ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಫೇವರಿಟ್ ಆಟಗಾರರಾದ ವಿರಾಟ್ ಕೊಹ್ಲಿ, ಕ್ರಿಸ್ಗೇಲ್ ಹಾಗೂ ಎಬಿಡಿ ವಿಲಿಯರ್ಸ್ ಶನಿವಾರ ಬೆಂಗಳೂರಿಗೆ ಬಂದಿದ್ದಾರೆ. ಈ ಮೂವರು ಆಟಗಾರರು ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾರ್ಚ್ 31ರಂದು ಐಪಿಎಲ್ 16ನೇ ಆವೃತ್ತಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಆರ್ಸಿಬಿ ಫ್ರಾಂಚೈಸಿ ಕಾರ್ಯಕ್ರಮ ಆಯೋಜಿಸಿದೆ.
ಎಬಿಡಿ ವಿಲಿಯರ್ಸ್ಗೆ ಆರ್ಸಿಬಿ ನೀಡಿದ ಸ್ವಾಗತ ಈ ರೀತಿ ಇದೆ
ಕ್ರಿಸ್ ಗೇಲ್, ವಿಲಿಯರ್ಸ್ ಹಾಗೂ ವಿರಾಟ್ ಕೊಹ್ಲಿ ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮಾಹಿತಿಯನ್ನು ಆರ್ಸಿಬಿ ಫ್ರಾಂಚೈಸಿ ತನ್ನ ಟ್ವೀಟ್ ಖಾತೆಯಲ್ಲಿ ಪ್ರಕಟಿಸಿದೆ. ಇದೇ ಕಾರ್ಯಕ್ರಮದಲ್ಲಿ ಮುಂಬರುವ ಐಪಿಎಲ್ನ ಜೆರ್ಸಿಯೂ ಬಿಡುಗಡೆಯಾಗಲಿದೆ.
ಮೂವರು ಆಟಗಾರರು ಬೆಂಗಳೂರಿಗೆ ಬರುತ್ತಿರುವ ಮಾಹಿತಿಯನ್ನು ಆರ್ಸಿಬಿ ಫ್ರಾಂಚೈಸಿ ವಿಭಿನ್ನ ರೀತಿಯಲ್ಲಿ ಪ್ರಕಟಿಸಿದೆ. ಗೇಲ್ಗೆ ಯುನಿವರ್ಸ್ ಬಾಸ್ ಎಂದು ಬರೆದಿದ್ದರೆ, ವಿರಾಟ್ ಕೊಹ್ಲಿಗೆ ಕಾಯುವಿಕೆಗೆ ಅಂತ್ಯ ಎಂದು ಬರೆಯಲಾಗಿದೆ.
ಆರ್ಸಿಬಿ ಅನ್ಬಾಕ್ಸ್ ಕಾರ್ಯಕ್ರಮದಲ್ಲಿ ಅಭಿಮಾನಿಗಳಿಗೆ ತಂಡದ ಪ್ರಮುಖ ಆಟಗಾರರಾದ ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟೀದಾರ್ ಭೇಟಿ ಮಾಡುವ ಅವಕಾಶ ನೀಡಲಾಗಿದೆ. ಮುಂದಿನ ಐಪಿಎಲ್ಗೆ ಆರ್ಸಿಬಿ ತಂಡ ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಲಿದ್ದು ಈ ಬಾರಿ ಕಪ್ ಗೆಲ್ಲುವ ಗುರಿಯನ್ನು ಹೊಂದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 2ರಂದು ನಡೆಯುವ ಪಂಧ್ಯದಲ್ಲಿ ಆರ್ಸಿಬಿ ತಂಡ ಮಂಬಯಿ ಇಂಡಿಯನ್ಸ್ ಬಳಗವನ್ನು ಎದುರಿಸಲಿದೆ.
ಇದನ್ನೂ ಓದಿ : IPL 2023 : ಜಾನಿ ಬೇರ್ಸ್ಟೋವ್ ಅಲಭ್ಯತೆ ಖಾತರಿ, ಪಂಜಾಬ್ ತಂಡ ಸೇರಿದ ಮ್ಯಾಥ್ಯೂ ಶಾರ್ಟ್ಸ್
ಈ ಬಾರಿಯ ಐಪಿಎಲ್ ಮಾರ್ಚ್ 31ರಂದು ಶುಭಾರಂಭಗೊಳ್ಳಲಿದೆ. ಕೊರೊನಾ ಬಳಿಕ ಇದೇ ಮೊದಲ ಬಾರಿಗೆ ಹೋಮ್ ಮತ್ತು ಅವೇ ಮಾದರಿಯಲ್ಲಿ ಟೂರ್ನಿ ನಡೆಯಲಿದೆ. ಹೀಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಆರ್ಸಿಬಿಯ ಆಟವನ್ನು ನೋಡುವುದಕ್ಕೆ ಅಭಿಮಾನಿಗಳಿಗೆ ಅವಕಾಶ ಲಭಿಸಿದೆ.
ಆರ್ಸಿಬಿ ತಂಡದ ಸದಸ್ಯರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವಾನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಹೇಜಲ್ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್.