Site icon Vistara News

Virat Kohli : ಪತ್ನಿ ಅನುಷ್ಕಾಳೇ ನನ್ನ ಸ್ಫೂರ್ತಿ; ಅವಳಿಂದ ಕಲಿತದ್ದು ಸಾಕಷ್ಟಿದೆ ಎಂದ ವಿರಾಟ್‌ ಕೊಹ್ಲಿ

#image_title

ಮುಂಬೈ: ಭಾರತೀಯ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ (Virat Kohli) ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿರುವಂತಹ ವ್ಯಕ್ತಿ. ಆ ವ್ಯಕ್ತಿಗೂ ಸ್ಫೂರ್ತಿಯಾಗಿರುವವರಿದ್ದಾರೆ. ಅವರು ಮತ್ತಿನ್ಯಾರೂ ಅಲ್ಲ, ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ.

ಇದನ್ನೂ ಓದಿ: Viral Video : “ಓಂ ಎಲಾನ್‌ ಮಸ್ಕಾಯ ನಮಃ” ಎನ್ನಲಾರಂಭಿಸಿದ ಬೆಂಗಳೂರಿಗರು! ಏನಿದು ವಿಶೇಷ ಪೂಜೆ?
ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿರಾಟ್‌ ಕೊಹ್ಲಿ ಅವರು ತಮ್ಮ ಪತ್ನಿಯ ಬಗ್ಗೆ ಮಾತನಾಡಿದ್ದಾರೆ. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಹೇಳಿಕೊಂಡಿದ್ದಾರೆ.


“ನನ್ನ ಜೀವನವು ಸಂಪೂರ್ಣವಾಗಿ ವಿಭಿನ್ನ ದೃಷ್ಟಿಕೋನವನ್ನು ಹೊಂದಿತ್ತು. ನೀವು ಒಬ್ಬ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಾಗ, ನಿಮ್ಮೊಳಗೆ ಆ ಬದಲಾವಣೆಗಳನ್ನು ಪ್ರಕ್ರಿಯೆಗೊಳಿಸಲು ಪ್ರಾರಂಭಿಸುತ್ತೀರಿ. ಅವಳ ಜೀವನದ ದೃಷ್ಟಿಕೋನವು ವಿಭಿನ್ನವಾಗಿತ್ತು ಮತ್ತು ಅದು ನನ್ನನ್ನು ಉತ್ತಮವಾಗಿ ಬದಲಾಯಿಸಲು ಮತ್ತು ವಿಷಯಗಳನ್ನು ಹೆಚ್ಚು ಒಪ್ಪಿಕೊಳ್ಳುವಂತೆ ಪ್ರೇರೇಪಿಸಿತು”ಎಂದು ಅವರು ಕೊಹ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಅಭಿಮಾನಿಯ ಕಲಾಕೃತಿಗೆ ಮನಸೋತ ವಿರಾಟ್​ ಕೊಹ್ಲಿ
ತಾಯಿಯಾಗಿ ಅನುಷ್ಕಾ ಮಾಡಿದ ತ್ಯಾಗಗಳು ದೊಡ್ಡವು. ಅವಳನ್ನು ನೋಡಿದಾಗ, ನನಗೆ ಏನೇ ಸಮಸ್ಯೆಗಳಿದ್ದರೂ ಏನೂ ಅಲ್ಲ ಎಂದು ಎನಿಸಿಬಿಡುತ್ತದೆ ಎಂದೂ ಅವರು ಹೇಳಿಕೊಂಡಿದ್ದಾರೆ.

Exit mobile version