Site icon Vistara News

Asia Cup Cricket | ಬ್ಯಾಟಿಂಗ್ ಸುಧಾರಣೆಗೆ ಆರ್‌ಸಿಬಿ ಕೋಚ್‌ ಮೊರೆ ಹೋದ ವಿರಾಟ್‌ ಕೊಹ್ಲಿ

Asia cup cricket

ಮುಂಬಯಿ : ಕಳೆದ ಮೂರು ವರ್ಷಗಳಿಂದ ಕಳಪೆ ಪ್ರದರ್ಶನ ನೀಡುವ ಮೂಲಕ ಟೀಕಾಕಾರರ ಬಾಯಿಗೆ ಆಹಾರವಾಗಿರುವ ಟೀಮ್‌ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ ಏಷ್ಯಾ ಕಪ್‌ಗಾಗಿ (Asia Cup Cricket) ಅಭ್ಯಾಸ ಆರಂಭಿಸಿದ್ದಾರೆ. ಅಭ್ಯಾಸದ ವೇಳೆ ಅವರು ಆರ್‌ಸಿಬಿಯ ಬ್ಯಾಟಿಂಗ್‌ ಕೋಚ್‌ ಸಂಜಯ್‌ ಬಂಗಾರ ಅವರ ನೆರವು ಪಡೆಯುತ್ತಿದ್ದಾರೆ. ಬಂಗಾರ ಅವರಿಗೆ ಟೀಮ್‌ ಇಂಡಿಯಾದ ಬ್ಯಾಟಿಂಗ್‌ ಕೋಚ್‌ ಆಗಿಯೂ ಅನುಭವವಿದೆ. ಹೀಗಾಗಿ ತಮ್ಮ ವೈಫಲ್ಯಗಳನ್ನು ಸುಧಾರಿಸಿಕೊಳ್ಳುವ ನಿಟ್ಟಿನಲ್ಲಿ ವಿರಾಟ್‌ ಕೊಹ್ಲಿ ಅವರು ಸಂಜಯ್‌ ಬಂಗಾರ ನೇತೃತ್ವದಲ್ಲಿ ನೆಟ್‌ನಲ್ಲಿ ಸತತವಾಗಿ ಬೆವರು ಸುರಿಸುತ್ತಿದ್ದಾರೆ.

ಬಿಕೆಸಿಯಲ್ಲಿರುವ ಮುಂಬಯಿ ಕ್ರಿಕೆಟ್‌ ಸಂಸ್ಥೆಯ ಒಳಾಂಗಣ ಕ್ರೀಡಾಂಗಣದಲ್ಲಿ ವಿರಾಟ್‌ ಕೊಹ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಕೋಚ್‌ ಸಂಜಯ್‌ ಬಂಗಾರ ಅವರು ಸರಿ, ತಪ್ಪುಗಳನ್ನು ಅವರಿಗೆ ಮನವರಿಕೆ ಮಾಡಿ ಕೊಡುತ್ತಿದ್ದಾರೆ. ಕಳೆದ ಗುರುವಾರ ವಿರಾಟ್ ಕೊಹ್ಲಿ ತಾವು ಅಭ್ಯಾಸ ನಡೆಸುತ್ತಿರುವ ವಿಡಿಯೊವನ್ನು ಪೋಸ್ಟ್‌ ಮಾಡಿದ್ದರು. ಅದರಲ್ಲಿ ಅವರು ವಿಕೆಟ್‌ಗಳ ನಡುವೆ ಓಡುವ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದರು.

ಏಷ್ಯಾ ಕಪ್‌ನಲ್ಲಿ ಆಡಲಿರುವ ಭಾರತ ತಂಡಕ್ಕೆ ವಿರಾಟ್‌ ಕೊಹ್ಲಿ ಅಯ್ಕೆಯಾಗಿದ್ದಾರೆ. ಅವರು ಈ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಕಾಕಾರರಿಗೆ ಉತ್ತರ ಕೊಡುವ ಉಮೇದಿನಲ್ಲಿದ್ದಾರೆ. ಹೀಗಾಗಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಏಷ್ಯಾ ಕಪ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಆಸ್ಟ್ರೇಲಿಯಾದಲ್ಲಿ ನಡೆಯವ ಟಿ೨೦ ತಂಡಕ್ಕೆ ಆಯ್ಕೆಯಾಗಲಿದ್ದಾರೆ.

ಏಷ್ಯಾ ಕಪ್‌ ಆಗಸ್ಟ್‌ ೨೭ರಿಂದ ಆರಂಭವಾಗಲಿದ್ದು, ಆಗಸ್ಟ್‌ ೨೮ರಂದು ಭಾರತ ಹಾಗೂ ಪಾಕಿಸ್ತಾನ ವಿರುದ್ಧ ಹೈವೋಲ್ಟೇಜ್‌ ಪಂದ್ಯ ನಡೆಯಲಿದೆ.

ಇದನ್ನೂ ಓದಿ | CWG- 2022 | ಭಾರತದ ಕ್ರೀಡಾ ಕ್ಷೇತ್ರದ ಸುವರ್ಣಯುಗ ಶುರು ಎಂದು ಬಣ್ಣಿಸಿದ ಪ್ರಧಾನಿ ಮೋದಿ

Exit mobile version