Site icon Vistara News

Virat Kohli: ಆರ್​ಸಿಬಿ ಅನ್​ಬಾಕ್ಸ್​ನಲ್ಲಿ ಪಾಲ್ಗೊಳ್ಳಲಿದ್ದಾರೆ ಕಿಂಗ್​ ಕೊಹ್ಲಿ

virat kohli rcb

ಬೆಂಗಳೂರು: ಐಪಿಎಲ್​ 17ನೇ(IPL 2024) ಆವೃತ್ತಿಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಮಾರ್ಚ್​ 22ರಂದು ನಡೆಯುವ ಉದ್ಘಾಟನ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​(CSK vs RCB) ಮತ್ತು ಆರ್​ಸಿಬಿ ಮುಖಾಮುಖಿಯಾಗಿದೆ. ಈ ಪಂದ್ಯ ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ.

ಆರ್​ಸಿಬಿ ತನ್ನ ಅಭಿಯಾನ ಆರಂಭಿಸುವ ಮುನ್ನ ಪೂರ್ವಭಾವಿಯಾಗಿ ಅಭಿಮಾನಿಗಳಿಗಾಗಿ ಈ ಸಲವೂ ವಿಶೇಷ ಕಾರ್ಯಕ್ರಮವೊಂದನ್ನು ಏರ್ಪಡಿಸಿದ್ದು ಈಗಾಗಲೇ ಎಲ್ಲರಿಗೂ ತಿಳಿದಿದೆ. ಕಳೆದೆರಡು ವರ್ಷಗಳಿಂದ ಆರ್​ಸಿಬಿ ಅನ್​ಬಾಕ್ಸ್​(RCB’s Unbox Event) ಹೆಸರಿನಲ್ಲಿ ನಡೆಯುತ್ತ ಬಂದಿರುವ ಕಾರ್ಯಕ್ರಮ ಈ ಬಾರಿ ಮಾರ್ಚ್​ 19ರಂದು ನಿಗದಿಯಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ತಂಡದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿಯೂ(Virat Kohli) ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆರ್​ಸಿಬಿ ತನ್ನ ಅಭಿಮಾನಿಗಳನ್ನು ತಂಡದ 12ನೇ ಆಟಗಾರ ಎಂದು ಪರಿಗಣಿಸುತ್ತದೆ. ಆರ್​ಸಿಬಿ ಅನ್​ಬಾಕ್ಸ್​ನಲ್ಲಿ ತಂಡದ ಹೊಸ ಜೆರ್ಸಿಯನ್ನೂ ಅನಾವರಣಗೊಳಿಸಲಾಗುವುದು. ಜತೆಗೆ ಅಭಿಮಾನಿಗಳ ಎದುರು ಹಲವು ಅಚ್ಚರಿಯ ಮತ್ತು ವಿಶೇಷ ಘೋಷಣೆಗಳನ್ನು ಮಾಡಲಾಗುವುದು ಎಂದು ಆರ್​ಸಿಬಿ ತಂಡ ಈಗಾಗಲೇ ತಿಳಿಸಿದೆ. ಈ ಬಾರಿಯ ಅಚ್ಚರಿ ಏನೆಂಬುದನ್ನು ಆರ್​ಸಿಬಿ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಇದನ್ನೂ ಓದಿ IPL 2024: ದ್ವಿತೀಯ ಹಂತದ ಐಪಿಎಲ್​ ವೇಳಾಪಟ್ಟಿ ಬಗ್ಗೆ ಬಿಗ್​ ಅಪ್ಡೇಟ್‌ ನೀಡಿದ ಅಧ್ಯಕ್ಷ ಧುಮಾಲ್

ವಿರಾಟ್​ ಕೊಹ್ಲಿ ಅವರು ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ಹಿಂದೆ ಸರಿದ ಬಳಿಕ ಲಂಡನ್​ನಲ್ಲಿಯೇ ತಮ್ಮ ಪತ್ನಿ ಜತೆಗಿದ್ದಾರೆ. ಅವರು ಇದುವರೆಗೂ ಭಾರತಕ್ಕೆ ಆಗಮಿಸಿಲ್ಲ. ಸದ್ಯದ ಮಾಹಿತಿ ಪ್ರಕಾರ ಕೊಹ್ಲಿ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಜತೆಗೆ ಆರ್​ಸಿಬಿ ಅನ್​ಬಾಕ್ಸ್​ನಲ್ಲಿಯೂ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಆರ್​ಸಿಬಿ ಪಂದ್ಯಗಳ ವಿವರ ಇಲ್ಲಿದೆ

ತಂಡದ ವಿವರ ಇಲ್ಲಿವೆ


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್​ವೆಲ್​, ವಿರಾಟ್ ಕೊಹ್ಲಿ, ಕ್ಯಾಮರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

Exit mobile version