ಚತ್ತೋಗ್ರಾಮ್: ಬಾಂಗ್ಲಾದೇಶ ವಿರುದ್ಧ ಸತತ ಎರಡು ಸೋಲಿನಿಂದ ಏಕ ದಿನ ಸರಣಿಯನ್ನು ಕಳೆದುಕೊಂಡರೂ ಅಂತಿಮ ಪಂದ್ಯದಲ್ಲಿ ಭಾರತ ತಂಡ ರನ್ ಮಳೆ ಹರಿಸಿದೆ. ಈ ಪಂದ್ಯದಲ್ಲಿ ಶತಕ ಸಿಡಿಸಿದ ವಿರಾಟ್ ಕೊಹ್ಲಿ(Virat Kohli) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 72 ಶತಕ ಬಾರಿಸಿದ ಸಾಧನೆ ಮಾಡಿದರು.
ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ 113 ರನ್ ಗಳಿಸಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 44ನೇ ಶತಕದ ಜತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 72ನೇ ಶತಕ ದಾಖಲಿಸಿ ಆಸೀಸ್ ಮಾಜಿ ದಿಗ್ಗಜ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ಅಳಿಸಿ ಹಾಕಿದರು. ಪಾಂಟಿಂಗ್ ಒಟ್ಟು 71 ಅಂತಾರಾಷ್ಟ್ರೀಯ ಶತಕ ಸಿಡಿಸಿದ್ದಾರೆ.
ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ಶತಕ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್(100 ಶತಕ) ಮೊದಲ ಸ್ಥಾನದಲ್ಲಿದ್ದಾರೆ. 2019ರ ಬಳಿಕ ವಿರಾಟ್ ಕೊಹ್ಲಿ ನಾಲ್ಕು ಬಾರಿ ಶತಕದ ಅಂಚಿಗೆ ಬಂದು ತಲುಪಿದ್ದರು. ಆದರೆ ಮೂರಂಕಿಯ ಗಡಿ ದಾಟಲು ಸಾಧ್ಯವಾಗಿರಲಿಲ್ಲ. ಆದರೆ ಈಗ ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ ಕೊಹ್ಲಿ ಶತಕ ಬಾರಿಸುವ ಮೂಲಕ ಫಾರ್ಮ್ ಜತೆಗೆ ಹಲವು ದಾಖಲೆಯನ್ನು ತಮ್ಮ ಹೆಸರಿಗೆ ಬರೆದಿದ್ದಾರೆ.
ಇದನ್ನೂ ಓದಿ | IND VS BAN | 44ನೇ ಏಕದಿನ ಶತಕ ಬಾರಿಸಿ ಮಿಂಚಿದ ವಿರಾಟ್ ಕೊಹ್ಲಿ