ಬೆಂಗಳೂರು: ಆರ್ಸಿಬಿ(RCB) ತಂಡ ನಾಳೆ ನಡೆಯುವ 17ನೇ ಆವೃತ್ತಿಯ ಐಪಿಎಲ್ನಲ್ಲಿ(IPL 2024) ತನ್ನ ಕೊನೆಯಲೀಗ್ ಪಂದ್ಯವನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನ ಆರ್ಸಿಬಿಯ ಇನ್‌ಸೈಡರ್ ಮಿಸ್ಟರ್, ನ್ಯಾಗ್ಸ್(mr nags) ಖಾತಿಯ ದಾನೀಶ್ ಸೇಠ್(danish sait) ಅವರು ವಿರಾಟ್ ಕೊಹ್ಲಿ(Virat Kohli) ಜತೆಗೆ ಸಂದರ್ಶನವೊಂದನ್ನು ಮಾಡಿದ್ದಾರೆ. ಈ ಸಂದರ್ಶನದಲ್ಲಿ ಕೊಹ್ಲಿ ತಮ್ಮ ಮಗಳು ವಮಿಕಾ(vamika) ಕೂಡ ಕ್ರಿಕೆಟ್ ಪ್ರಿಯೆ ಎಂಬ ವಿಚಾರವನ್ನು ತಿಳಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.
ದಾನೀಶ್ ಸೇಠ್ ಅವರು ಸಂದರ್ಶನದ ವೇಳೆ ಕೊಹ್ಲಿ ಜತೆ ಹಲವು ತರ್ಲೆ ಪ್ರಶ್ನೆಗಳನ್ನು ಕೇಳಿದ್ದಾರೆ. ಇದೇ ವೇಳೆ ಪಾಪು ಹೇಗಿದೆ ಎಂದು ಕೇಳಿದಾಗ ಪಾಪು ಅದು ಯಾರು ಎಂದು ಕೊಹ್ಲಿ ಮರು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನ್ಯಾಗ್ಸ್ ಅಕಾಯ್ ಎಂದು ಹೇಳಿದ್ದಾರೆ. ಹೋ.. ಮಗನಾ ಆರೋಗ್ಯವಾಗಿದ್ದಾನೆ ಎಂದು ಹೇಳುತ್ತಾರೆ. ಇದೇ ವೇಳೆ ನ್ಯಾಗ್ಸ್ ಒಂದು ಐಪಿಎಲ್ಗೆ ಇನ್ನೊಂದು ಡಬ್ಲ್ಯುಪಿಎಲ್ಗೆ ಎಂದು ಕೊಹ್ಲಿಯ ಕಾಲೆಳೆದಿದ್ದಾರೆ. ಈ ಮಾತು ಕೇಳಿದ ಕೊಹ್ಲಿ ಅರೇ ಏನು ಹೇಳುತ್ತಿದ್ದಿಯಾ ಮಾರಾಯ ಎಂದು ಹಿಂದಿಯಲ್ಲಿ ಹೇಳುವ ಮೂಲಕ ನಗಾಡಿದ್ದಾರೆ.
ಇದೇ ವೇಳೆ ತನ್ನ ಮಗಳಿಗೂ ಕ್ರಿಕೆಟ್ ಎಂದರೆ ಅಚ್ಚು ಮೆಚ್ಚು ಅವಳು ಈಗಲೇ ಬ್ಯಾಟಿಂಗ್ ಮಾಡುತ್ತಾ ಆಡುತ್ತಿದ್ದಾಳೆ. ಆದರೆ ಮುಂದಿನ ದಿನಗಳಲ್ಲಿ ಏನಾಗುತ್ತದೆಯೋ ತಿಳಿದಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ. ಅವರ ಈ ಮಾತನ್ನು ಗಮನಿಸುವಾಗ ಮಗಳಿಗೆ ಯಾವ ಕ್ಷೇತ್ರದಲ್ಲಿಯೂ ಮುಂದುವರಿಯುವ ಸಂಪೂರ್ಣ ಸ್ವಾತಂತ್ರ್ಯ ಕೊಹ್ಲಿ ನೀಡಲಿದ್ದಾರೆ ಎನ್ನುವುದು ಅರ್ಥವಾಗುತ್ತದೆ. ಅಪ್ಪನಂತೆ ಮಗಳು ಕೂಡ ಭಾರತ ಮಹಿಳಾ ಕ್ರಿಕೆಟ್ನಲ್ಲಿ ಸಾಧನೆ ಮಾಡಲಿ ಎಂದು ಕೊಹ್ಲಿಯ ಅಭಿಮಾನಿಗಳು ಹಾರೈಸಲಾರಂಭಿಸಿದ್ದಾರೆ.
ಇದನ್ನೂ ಓದಿ IPL Ticket Scam: ಆನ್ಲೈನ್ ಟಿಕೆಟ್ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್ಸಿಬಿ ಅಭಿಮಾನಿ
ಕೊಹ್ಲಿ ತಮ್ಮ ನಿವೃತ್ತಿ(Virat Kohli restaurant) ವಿಚಾರದ ಬಗ್ಗೆ ಮಾತನಾಡಿದ್ದು, ಒಬ್ಬ ಕ್ರೀಡಾಪಟುವಾದ ಮೇಲೆ ಇಂದಲ್ಲ ನಾಳೆ, ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ ಎಂದು ಹೇಳಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಭಾರೀ ಆತಂಕ ಉಂಟುಮಾಡುವಂತೆ ಮಾಡಿದೆ.
ಸಂದರ್ಶನವೊಂದರಲ್ಲಿ ಕೊಹ್ಲಿಗೆ ಸಕ್ಸಸ್ ಹಿಂದೆ ಯಾಕಿಷ್ಟು ಹಸಿವಿನಿಂದ ಓಡುತ್ತಿದ್ದೀರಿ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಒಬ್ಬ ಕ್ರೀಡಾಪಟು ಇಂದಲ್ಲ ನಾಳೆ ತಮ್ಮ ವೃತ್ತಿಜೀವನದ ಅಂತಿಮ ದಿನಾಂಕವನ್ನು ನೋಡಲೇಬೇಕಿದೆ. ಆದ್ದರಿಂದಲೇ ನಾನು ಈ ರೀತಿ ಹೆಚ್ಚು ಶ್ರಮವಹಿಸಿ, ಮಿತಿಮೀರಿ ಕೆಲಸ ಮಾಡುತ್ತಿದ್ದೇನೆ. ನೀವೃತ್ತಿಯ ಬಳಿಕ ನಾನು ಸಾಧನೆ ಮಾಡದರ ಕುರಿತು ಚಿಂತಿಸ ಬಾರದು. ಅಂತಹ ಪರಿಸ್ಥಿತಿ ನನಗೆ ಬರಬಾರದು ಎಂದರೆ, ಇಂದು ಅದ್ಭುತ ಆಟ ಆಡಲೇಬೇಕಿದೆ’ ಎಂದು ಹೇಳಿದರು.
‘ನನ್ನ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಬಳಿಕ ನನಗೆ ಯಾವುದೇ ವಿಷಾದ ಇರಬಾರದು. ಖಂಡಿತವಾಗಿ ಆ ರೀತಿ ನಾನು ಮಾಡಿಕೊಳ್ಳುವುದಿಲ್ಲ ಎಂದು ನನಗೆ ಖಾತ್ರಿಯಿದೆ. ಒಮ್ಮೆ ನಾನು ಕ್ರಿಕೆಟ್ನಿಂದ ದೂರ ಸರಿದರೆ ಖಂಡಿತ ಮತ್ತೆ ನೀವು ನನ್ನನ್ನು ನೋಡೋದಿಲ್ಲ. ನಾನು ಆಡುವ ಕೊನೆವರೆಗೂ ನನ್ನಲ್ಲಿರುವ ಬೆಸ್ಟ್ ಅನ್ನು ನೀಡಲು ಬಯಸುತ್ತೇನೆ. ಅದೊಂದೇ ನನ್ನನ್ನು ಮುಂದಕ್ಕೆ ಕೊಂಡೊಯ್ಯಲು ಸಾಧ್ಯ’ ಎಂದು ಹೇಳುವ ಮೂಲಕ ತಮ್ಮ ನಿವೃತ್ತಿಯ ಬಗೆಗಿನ ಸ್ಪಷ್ಟತೆಯನ್ನು ತಿಳಿಸಿದರು. ಕೊಹ್ಲಿಯ ಈ ಹೇಳಿಕೆ ಕಂಡು ಅವರ ಅಭಿಮಾನಿಗಳು ಆತಂಕಕ್ಕೆ ಒಳಪಟ್ಟಿದ್ದು, ಶೀಘ್ರದಲ್ಲೇ ಕೊಹ್ಲಿ ನಿವೃತ್ತಿ ಹೇಳಲಿದ್ದಾರಾ? ಎಂದು ಚಿಂತೆ ಪಡುವಂತೆ ಮಾಡಿದೆ.