್ರೀಡಾಂಗಣವು 2008 ರಿಂದ ಅವರ ಐಪಿಎಲ್ ತವರು ಮೈದಾನವಾಗಿದೆ. 2008 ಐಪಿಎಲ್​ನ ಉದ್ಘಾಟನಾ ಋತುವಾಗಿದೆ. ಐಪಿಎಲ್ ಇತಿಹಾಸದಲ್ಲಿ 2008 ರಿಂದ ಒಂದೇ ಫ್ರಾಂಚೈಸಿಗಾಗಿ ಆಡುತ್ತಿರುವ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಎಂಎಸ್ ಧೋನಿ ಮೊದಲ ಐಪಿಎಲ್ ಋತುವಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದರೆ. ಚೆನ್ನೈ ಮೂಲದ ತಂಡವನ್ನು ಎರಡು ವರ್ಷ ಅಮಾನತುಗೊಳಿಸಿದಾಗ ಅವರು ರೈಸಿಂಗ್ ಪುಣೆ ಸೂಪರ್ಜೈಂಟ್ಸ್​ ಪರ ಎರಡು ಋತುಗಳಲ್ಲಿ ಆಡಬೇಕಾಯಿತು.

ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ರನ್ ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿ20 ಕ್ರಿಕೆಟ್ನಲ್ಲಿ 3276 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ನಂತರ ರೋಹಿತ್ ಶರ್ಮಾ ಒಂದೇ ಸ್ಥಳದಲ್ಲಿ ಅತಿ ಹೆಚ್ಚು ಟಿ 20 ಪಂದ್ಯಗಳನ್ನು ಆಡಿದ ಭಾರತೀಯರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ ವಾಂಖೆಡೆ ಸ್ಟೇಡಿಯಂನಲ್ಲಿ 80 ಪಂದ್ಯಗಳನ್ನು ಆಡಿದ್ದಾರೆ.

Exit mobile version