Site icon Vistara News

Virat Kohli | ಕಿಂಗ್​ ಕೊಹ್ಲಿಗೆ ಹುಟ್ಟುಹಬ್ಬದ ಸಂಭ್ರಮ; ಹಲವರಿಂದ ಶುಭಾಶಯ

koli

ಮುಂಬಯಿ: ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ(Virat Kohli) ಅವರಿಗೆ ಇಂದು (ನವೆಂಬರ್‌ 5, ಶನಿವಾರ) 34ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಅನೇಕ ಹಿರಿಯ, ಕಿರಿಯ ಕ್ರಿಕೆಟಿಗರು ಸೇರಿದಂತೆ ಅಭಿಮಾನಿಗಳು ನೆಚ್ಚಿನ ಆಟಗಾರನಿಗೆ ಶುಭ ಕೋರಿದ್ದಾರೆ.

ಜಿಂಬಾಬ್ವೆ ವಿರುದ್ಧದ ಮಹತ್ವದ ಪಂದ್ಯದಕ್ಕೆ ಟೀಮ್‌ ಇಂಡಿಯಾ ಮೆಲ್ಬೋರ್ನ್‌ನಲ್ಲಿ ಸಿದ್ಧತೆ ನಡೆಸುತ್ತಿದೆ. ಇದೇ ವೇಳೆ ಕೇಕ್ ಕತ್ತರಿಸಿ, ಕೊಹ್ಲಿ ಜನ್ಮದಿನವನ್ನು ಆಚರಿಸಿದ್ದಾರೆ. ಮೆಲ್ಬೋರ್ನ್‌ನಲ್ಲಿ ತಂಡವು ವಿರಾಟ್ ಕೊಹ್ಲಿ ಅವರ ಜನ್ಮದಿನವನ್ನು ಆಚರಿಸಿರುವ ಕೆಲ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

“ಟೀಮ್ ಇಂಡಿಯಾದ ಮಾಜಿ ನಾಯಕ ಮತ್ತು ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾದ ವಿರಾಟ್‌ ಕೊಹ್ಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು” ಎಂದು ಬಿಸಿಸಿಐ ಟ್ವೀಟ್ ಮಾಡಿದೆ. ಉಳಿದಂತೆ “ವಿಶ್ವ ಕ್ರಿಕೆಟ್‌ನ ಅತ್ಯಂತ ನಿರ್ಭೀತ ಆಟಗಾರರಲ್ಲಿ ಒಬ್ಬರಾದ ‘ನಮ್ಮ ವಿರಾಟ ರಾಜ’ನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಆರ್‌ಸಿಬಿ ಕೂಡ ಟ್ವೀಟ್ ಮಾಡಿ ಶುಭಕೋರಿದೆ.

ಇದನ್ನೂ ಓದಿ | Virat Kohli Birthday | ಇಲ್ಲಿವೆ ವಿರಾಟ್‌ ಕೋಹ್ಲಿ ಬಾಲ್ಯದ ಭಾವಚಿತ್ರಗಳು

Exit mobile version