Site icon Vistara News

Virat Kohli: ಆರ್‌ಸಿಬಿಯ ಪುಟ್ಟ ಅಭಿಮಾನಿಗೆ ಆಟೋಗ್ರಾಫ್ ನೀಡಿದ ವಿರಾಟ್ ಕೊಹ್ಲಿ ​

Virat Kohli

ಜೊಹಾನ್ಸ್​ಬರ್ಗ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರು ದಕ್ಷಿಣ ಆಫ್ರಿಕಾ ವಿರುದ್ಧ ಸಾಗುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಆರ್​ಸಿಬಿಯ ಪುಟ್ಟ ಅಭಿಮಾನಿಗೆ ಆಟೋಗ್ರಾಫ್​ ನೀಡಿದ್ದಾರೆ. ಜತೆಗೆ ಫೋಟೊ ಕೂಡ ತೆಗೆಸಿಕೊಂಡಿದ್ದಾರೆ. ಕೊಹ್ಲಿ ಆಟೋಗ್ರಾಫ್ ನೀಡುತ್ತಿರುವ ವಿಡಿಯೊವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

2ನೇ ದಿನದಾಟವಾದ ಬುಧವಾರ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ದಕ್ಷಿಣ ಆಫ್ರಿಕಾದ ಪುಟ್ಟ ಬಾಲಕ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ಜೆರ್ಸಿ ಹಿಡಿದುಕೊಂಡು ಕೊಹ್ಲಿಯ ಆಟೋಗ್ರಾಫ್​ಗಾಗಿ ಕಾಯುತ್ತಿದ್ದ. ಇದನ್ನು ನೋಡಿದ ಕೊಹ್ಲಿ ನೇರವಾಗಿ ಈ ಪುಟ್ಟ ಅಭಿಮಾನಿಯ ಬಳಿ ಬಂದು ಆತನಿಗೆ ಆಟೋಗ್ರಾಫ್​ ಮತ್ತು ಫೋಟೊ ತೆಗೆಸಿಕೊಂಡಿದ್ದಾರೆ. ‘ಕಿಂಗ್​ ಎಲ್ಲಿಗೆ ಹೋದರೂ, ಅವರಿಗೆ ಆರ್​ಸಿಬಿಯ 12ನೇ ಮ್ಯಾನ್ ಆರ್ಮಿ ಸಿಗುತ್ತದೆ’ ಎಂದು ಆರ್​ಸಿಬಿ ತನ್ನ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಹರಾಜಿನಲ್ಲಿ ಆರ್​ಸಿಬಿ ಖರೀದಿಸಿದ ಆಟಗಾರರು

ಅಲ್ಜಾರಿ ಜೋಸೆಫ್ (11.5 ಕೋಟಿ), ಯಶ್ ದಯಾಳ್ (5 ಕೋಟಿ), ಟಾಮ್ ಕರ್ರನ್ (1.5 ಕೋಟಿ), ಲಾಕಿ ಫರ್ಗುಸನ್ (2 ಕೋಟಿ), ಸ್ವಪ್ನಿಲ್ ಸಿಂಗ್ (0.2 ಕೋಟಿ), ಸೌರವ್ ಚೌಹಾಣ್ (0.2 ಕೋಟಿ).

ವೇಗದ ಬೌಲಿಂಗ್​ಗೆ ಮಣೆ

ಐಪಿಎಲ್ 2024 ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವೇಗದ ಬೌಲಿಂಗ್ ಪಡೆಯನ್ನು ಹೆಚ್ಚಿಸಿದೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ (ಎಂಐ) ನಿಂದ ಕ್ಯಾಮರೂನ್ ಗ್ರೀನ್ ಅವರನ್ನು ಖರೀದಿಸುವ ಮೂಲಕ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಐಪಿಎಲ್ ಟ್ರೇಡಿಂಗ್ ಮಾಡಿತ್ತು. ಶಹಬಾಜ್ ಅಹ್ಮರ್​ ಅವರನ್ನು ಸನ್​ರೈಸರ್ಸ್​ ತಂಡಕ್ಕೆ ಕಳುಹಿಸಿ ಮಯಾಂಕ್ ದಾಗರ್ ಅವರನ್ನು ಕರೆ ತಂದಿತ್ತು. ಯಶ್​ ದಯಾಳ್ ಈಗ ವೇಗಕ್ಕೆ ಇಂಬುಕೊಟ್ಟಿದ್ದಾರೆ.

ಇದನ್ನೂ ಓದಿ Viral Video: ಲಿಫ್ಟ್​ನಲ್ಲಿ ಸಿಲುಕಿಕೊಂಡ ಅಂಪೈರ್​, ತಡವಾಗಿ ಆರಂಭಗೊಂಡ ಪಂದ್ಯ

ಹರಾಜಿನ ಬಳಿಕ ಆರ್​​ಸಿಬಿ ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್ವೆಲ್, ವಿರಾಟ್ ಕೊಹ್ಲಿ, ಕ್ಯಾಮೆರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

Exit mobile version