ಮುಂಬಯಿ: ರಾಹುಲ್ ದ್ರಾವಿಡ್(rahul dravid) ಅವರ ನಿರ್ಗಮನದಿಂದ ತೆರವಾದ ಭಾರತ ಕ್ರಿಕೆಟ್ ತಂಡ ಮುಖ್ಯ ಕೋಚ್ ಹುದ್ದೆಗೆ(Team India Coach) ಗೌತಮ್ ಗಂಭೀರ್(Gautam Gambhir) ಆಯ್ಕೆಯಾಗಿದ್ದು ತಮ್ಮ ಕೆಲಸ ಕಾರ್ಯವನ್ನು ಆರಂಭಿಸಿದ್ದಾರೆ. ಗಂಭೀರ್ ಕೋಚ್ ಆಗುತ್ತಿದ್ದಂತೆಯೇ ಕೆಲ ನೆಟ್ಟಿಗರು ಗಂಭೀರ್ ಮತ್ತು ಕೊಹ್ಲಿ ನಡುವಣ ಆನ್ ಫೀಲ್ಡ್ ಜಗಳ ಮತ್ತೆ ಶುರುವಾಗಿ ಇದು ತಂಡಕ್ಕೆ ಭಾದಿಸಲಿದೆ ಎಂದು ಹೇಳಲಾಗಿತ್ತು. ಅಲ್ಲದೆ ಗಂಭೀರ್ ಅವರನ್ನು ಕೋಚ್ ಆಗಿ ಆಯ್ಕೆ ಮಾಡುವ ಮುನ್ನ ವಿರಾಟ್ ಕೊಹ್ಲಿ(virat kohli) ಜತೆ ಬಿಸಿಸಿಐ ಅಭಿಪ್ರಾಯ ಕೇಳಿಲ್ಲ ಎಂಬ ಮಾತುಗಳು ಕೇಳಿಬಂದಿತ್ತು. ಇದೀಗ ಕೊಹ್ಲಿಯೇ ಬಿಸಿಸಿಐ(BCCI) ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.
ಕ್ರಿಕ್ಇನ್ಫೋ ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಅವರು ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿದ್ದು, ಈ ಮೊದಲು ಗಂಭೀರ್ ಜತೆಗೆ ನಡೆಸಿದ ಕಿತ್ತಾಟಗಳನ್ನು ಮರೆತು ಅವರೊಂದಿಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದಾಗಿ ಹೇಳಿರುವುದಾಗಿ ತಿಳಿದುಬಂದಿದೆ.
ವಿರಾಟ್ ಕೊಹ್ಲಿ ಮತ್ತು ಗಂಭೀರ್ ಐಪಿಎಲ್ ವೇಳೆ ಹಾವು ಮುಂಗುಸಿಯಂತೆ ಕಿತ್ತಾಡಿಕೊಳ್ಳುತ್ತಿದ್ದರು. ಕಳೆದ ವರ್ಷದ ಐಪಿಎಲ್ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೂ ಇಬರಿಬ್ಬರ ಜಗಳ ಮುಂದುವರಿದಿತ್ತು. ಕೊಹ್ಲಿಯ ವಿರುದ್ಧ ಹಲವು ಬಾರಿ ಬಹಿರಂಗವಾಗಿ ಮುನಿಸನ್ನು ಪ್ರದರ್ಶಿಸಿದ್ದರು. ಹೀಗಿರುವಾಗ ಇವರಿಬ್ಬರ ಜಗಳ ಮತ್ತೆ ಮುಂದುವರಿದರೆ ತಂಡದ ಒಗ್ಗಟ್ಟು ಇಲ್ಲದಂತಾಗಬಹುದೆಂದು ಆತಂಕ ವ್ಯಕ್ತಪಡಿಸಿದ್ದರು.
ಪ್ರತಿ ಐಪಿಎಲ್ನಲ್ಲಿ ಕಚ್ಚಾಟ ನಡೆಸುತ್ತಿದ್ದ ಕೊಹ್ಲಿ ಮತ್ತು ಗಂಭೀರ್ ಈ ಬಾರಿಯ ಐಪಿಎಲ್ನಲ್ಲಿ ಅತ್ಯಂತ ಆತ್ಮೀಯವಾಗಿ ಕಂಡುಬಂದಿದ್ದರು. ಇಬ್ಬರು ಕೂಡ ತಮ್ಮ ಅಹಂ ಮತ್ತು ಮುನಿಸನ್ನು ಮರೆತಿರುವಂತೆ ಕಂಡುಬಂದಿದ್ದರು. ಆದರೂ ಕೂಡ ಕೊಹ್ಲಿ ಕೆಲ ಪಂದ್ಯಗಳಲ್ಲಿ ಆಡದೇ ಇದ್ದಾಗ ಇವರಿಬ್ಬರ ಮಧ್ಯೆ ಮತ್ತೆ ಜಗಳ ಆರಂಭಗೊಳ್ಳುವ ಸಾಧ್ಯತೆ ಇದೆ ಎನ್ನುವುದು ಅಭಿಮಾನಿಗಳ ಆತಂಕವಾಗಿತ್ತು. ಇದೀಗ ಕೊಹ್ಲಿಯೇ ಸ್ವತಃ ಬಿಸಿಸಿಐಗೆ ಎಲ್ಲ ದ್ವೇಷವನ್ನು ಬದಿಗಿಟ್ಟು ತಂಡದ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಕೋಚ್ ಜತೆ ಉತ್ತಮ ರೀತಿಯಲ್ಲಿ ನಡೆದುಕೊಳ್ಳುವುದಾಗಿ ಹೇಳಿದ್ದಾರೆಂದು ವರದಿಯಾಗಿದೆ.
ಇದನ್ನೂ ಓದಿ Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್ ಕೊಹ್ಲಿ; ವಿಡಿಯೊ ವೈರಲ್
ಟಿ20 ವಿಶ್ವಕಪ್ ಬಳಿಕ ಲಂಡನ್ಗೆ ತೆರಳಿ ಕುಟುಂಬದ ಜತೆ ಕಾಲ ಕಳೆಯುತ್ತಿದ್ದ ವಿರಾಟ್ ಕೊಹ್ಲಿ ಲಂಕಾ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಕೊಹ್ಲಿ ಜತೆ ರೋಹಿತ್ ಕೂಡ ವಿಶ್ರಾಂತಿ ಪಡೆಯಲು ನಿರ್ದರಿಸಿದ್ದಾರೆ ಎನ್ನಲಾಗಿತ್ತು. ಆದರೆ, ಗಂಭೀರ್ ಎಲ್ಲ ಹಿರಿಯ ಆಟಗಾರರರು ಕೂಡ ಈ ಸರಣಿಯಲ್ಲಿ ಆಡುವಂತೆ ಸೂಚನೆ ನೀಡಿದ್ದರು. ಗುರುವಾರ ತಂಡ ಪ್ರಕಟಗೊಳ್ಳುವ ವೇಳೆ ಅಚ್ಚರಿ ಎಂಬಂತೆ ಎಲ್ಲ ಹಿರಿಯ ಆಟಗಾರರು ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.