Site icon Vistara News

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Virat Kohli

Virat Kohli: FIRST-EVER DUCK FOR VIRAT KOHLI IN T20 WORLD CUPS

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಖ್ಯಾತಿ ಹೊಂದಿರುವ ಟೀಮ್​ ಇಂಡಿಯಾದ ವಿರಾಟ್​ ಕೊಹ್ಲಿ(Virat Kohli) ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ಇದೇ ಮೊದಲ ಬಾರಿಗೆ ಗೋಲ್ಡನ್​ ಡಕ್(VIRAT KOHLI DUCK)​ ಆದ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ. ಇದು ಮಾತ್ರವಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಸಂಪೂರ್ಣ ಬ್ಯಾಟಿಂಗ್​ ವೈಫಲ್ಯ ಕಂಡಿದ್ದಾರೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. 1, 4,0 ಇದು ಕೊಹ್ಲಿಯ ಈ ಬಾರಿಯ ಸ್ಕೋರ್​ ಆಗಿದೆ.

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೂಕ್ತ ಎನ್ನುವಂತಿದೆ.

ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ


ನೂತನ ಟಿ20 ಶ್ರೇಯಾಂಕದಲ್ಲಿ(ICC T20 Rankings) ಭಾರತ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಆದರೆ, ಭಾರತದ ಬದ್ಧ ಎದುರಾಳಿ ಪಾಕಿಸ್ತಾನ 7ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿ ಸೋಲು ಮತ್ತು ಪ್ರಸ್ತುತ ಸಾಗುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದೇ ಪಾಕ್​ ತಂಡದ ಶ್ರೇಯಾಂಕ ಕುಸಿತಕ್ಕೆ ಕಾರಣ.

ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

Exit mobile version