1. ಮತ್ತೆ ಕೇಳಿ ಬಂದ ದಲಿತ ಸಿಎಂ ಕೂಗು; ಸತೀಶ್ ಜಾರಕಿಹೊಳಿ ಪರ ಪ್ರಸನ್ನಾನಂದ ಸ್ವಾಮೀಜಿ ವಕಾಲತು
ಬಾಗಲಕೋಟೆ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಬದಲಾವಣೆ ಚರ್ಚೆ ತಾರಕಕ್ಕೇರಿರುವ ಹೊತ್ತಿನಲ್ಲಿಯೇ ದಲಿತ ಸಿಎಂ ಕೂಗೊಂದು ಮತ್ತೆ ಎದ್ದಿದೆ. ಬಾಗಲಕೋಟೆಯ ಜಿಲ್ಲಾ ವಾಲ್ಮೀಕಿ ಜನಜಾಗೃತಿ ಸಮಾವೇಶದಲ್ಲಿ ರಾಜನಹಳ್ಳಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ (Prasannaananda Swamiji) ಈ ಪ್ರಶ್ನೆಯನ್ನು ಮಾಡಿದ್ದು, ದಲಿತ ಸಿಎಂ (Dalit CM) ಯಾಕಾಗಾಬಾರದು ಎಂದು ಕೇಳಿದ್ದಾರೆ. ಅಲ್ಲದೆ, ಸಚಿವ ಸತೀಶ್ ಜಾರಕಿಹೊಳಿ (Minister Satish Jarkiholi) ಪರವಾಗಿ ಬ್ಯಾಟ್ ಬೀಸಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
2. ಡಿಕೆಶಿ ಸಿಎಂ ಆಗೋದರಲ್ಲಿ ಅನುಮಾನವೇ ಇಲ್ಲ ಎಂದ ಮತ್ತೊಬ್ಬ ಶಾಸಕ! ಹೈಕಮಾಂಡ್ ಮಾತಿಗೆ ಇಲ್ಲ ಬೆಲೆ
ಮಂಡ್ಯ: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿಯಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕಾಂಗ್ರೆಸ್ ಶಾಸಕ ಕದಲೂರು ಉದಯ್ (MLA Kadalur Uday) ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ (Congress High Command) ಹಾಗೂ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಸೂಚನೆಯನ್ನು ಮೀರಿ ಪುನಃ “ಸಿಎಂ ಗಾದಿ” ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ (Congress Karnataka) ಈ ಹೇಳಿಕೆಯನ್ನು ಈಗ ಹೇಗೆ ಪರಿಗಣಿಸಲಾಗುತ್ತದೆ ಎಂಬುದು ಮುಖ್ಯವಾಗಿದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
3. ಚಾಕುವಿನಿಂದ ಇರಿದು ಗಣಿ ಇಲಾಖೆ ಉಪ ನಿರ್ದೇಶಕಿಯ ಬರ್ಬರ ಹತ್ಯೆ!
ಇಲ್ಲಿನ ದೊಡ್ಡಕಲ್ಲಸಂದ್ರದ ಗೋಕುಲ್ ಅಪಾರ್ಟ್‌ಮೆಂಟ್‌ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯ ಬರ್ಬರ ಹತ್ಯೆ (Murder case) ಆಗಿದೆ. ಪ್ರತಿಮಾ (45) ಕೊಲೆಯಾದವರು. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಶನಿವಾರ (ನ.4) ರಾತ್ರಿ 8.30ರ ಸುಮಾರಿಗೆ ಹತ್ಯೆ ನಡೆದಿದೆ. ಪ್ರತಿಮಾಳಿಗೆ ಶನಿವಾರ ರಾತ್ರಿ ಅವರ ಸಹೋದರ ಕರೆ ಮಾಡಿದ್ದಾರೆ. ಆದರೆ ಸ್ವೀಕರಿಸದೆ ಇದ್ದಾಗ ಅನುಮಾನಗೊಂಡು ಭಾನುವಾರ ಬೆಳಗ್ಗೆ ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
4. ಬರ್ತ್ಡೇಯಂದೇ ಶತಕ ಬಾರಿಸಿ ಸಚಿನ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ
ಕೋಲ್ಕೊತಾ: ವಿಶ್ವ ಕ್ರಿಕೆಟ್ನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat kohli) ಅವರು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಏಕದಿನ ದಿನ ಕ್ರಿಕೆಟ್ನಲ್ಲಿ ಬಾರಿಸಿರುವ 49 ಶತಕಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಈಡನ್ ಗಾರ್ಡನ್ಸ್ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧ ದ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ತಮ್ಮ 35ನೇ ವರ್ಷದ ಜನುದಿನದಿಂದೇ ಅವರು ಈ ಸಾಧನೆ ಮಾಡಿರುವುದು ವಿಶೇಷ ಹಾಗೂ ಅವರ ಪಾಲಿಗೆ ಸ್ಮರಣೀಯ ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Virat Kohli : ಕೊಹ್ಲಿಗೆ ಕ್ಯೂಟ್ ಬರ್ತ್ಡೇ ವಿಶಷ್ ಕಳುಹಿಸಿದ ಪತ್ನಿ ಅನುಷ್ಕಾ ಶರ್ಮಾ
ಈ ಸುದ್ದಿಯನ್ನೂ ಓದಿ: ICC World Cup 2023 : ಹರಿಣಗಳ ವಿರುದ್ಧ ಭರ್ಜರಿ 243 ರನ್ ಗೆಲುವು ದಾಖಲಿಸಿದ ಭಾರತ
5. ಇಂದಿರಾ ಗಾಂಧಿ ಜನ್ಮದಿನದಂದು ಏರ್ ಇಂಡಿಯಾ ವಿಮಾನ ಸ್ಫೋಟಕ್ಕೆ ಖಲಿಸ್ತಾನಿ ಉಗ್ರರ ಸಂಚು; ವಿಡಿಯೊ ರಿಲೀಸ್!
ಒಟ್ಟಾವ/ನವದೆಹಲಿ: ಭಾರತ ಕೆನಡಾ ಬಿಕ್ಕಟ್ಟು ಉಲ್ಬಣವಾದ ಬಳಿಕ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (Sikhs For Justice) ಸಂಘಟನೆಯ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಉಪಟಳ ಜಾಸ್ತಿಯಾಗಿದೆ. ಭಾರತ ವಿರೋಧಿ ಕೃತ್ಯಗಳು ಜಾಸ್ತಿಯಾಗಿವೆ. ಇದರ ಬೆನ್ನಲ್ಲೇ, ಗುರುಪತ್ವಂತ್ ಸಿಂಗ್ ಪನ್ನುನ್ ಮತ್ತೊಂದು ಬೆದರಿಕೆ ವಿಡಿಯೊ ಬಿಡುಗಡೆ ಮಾಡಿದ್ದು, “ನವೆಂಬರ್ 19ರಂದು ಭಾರತದ ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸುವುದಾಗಿ” ಹೇಳಿದ್ದಾನೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
6. ನವೆಂಬರ್ 9ರ ವರೆಗೆ ಮಳೆಯದ್ದೇ ಹವಾ! ಕೊಡಗಿಗೆ ಆರೆಂಜ್ ಅಲರ್ಟ್
ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. ಉತ್ತರ ಒಳನಾಡಿನ ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ (Karnataka Weather Forecast) ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು ಮತ್ತು ದಾವಣಗೆರೆ, ರಾಮನಗರ ಮತ್ತು ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
7. ದೆಹಲಿ ವಾಯುಮಾಲಿನ್ಯ; ಶಾಲೆಗಳಿಗೆ ರಜೆ ಘೋಷಿಸಿದ ಸರ್ಕಾರ!
ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯ ಪ್ರಮಾಣವು (Delhi Air Pollution) ದಿನೇದಿನೆ ಜಾಸ್ತಿಯಾಗುತ್ತಿದ್ದು, ಮಕ್ಕಳು, ಹಿರಿಯರು ಸೇರಿ ಜನ ಉಸಿರಾಡಲು ಕೂಡ ಪರದಾಡುವಂತಾಗಿದೆ. ಹಾಗಾಗಿ, ದೆಹಲಿ ಸರ್ಕಾರವು (Delhi Government) ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು 5ನೇ ತರಗತಿವರೆಗಿನ ಶಾಲೆಗಳಿಗೆ ನವೆಂಬರ್ 10ರವರೆಗೆ ರಜೆ ಘೋಷಿಸಿದೆ. ಹಾಗೆಯೇ, 6ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಿಕ್ಷಕರು ಆನ್‌ಲೈನ್ ಕ್ಲಾಸ್ ತೆಗೆದುಕೊಳ್ಳಿ ಎಂದು ಕೂಡ ಸರ್ಕಾರ ಸೂಚಿಸಿದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
8. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ 2 ಅನಾಮಧೇಯ ಬಾಕ್ಸ್; ಮೇಡ್ ಇನ್ ಬಾಂಗ್ಲಾ ಬರಹ
ಶಿವಮೊಗ್ಗ: ಇಲ್ಲಿನ ರೈಲ್ವೆ ನಿಲ್ದಾಣದ ಪಾರ್ಕಿಂಗ್ (Shivamogga Railway Station Parking) ಪ್ರದೇಶದಲ್ಲಿ 2 ಅನಾಮಧೇಯ ಬಾಕ್ಸ್ (Anonymous Box) ಕಂಡು ಬಂದಿದ್ದು, ತೀವ್ರ ಆತಂಕವನ್ನು ಹುಟ್ಟುಹಾಕಿದೆ. ಕೂಡಲೇ ಈ ವಿಷಯವನ್ನು ರೈಲ್ವೆ ಪೊಲೀಸರಿಗೆ (Railway Police) ತಿಳಿಸಲಾಗಿದ್ದು, ಅಲ್ಲಿಂದ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಮಾಹಿತಿ ನೀಡಲಾಗಿದೆ. ಸದ್ಯ ಬಾಂಬ್ ಸ್ಕ್ವಾಡ್ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
9. ಅಯಸ್ಕಾಂತದಿಂದ ಬಾಲಕನ ಶ್ವಾಸಕೋಶದಲ್ಲಿ ಸಿಲುಕಿದ್ದ ಸೂಜಿ ಹೊರ ತೆಗೆದ ವೈದ್ಯರು
7 ವರ್ಷದ ಬಾಲಕನ ಶ್ವಾಸಕೋಶದಲ್ಲಿ ಸಿಲುಕಿಕೊಂಡಿದ್ದ ಸೂಜಿಯನ್ನು ವೈದ್ಯರು ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS Delhi) ವೈದ್ಯರು ಈ ವಿಶಿಷ್ಟ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಅಯಸ್ಕಾಂತ (Magnet) ಬಳಸಿ ಈ ಸೂಜಿಯನ್ನು ಹೊರ ತೆಗೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
10. ಗ್ರಾಮಸ್ಥರನ್ನು ಕಂಗೆಡಿಸಿದ ಸರಣಿ ಸಾವುಗಳು; ಇದು ದೇವಿ ಶಾಪನಾ?
ಬೆಳಗಾವಿ: ಆ ಊರಲ್ಲಿ ಕೊರೊನಾದಂತ ಕ್ಲಿಷ್ಟ ಸಮಯದಲ್ಲೂ ಕೇವಲ ಮೂವರು ಮಾತ್ರ ಸೋಂಕಿಗೆ ಮೃತಪಟ್ಟಿದ್ದರು. ಆದರೆ ಇದೀಗ ಒಂದೇ ತಿಂಗಳಲ್ಲಿ ಬರೋಬ್ಬರಿ 30 ಮಂದಿ ಸಾವನ್ನಪ್ಪಿದ್ದಾರೆ. ಒಬ್ಬರ ಹಿಂದೆ ಒಬ್ಬರು ಮೃತಪಡುತ್ತಿರುವುದಕ್ಕೆ ಊರ ದೇವಿಯ ಶಾಪ ಎಂದು ಜನರು ನಂಬಿದ್ದಾರೆ. ಸಾಯುವ ವಯಸ್ಸಲ್ಲದ ಮಕ್ಕಳಿಂದ ಹಿಡಿದು 90ರ ವರ್ಷದವರು ಜೀವ ಬಿಟ್ಟಿದ್ದಾರೆ. ಒಂದು ಕಡೆ ಗ್ರಾಮಸ್ಥರು ಚಿಂತಾಗ್ರಸ್ಥರಾಗಿ ಕುಳಿತಿದ್ದರೆ, ಮತ್ತೊಂದು ಕಡೆ ವಿರೂಪಗೊಂಡಿರುವ ದೇವರ ವಿಗ್ರಹ. ಸಾವಿನ ಮನೆಯಂತಾದ ಈ ಚಿತ್ರಣ ಕಂಡು ಬಂದಿದ್ದು, ಬೆಳಗಾವಿ (Belgavi News) ಜಿಲ್ಲೆಯ ರಾಮದುರ್ಗ ತಾಲೂಕಿನ ತೂರನೂರು ಗ್ರಾಮದಲ್ಲಿ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ