Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು? - Vistara News

ಕ್ರೀಡೆ

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

Virat Kohli: ಕ್ರಿಕ್​ಇನ್ಫೋ ವರದಿಯ ಪ್ರಕಾರ, ವಿರಾಟ್​ ಕೊಹ್ಲಿ ಅವರು ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಈ ಮೊದಲು ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ.

VISTARANEWS.COM


on

Virat Kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ರಾಹುಲ್​ ದ್ರಾವಿಡ್(rahul dravid)​ ಅವರ ನಿರ್ಗಮನದಿಂದ ತೆರವಾದ ಭಾರತ ಕ್ರಿಕೆಟ್ ತಂಡ ಮುಖ್ಯ ಕೋಚ್​ ಹುದ್ದೆಗೆ(Team India Coach) ಗೌತಮ್​ ಗಂಭೀರ್​(Gautam Gambhir) ಆಯ್ಕೆಯಾಗಿದ್ದು ತಮ್ಮ ಕೆಲಸ ಕಾರ್ಯವನ್ನು ಆರಂಭಿಸಿದ್ದಾರೆ. ಗಂಭೀರ್​ ಕೋಚ್​ ಆಗುತ್ತಿದ್ದಂತೆಯೇ ಕೆಲ ನೆಟ್ಟಿಗರು ಗಂಭೀರ್​ ಮತ್ತು ಕೊಹ್ಲಿ ನಡುವಣ ಆನ್ ಫೀಲ್ಡ್ ಜಗಳ ಮತ್ತೆ ಶುರುವಾಗಿ ಇದು ತಂಡಕ್ಕೆ ಭಾದಿಸಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಗಂಭೀರ್​ ಅವರನ್ನು ಕೋಚ್​ ಆಗಿ ಆಯ್ಕೆ ಮಾಡುವ ಮುನ್ನ ವಿರಾಟ್​ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿತ್ತು. ಇದೀಗ ಕೊಹ್ಲಿಯೇ ಬಿಸಿಸಿಐ(BCCI) ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

ಕ್ರಿಕ್​ಇನ್ಫೋ ವರದಿಯ ಪ್ರಕಾರ, ವಿರಾಟ್​ ಕೊಹ್ಲಿ ಅವರು ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಈ ಮೊದಲು ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ.

ವಿರಾಟ್​ ಕೊಹ್ಲಿ ಮತ್ತು ಗಂಭೀರ್​ ಐಪಿಎಲ್​ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್​ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಪ್ರದರ್ಶಿಸಿದ್ದರು. ಹೀಗಿರುವಾಗ ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಆತಂಕ ವ್ಯಕ್ತಪಡಿಸಿದ್ದರು.

ಪ್ರತಿ ಐಪಿಎಲ್​ನಲ್ಲಿ ಕಚ್ಚಾಟ ನಡೆಸುತ್ತಿದ್ದ ಕೊಹ್ಲಿ ಮತ್ತು ಗಂಭೀರ್​ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ಆತ್ಮೀಯವಾಗಿ ಕಂಡುಬಂದಿದ್ದರು. ಇಬ್ಬರು ಕೂಡ ತಮ್ಮ ಅಹಂ ಮತ್ತು ಮುನಿಸನ್ನು ಮರೆತಿರುವಂತೆ ಕಂಡುಬಂದಿದ್ದರು. ಆದರೂ ಕೂಡ ಕೊಹ್ಲಿ ಕೆಲ ಪಂದ್ಯಗಳಲ್ಲಿ ಆಡದೇ ಇದ್ದಾಗ ಇವರಿಬ್ಬರ ಮಧ್ಯೆ ಮತ್ತೆ ಜಗಳ ಆರಂಭಗೊಳ್ಳುವ ಸಾಧ್ಯತೆ ಇದೆ ಎನ್ನುವುದು ಅಭಿಮಾನಿಗಳ ಆತಂಕವಾಗಿತ್ತು. ಇದೀಗ ಕೊಹ್ಲಿಯೇ ಸ್ವತಃ ಬಿಸಿಸಿಐಗೆ ಎಲ್ಲ ದ್ವೇಷವನ್ನು ಬದಿಗಿಟ್ಟು ತಂಡದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೋಚ್ ಜತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳುವುದಾಗಿ ಹೇಳಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

ಟಿ20 ವಿಶ್ವಕಪ್​ ಬಳಿಕ ಲಂಡನ್​ಗೆ ತೆರಳಿ ಕುಟುಂಬದ ಜತೆ ಕಾಲ ಕಳೆಯುತ್ತಿದ್ದ ವಿರಾಟ್​ ಕೊಹ್ಲಿ ಲಂಕಾ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಕೊಹ್ಲಿ ಜತೆ ರೋಹಿತ್​ ಕೂಡ ವಿಶ್ರಾಂತಿ ಪಡೆಯಲು ನಿರ್ದರಿಸಿದ್ದಾರೆ ಎನ್ನಲಾಗಿತ್ತು. ಆದರೆ, ಗಂಭೀರ್​ ಎಲ್ಲ ಹಿರಿಯ ಆಟಗಾರರರು ಕೂಡ ಈ ಸರಣಿಯಲ್ಲಿ ಆಡುವಂತೆ ಸೂಚನೆ ನೀಡಿದ್ದರು. ಗುರುವಾರ ತಂಡ ಪ್ರಕಟಗೊಳ್ಳುವ ವೇಳೆ ಅಚ್ಚರಿ ಎಂಬಂತೆ ಎಲ್ಲ ಹಿರಿಯ ಆಟಗಾರರು ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Paris Olympics 2024 : ಸಿಗರೇಟ್​ ಸೇದಿದ ಕಾರಣಕ್ಕೆ ಒಲಿಂಪಿಕ್ಸ್​ ಸರ್ಧೆಯ ಅವಕಾಶ ಕಳೆದುಕೊಂಡ ಜಪಾನ್​ ಮಹಿಳಾ ಜಿಮ್ನಾಸ್ಟಿಕ್ ಪಟು

Paris Olympics 2024 : ಮೊನಾಕೊದಲ್ಲಿನ ತಂಡದ ತರಬೇತಿ ಶಿಬಿರದಿಂದ ಮಿಯಾಟಾ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಅವರು ಗುರುವಾರ ಜಪಾನ್ ಗೆ ಆಗಮಿಸಿದ್ದು ತನಿಖೆ ಎದುರಿಸಲಿದ್ದಾರೆ ಎಂದು ಜೆಜಿಎ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮದ್ಯಪಾನ ನಿಯಂತ್ರಣ ನಿಯಮವನ್ನೂ ಉಲ್ಲಂಘನೆಯನ್ನೂ ಮಾಡಿದ್ದಾರೆ.

VISTARANEWS.COM


on

Paris Olympics 2024:
Koo

ಪ್ಯಾರಿಸ್​ : ಮುಂಬರುವ ಪ್ಯಾರಿಸ್​ ಒಲಿಂಪಿಕ್ಸ್​ಗಾಗಿ (Paris Olympics 2024) ಅಥ್ಲೀಟ್​ಗಳು ಸಜ್ಜಾಗುತ್ತಿವೆ. ಕ್ರೀಡಾಪಟುಗಳು ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅಂದ ಹಾಗೆ ಒಲಿಂಪಿಕ್ಸ್​ನಲ್ಲಿ ಪಾಲ್ಗೊಳ್ಳುವುದು ಕ್ರೀಡಾಪಟುವೊಬ್ಬರ ಉನ್ನತ ಆಸೆಯಾಗಿರುತ್ತದೆ. ಹೀಗಾಗಿ ತಮ್ಮ ಜೀವಮಾನದಲ್ಲಿ ಕಲಿತಿರುವ ಎಲ್ಲ ವಿದ್ಯೆಗಳನ್ನು ಈ ವೇದಿಕೆಯಲ್ಲಿ ಪ್ರಯೋಗಿಸುತ್ತಾರೆ. ಅಥ್ಲೀಟ್​ಗಳೀಗೆ ಸ್ಪರ್ಧೆಯಲ್ಲಿ ಭಾಗವಹಿಸಬೇಕಾದರೆ ನಿಯಮಗಳನ್ನು ಹೇಳಲಾಗುತ್ತದೆ. ಅದನ್ನು ಉಲ್ಲಂಘಿಸಿದರೆ ಅವರು ಸ್ಪರ್ಧಿಸುವ ಅವಕಾಶ ಕಳೆದುಕೊಳ್ಳುತ್ತಾರೆ. ಅಂತೆಯೇ ಜಪಾನ್ ಮಹಿಳಾ ಆರ್ಟಿಸ್ಟಿಕ್ ಜಿಮ್ನಾಸ್ಟಿಕ್ಸ್ ತಂಡದ ನಾಯಕಿ ಶೋಕೊ ಮಿಯಾಟಾ ಅವರು ಪ್ಯಾರಿಸ್ ಗೇಮ್ಸ್ ಗಾಗಿ ತಂಡದಿಂದ ಕ್ಷುಲ್ಲಕ ಕಾರಣಕ್ಕೆ ಹಿಂದೆ ಸರಿದಿದ್ದಾರೆ. ಅವರು ಕೂಟದ ನಿಯಮವನ್ನು ಉಲ್ಲಂಗಿಸಿ ಸಿಗರೇಟ್ ಸೇದಿದ್ದರು. ಹೀಗಾಗಿ ಅವರನ್ನು ವಾಪಸ್​ ಕಳುಹಿಸಲಾಗಿದೆ ಎಂದು ಜಪಾನಿನ ಜಿಮ್ನಾಸ್ಟಿಕ್ಸ್ ಅಸೋಸಿಯೇಷನ್ ಶುಕ್ರವಾರ ತಿಳಿಸಿದೆ.

ಮೊನಾಕೊದಲ್ಲಿನ ತಂಡದ ತರಬೇತಿ ಶಿಬಿರದಿಂದ ಮಿಯಾಟಾ ಅವರನ್ನು ಹೊರಕ್ಕೆ ಕಳುಹಿಸಲಾಗಿದೆ. ಅವರು ಗುರುವಾರ ಜಪಾನ್ ಗೆ ಆಗಮಿಸಿದ್ದು ತನಿಖೆ ಎದುರಿಸಲಿದ್ದಾರೆ ಎಂದು ಜೆಜಿಎ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಮದ್ಯಪಾನ ನಿಯಂತ್ರಣ ನಿಯಮವನ್ನೂ ಉಲ್ಲಂಘನೆಯನ್ನೂ ಮಾಡಿದ್ದಾರೆ.

ಮಹಿಳಾ ತಂಡವು ಐದು ಕ್ರೀಡಾಪಟುಗಳ ಬದಲು ನಾಲ್ಕು ಕ್ರೀಡಾಪಟುಗಳೊಂದಿಗೆ ಸ್ಪರ್ಧಿಸಲಿದೆ ಎಂದು ಜೆಜಿಎ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದೆ. “ಘಟನೆಯ ಬಗ್ಗೆ ನಾವು ನಮ್ಮ ಹೃದಯದಾಳದಿಂದ ಕ್ಷಮೆಯಾಚಿಸುತ್ತೇವೆ” ಎಂದು ಜೆಜಿಎ ಅಧ್ಯಕ್ಷ ತಡಾಶಿ ಫ್ಯುಜಿಟಾ ಮಿಯಾಟಾ ಅವರ ವೈಯಕ್ತಿಕ ತರಬೇತುದಾರ ಮುತ್ಸುಮಿ ಹರಾಡಾ ಸೇರಿದಂತೆ ಇತರ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

1964ರ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಗೆದ್ದ ಬಳಿಕ ಮೊದಲ ಬಾರಿಗೆ ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪದಕ ಗೆಲ್ಲುವ ತವಕದಲ್ಲಿದ್ದ ಜಪಾನ್ ಮಹಿಳಾ ಜಿಮ್ನಾಸ್ಟಿಕ್ಸ್ ತಂಡದ ಮೇಲೆ ನಿರೀಕ್ಷೆ ಹೆಚ್ಚಿತ್ತು. ಆದರೆ ನಾಯಕಿಯೇ ನಿಯಮ ಉಲ್ಲಂಘನೆ ಮಾಡಿರುವ ಕಾರಣ ಅವರ ಪದಕದ ಸವಾಲು ಹೆಚ್ಚಾಗಿದೆ.

ಅಥ್ಲೀಟ್​​ ​ಗಳ ಕ್ರೀಡಾಗ್ರಾಮಕ್ಕೆ ಲಭಿಸಿತು ಅಧಿಕೃತ ಚಾಲನೆ

ಪ್ಯಾರಿಸ್: ವಿಶ್ವ ಮಟ್ಟದಲ್ಲಿ ಪ್ರಮುಖ ಕ್ರೀಡಾಕೂಟವಾದ ಒಲಿಂಪಿಕ್ಸ್ (Paris Olympics 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಕ್ರೀಡಾಕೂಟದ ಆತಿಥ್ಯ ವಹಿಸಿಕೊಂಡಿರುವ ಫ್ರಾನ್ಸ್​ ಸರ್ವ ಸನ್ನದ್ಧವಾಗಿದೆ. ಎಲ್ಲ ದೇಶದ ಕ್ರೀಡಾಪಟುಗಳು ಇದೀಗ ಫ್ರಾನ್ಸ್​ಗೆ ಆಗಮಿಸುತ್ತಿದ್ದಾರೆ. ಕ್ರೀಡಾಪಟುಗಳಿಗೆ ವಸತಿ ವ್ಯವಸ್ಥೆ ಹೊಂದಿರುವ ಕ್ರೀಡಾಗ್ರಾಮ ಅಧಿಕೃತವಾಗಿ(Paris Olympic Village) ತೆರೆದುಕೊಂಡಿದೆ. ಈ ಕ್ರೀಡಾಗ್ರಾಮವನ್ನು ಪ್ಯಾರಿಸ್​ನ ಉತ್ತರ ಭಾಗದಲ್ಲಿ ನಿರ್ಮಿಸಲಾಗಿದ್ದು, ಇದು ಗರಿಷ್ಠ 14,500 ಮಂದಿಗೆ ಅತಿಥ್ಯವಹಿಸಲು ಸಿದ್ಧವಾಗಿದೆ. ಆಸ್ಟ್ರೇಲಿಯ ಹಾಗೂ ಬ್ರೆಝಿಲ್ ತಮ್ಮ ತಂಡದ ಸದಸ್ಯರನ್ನು ಕ್ರೀಡಾಗ್ರಾಮಕ್ಕೆ ಕಳುಹಿಸಿಕೊಟ್ಟ ಮೊದಲ ದೇಶಗಳಾಗಿವೆ.

ಕ್ರೀಡಾಗ್ರಾಮವು ಕ್ರೀಡಾಪಟುಗಳಿಗೆ ವಿಶ್ರಾಂತಿ ಹಾಗೂ ಅವರ ಸ್ಪರ್ಧೆಗಳಿಗೆ ತಯಾರಿ ಮಾಡಲು ಆರಾಮದಾಯಕ ಹಾಗೂ ಸುರಕ್ಷಿತ ವಾತಾವರಣ ಒದಗಿಸುತ್ತದೆ. ಒಲಿಂಪಿಕ್ಸ್ ವಿಲೇಜ್, ಕ್ರೀಡಾಕೂಟ ಸಂಘಟಕರಿಗೆ ಹೆಮ್ಮೆಗೆ ಕಾರಣವಾಗಿದ್ದು, ಇದು ಒಂದು ವಿಶಿಷ್ಟ ವೈಶಿಷ್ಟವನ್ನು ಹೊಂದಿದೆ. ಗ್ರಾಮದ ನಿವಾಸಿಗಳಿಗೆ ಅರಾಮದಾಯಕವಾದ ತಾಪಮಾನ ನಿರ್ವಹಿಸಲು ಹವಾನಿಯಂತ್ರಣವನ್ನು ಅವಲಂಬಿಸಿಲ್ಲ. ಬೇಸಿಗೆಯ ಸಮಯದಲ್ಲಿ ಹೊರಭಾಗಕ್ಕಿಂತ ಕನಿಷ್ಠ 6 ಡಿಗ್ರಿ ಸೆಲ್ಸಿಯಸ್ ತಂಪಾಗಿರುವಂತೆ ಗ್ರಾಮದ ಒಳಭಾಗವನ್ನು ವಿನ್ಯಾಸಗೊಳಿಸಲಾಗಿದೆ.
ಎಲ್ಲ ಕ್ರೀಡಾಕೂಡ ಮುಕ್ತಾಯದ ಬಳಿಕ ಈ ಕ್ರೀಡಾಗ್ರಾಮದ ಒಳಗಿನ ಅಪಾರ್ಟ್ಮೆಂಟ್​ಗಳನ್ನು ವಸತಿಗಳಾಗಿ ಪರಿವರ್ತಿಸಲಾಗುತ್ತದೆ. ಕನಿಷ್ಠ ಮೂರನೇ ಒಂದು ಭಾಗವನ್ನು ಸಾರ್ವಜನಿಕ ವಸತಿ ಉದ್ದೇಶಗಳಿಗಾಗಿ ಮೀಸಲಿಡಲಾಗುತ್ತದೆ.

ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ “ಇಂಡಿಯಾ ಹೌಸ್” ಕಾಣಬಹುದಾಗಿದೆ. ಭಾರತೀಯ ಒಲಿಂಪಿಕ್ಸ್ ಒಕ್ಕೂಟದ (ಐಒಎ) ಸಹಭಾಗಿತ್ವ ವಹಿಸಿರುವಂಥ ರಿಲಯನ್ಸ್ ಫೌಂಡೇಷನ್ ನಿಂದ ಈ “ಇಂಡಿಯಾ ಹೌಸ್” ಪರಿಕಲ್ಪನೆ ಮೂಡಿದೆ. ಈ ಇಂಡಿಯಾ ಹೌಸ್ ನಲ್ಲಿ ಭಾರತದ ಕ್ರೀಡಾ ಸಂಸ್ಕೃತಿ- ಪರಂಪರೆಯನ್ನು ಪ್ರದರ್ಶಿಸಲಾಗುತ್ತದೆ. ಅದರಲ್ಲಿ ಕ್ರೀಡೆಗೆ ಸಂಬಂಧಿಸಿ ಭಾರತದ ಭೂತ- ಭವಿಷ್ಯತ್ ಹಾಗೂ ವರ್ತಮಾನದ ಸಾಧನೆ, ಕನಸುಗಳನ್ನು ಸಹ ತೋರಿಸಲಾಗುತ್ತದೆ. ತಂತ್ರಜ್ಞಾನ ಮತ್ತು ಡಿಜಿಟಲೈಸೇಷನ್ ನಲ್ಲಿ ಭಾರತದ ಸಾಧನೆಯನ್ನು ಜಗತ್ತಿನೆದುರು ತೆರೆದಿಡಲಾಗುತ್ತದೆ. ವಿಶ್ವದ ವಿವಿಧ ಅಥ್ಲೀಟ್ ಗಳು, ಗಣ್ಯರು, ಕ್ರೀಡಾ ಉತ್ಸಾಹಿಗಳು ಈ ಇಂಡಿಯಾ ಹೌಸ್ ಗೆ ಭೇಟಿ ನೀಡುವ ನಿರೀಕ್ಷೆ ಇದೆ. ಇನ್ನು ಭಾರತದ ನೀತಿಯನ್ನು ವ್ಯಾಖ್ಯಾನಿಸುವ ಏಕತೆ, ವೈವಿಧ್ಯತೆ ಮತ್ತು ಶ್ರೇಷ್ಠತೆಯನ್ನು ಸಾರುವುದಕ್ಕೂ ಇದು ಸಹಕಾರಿ ಆಗುತ್ತದೆ.

Continue Reading

ಕ್ರಿಕೆಟ್

Suryakumar Yadav: ಸೂರ್ಯಕುಮಾರ್​ಗೆ ನಾಯಕತ್ವ ಒಲಿದದ್ದು ಕಾಪು ಮಾರಿಯಮ್ಮನ ಆಶೀರ್ವಾದದಿಂದ!

Suryakumar Yadav: ಸೂರ್ಯಕುಮಾರ್‌ ಯಾದವ್​ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ ಸರಣಿ ಗೆದ್ದಿದ್ದರು. ಸೂರ್ಯಕುಮಾರ್ ಯಾದವ್ ಕಾರ್ಯವೈಖರಿ ಬಗ್ಗೆಯೂ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಸಮಾಧಾನವಿದ್ದು, ಅವರನ್ನೇ ನಾಯಕನನ್ನಾಗಿ ಮುಂದುವರಿಸುವ ಸಾಧ್ಯತೆ ಅಧಿಕವಾಗಿದೆ.

VISTARANEWS.COM


on

Suryakumar Yadav
Koo

ಮುಂಬಯಿ: ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್(Suryakumar Yadav) ಪತ್ನಿ​ ದೇವಿಶಾ ಶೆಟ್ಟಿ ಜತೆಗೂಡಿ ಜುಲೈ 8ರಂದು ಕಾಪು ಶ್ರೀ ಹೊಸ ಮಾರಿಗುಡಿ(Hosa Marigudi Kaup) ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದ್ದರು. ಈ ಸಂದರ್ಭ ದೇವಸ್ಥಾನದ ಅರ್ಚಕರು ಸೂರ್ಯಕುಮಾರ್​ ಅವರಿಗೆ ನಾಯಕರಾಗುವ ಭಾಗ್ಯ ದೊರಕಲಿ ಎಂದು ಹಾರೈಸಿ ಪ್ರಸಾದ ನೀಡಿದ್ದರು. ಇದೀಗ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಸೂರ್ಯಕುಮಾರ್​ ನಾಯಕನಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಟಿ20ಗೆ ಖಾಯಂ ನಾಯಕನಾಗಿ ಮುಂದುವರಿಯಲಿದ್ದಾರೆ ಎನ್ನಲಾಗಿದೆ. ಸೂರ್ಯ ಅವರಿಗೆ ನಾಯಕತ್ವ ಒಲಿದದ್ದು ಕಾಪು ಮಾರಿಗುಡಿಯ ಮಾರಿಯಮ್ಮ ದೇವಿಯ ಆಶೀರ್ವಾದದಿಂದಲೇ ಎಂದು ಕೆಲ ನೆಟ್ಟಗರು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಹೊಸ ಮಾರಿಗುಡಿಯ ಮಾರಿಯಮ್ಮ ದೇವಿಯ ದರ್ಶನ ಪಡೆದಿದ್ದ ಸೂರ್ಯಕುಮಾರ್​ ಮುಖಮಂಟಪದ ಶಿಲಾಸ್ತಂಭ ಸಹಿತ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಿದ್ದರು. ಇದೇ ವೇಳೆ ಸೂರ್ಯ ಪತ್ನಿ, ನೂತನ ದೇಗುಲ ಉದ್ಘಾಟನೆಯ ವೇಳೆ ಬಿಡುವುದ್ದರೆ ಸೂರ್ಯ ಖಂಡಿತವಾಗಿಯೂ ಇಲ್ಲಿಗೆ ಬರಲಿದ್ದಾರೆ ಎಂದು ಹೇಳಿದ್ದರು. ದೇವಿಶಾ ಶೆಟ್ಟಿ ಅವರು ಉಡುಪಿಯ ಕಾಪು ಮೂಲದವರಾಗಿದ್ದಾರೆ. ಸದ್ಯ ಮುಂಬೈನಲ್ಲೇ ನೆಲೆಸಿದ್ದಾರೆ.

ಕಳೆದ ಒಂದು ವರ್ಷಗಳಿಂದ ರೋಹಿತ್​ ಬಳಿಕ ಹಾರ್ದಿಕ್‌ ಪಾಂಡ್ಯರನ್ನೇ(Hardik Pandya) ಭವಿಷ್ಯದ ನಾಯಕ ಎಂದು ಬಿಂಬಿಸಲಾಗಿತ್ತು. ಆದರೆ, ಲಂಕಾ ಸರಣಿಗೆ ಸೂರ್ಯಕುಮಾರ್​ಗೆ ನಾಯಕತ್ವ ನೀಡಲಾಗಿದೆ. ಹೌದು, ಪಾಂಡ್ಯ ಅವರಿಗೆ ನಾಯಕತ್ವ ನೀಡದಿರಲು ಪ್ರಮುಖ ಕಾರಣ ಅವರ ಫಿಟ್ನೆಸ್‌ ಸಮಸ್ಯೆ. ಪಾಂಡ್ಯ ತಮ್ಮ 8 ವರ್ಷಗಳ ಕ್ರಿಕೆಟ್​ ವೃತ್ತಿಬದುಕಿನಲ್ಲಿ ಹಲವು ಬಾರಿ ಗಾಯದ ಸಮಸ್ಯೆಗೆ ತುತ್ತಾಗಿ ತಂಡದಿಂದ ಹೊರಗುಳಿದಿದ್ದರು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಪದೇಪದೆ ಗಾಯಕ್ಕೆ ತುತ್ತಾಗುವ ಕಾರಣ ಪಾಂಡ್ಯ ನೇಮಕಕ್ಕೆ ಬಿಸಿಸಿಐನ ಕೆಲ ಪ್ರಮುಖ ಅಧಿಕಾರಿಗಳು ಹಾಗೂ ಆಯ್ಕೆ ಸಮಿತಿಯ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ Team India Srilanka Tour : ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಸೂರ್ಯಕುಮಾರ್​ಗೆ ಟಿ20 ನಾಯಕತ್ವ

ಸೂರ್ಯಕುಮಾರ್‌ ಯಾದವ್​ ಕಳೆದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿ ಸರಣಿ ಗೆದ್ದಿದ್ದರು. ಸೂರ್ಯಕುಮಾರ್ ಯಾದವ್ ಕಾರ್ಯವೈಖರಿ ಬಗ್ಗೆಯೂ ಬಿಸಿಸಿಐ ಹಾಗೂ ಆಯ್ಕೆ ಸಮಿತಿಗೆ ಸಮಾಧಾನವಿದ್ದು, ಅವರನ್ನೇ ನಾಯಕನನ್ನಾಗಿ ಮುಂದುವರಿಸುವ ಸಾಧ್ಯತೆ ಅಧಿಕವಾಗಿದೆ.

ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶದೀಪ್​ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್​ ಸಿರಾಜ್.

Continue Reading

ಪ್ರಮುಖ ಸುದ್ದಿ

Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

Trinity Golf Champions League: 2024ರ ಸೆಪ್ಟೆಂಬರ್​ನಲ್ಲಿ ಈ ಚಾಂಪಿಯನ್​ಷಿಪ್​ಗೆ ಬೆಂಗಳೂರು ಆತಿಥ್ಯ ವಹಿಸಲಿದ್ದು. ರೋಮಾಂಚಕ ಮುಖಾಮುಖಿಯಲ್ಲಿ ಭಾರತದ 7 ಹಾಗೂ ಶ್ರೀಲಂಕಾದ 1 ತಂಡ ಭಾಗವಹಿಸಲಿವೆ. ಈ ಪಂದ್ಯಾವಳಿಯು ವೈಯಕ್ತಿಕ ಪ್ರತಿಭೆ ಮತ್ತು ತಂಡಗಳ ಕಾರ್ಯತಂತ್ರಗಳು ಈ ಪಂದ್ಯಾವಳಿಯಲ್ಲಿ ಅನಾವರಣಗೊಳ್ಳಲಿವೆ.

VISTARANEWS.COM


on

Trinity Golf Champions League
Koo

ಬೆಂಗಳೂರು, ಜುಲೈ 18: ಕ್ರಿಕೆಟ್ ದಂತಕತೆ ಕಪಿಲ್ ದೇವ್ (Kapil Dev)​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ (Trinity Golf Champions League) ಎರಡನೇ ಆವೃತ್ತಿಯನ್ನು ಜುಲೈ 18ರಂದು ಘೋಷಿಸಲಾಯಿತು. ಇದು ಭಾರತೀಯ ಗಾಲ್ಫ್​ ಕ್ಷೇತ್ರವನ್ನು ಮರುವ್ಯಾಖ್ಯಾನಿಸುವ ಟೂರ್ನಿಯಾಗಿದೆ. 2024ರ ಸೆಪ್ಟೆಂಬರ್​ನಲ್ಲಿ ಈ ಚಾಂಪಿಯನ್​ಷಿಪ್​ಗೆ ಬೆಂಗಳೂರು ಆತಿಥ್ಯ ವಹಿಸಲಿದ್ದು. ರೋಮಾಂಚಕ ಮುಖಾಮುಖಿಯಲ್ಲಿ ಭಾರತದ 7 ಹಾಗೂ ಶ್ರೀಲಂಕಾದ 1 ತಂಡ ಭಾಗವಹಿಸಲಿವೆ. ಈ ಪಂದ್ಯಾವಳಿಯು ವೈಯಕ್ತಿಕ ಪ್ರತಿಭೆ ಮತ್ತು ತಂಡಗಳ ಕಾರ್ಯತಂತ್ರಗಳು ಈ ಪಂದ್ಯಾವಳಿಯಲ್ಲಿ ಅನಾವರಣಗೊಳ್ಳಲಿವೆ.

ಪಂದ್ಯಾವಳಿಯನ್ನು ಪ್ರಕಟಿಸಿದ ದಿಗ್ಗಜ ಕ್ರೀಡಾಪಟು ಕಪಿಲ್ ದೇವ್ “ಗಾಲ್ಫ್ ಅಪಾರ ಕೌಶಲ್ಯ ಮತ್ತು ಏಕಾಗ್ರತೆಯನ್ನು ಬೇಡುವ ಕ್ರೀಡೆಯಾಗಿದೆ, ಆದರೆ ಇದನ್ನು ಹೆಚ್ಚಾಗಿ ವೈಯಕ್ತಿಕ ಸಾಧನೆಯಾಗಿ ನೋಡಲು ಸಾಧ್ಯ. ಟಿಜಿಸಿಎಲ್​​ನ ಎರಡನೇ ಆವೃತ್ತಿಯು ವೃತ್ತಿಪರರು, ಹವ್ಯಾಸಿಗಳು ಮತ್ತು ಪ್ರಸಿದ್ಧ ಗಾಲ್ಫ್ ಆಟಗಾರರನ್ನು ತಂಡವಾಗಿ ಸ್ಪರ್ಧಿಸಲು ಒಂದೆಡೆ ಸೇರಿಸಲಿದೆ, ಈ ಕೂಟವು ಸ್ನೇಹಪರತೆ ಮತ್ತು ಕಾರ್ಯತಂತ್ರದ ಸಹಯೋಗದ ಮನೋಭಾವವನ್ನು ಬೆಳೆಸಲಿದೆ, ಇದು ಗಾಲ್ಫ್ ಅಭಿಮಾನಿಗಳು ಹಿಂದೆಂದೂ ಕಂಡರಿಯದ ರೀತಿಯಲ್ಲೂ ಕ್ರೀಡಾಕೂಟವಾಗಿರಲಿದೆ. ವಿದೇಶದ ತಂಡ ಸೇರಿದಂತೆ 8 ತಂಡಗಳನ್ನು ಈ ಪಂದ್ಯಾವಳಿಗೆ ಪರಿಚಯಿಸಲು ನಾವು ರೋಮಾಂಚನಗೊಂಡಿದ್ದೇವೆ. ಅತ್ಯುತ್ತಮ ತಂಡ ಸ್ವರೂಪ ಮತ್ತು ವಿಶ್ವದಾದ್ಯಂತದ ಪ್ರತಿಭಾವಂತ ಗಾಲ್ಫ್ ಆಟಗಾರರ ಭಾಗವಹಿಸುವಿಕೆಯೊಂದಿಗೆ, ಟಿಜಿಸಿಎಲ್​​ನ ಎರಡನೇ ಆವೃತ್ತಿಯು ಗಾಲ್ಫ್ ಉತ್ಸಾಹಿಗಳು ಮತ್ತು ಕ್ರೀಡಾ ಅಭಿಮಾನಿಗಳಿಗೆ ರೋಮಾಂಚನ ನೀಡಲಿದೆ ” ಎಂದು ಹೇಳಿದರು.

ಇದನ್ನೂ ಓದಿ: Natasa Stankovic : ಹಾರ್ದಿಕ್ ಪಾಂಡ್ಯಗೆ ಡೈವೋರ್ಸ್​ ನೀಡಿದ್ದೇನೆ; ಪತ್ನಿ ನತಾಶಾ ಹೇಳಿಕೆ

ಸೆಪ್ಟೆಂಬರ್ 2023ರಲ್ಲಿ ನಡೆದ ಉದ್ಘಾಟನಾ ಋತುವಿನ ಅದ್ಭುತ ಯಶಸ್ಸಿನ ಆಧಾರದ ಮೇಲೆ, ಈ ವರ್ಷ ಟಿಜಿಸಿಎಲ್ ಐಪಿಎಲ್ ಸ್ವರೂಪದಲ್ಲಿ ಕನಿಷ್ಠ ನಾಲ್ಕು ಟೂರ್ನಮೆಂಟ್ ಸುತ್ತುಗಳನ್ನು ಆಡುತ್ತಿದೆ, ಭಾರತದ ಏಳು ನಗರಗಳನ್ನು ಪ್ರತಿನಿಧಿಸುವ ತಂಡಗಳು ಮತ್ತು ಶ್ರೀಲಂಕಾದ ಒಂದು ತಂಡಗಳು ಸ್ಪರ್ಧಿಸಲಿವೆ.

Continue Reading

ಕ್ರೀಡೆ

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

England vs West Indies: ಆರಂಭಿಕರಾದ ಬೆನ್ ಡಕೆಟ್ ಹಾಗೂ ಓಲಿ ಪೋಪ್‌ ಆಕ್ರಮಣಕಾರಿ ಆಟದ ನೆರವಿನಿಂದ ಇಂಗ್ಲೆಂಡ್​ ಬೃಹತ್​ ಮೊತ್ತ ದಾಖಲಿಸಿತು. ಪೋಪ್ 167 ಎಸೆತಗಳಲ್ಲಿ 15 ಬೌಂಡರಿ, 1 ಸಿಕರ್‌ನೊಂದಿಗೆ 121 ರನ್ ಸಿಡಿಸಿದರು.

VISTARANEWS.COM


on

England vs West Indies
Koo

ನಾಟಿಂಗ್‌ಹ್ಯಾಮ್: ಪ್ರವಾಸಿ ವೆಸ್ಟ್​ ಇಂಡೀಸ್(England vs West Indies)​ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಇನಿಂಗ್ಸ್​ ಗೆಲುವು ಸಾಧಿಸಿದ್ದ ಇಂಗ್ಲೆಂಡ್​ ತಂಡ ಇದೀಗ ದ್ವಿತೀಯ ಟೆಸ್ಟ್​ನಲ್ಲಿಯೂ ಹಿಡಿತ ಸಾಧಿಸಿದೆ. ಮೊದಲ ದಿನವೇ 416 ರನ್‌ ಗಳಿಸಿದೆ. ಜತೆಗೆ ಇದೇ ಪಂದ್ಯದಲ್ಲಿ ಇಂಗ್ಲೆಂಡ್ ವಿಶ್ವ​ ದಾಖಲೆಯೊಂದನ್ನು ನಿರ್ಮಿಸಿದೆ.

ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಇಂಗ್ಲೆಂಡ್​ ಮೊದಲ ಓವರ್‌ನಲ್ಲೇ ಜ್ಯಾಕ್ ಕ್ರಾಲಿ(0) ವಿಕೆಟ್ ಕಳೆದುಕೊಂಡರೂ ಕೂಡ ಕೇವಲ 4.2 ಓವರ್ ಗಳಲ್ಲೇ 50 ರನ್ ಪೂರ್ಣಗೊಳಿಸಿದ ಇಂಗ್ಲೆಂಡ್, ಟೆಸ್ಟ್‌ನಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ತನ್ನದೇ ದಾಖಲೆಯನ್ನು 30 ವರ್ಷಗಳ ಬಳಿಕ ಉತ್ತಮಗೊಳಿಸಿದೆ. 1994ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್ 4.3 ಓವರ್‌ಗಳಲ್ಲಿ 50 ರನ್ ಪೂರ್ಣಗೊಳಿಸಿತ್ತು. ವೇಗದ ಅರ್ಧಶತಕ ದಾಖಲೆಯ ಪಟ್ಟಿಯಲ್ಲಿ ಅಗ್ರ-3 ಸ್ಥಾನದಲ್ಲಿ ಇಂಗ್ಲೆಂಡ್ ತಂಡವೇ ಕಾಣಿಸಿಕೊಂಡಿದೆ. ಇಂಗ್ಲೆಂಡ್ ತಂಡವು 1994ರಲ್ಲಿ ದಕ್ಷಿಣ ಆಫ್ರಿಕಾ ಎದುರು 4.3 ಓವರ್‌ನಲ್ಲಿ ಅರ್ಧಶತಕ ಪೂರೈಸಿತ್ತು. ಇದಾದ ಬಳಿಕ ಇಂಗ್ಲೆಂಡ್ ತಂಡವು 2002ರಲ್ಲಿ ಶ್ರೀಲಂಕಾ ಎದುರು 5 ಓವರ್‌ನಲ್ಲಿ ಅರ್ಧಶತಕ ಪೂರೈಸಿತ್ತು. ಭಾರತ 2008ರಲ್ಲಿ ಇಂಗ್ಲೆಂಡ್ ಎದುರು 5.3 ಓವರ್‌ಗಳಲ್ಲಿ ಅರ್ಧಶತಕ ಬಾರಿಸಿ 5ನೇ ಸ್ಥಾನ ಪಡೆದಿದೆ.

ಆರಂಭಿಕರಾದ ಬೆನ್ ಡಕೆಟ್ ಹಾಗೂ ಓಲಿ ಪೋಪ್‌ ಆಕ್ರಮಣಕಾರಿ ಆಟದ ನೆರವಿನಿಂದ ಇಂಗ್ಲೆಂಡ್​ ಬೃಹತ್​ ಮೊತ್ತ ದಾಖಲಿಸಿತು. ಪೋಪ್ 167 ಎಸೆತಗಳಲ್ಲಿ 15 ಬೌಂಡರಿ, 1 ಸಿಕರ್‌ನೊಂದಿಗೆ 121 ರನ್ ಸಿಡಿಸಿದರು. ಬೆನ್ ಡಕೆಟ್ 59 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 71 ರನ್ ಬಾರಿಸಿದರು. ನಾಯಕ ಬೆನ್ ಸ್ಟೋಕ್ಸ್ 69 ರನ್ ಗಳಿಸಿ ನಿರ್ಗಮಿಸಿದರು. ಅಲ್ಟಾರಿ ಜೋಸೆಫ್ 3 ವಿಕೆಟ್ ಕಿತ್ತರು. ವಿಂಡೀಸ್​ ಮೊದಲ ಇನಿಂಗ್ಸ್​ ಬ್ಯಾಟಿಂಗ್​ ಆರಂಭಿಸಬೇಕಿದೆ.

ಇದನ್ನೂ ಓದಿ James Anderson: 22 ವರ್ಷಗಳ ಕ್ರಿಕೆಟ್‌ ವೃತ್ತಿ ಬದುಕಿಗೆ ವಿದಾಯ ಹೇಳಿದ ಜೇಮ್ಸ್​ ಆ್ಯಂಡರ್ಸನ್; ಭಾವನಾತ್ಮಕವಾಗಿ ಹಾರೈಸಿದ ಸಚಿನ್

ಟೆಸ್ಟ್​ನಲ್ಲಿ ವೇಗದ ಅರ್ಧಶತಕ


ಇಂಗ್ಲೆಂಡ್​- 4.2 ಓವರ್, ಎದುರಾಳಿ; ವೆಸ್ಟ್​ ಇಂಡೀಸ್​​

ಇಂಗ್ಲೆಂಡ್- 4.3 ಓವರ್​, ಎದುರಾಳಿ; ದಕ್ಷಿಣ ಆಫ್ರಿಕಾ

ಇಂಗ್ಲೆಂಡ್​, 5.0​​​ ಓವರ್​, ಎದುರಾಳಿ; ಶ್ರೀಲಂಕಾ

ಶ್ರೀಲಂಕಾ-5.2 ಓವರ್​, ಎದುರಾಳಿ; ಪಾಕಿಸ್ತಾನ

ಭಾರತ-5.3 ಓವರ್​, ಎದುರಾಳಿ; ಇಂಗ್ಲೆಂಡ್​

ಮೊದಲ ಟೆಸ್ಟ್​ ಆಡುವ ಮೂಲಕ ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್(James Anderson)​ ಅವರು ತಮ್ಮ 22 ವರ್ಷಗಳ ಸುದೀರ್ಘ ಅಂತಾರಾಷ್ಟೀಯ ಕ್ರಿಕೆಟ್‌ ವೃತ್ತಿ ಬದುಕಿಗೆ ತೆರೆ ಎಳೆದಿದ್ದರು. ಈ ಪಂದ್ಯವನ್ನು ಇಂಗ್ಲೆಂಡ್​ ಇನಿಂಗ್ಸ್​ ಹಾಗೂ 114 ರನ್​ಗಳಿಂದ ಗೆದ್ದು ಬೀಗಿತು. ಆ್ಯಂಡರ್ಸನ್​ಗೂ ಗೆಲುವಿನ ವಿದಾಯ ಲಭಿಸಿತ್ತು. ಸಾರ್ವಕಾಲಿಕ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ 41 ವರ್ಷದ ಆ್ಯಂಡರ್ಸನ್, ವಿದಾಯಕ್ಕೆ ಸಚಿನ್​ ತೆಂಡೂಲ್ಕರ್(Sachin Tendulkar) ಭಾವನಾತ್ಮಕ​ ಟ್ವೀಟ್​ ಮೂಲಕ ಶುಭ ಹಾರೈಸಿದ್ದರು.

ಆ್ಯಂಡರ್ಸನ್​ ಇಂಗ್ಲೆಂಡ್‌ ಪರ ಅತಿ ಹೆಚ್ಚು ವಿಕೆಟ್‌ ಪಡೆದ, ಟೆಸ್ಟ್ ಕ್ರಿಕೆಟ್‌ನಲ್ಲಿ 700ಕ್ಕೂ ಅಧಿಕ ವಿಕೆಟ್‌ ಪಡೆದ ವಿಶ್ವದ ಮೊದಲ ವೇಗಿ ಹಾಗೂ ಒಟ್ಟಾರೆ ಮೂರನೇ ಬೌಲರ್‌ ಎನಿಸಿಕೊಂಡಿದ್ದಾರೆ. ವಿದಾಯ ಪಂದ್ಯದಲ್ಲೇ ಆ್ಯಂಡರ್ಸನ್​ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದು ಕೂಡ ವಿಶೇಷ. ದ್ವಿತೀಯ ಇನಿಂಗ್ಸ್​ನಲ್ಲಿ 10 ಓವರ್​ ಪೂರ್ತಿಗೊಳಿಸುವ ಮೂಲಕ ಜೇಮ್ಸ್​ ಆ್ಯಂಡರ್ಸನ್ 40 ಸಾವಿರ ಚೆಂಡೆಸೆದ ದಾಖಲೆ ನಿರ್ಮಿಸಿದರು. ಈ ದಾಖಲೆ ಮಾಡಿದ ವಿಶ್ವದ ಮೊದಲ ವೇಗಿ ಎನಿಸಿಕೊಂಡರು.

Continue Reading
Advertisement
Supreme Court
ದೇಶ3 mins ago

Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ

Paris Olympics 2024:
ಪ್ರಮುಖ ಸುದ್ದಿ15 mins ago

Paris Olympics 2024 : ಸಿಗರೇಟ್​ ಸೇದಿದ ಕಾರಣಕ್ಕೆ ಒಲಿಂಪಿಕ್ಸ್​ ಸರ್ಧೆಯ ಅವಕಾಶ ಕಳೆದುಕೊಂಡ ಜಪಾನ್​ ಮಹಿಳಾ ಜಿಮ್ನಾಸ್ಟಿಕ್ ಪಟು

School Transfer Certificate
ದೇಶ15 mins ago

School Transfer Certificate: ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಮಹತ್ವದ ತೀರ್ಪು

Road Accident
ಮೈಸೂರು16 mins ago

Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Khalistani Terrorist
ಕ್ರೈಂ25 mins ago

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

Suryakumar Yadav
ಕ್ರಿಕೆಟ್44 mins ago

Suryakumar Yadav: ಸೂರ್ಯಕುಮಾರ್​ಗೆ ನಾಯಕತ್ವ ಒಲಿದದ್ದು ಕಾಪು ಮಾರಿಯಮ್ಮನ ಆಶೀರ್ವಾದದಿಂದ!

Trinity Golf Champions League
ಪ್ರಮುಖ ಸುದ್ದಿ45 mins ago

Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

OTT Releases
Latest46 mins ago

OTT Releases : ಈ ವಾರ ಥಿಯೇಟರ್ ಮತ್ತು ಒಟಿಟಿಯಲ್ಲಿ ಬಿಡುಗಡೆ ಆಗಲಿವೆ ಈ ಚಿತ್ರಗಳು; ಟ್ರೇಲರ್‌ ನೋಡಿ

Self Harming
ಬೆಂಗಳೂರು ಗ್ರಾಮಾಂತರ49 mins ago

Self Harming : ಆನೇಕಲ್ ಸರ್ಕಾರಿ ಆಸ್ಪತ್ರೆ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

Assembly Session
ಕರ್ನಾಟಕ52 mins ago

Assembly Session: ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅಬ್ಬರ; ತಲೆ ನಿಯಂತ್ರಣದಲ್ಲಿ ಇಲ್ವಾ ಎಂದ ಸ್ಪೀಕರ್‌!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ23 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌