Site icon Vistara News

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli

Virat Kohli: Kohli's Breakfast Trouble With Toaster From Barbados Hotel;Video Goes viral

ಬಾರ್ಬಡೋಸ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರು ಬಾರ್ಬಡೋಸ್​ನಲ್ಲಿ ತಾವು ತಂಗಿದ್ದ ಹೋಟೆಲ್​ನಲ್ಲಿ ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ(Kohli’s Breakfast Trouble) ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ಟಿ20 ವಿಶ್ವಕಪ್​ ಗೆಲುವಿನ ಬಳಿಕ ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿದ ಬೆರಿಲ್ ಚಂಡಮಾರುತದಿಂದಾಗಿ ಟೀಮ್​ ಇಂಡಿಯಾ ಆಟಗಾರರು 2 ದಿನಗಳ ಕಾಲ ಬಾರ್ಬಡೋಸ್​ನ ಹೋಟೆಲ್​ನಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ಕೊಹ್ಲಿ ಕಟ್ಲೆಟ್‌ ಅನ್ನು ಓವನ್​ನಲ್ಲಿ ಬಿಸಿ ಮಾಡಲು ಯತ್ನಿಸಿದ್ದಾರೆ. ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಹೋಟೆಲ್​ನಲ್ಲಿ ತಿಂಡಿ ತಿನ್ನುತ್ತಿದ್ದವರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸಹೋದರನಿಂದ ಭರ್ಜರಿ ಸ್ವಾಗತ


ಟಿ20 ವಿಶ್ವಕಪ್​ ಗೆದ್ದ ಭಾರತ ತಂಡ ಆಟಗಾರರು ಇಂದು(ಗುರುವಾರ) ನವದೆಹಲಿಗೆ ಆಗಮಿಸಿದರು. ಈ ವೇಳೆ ಕೊಹ್ಲಿಯ ಸಹೋದರ ವಿಕಾಸ್​ ಕೊಹ್ಲಿ ಮತ್ತು ಅವರ ಮಕ್ಕಳು ವಿಮಾನ ನಿಲ್ದಾಣದಲ್ಲಿ ಕೊಹ್ಲಿಯನ್ನು ಸ್ವಾಗತಿಸಿದ್ದಾರೆ. ಕೊಹ್ಲಿ ಗೆದ್ದ ಪದಕವನ್ನು ಕೊರಳಿಗೆ ಹಾಕಿ ಸಂಭ್ರಮಿಸಿದರು. ಈ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿತ್ತು. ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದರು. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20ಗೆ ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

Exit mobile version